Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಾಜ್ಯದಲ್ಲಿ ಕೊರೊನಾಕ್ಕೆ ಪ್ರಥಮ ಬಲಿ

by KM Shivaraju December 20, 2023
written by KM Shivaraju December 20, 2023 1 comment 1 minutes read
3FacebookTwitterPinterestEmail
163

ಸೋಂಕು ತಡೆಗೆ ಬಿಗಿ ಕ್ರಮಗಳಿಗೆ ಮುಂದಾದ ಸರ್ಕಾರ


ಬೆಂಗಳೂರು:ಕೊರೊನಾ ರೂಪಾಂತರಿ ಸೋಂಕಿಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ.

ಸೋಂಕಿನಿಂದ ವ್ಯಕ್ತಿಯೊಬ್ಬರು ಮೃತಪಡುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಮಧ್ಯಾನ್ಹ ಒಂದು ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ.

ಇದರ ಮಧ್ಯೆ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವೀಯ ವಿಡಿಯೊ ಕಾನ್ಫರೆನ್ಸ್ ಮೂಲಕ ಕರ್ನಾಟಕದ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ರಾಜ್ಯದಲ್ಲಿನ ಕೊರೊನಾ ಸೋಂಕಿನ ಸ್ಥಿತಿಗತಿ ಹಾಗೂ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

ಕೇಂದ್ರ ಸಚಿವರ ಸಲಹೆ-ಸೂಚನೆ

ಎರಡನೇ ಬಾರಿಗೆ ಕೋವಿಡ್ ಲಸಿಕೆ ತೆಗೆದುಕೊಂಡ ನಂತರವೂ ಕರ್ನಾಟಕದಲ್ಲಿ ಸೋಂಕು ಹರಡುತ್ತಿರುವ ಬಗ್ಗೆ ಮಾಹಿತಿ ನೀಡಿ ಹಾಗೂ ಸೋಂಕು ಪತ್ತೆಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಹೆಚ್ಚು ಮಾಡಿ, ಸೋಂಕಿಗೆ ಒಳಗಾದವರನ್ನು ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.

ರಾಷ್ಟ್ರದ ಕೆಲವು ಭಾಗಗಳಲ್ಲಿ ಹೊಸ ವೈರಾಣು ಕಾಣಿಸಿಕೊಂಡಿದೆ, ಇದೊಂದು ಕೋವಿಡ್-19 ನ ರೂಪಾಂತರ, ಭಯ-ಭೀತಿ ಬೇಡ, ಆದರೆ, ನಾವು ಎಚ್ಚರಿಕೆ ವಹಿಸಬೇಕಾಗಿದೆ ಎಂದಿದ್ದಾರೆ.

ಗೋವಾ, ಕೇರಳದಲ್ಲಿ ಹೆಚ್ಚು ಪ್ರಕರಣ

ಗೋವಾ ಮತ್ತು ಕೇರಳದಲ್ಲಿ ಪ್ರಕರಣಗಳು ಹೆಚ್ಚು ಕಂಡುಬಂದಿವೆ, ಆದ್ದರಿಂದ ಗಡಿಭಾಗದ ನೀವು, ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ತಿಳಿಸಿದ್ದಾರೆ.

ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 64 ವರ್ಷದ ವೃದ್ಧರೊಬ್ಬರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆಯುತ್ತಿದ್ದಂತೆ ಸರ್ಕಾರ ಎಚ್ಚೆತ್ತುಕೊಂಡು ಹಲವು ಕಠಿಣ ಕ್ರಮಕ್ಕೆ ಮುಂದಾಗಿದೆ.

ಹೆಚ್ಚು ಕೋವಿಡ್ ಪರೀಕ್ಷೆಗೆ ಆದೇಶ

ಕೇಂದ್ರ ಸಚಿವರೊಂದಿಗಿನ ವಿಡಿಯೊ ಸಂವಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಚಾಮರಾಜನಗರ, ಮೈಸೂರು, ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಕೋವಿಡ್ ಪರೀಕ್ಷೆ ನಡೆಸುವಂತೆ ಆದೇಶಿಸಲಾಗಿದೆ ಎಂದರು.

ಬರುವ ಶನಿವಾರದಿಂದ ಪ್ರತಿನಿತ್ಯ 5,000 ಪರೀಕ್ಷೆಗಳನ್ನು ನಡೆಸಲು ತೀರ್ಮಾನಿಸಲಾಗಿದೆ. ಕಳೆದ ಭಾರಿ ಸೋಂಕು ಕಂಡಾಗ ಶೇ.90 ರಷ್ಟು ಮಂದಿ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆದುಕೊಂಡರು, ಈ ಬಾರಿ ನಾವು ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದೇವೆ.

ಸೋಂಕು ತಡೆಗೆ ಮುಂಜಾಗ್ರತಾ ಕ್ರಮಕೈಗೊಳ್ಳುವ ಸಂಬಂಧ ಮುಖ್ಯಮಂತ್ರಿ ಅವರು ನಾಳೆ ಉನ್ನತ ಮಟ್ಟದ ಸಭೆ ಕರೆದಿದ್ದು, ಅದರಲ್ಲಿ ಸಲಹಾ ಸಮಿತಿ ಸದಸ್ಯರು ಇರುತ್ತಾರೆ.

ಮೂರು ತಿಂಗಳಿಗೆ ಅಗತ್ಯ ಔಷಧ, ಆಮ್ಲಜನಕ ದಾಸ್ತಾನು

ಮುಂದಿನ ಮೂರು ತಿಂಗಳಿಗೆ ಅಗತ್ಯವಿರುವ ಔಷಧ ಮತ್ತು ಆಮ್ಲಜನಕವನ್ನು ಶೇಖರಣೆ ಮಾಡಲಾಗುವುದು, ನಗರದಲ್ಲಿ ಇದಕ್ಕಾಗಿ ಒಂದು ಆಸ್ಪತ್ರೆಯನ್ನು ಮೀಸಲಿಡಲಾಗುವುದು.

ರಾಜ್ಯದಲ್ಲಿ ನಿನ್ನೆ ಸೋಂಕಿಗೆ ಮೃತಪಟ್ಟಿರುವ ವ್ಯಕ್ತಿಗೆ ಟಿಬಿ, ಅಸ್ತಮಾ, ಶ್ವಾಸಕೋಶದ ಸಮಸ್ಯೆಗಳಿತ್ತು, ಇವರಿಗೆ ಸೋಂಕು ತಗುಲಿ ಸಾವನ್ನಪ್ಪಿದ್ದಾರೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengalurucentral minister advicecovid alertdinesh gunduraokarnatakakmskmskannadanews
3 FacebookTwitterPinterestEmail
KM Shivaraju

previous post
ಕಾಂಗ್ರೆಸ್ ಶಾಸಕರಿಗೆ ಅಧಿಕಾರ
next post
ಯುವನಿಧಿ ಯೋಜನೆ: ಡಿ.26ಕ್ಕೆ ಚಾಲನೆ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ