Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

`ರನ್ ವಿಜಯಪುರ ರನ್’ ವೃಕ್ಷಥಾನ್

by admin December 24, 2023
written by admin December 24, 2023 0 comments 2 minutes read
3FacebookTwitterPinterestEmail
97
3 ಕಿ.ಮೀ ಓಡಿದ ಸಚಿವ ಎಂ.ಬಿ.ಪಾಟೀಲ

ವಿಜಯಪುರ: ಪರಿಸರ, ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಮತ್ತು ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗೌರವಾರ್ಥ ಭಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ .ಪಾಟೀಲ ಅವರು ಏರ್ಪಡಿಸಿದ್ದ ವೃಕ್ಷಥಾನ್ ಹೆರಿಟೇಜ್ ರನ್ `ರನ್ ವಿಜಯಪುರ ರನ್ ಭಾನುವಾರ ಯಶಸ್ವಿಯಾಗಿ ನಡೆಯಿತು.

21 ಕಿ.ಮೀ, 10 ಕಿ.ಮೀ, 5 ಕಿ.ಮೀ, 3.50 ಕಿಮೀ ಮತ್ತು 800 ಮೀಟರ್ ವಿಭಾಗಗಳಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹಲವು ಖ್ಯಾತನಾಮರು ಸೇರಿದಂತೆ 10 ಸಾವಿರಕ್ಕೂ ಹೆಚ್ಚು ಜನರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ಬಿಜೆಪಿ ರಾಜ್ಯ ಘಟಕ ಪುನಾರಚನೆ

ಸ್ಪರ್ಧಿಸಿದ್ದವರಲ್ಲಿ `ಬರಿಗಾಲ ಓಟಗಾರ್ತಿ’ ಖ್ಯಾತಿಯ ಪ್ರೀತಿ ಮನೀಶ್, ನಟರಾದ ಮಾಸ್ಟರ್ ಕಿಶನ್ ಮತ್ತು ಗುರುನಂದನ್, ಪುಣೆಯ ಶರದ್ ಚವಾಣ್, ಕಟಪಾಡಿ ಸುಲತಾ ಕಮಾತ್, ಪ್ರಶಾಂತ್ ಹಿಪ್ಪರಗಿ, ರಾಜಿಂದರ್ ಕೌರ್, ವೆಂಕಟೇಶ ಅಡಿಗ, ಸಮೀರ್ ಜೋಶಿ, ಅನಂತರಾಮು ಮುಂತಾದವರು ಇದ್ದರು. ಉದ್ಘಾಟನೆ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಗೋಳಗುಮ್ಮಟದ ಬಳಿ ಮ್ಯಾರಥಾನ್ ಓಟಗಾರರನ್ನು ಸೇರಿಕೊಂಡು ಸುಮಾರು 3 ಕಿ.ಮೀ. ಓಡಿ ನೆರೆದವರನ್ನು ಹುರಿದುಂಬಿಸಿದರು.

ವಿಜಯಪುರದ ಹಸುರೀಕರಣದ ಗುರಿ

ಎಂ. ಬಿ. ಪಾಟೀಲ ಅವರು ವಿಜಯಪುರದ ಹಸುರೀಕರಣದ ಗುರಿಯೊಂದಿಗೆ ಪ್ರತೀವರ್ಷವೂ ಹೆರಿಟೇಜ್ ರನ್ ಕಾರ್ಯಕ್ರಮ ಆಯೋಜಿಸಿಕೊಂಡು ಬರುತ್ತಿದ್ದಾರೆ. ಈ ಮೂಲಕ ವಿಜಯಪುರಕ್ಕೆ ಒಂದು ಬ್ರ್ಯಾಂಡ್ ಮೌಲ್ಯ ಸೃಷ್ಟಿಸುವುದು ಈ ಕಾರ್ಯಕ್ರಮದ ಆಶಯವಾಗಿದೆ.

ಇಂಗದ ಆಪರೇಷನ್ ಹಸ್ತದ ದಾಹ

ಇದರಂತೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾವೆದ್ ನಾಗಠಾಣ ಮತ್ತು ಈಶ್ವರ ಕಲಾಲ ಅವರು ಡ್ರೋನ್ ಕ್ಯಾಮರಾ ಬಳಸಿ ಸೃಷ್ಟಿಸಿದ್ದ ವಿಜಯಪುರದ ಪ್ರಾಚೀನ ಸ್ಮಾರಕಗಳು, ದೇವಸ್ಥಾನಗಳು, ವಿಡಿಯೋಗಳನ್ನು ಪ್ರದರ್ಶಿಸಲಾಯಿತು. ಜತೆಗೆ, ನಾನಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದವು. ಹೊರಾಂಗಣದಲ್ಲಿ 15ಕ್ಕೂ ಹೆಚ್ಚು ಮಳಿಗೆಗಳಲ್ಲಿ ವಸ್ತು ಪ್ರದರ್ಶನ ಕೂಡ ಏರ್ಪಡಿಸಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಎಂ ಬಿ ಪಾಟೀಲ, “ವಿಜಯಪುರ ಜಿಲ್ಲೆಯಲ್ಲಿ ಅರಣ್ಯ ಪ್ರದೇಶ ಕೇವಲ ಶೇಕಡ 0.17ರಷ್ಟು ಇದ್ದ ಸಂದರ್ಭದಲ್ಲಿ ವೃಕ್ಷಥಾನ್ ಆಂದೋಲನ ಆರಂಭಿಸಲಾಯಿತು. ಇದುವರೆಗೆ ಸುಮಾರು 1.5 ಕೋಟಿ ಸಸಿಗಳನ್ನು ನೆಡಲಾಗಿದ್ದು, ಈಗ ಹಸುರಿನ ವ್ಯಾಪ್ತಿ ಶೇಕಡ 2ನ್ನು ಮುಟ್ಟಿದೆ.  ಆದರೆ, ಇದು ಶೇಕಡ 30ರಿಂದ 35ರ ಪ್ರಮಾಣಕ್ಕೆ ತಲುಪಬೇಕೆಂದರೆ ನಾವು ಸಾಗಬೇಕಾದ ದಾರಿ ಇನ್ನೂ ತುಂಬಾ ಇದೆ” ಎಂದರು.

ಪರಿಸರ ಸುಸ್ಥಿರತೆ ಕಾಪಾಡಬೇಕು

ಇಲ್ಲಿ ನಾವು ನಡೆಸುತ್ತಿರುವ ವೃಕ್ಷಥಾನ್ ಎಲ್ಲರ ಬೆಂಬಲದಿಂದ ವರ್ಷದಿಂದ ವರ್ಷಕ್ಕೆ ಹೆಚ್ಚಿನ ಯಶಸ್ಸು ಕಾಣುತ್ತಿದೆ. ಮುಂದಿನ ವರ್ಷದಿಂದ ಜಿಲ್ಲೆಯ ಹಳ್ಳಿಗಳನ್ನೂ ಇದರಲ್ಲಿ ಒಳಗೊಳ್ಳಿಸಿಕೊಳ್ಳಲು ಯೋಜನೆ ರೂಪಿಸೋಣ. ಗಿಡ, ಮರಗಳನ್ನು ಬೆಳೆಸಿ ಪರಿಸರ ಸುಸ್ಥಿರತೆ ಕಾಪಾಡಿಕೊಳ್ಳಬೇಕೆಂಬುದು ಈ ವೃಕ್ಷಥಾನ್ ಮ್ಯಾರಥಾನ್ ನ ಉದ್ದೇಶವಾಗಿದೆ. ಇದನ್ನು ತಿಳಿದು, ಪ್ರತಿಯೊಬ್ಬರೂ ಒಂದಾದರೂ ಸಸಿ ನೆಟ್ಟು ಬೆಳೆಸಿದರೆ ಉದ್ದೇಶ ಸಫಲವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಶಾಲಾ ಶೌಚಾಲಯ ಶುಚಿತ್ವ: ವಿದ್ಯಾರ್ಥಿಗಳ ಬಳಕೆ ನಿಷೇಧ

ನಾವಿರುವ ಜಾಗದ ಸುತ್ತಲ ಪರಿಸರವನ್ನು ಬೇರೆ ಯಾರೋ ಬಂದು ಸ್ವಚ್ಛಗೊಳಿಸುತ್ತಾರೆ ಎಂಬ ಮನೋಭಾವ ಅಪಾಯಕಾರಿ. ನಾವಿರುವ ಸ್ಥಳದಲ್ಲಿನ ಉತ್ತಮ ಪರಿಸರಕ್ಕೆ ನಾವೇ ಕೊಡುಗೆ ಕೊಡಬೇಕು. ಹೀಗಾದಾಗ, ನಮಗೆಲ್ಲಾ ಆಸರೆ ನೀಡಿರುವ ಈ ಭೂಗ್ರಹದ ಪರಿಸರವನ್ನು ಕಾಪಾಡಿಕೊಳ್ಳುವುದು ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ನಮ್ಮ ಭಾರತ ದೇಶಕ್ಕೆ ದೊಡ್ಡ ಇತಿಹಾಸ ಮತ್ತು ಪರಂಪರೆ ಇದೆ. ನಮ್ಮಲ್ಲಿ ಪ್ರವಾಸೋದ್ಯಮಕ್ಕೆ ಬೇಕಾದ ಮೂಲ ಪರಿಕರಗಳು ವಿಪುಲವಾಗಿವೆ. ಆದರೆ, ಇದುವರೆಗೆ ನಾವು ಪ್ರವಾಸಿಗರಿಗೆ ಸ್ವಚ್ಛ ಬಾತ್ ರೂಮ್, ಶೌಚಾಲಯ, ಉತ್ತಮ ರಸ್ತೆ ಸಂಪರ್ಕ, ಶುಚಿಯಾದ ಊಟೋಪಚಾರ ವ್ಯವಸ್ಥೆ ಇವುಗಳನ್ನು ಒದಗಿಸಲು ವಿಫಲವಾಗಿದ್ದೇವೆ. ಇವನ್ನು ಅಭಿವೃದ್ಧಿಪಡಿಸಿದರೆ ನಾವು ಪ್ರವಾಸೋದ್ಯಮದ ಮೂಲಕ ಅತ್ಯಂತ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಜೊತೆಗೆ ಆದಾಯ ಕೂಡ ಗಳಿಸಬಹುದು ಎಂದು ಹೇಳಿದರು.

ಜಲ ಭಗೀರಥ ರಾಜೇಂದ್ರ ಸಿಂಗ್ ಭಾಗಿ

ಮುಂದಿನ ವರ್ಷ ವೃಕ್ಷಥಾನ್ ಅನ್ನು ಡಿಸೆಂಬರ್ ಎರಡನೇ ವಾರದಲ್ಲಿ ನಡೆಸಲಾಗುವುದು ಎಂದು ಇದೇ ವೇಳೆ ಪ್ರಕಟಿಸಿದರು.

ಸಿದ್ದರಾಮಯ್ಯ ಅವರಿಂದ ಸಮಾಜ ಒಡೆಯುವ ಹುನ್ನಾರ

ರಾಜಾಸ್ಥಾನದಿಂದ ಬಂದಿದ್ದ ಜಲ ಭಗೀರಥ ರಾಜೇಂದ್ರ ಸಿಂಗ್ ಅವರು ವೇದಿಕೆ ಮೇಲಿದ್ದರು. ಶಾಸಕ ಬಸನಗೌಡ ಪಾಟೀಲ ಯತ್ನಾಳ, ಅನಿಲಗೌಡ ಪಾಟೀಲ, ವಿಜಯಪುರದ ಗಣ್ಯರಾದ ಪ್ರಮೋದ ದೇಶಪಾಂಡೆ, ಕಿರಣ ಬೆಟಗೇರಿ, ಡಾ.ಪ್ರವೀಣ ಬಸನಗೌಡರ, ನರೇಂದ್ರಕುಮಾರ ನಾಗಶೆಟ್ಟಿ, ಬಿ ಎಸ್ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
minister mb patilran 3 kmRun Vriksthanvijayapura
3 FacebookTwitterPinterestEmail
admin

previous post
ಇಂಗದ ಆಪರೇಷನ್ ಹಸ್ತದ ದಾಹ
next post
ಧರ್ಮಗಳ ನಡುವೆ ಬೆಂಕಿ ಹಚ್ಚುತ್ತಿರುವ ಮುಖ್ಯಮಂತ್ರಿ

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ