ಕೆಎಸ್ ಆರ್ ಟಿ ಸಿ ಪ್ರಯಾಣಿಕರ ಅಪಘಾತ ಪರಿಹಾರ
ಬೆಂಗಳೂರು:ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳು ಅಪಘಾತಕ್ಕೀಡಾದಾಗ, ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರು ದುರದೃಷ್ಟವಶಾತ್ ಮೃತಪಟ್ಟಲ್ಲಿ, ಮೃತ ಪ್ರಯಾಣಿಕರ ಅವಲಂಬಿತರಿಗೆ ಹೆಚ್ಚಿನ ಆರ್ಥಿಕ ನೆರವು ನೀಡುವ ಸದ್ದುದೇಶದಿಂದ ಪ್ರಯಾಣಿಕರ ಅಪಘಾತ ಪರಿಹಾರ ನಿಧಿ ಟ್ರಸ್ಟ್ ವತಿಯಿಂದ ಪ್ರಸ್ತುತ ನೀಡಲಾಗುತ್ತಿರುವ ಆರ್ಥಿಕ ಪರಿಹಾರ ಮೊತ್ತವನ್ನು ಮೂರು ಲಕ್ಷ ದಿಂದ ಹತ್ತು ಲಕ್ಷ ರೂಪಾಯಿಗೆ ಜನವರಿ ಒಂದರಿಂದ ಜಾರಿಗೆ ಬರುವಂತೆ ಹೆಚ್ಚಿಸಲಾಗಿದೆ
ಕನ್ನಡಿಗರೊಬ್ಬರಿಗೆ ಮತ್ತೆ ಪ್ರಧಾನಿ ಅವಕಾಶ?
ಮೃತರ ಅವಲಂಬಿತರಿಗೆ ಹೆಚ್ಚುವರಿ ಪರಿಹಾರ ಮೊತ್ತವನ್ನು ನೀಡುವ ಸಲುವಾಗಿ 50 ರಿಂದ.99 ರೂ.ವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ ಒಂದು ರೂ. ಮಾತ್ರ ಮತ್ತು 100 ರೂ.ಹಾಗೂ ಹೆಚ್ಚಿನ ಬೆಲೆಯ ಟಿಕೇಟ್ ಪಡೆದು ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರತಿ ಪ್ರಯಾಣಿಕರಿಂದ ತಲಾ 2 ರೂ.ರಂತೆ ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆಯನ್ನೂ ಸಹ ದಿನಾಂಕ:01-01-2024 ರಿಂದ ಮಾಡಲಾಗುವುದು.
ಪ್ರಯಾಣಿಕರಿಂದ ಶೇ.2ರಷ್ಟು ಅಪಘಾತನಿಧಿ ಪರಿಹಾರ ವಂತಿಕೆ ಸಂಗ್ರಹ
ಈ ಹಿಂದೆ 100 ರೂ.ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 1 ರೂ.ಅಪಘಾತ ಪರಿಹಾರ ನಿಧಿ ವಂತಿಕೆ ಸಂಗ್ರಹಣೆ ಮಾಡಲಾಗುತ್ತಿತ್ತು.1 ರಿಂದ 49 ರೂ.ರವರೆಗಿನ ಮುಖ ಬೆಲೆಯ ಟಿಕೇಟ್ ಪಡೆದು ಪ್ರಯಾಣಿಸುವ ಪ್ರಯಾಣಿಕರಿಗೆ ಯಾವುದೇ ಅಪಘಾತ ಪರಿಹಾರ ನಿಧಿ ವಂತಿಕೆ ಇರುವುದಿಲ್ಲಎಂದು ಕೆಎಸ್ ಆರ್ ಟಿಸಿ ಪ್ರಕಟಣೆ ತಿಳಿಸಿದೆ.
1 comment
[…] ರಾಷ್ಟ್ರ […]