Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ರಾಜ್ಯಾದ್ಯಂತ ಏಕರೂಪ ತೆರಿಗೆ

by admin December 29, 2023
written by admin December 29, 2023 1 comment 1 minutes read
3FacebookTwitterPinterestEmail
103
ಅನಧಿಕೃತ ಬಡಾವಣೆ ನಿರ್ಮಾಣ ತಡೆಗೆ ಜೈಲು ಶಿಕ್ಷೆ ಸಲಹೆ

ಬೆಂಗಳೂರು: ಬಡಾವಣೆ ಅನುಮೋದನೆ, ನಕ್ಷೆ ಮಂಜೂರಾತಿ ಇಲ್ಲದೆ ನಿಯಮ ಉಲ್ಲಂಘಿಸಿ ಕಂದಾಯ ಭೂಮಿಯಲ್ಲಿ  ನಿರ್ಮಿಸಿದ ಕಟ್ಟಡಗಳಿಗೆ ಬಿಬಿಎಂಪಿ ರೀತಿಯಲ್ಲೇ ರಾಜ್ಯಾದ್ಯಂತ ಏಕರೂಪವಾಗಿ  ತೆರಿಗೆ ವಿಧಿಸುವುದು ಸೂಕ್ತ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸೌಧದಲ್ಲಿ ನಡೆದ ಬಿಬಿಎಂಪಿ ಕಾಯ್ದೆ 2020ರ ಕಲಂ 144(6) ಮತ್ತು (21)ರ ಅಂಶಗಳನ್ನು ರಾಜ್ಯದ ಇತರ ಮಹಾನಗರ ಪಾಲಿಕೆಗಳಿಗೆ /ನಗರ ಸ್ಥಳೀಯ ಸಂಸ್ಥೆಗಳಿಗೆ ಸಹ ವಿಸ್ತರಣೆ ಮಾಡುವ ಸಂಬಂಧ ಕರ್ನಾಟಕ ಮಹಾನಗರ ಪಾಲಿಕೆಗಳ ಕಾಯ್ದೆ 1976 ಹಾಗೂ ಕರ್ನಾಟಕ ಪುರಸಭೆ ಕಾಯ್ದೆ 1964ರಲ್ಲಿ ಅಳವಡಿಸಿಕೊಳ್ಳುವ ಕುರಿತ ಸಾಧಕ-ಬಾಧಕ ಪರಿಶೀಲಿಸಲು ಸೂಕ್ತ ತೀರ್ಮಾನ ಕೈಗೊಳ್ಳುವ ಸಲುವಾಗಿ ರಚಿಸಲಾಗಿರುವ ಉಪಸಮಿತಿಯ ಸಭೆಯ ನಂತರ ಮಾತನಾಡಿದ ಅವರು, ಅನಧಿಕೃತವಾಗಿ ಕಟ್ಟಿರುವ ಕಟ್ಟಡಗಳಿಗೆ ಒಂದು ಬಾರಿ ಅವಕಾಶ ನೀಡಿ ದಂಡ ವಿಧಿಸಿ, ಮೊದಲ ವರ್ಷ ದುಪ್ಪಟ್ಟು ತೆರಿಗೆ ವಿಧಿಸಿ, ನಂತರದ ವರ್ಷಗಳಲ್ಲಿ ನಿಯಮಿತವಾಗಿ ತೆರಿಗೆ ವಿಧಿಸಬಹುದು ಎಂದು ಸಲಹೆ ನೀಡಿದರು.

ಅಕ್ರಮ ಬಡಾವಣೆಗೆ ಜೈಲು ಶಿಕ್ಷೆ

ಇನ್ನು ಮುಂದೆ ಯಾರೇ ಅನಧಿಕೃತವಾಗಿ ಬಡಾವಣೆ ನಿರ್ಮಿಸಿ, ಸಂಬಂಧಿತ ಸ್ಥಳೀಯ ಸಂಸ್ಥೆಗಳಿಂದ ನಕ್ಷೆ ಮಂಜೂರಾತಿ ಇಲ್ಲದೆ ಕಟ್ಟಡ ನಿರ್ಮಿಸಿದರೆ ಅಂತಹವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವಂತೆ ಕಾನೂನಿಗೆ ತಿದ್ದುಪಡಿ ತರುವುದು ಅಗತ್ಯ.

ಲೋಕಸಭೆ ಚುನಾವಣೆ: ಯಾರಿಗೆ ಯಾವ ಕ್ಷೇತ್ರ ಗೋತ್ತೆ?

ಇಲ್ಲವಾದರೆ ಅನಧಿಕೃತ ಬಡಾವಣೆಗಳು ರಾಜ್ಯದಾದ್ಯಂತ ನಾಯಿಕೊಡೆಗಳಂತೆ ತಲೆ ಎತ್ತುತ್ತಲೇ ಇರುತ್ತವೆ. ಹೀಗಾಗಿ ಕಾನೂನು ತಂದು ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ನಿಯಮ ಸರಳೀಕರಣಕ್ಕೆ ತಂತ್ರಾಂಶ

ಯಾರೇ ನ್ಯಾಯಸಮ್ಮತವಾಗಿ ಸಾರ್ವಜನಿಕ ಉದ್ದೇಶಕ್ಕೆ ಜಾಗ ಬಿಟ್ಟು ಬಡಾವಣೆ ನಿರ್ಮಿಸಲು ಮುಂದಾದರೆ ಮತ್ತು ಮನೆ ನಿರ್ಮಾಣ ಮಾಡಲು ನಿಯಮಾನುಸಾರ ನಕ್ಷೆ ಮಂಜೂರಾತಿ ಬಯಸಿದಲ್ಲಿ ನಿಯಮ ಸರಳೀಕರಣ ಮಾಡಿ, ಮುಖಾಮುಖಿ ರಹಿತವಾಗಿ ನಿರ್ದಿಷ್ಟ ಕಾಲಮಿತಿಯೊಳಗೆ ಮಂಜೂರಾತಿ ಲಭಿಸುವಂತೆ ತಂತ್ರಾಂಶ ಅಭಿವೃದ್ಧಿ ಪಡಿಸುವ ಅಗತ್ಯವನ್ನೂ ಪ್ರತಿಪಾದಿಸಿದರು.

ಅತಿಥಿ ಉಪನ್ಯಾಸಕರಿಗೆ 5,000 ರೂ. ಹೆಚ್ಚಳ

ಯಾರೊಬ್ಬರೂ ನಕಲಿ ಖಾತೆ ಪಡೆದು ನೋಂದಣಿ ಮಾಡಿಸದಂತೆ ಕಾವೇರಿ ತಂತ್ರಾಂಶದಲ್ಲಿ ಮಾರ್ಪಾಡು ಮಾಡಿದಾಗ ಅನಧಿಕೃತ ಬಡಾವಣೆ, ಕಟ್ಟಡಗಳನ್ನು ನಿಯಂತ್ರಿಸಬಹುದು ಎಂದು ಈಶ್ವರ ಖಂಡ್ರೆ ಸಲಹೆ ಮಾಡಿದರು.

ನಾಫೆಡ್‌ನಿಂದ ಕೊಬ್ಬರಿ ಖರೀದಿಸಿ

ನೂತನವಾಗಿ ಯಾವುದೇ ಸಮುಚ್ಚಯಗಳನ್ನು, ಗುಂಪು ಮನೆಗಳನ್ನು ಮತ್ತು ವಾಣಿಜ್ಯ ಕಟ್ಟಡಗಳನ್ನು  ನಿರ್ಮಿಸುವಾಗ ಜಲಕಾಯಿದೆ, ವಾಯು ಕಾಯಿದೆ ಮತ್ತು ಪರಿಸರ ಸಂರಕ್ಷಣೆ ಕಾಯಿದೆ ಉಲ್ಲಂಘಿಸಿ ಕಟ್ಟಡ ನಿರ್ಮಿಸುವವರ ವಿರುದ್ಧ ಕಾನೂನು ರೀತ್ಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ತೆರಿಗೆ ಸಂಗ್ರಹಿಸಲು ನಿಯಮಾವಳಿ

ಇನ್ನು ಮುಂದೆ ನಕ್ಷೆ ಮಂಜೂರಾತಿ ಪಡೆದ ಬಳಿಕ ನಿಯಮ ಉಲ್ಲಂಘನೆ ಮಾಡಿ ಕಟ್ಟಡ ನಿರ್ಮಿಸುವವರ ವಿರುದ್ಧವೂ ಕ್ರಮ ಜರುಗಿಸಬೇಕು. ನಿರ್ಮಾಣ ಹಂತದಲ್ಲಿಯೇ ಇಂತಹ ಕಟ್ಟಡ ಮಾಲೀಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಚಿವರು ಹೇಳಿದರು.

ಸದ್ದಿಲ್ಲದೆ ಆಪರೇಷನ್ ಕಮಲ

ಈವರೆಗೆ ನಡೆದಿರುವ ಎಲ್ಲ ಸಭೆಗಳಲ್ಲಿ ನಡೆದ ಚರ್ಚೆಯ ಅಂಶಗಳನ್ನು ಕ್ರೋಡೀಕರಿಸಿ, ವಿಧೇಯಕ ರೂಪಿಸಲು ಮತ್ತು ಬಿಬಿಎಂಪಿಯಲ್ಲಿ ಬಿ ವಹಿಯಡಿ ಕಟ್ಟಡ ತೆರಿಗೆ ವಿಧಿಸುತ್ತಿರುವ ರೀತಿಯಲ್ಲೇ ರಾಜ್ಯದ ಇತರ ಪ್ರದೇಶಗಳಲ್ಲೂ ತೆರಿಗೆ ಸಂಗ್ರಹಿಸಲು ನಿಯಮಾವಳಿ ರೂಪಿಸುವಂತೆ ಸೂಚಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
across the statecollecting taxillegal layoutimprisonmentrules simplificationsoftwareUniform taxation
3 FacebookTwitterPinterestEmail
admin

previous post
ಲೋಕಸಭೆ ಚುನಾವಣೆ: ಯಾರಿಗೆ ಯಾವ ಕ್ಷೇತ್ರ ಗೋತ್ತೆ?
next post
ಬೆಂಗಳೂರಿನಲ್ಲಿರಾಜ್ಯಮಟ್ಟದ ಉದ್ಯೋಗ ಮೇಳ

You may also like

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕನ್ನಡಿಗರಿಗೆ ಕನ್ನಡದಲ್ಲೇ ರೈಲ್ವೆ ನೇಮಕಾತಿ ಪರೀಕ್ಷೆ

April 9, 2026

ಆನೆ, ಹುಲಿ, ಚಿರತೆ ಹಾವಳಿ ತಡೆಗೆ ಸಂತಾನಹರಣ ಚಿಕಿತ್ಸೆ

April 8, 2026

ಏಪ್ರಿಲ್ 7ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

April 4, 2026

ಸೈಬರ್ ಅಪರಾಧ : ಕರ್ನಾಟಕದಲ್ಲಿ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚು

April 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ