Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬೆಂಗಳೂರಿನಲ್ಲಿ ಸುರಂಗ ಯೋಜನೆ: ಇಬ್ಬರು ಸಚಿವರ ನಡುವೆ ಫೈಟ್

by admin December 30, 2023
written by admin December 30, 2023 1 comment 3 minutes read
2FacebookTwitterPinterestEmail
455
ಹೆಚ್.ಡಿ.ಕುಮಾರಸ್ವಾಮಿ ಸ್ಫೋಟಕ ಹೇಳಿಕೆ

ಬೆಂಗಳೂರು: ಬೆಂಗಳೂರಿನಲ್ಲಿ ಸುರಂಗ ನಿರ್ಮಾಣ ಮಾಡುವ ಯೋಜನೆಗಾಗಿ ಇಬ್ಬರು ಸಚಿವರ ನಡುವೆ ಫೈಟ್ ಶುರುವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದರು.

ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸುರಂಗ ಯೋಜನೆಗೆ 80,000 ಕೋಟಿ ರೂ. ವೆಚ್ಚ ಆಗುತ್ತದೆ ಎಂದು ಸರ್ಕಾರ ಹೇಳಿದೆ. ಆದರೆ, ಈ ಯೋಜನೆಯನ್ನು ಯಾವಾಗ ಪೂರ್ಣ ಮಾಡುತ್ತೇವೆ ಎಂದು ಸರ್ಕಾರ ಹೇಳುತ್ತಿಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಮಿನ್ಸ್ ಚೌಕ್ ರಸ್ತೆಯಿಂದ ಹೆಬ್ಬಾಳದವರಿಗೆ ಸುರಂಗ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ್ದೆ.

 ಅದಕ್ಕೆ ಅಂತಿಮ ಹಂತದ ಅನಿಮೋದನೆಯನ್ನೂ ಕೊಡಲಾಗಿತ್ತು. ಆದರೆ, ಅಷ್ಟರಲ್ಲಿ ನನ್ನ ಸರ್ಕಾರ ಹೋಯಿತು. ಆ ಯೋಜನೆ ಅಲ್ಲಿಗೇ ನಿಂತು ಹೋಯಿತು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪ್ರತಿ ಚದರ ಅಡಿಗೆ 100 ರೂಪಾಯಿ ವಸೂಲಿ

ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಎಷ್ಟೆಲ್ಲಾ ಕೊಳ್ಳೆ ಹೊಡೆಯಬೇಕೋ ಅಷ್ಟನ್ನೂ ಮಾಡಲು ಈ ಸರ್ಕಾರ ಹೊರಟಿದೆ. ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ಪ್ರತಿ ಚದರ ಅಡಿಗೆ 100 ರೂಪಾಯಿ ವಸೂಲಿ ಮಾಡುವುದರಲ್ಲಿ ಇವರು ಬ್ಯುಸಿ ಇದ್ದಾರೆ. ಜನರ ಬಗ್ಗೆ ಆಲೋಚನೆ ಮಾಡುವುದಕ್ಕೆ ಇವರಿಗೆ ಸಮಯ ಇಲ್ಲ ಎಂದು ಅವರು ಟೀಕಾಪ್ರಹಾರ ನಡೆಸಿದರು.

ಮನುಷ್ಯತ್ವ ಅಂತಿಮ ಗುರಿಯಾಗಬೇಕು

ಸರ್ಕಾರಿ ಶಾಲೆಗಳನ್ನು ಸ್ವಚ್ಛ ಮಾಡಲು ಹಣವೂ ಇಲ್ಲ, ಸಿಬ್ಬಂದಿಯೂ ಇಲ್ಲ. ಶಿಕ್ಷಕರು ಮಕ್ಕಳಿಂದ ಸ್ವಚ್ಚತಾ ಕಾರ್ಯ ಮಾಡಿಸುತ್ತಾರೆ. ತಪ್ಪು ಸರ್ಕಾರದ್ದು, ಶಿಕ್ಷೆ ಶಿಕ್ಷಕರಿಗೆ. ಎಲ್ಲರನ್ನೂ ಸಮಾನವಾಗಿ ನೋಡಬೇಕು ಎನ್ನುತ್ತಿದೆ ಸರ್ಕಾರ.

ಆದರೆ, ಸಮಾಜ ಕಲ್ಯಾಣ ಇಲಾಖೆಯಿಂದ 11 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಡೈವರ್ಟ್ ಮಾಡಲಾಗಿದೆ.  ಶಾಲೆಗಳಲ್ಲಿ ಚಾಕ್ ಪೀಸ್, ಡಸ್ಟರ್ ತರಲಿಕ್ಕೂ ಶಿಕ್ಷಕರೇ ಹಣ ಖರ್ಚು ಮಾಡಬೇಕು. ರಾಜ್ಯದಲ್ಲಿ 17 ಸಾವಿರ ಶಾಲೆಗಳಿಗೆ ಕಟ್ಟಡವೇ ಇಲ್ಲ. ಕಟ್ಟಡ ಇರುವ ಕಡೆ ಟೀಚರ್ ಇರಲ್ಲ. ಟೀಚರ್ ಇರುವ ಕಡೆ ಕಟ್ಟಡ ಇಲ್ಲ. ಇದು ಸರ್ಕಾರದ ಶಿಕ್ಷಣ ನೀತಿ ಎಂದು ಚಾಟಿ ಬೀಸಿದರು.

ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಿ

ಕೋಲಾರದಲ್ಲಿ ಮಾಧ್ಯಮದವರನ್ನು ಹೊರಗೆ ಹಾಕಿ ಕೆಡಿಪಿ ಮೀಟಿಂಗ್ ಮಾಡಿದ್ದೀರಿ. ಈಗ ಹೊಸದಾಗಿ ಉದ್ಯೋಗ ಮೇಳ ಮಾಡುತ್ತೇವೆ ಎಂದು ಹೊರಟಿದ್ದಾರೆ. ಉದ್ಯೂಗ ಮೇಳ ಇರಲಿ, ಮೊದಲು ಸರ್ಕಾರದಲ್ಲಿ ಖಾಲಿ ಇರುವ 2 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಿ ಎಂದರು.

ಜ.2ರಿಂದ ಕೋರ್ಬಿವ್ಯಾಕ್ಸ್ ಲಸಿಕೆ ಅಭಿಯಾನ

ರಾಜ್ಯದಲ್ಲಿ ನೇಕಾರರ ಪರಿಸ್ಥಿತಿ ದಯನೀಯವಾಗಿದೆ. ದಿನಪೂರ್ತಿ ಇಡೀ ಕುಟುಂಬ ದುಡಿದರೂ 500 ರೂಪಾಯಿ ಸಂಪಾದನೆ ಮಾಡುವುದು ಕಷ್ಟವಾಗಿದೆ. ರಾಜ್ಯದ 39 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಅವರಲ್ಲಿ 22 ಮಂದಿ ಬೆಳಗಾವಿ ಜಿಲ್ಲೆಯವರು ಎಂಬ ಸುದ್ದಿಯನ್ನು ಪತ್ರಿಕೆಯಲ್ಲಿ ಓದಿದೆ. ಇವರಿಗೆ ಗ್ಯಾರಂಟಿ ಹಣ ತಲುಪುಲ್ಲ. ಅದಕ್ಕೆ ಸರ್ಕಾರ ಏನು ಮಾಡಿದೆ ಎಂದು ಅವರು ಪ್ರಶ್ನೆ ಮಾಡಿದರು.

ಕುಸಿದ ವಿದೇಶಿ ನೇರ ಹೂಡಿಕೆ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಕುಸಿದಿದೆ. ಈ ವರ್ಷದಲ್ಲಿ ರಾಜ್ಯಕ್ಕೆ ವಿದೇಶಿ ನೇರ ಹೂಡಿಕೆ ಶೆ.46ರಷ್ಟು ಅಂದರೆ; 2.8 ಶತಕೋಟಿ ಡಾಲರ್ ನಷ್ಟು ಹೂಡಿಕೆ ಕಡಿಮೆ ಆಗಿದೆ. ಪರಿಣಾಮವಾಗಿ ಉದ್ಯೋಗ ಸೃಷ್ಟಿಯೂ ಕುಸಿದಿದೆ. ಸಚಿವ ಎಂಬಿ ಪಾಟೀಲ್ ಅಮೇರಿಕಾಗೆ ಹೋಗಿದ್ದರು. 25 ಸಾವಿರ ಕೋಟಿ ರೂ. ಹೂಡಿಕೆ ಆಗಿದೆ ಎಂದು ಅವರು ಹೇಳಿದ್ದರು. ಬಹುಶಃ ಆ ಹಣ ವಿಮಾನದಲ್ಲಿ ಬರ್ತಾ ಇರಬೇಕು ಎಂದು ಅವರು ವ್ಯಂಗ್ಯವಾಡಿದರು.

ಬಿಜೆಪಿ ಸರ್ಕಾರ ಇದ್ದಾಗ 5 ಲಕ್ಷ 20 ಸಾವಿರ ಕೋಟಿ ರೂ.ಗೆ ವಿದೇಶಿ ಹೂಡಿಕೆ ಬಂದಿದೆ ಅಂದರು. ಅದಕ್ಕೆ 75 ಕೋಟಿ ರೂ ಖರ್ಚು ಮಾಡಿದ್ದರು. ಇದರಲ್ಲಿ 90% ರಷ್ಟು ಬೆಂಗಳೂರಿನ ಹೊರಗಡೆ ಹೂಡಿಕೆ ಆಗ್ತಿದೆ ಎಂದು ಹೇಳಲಾಗಿತ್ತು.

ರಾಜ್ಯಾದ್ಯಂತ ಏಕರೂಪ ತೆರಿಗೆ

2023ನಲ್ಲಿ ಶೆ.46ರಷ್ಟು ವಿದೇಶಿ ಹೂಡಿಕೆ ಇಳಿಕೆಯಾಗಿದೆ ಎಂದರೆ ಸಣ್ಣ ಮಾತಲ್ಲ. ಬಿಜೆಪಿ ಸರ್ಕಾರ ಇದ್ದ 2022-2023 ಸಾಲಿನಲ್ಲಿ 5.3 ಶತಕೋಟಿ ಹೂಡಿಕೆ ಬಂದಿದ್ದರೆ, 2023ರಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ) 2.2 ಶತಕೋಟಿ ಹೂಡಿಕೆಯಷ್ಟೇ ಬಂದಿದೆ ಎಂದು ಮಾಜಿ ಸಿಎಂ ಅಂಕಿಅಂಶಗಳ ಸಮೇತ ಹೇಳಿದರು.

ಈ ಸರ್ಕಾರದ ಕಾರ್ಯ ವೈಖರಿ ಸರಿ ಇಲ್ಲ. ದಾವೋಸ್ ಗೆ ಹೋಗಲಿಕ್ಕೆ 9 ಕೋಟಿ ರೂಪಾಯಿ ತೆಗೆದುಕೊಂಡಿದ್ದಾರೆ. ಇದೆಲ್ಲ ಜನರ  ತೆರಿಗೆ ಹಣ. ಅದನ್ನು ಮನಸೋಇಚ್ಛೆ ಪೋಲು ಮಾಡಲಾಗುತ್ತಿದೆ ಎಂದು ಅವರು ದೂರಿದರು.

ಕಾಂಗ್ರೆಸ್ ಯತ್ನಾಳ್ ಆರೋಪದ ರಕ್ಷಣೆ ಪಡೆಯುತ್ತದೆ

ಹಿಂದಿನ ಬಿಜೆಪಿ ಸರ್ಕಾರದಲ್ಲಿ ಕೋವಿಡ್ ನಲ್ಲಿ 40,000 ಕೋಟಿ ರೂಪಾಯಿ ಅಕ್ರಮ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮಾಡಿರುವ ಆರೋಪದಿಂದ ಕಾಂಗ್ರೆಸ್ ರಕ್ಷಣೆ ಪಡೆಯುತ್ತಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಬಿಜೆಪಿಯಲ್ಲಿರುವ ರಾಜಕೀಯ ಭಿನ್ನಾಭಿಪ್ರಾಯಗಳಿಂದ ಇಂತಹ ಮಾತುಗಳು ಕೇಳಿ ಬರುತ್ತಿವೆ. ಇದೇ ಕಾಂಗ್ರೆಸ್ ಗೆ ಹೊಸ ಅಸ್ತ್ರವಾಗಿಬಿಟ್ಟಿದೆ. ಸಚಿವರಾದ ಪರಮೇಶ್ವರ್, ಎಂ.ಬಿ.ಪಾಟೀಲ್ ಅವರು ನೀಡುತ್ತಿರುವ ಹೇಳಿಕೆಗಳೇ ಇದಕ್ಕೆ ಸಾಕ್ಷಿ. ಇಷ್ಟು ದೊಡ್ಡ ಅಕ್ರಮ ನಡೆದಿದೆ ಎಂದರೆ ನಂಬಲಾಗುತ್ತಿಲ್ಲ ಎಂದರು.

ಬೆಂಗಳೂರಿನಲ್ಲಿರಾಜ್ಯಮಟ್ಟದ ಉದ್ಯೋಗ ಮೇಳ

 ಹಿಂದೆ ಫ್ರೀಡಂ ಪಾರ್ಕ್ ನಲ್ಲಿ ಮಾಜಿ ಸ್ಪೀಕರ್ ರಮೇಶ ಕುಮಾರ್ ಭಾಷಣ ಮಾಡಿದ್ದರು. ಗಾಂಧಿ ಕುಟುಂಬ ಹೆಸರು ಹೇಳಿಕೊಂಡು ಮೂರು ತಲೆಮಾರಿಗೆ ಅಗುವಷ್ಟು ಮಾಡಿಕೊಂಡಿದ್ದೇವೆ. ಆ ಕುಟುಂಬವನ್ನು ಉಳಿಸಿಕೊಳ್ಳಲು ಹೋರಾಟ ಮಾಡಬೇಕು ಅಂತ ಹೇಳಿದ್ದರು. ಕೋವಿಡ್ ಕಾಲದಲ್ಲಿ ಎಷ್ಟು ಹಣ ಬಿಡುಗಡೆ ಆಗಿದೆ ಎಂದು ಲೆಕ್ಕ ತೆಗೆದರೆ ಎಲ್ಲವೂ ಗೊತ್ತಾಗಿಬಿಡುತ್ತದೆ ಎಂದು ಅವರು ಹೇಳಿದರು.

ಸಂಕ್ರಾಂತಿ ವೇಳೆಗೆ ನಿಗಮ-ಮಂಡಳಿ ಅಧ್ಯಕ್ಷರ ನೇಮಕ

ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಹಿರಿಯ ಮುಖಂಡ ಕೆ.ಟಿ.ಶಾಂತಕುಮಾರ್ ಉಪಸ್ಥಿರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bangaloreCongress gets defenseExplosive StatementFdi state falls 46%fight betweenFormer CMhd kumaraswamytunnel projecttwo ministersYatnal charges
2 FacebookTwitterPinterestEmail
admin

previous post
ಜ.2ರಿಂದ ಕೋರ್ಬಿವ್ಯಾಕ್ಸ್ ಲಸಿಕೆ ಅಭಿಯಾನ
next post
ರೈತರು, ಬರ ಪರಿಹಾರಕ್ಕೆ ದುಡ್ಡಿಲ್ಲ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ