ಕಾಂಗ್ರೆಸ್ ಸರ್ಕಾರವನ್ನು ಶಪಿಸುತ್ತಿರುವ ಜನತೆ; ವಿಜಯೇಂದ್ರ ಆರೋಪ
ವಿಜಯಪುರ:ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮಮಂದಿರದ ಕನಸು ನನಸಾಗುವ ಶುಭ ಸಂದರ್ಭದಲ್ಲಿ ನಾವಿಲ್ಲಿ ಸೇರಿದ್ದೇವೆ. ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರವು ಉತ್ತಮ ಆಡಳಿತ ನೀಡುತ್ತಿದೆ. ಒಂದು ದಿನವೂ ವಿಶ್ರಾಂತಿ ಪಡೆಯದೆ ದೇಶ ಸೇವೆ ಮಾಡುವ ಪರಿಶ್ರಮಿ ಪ್ರಧಾನಿ ನಮ್ಮ ಮೋದಿಜೀ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.
ಕಾರ್ಯಕರ್ತರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ಸಿಗರು ಏನೇ ತಿಪ್ಪರಲಾಗ ಹಾಕಿದರೂ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ನಾಗಾಲೋಟವನ್ನು ತಡೆಯಲು ಸಾಧ್ಯವಿಲ್ಲ. ಎಲ್ಲ 28 ಕ್ಷೇತ್ರಗಳಲ್ಲೂ ಕೂಡ ಬಿಜೆಪಿ- ಜೆಡಿಎಸ್ ಒಗ್ಗಟ್ಟಾಗಿ ಗೆಲ್ಲುತ್ತೇವೆ. ಮತದಾರರು ಕೇವಲ 7 ತಿಂಗಳಲ್ಲಿ ಕಾಂಗ್ರೆಸ್ಸಿನ ಸರಕಾರಕ್ಕೆ ಕುಂತಲ್ಲಿ ನಿಂತಲ್ಲಿ ಶಾಪ ಹಾಕುತ್ತಿದ್ದಾರೆ ಎಂದು ವಿವರಿಸಿದರು.
ಖರ್ಗೆ ಬದಲು ರಾಹುಲ್ ಗಾಂಧಿ ಪ್ರಧಾನಿ ಆಗಲಿ ಎಂದ ಸಿದ್ದರಾಮಯ್ಯ
ಬರಗಾಲದ ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡುವ ಮಾತನಾಡಿದ್ದಾರೆ. ಬಿಜೆಪಿ ಅಲ್ಪಸಂಖ್ಯಾತರ ವಿರೋಧಿಯಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಹಣ ನೀಡಿ ಸ್ಪಂದಿಸಿತ್ತು.
ಆದರೆ, ಕಾಂಗ್ರೆಸ್ ಸರ್ಕಾರವು ರೈತರ ಸಂಕಷ್ಟಕ್ಕೆ ಸ್ಪಂದಿಸದೆ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ಕೊಡಲು ಮುಂದಾಗಿದೆ ಎಂದರಲ್ಲದೆ, ರೈತರಲ್ಲಿ ಬಡವರು, ಎಲ್ಲ ವರ್ಗದ, ಎಲ್ಲ ಧರ್ಮದ ಜನರಿಲ್ಲವೇ ಎಂದು ಪ್ರಶ್ನಿಸಿದರು.
ಕಾರ್ಯಕರ್ತರು ಸೇನಾನಿಯಂತೆ ಕೆಲಸ ಮಾಡಬೇಕು
ತುಷ್ಟೀಕರಣದ ರಾಜಕೀಯ ಮಾಡುವ ಕಾಂಗ್ರೆಸ್ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು. ಪ್ರತಿಯೊಬ್ಬ ಕಾರ್ಯಕರ್ತರು ಸೇನಾನಿಯಂತೆ ಕೆಲಸ ಮಾಡಬೇಕು. ಮೋದಿಯವರ ಕೈ ಬಲಪಡಿಸಲು ಲೋಕಸಭಾ ಚುನಾವಣೆಯಲ್ಲಿ ಕೊಡುಗೆ ಕೊಡಬೇಕು ಎಂದು ಮನವಿ ಮಾಡಿದರು.
ಬೆಂಗಳೂರಿನಲ್ಲಿ ಸುರಂಗ ಯೋಜನೆ: ಇಬ್ಬರು ಸಚಿವರ ನಡುವೆ ಫೈಟ್
ಭವ್ಯ ಭಾರತದ ಕನಸನ್ನು ಕಾಣುತ್ತ ಶಕ್ತಿಶಾಲಿ ರಾಷ್ಟ್ರವಾಗಿ ಮಾಡುವ ಸಂಕಲ್ಪ ಮೋದಿಜೀ ಅವರದು. ಅನೇಕ ಜನಪರ ಯೋಜನೆಗಳನ್ನು ಅವರು ನೀಡಿದ್ದು, ಅವನ್ನು ಜನರಿಗೆ, ಮನೆಮನೆಗೆ ತಲುಪಿಸಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಪ್ರಧಾನಿ ಗ್ಯಾರಂಟಿಗೆ ಮತದಾರರ ಪುರಸ್ಕಾರ
ಕಾಂಗ್ರೆಸ್ ಸರ್ಕಾರವು ವಿಧಾನಸಭಾ ಚುನಾವಣೆ ವೇಳೆ ಅನೇಕ ಆರೋಪ ಮಾಡಿತ್ತು. ಅಲ್ಲದೆ ಅಗ್ಯಾರಂಟಿಗಳ ಕಲ್ಪನೆ, ಸುಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೇರಿದೆ. 5 ರಾಜ್ಯಗಳ ಫಲಿತಾಂಶವು ಹೊರಬಂದಾಗ ಕಾಂಗ್ರೆಸ್ ಕನಸು ನುಚ್ಚು ನೂರಾಗಿದೆ. 3 ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಬೂಟಾಟಿಕೆಯ ಗ್ಯಾರಂಟಿಯನ್ನು ತಿರಸ್ಕರಿಸಿ ಮೋದಿ ಅವರ ಗ್ಯಾರಂಟಿಯನ್ನು ಪುರಸ್ಕರಿಸಿದ್ದಾರೆ ಎಂದು ವಿಶ್ಲೇಷಿಸಿದರು.
ಜ.2ರಿಂದ ಕೋರ್ಬಿವ್ಯಾಕ್ಸ್ ಲಸಿಕೆ ಅಭಿಯಾನ
ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾದ ಬಳಿಕ ಪಕ್ಷದಲ್ಲಿ ಸಂಚಲನ ಉಂಟಾಗಿದೆ. ಯಡಿಯೂರಪ್ಪ ಅವರು ಪಕ್ಷವನ್ನು ಕಟ್ಟಿ ಬೆಳೆಸಿದವರು. ಅವರು ಈ ಭಾಗಕ್ಕೆ ಗರಿಷ್ಠ ಕೊಡುಗೆ ನೀಡಿದ್ದಾರೆ ಎಂದು ಮುಖಂಡರು ತಿಳಿಸಿದರು. ಯಡಿಯೂರಪ್ಪ ಅವರು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡಿ, ದೇಶದ ದಕ್ಷಿಣ ಭಾರತದಲ್ಲಿ ಪ್ರಥಮ ಬಾರಿಗೆ ಸರ್ಕಾರ ಬರಲು ಕಾರಣಕರ್ತರಾದರು ಎಂದು ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ಅವರು ನೆನಪಿಸಿದರು.
ರೈತರು, ಬರ ಪರಿಹಾರಕ್ಕೆ ದುಡ್ಡಿಲ್ಲ
ರಾಜ್ಯದ ಎಲ್ಲ 28 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಮೂಲಕ ಮೋದಿಜೀ ಅವರಿಗೆ ಕೊಡುಗೆ ನೀಡಲು ಬದ್ಧತೆಯನ್ನು ಮತ್ತು ಸಂಕಲ್ಪವನ್ನು ಇದೇವೇಳೆ ಮುಖಂಡರು ಮುಂದಿಟ್ಟರು. ಮುಂದಿನ ವಿಧಾನಸಭಾ ಚುನಾವಣೆಯಲ್ಲೂ 150 ಸ್ಥಾನದೊಂದಿಗೆ ಬಿಜೆಪಿ ಗದ್ದುಗೆಗೆ ಏರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ಬರಗಾಲದಲ್ಲೂ ರೈತರಿಗೆ ಸ್ಪಂದಿಸುತ್ತಿಲ್ಲ. 456 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪರಿಹಾರ ಮೊತ್ತಕ್ಕಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಚಿವರು ಹೇಳಿದ್ದು, ಇದು ಖಂಡನೀಯ ಎಂದು ತಿಳಿಸಿದರು. ಬಿಜೆಪಿ ಅಧಿಕಾರದಲ್ಲಿದ್ದಾಗ ರೈತರಿಗೆ ಕೊಟ್ಟ ನೆರವನ್ನು ಅವರು ನೆನಪಿಸಿದರು.
ವಿಜಯಪುರ ನಗರಕ್ಕೆ ಆಗಮಿಸಿದ ರಾಜ್ಯಾಧ್ಯಕ್ಷರಿಗೆ ಭವ್ಯ ಸ್ವಾಗತ ಕೋರಲಾಯಿತು. ಈ ಸಂದರ್ಭದಲ್ಲಿ ಕೇಂದ್ರದ ಮಾಜಿ ಸಚಿವ ಹಾಗೂ ಸಂಸದ ರಮೇಶ್ ಜಿಗಜಿಣಗಿ, ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಮುರುಗೇಶ್ ನಿರಾಣಿ, ಬಿಜೆಪಿ ರೈತ ಮೋರ್ಚಾ ನೂತನ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ, ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿ, ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ಸೇರಿದಂತೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.