Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಜೈಲಿಗೆ ಹಾಕುತ್ತಾರಾ….ಹಾಕಲಿ….!

by KM Shivaraju January 1, 2024
written by KM Shivaraju January 1, 2024 0 comments 2 minutes read
2FacebookTwitterPinterestEmail
134

ಸಿಬಿಐಗೆ ಶಿವಕುಮಾರ್ ಸವಾಲ್

ಬೆಂಗಳೂರು:ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜೈಲು ಸೇರುವ ಭೀತಿಯಲ್ಲಿದ್ದಾರೆ.

ಸರ್ಕಾರದ ಅನುಮತಿ ಇಲ್ಲದೆ, ಸಿಬಿಐ ಯಾವುದೇ ಪ್ರಕರಣ ದಾಖಲಿಸುವಂತಿಲ್ಲ ಎಂದು ಕರ್ನಾಟಕ ಸರ್ಕಾರ ತೀರ್ಮಾನ ಕೈಗೊಂಡು ಆದೇಶ ಹೊರಡಿಸಿದ್ದರೂ, ಹೂಡಿಕೆಗೆ ಸಂಬಂಧಿಸಿದಂತೆ ಶಿವಕುಮಾರ್ ಮತ್ತು ಅವರ ಕುಟುಂಬ ವರ್ಗದವರ ವಿಚಾರಣೆಯನ್ನು ಕೇಂದ್ರ ತನಿಖಾ ದಳ ಮುಂದುವರೆಸಿದೆ.

ಕೇರಳ ಮೂಲದ ಚಾನೆಲ್‌ನಲ್ಲಿ ಹೂಡಿಕೆ

ಕೇರಳ ಮೂಲದ ಜೈಹಿಂದ್ ಚಾನೆಲ್‌ನಲ್ಲಿ ಶಿವಕುಮಾರ್ ಅವರು ಮಾಡಿರುವ ಹೂಡಿಕೆ ವಿವರವನ್ನು ಸಲ್ಲಿಸುವಂತೆ ಸಂಸ್ಥೆಗೆ ನೋಟಿಸ್ ನೀಡಲಾಗಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ನೋಟಿಸ್ ಜಾರಿಯಾಗಿ ಜನವರಿ 11 ರಂದು ವಿಚಾರಣೆಗೆ ಹಾಜರಾಗುವಂತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಆದೇಶಿಸಿದೆ.

ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಅವರು ಚಾನೆಲ್‌ನಲ್ಲಿ ಮಾಡಿರುವ ಹೂಡಿಕೆ, ಪ್ರತಿಯಾಗಿ ಪಡೆದಿರುವ ಲಾಭಾಂಶ, ಷೇರು ವಹಿವಾಟು, ಹೊಂದಿರುವ ಆಸ್ತಿ ವಿವರಗಳು, ಇದಕ್ಕೆ ಸಂಬಂಧಪಟ್ಟಂತೆ ಸಂಪರ್ಕದಲ್ಲಿರುವವರ ವಿವರಗಳನ್ನು ನೀಡುವಂತೆ ಸೂಚಿಸಿದೆ.

ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು

ಈ ಸಂಸ್ಥೆಯನ್ನು ಕೇರಳ ಮೂಲದ ಕಾಂಗ್ರೆಸ್ ನಾಯಕರು ನಡೆಸುತ್ತಿದ್ದು, ಶಿವಕುಮಾರ್ ವಿರುದ್ಧದ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಹಿಂದಿನ ಬಿಜೆಪಿ ಸರ್ಕಾರ ಸಿಬಿಐಗೆ ವಹಿಸಿತ್ತು.

ಹಿಂದಿನ ಸರ್ಕಾರ ಕಾನೂನು ರೀತ್ಯಾ ಸಿಬಿಐಗೆ ವಹಿಸಿಲ್ಲ ಎಂಬ ಕಾರಣ ನೀಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರಕರಣವನ್ನು ಹಿಂದಕ್ಕೆ ಪಡೆದಿತ್ತು.

ಬಲೆಗೆ ಕೆಡವಲು ಸಿಬಿಐ ಯತ್ನ

ಇದೀಗ ಸಿಬಿಐ ಕೇರಳ ಕಂಪನಿಯ ಮೂಲಕ ಶಿವಕುಮಾರ್ ಅವರನ್ನು ಬಲೆಗೆ ಕೆಡವಲು ಮುಂದಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್, ನನ್ನ ಗಳಿಕೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ನೀಡಿದ್ದರೂ ಸಿಬಿಐ ಮತ್ತೆ ನೋಟಿಸ್ ಜಾರಿ ಮಾಡುತ್ತಿರುವುದು ರಾಜಕೀಯ ಷಡ್ಯಂತ್ರ ಎಂದಿದ್ದಾರೆ.

ರಾಜಕೀಯವಾಗಿ ಕಟ್ಟಿಹಾಕುವ ಪ್ರಯತ್ನ

ಕೆಲವು ಕಾಣದ ಕೈಗಳು ಈ ಷಡ್ಯಂತ್ರದ ಹಿಂದಿದ್ದು, ತಮ್ಮನ್ನು ರಾಜಕೀಯವಾಗಿ ಕಟ್ಟಿಹಾಕುವ ಪ್ರಯತ್ನ ನಡೆಸಿದ್ದಾರೆ.

ಸಿಬಿಐ ತನಿಖೆ ಪೂರ್ಣಗೊಳಿಸುವ ಹಂತದಲ್ಲಿದೆ ಎಂದುಕೊಂಡು ನನ್ನನ್ನು ವಿಚಾರಣೆಗೆ ಕರೆಸಬೇಕಿತ್ತು, ಈ ಹಂತದಲ್ಲಿ ದುರುದ್ದೇಶದ ರಾಜಕೀಯ ಮನಗಂಡು ಸಿಬಿಐ ತನಿಖೆಗೆ ನೀಡಿದ್ದ ಪ್ರಕರಣವನ್ನು ಕರ್ನಾಟಕ ಸರ್ಕಾರ ಹಿಂದಕ್ಕೆ ಪಡೆದಿದೆ.

ಸಿಬಿಐ ನೋಟಿಸ್ ಪ್ರಶ್ನಿಸಿದ್ದೇನೆ

ಇಷ್ಟಾದರೂ ನನ್ನನ್ನು ಸಿಬಿಐ ಕರೆಯುತ್ತಿದ್ದಾರೆ, ಅವರ ನೋಟಿಸ್ ಅನ್ನು ಪ್ರಶ್ನಿಸಿದ್ದೇನೆ, ನಾನು ಹೋಗುತ್ತಿಲ್ಲ, ಅವರು ನನ್ನನ್ನು ಒಳಕ್ಕೆ ಹಾಕಿಕೊಳ್ಳಬೇಕು ಎಂದಿದ್ದರೆ, ಹಾಕಿಕೊಳ್ಳಲಿ ನಾನೇನು ಹೆದರುವುದಿಲ್ಲ, ನೋಡೋಣ, ಅವರೇನು ಮಾಡುತ್ತಾರೋ ಮಾಡಿಕೊಳ್ಳಲಿ.

ಅಕ್ರಮ ಆದಾಯ ಸಂಪಾದನೆ ಪ್ರಕರಣದಲ್ಲಿ ನನಗೆ ಕಿರುಕುಳ ಮುಂದುವರೆಸಿದ್ದಾರೆ, ಸರ್ಕಾರ ಅನುಮತಿಯನ್ನು ಹಿಂದಕ್ಕೆ ಪಡೆದಿದ್ದರೂ ಸಿಬಿಐನವರು ಸಬ್ ರಿಜಿಸ್ಟ್ರಾರ್ ಕಚೇರಿ, ಸರ್ಕಾರಿ ಕಚೇರಿ, ಸಹಕಾರಿ ಸೊಸೈಟಿ, ನಾನು ಅಧ್ಯಕ್ಷನಾಗಿರುವ ಸಂಸ್ಥೆ ಸೇರಿದಂತೆ ಅನೇಕರಿಗೆ ನೋಟಿಸ್ ಕೊಟ್ಟಿದ್ದಾರೆ.

ಯಾವ ಲೆಕ್ಕಾಚಾರದ ಮೇಲೆ ಈ ನೋಟಿಸ್ ಕೊಡುತ್ತಿದ್ದಾರೆ ಎಂಬುದು ಗೊತ್ತಿಲ್ಲ, ಅವರ ಉದ್ದೇಶ ಏನೆಂಬುದೂ ತಿಳಿದಿಲ್ಲ. ಆದರೆ ಮೇಲ್ನೋಟಕ್ಕೆ ಅವರು ನನಗೆ ಹಾಗೂ ಪಕ್ಷಕ್ಕೆ ತೊಂದರೆ ನೀಡಲು ದೊಡ್ಡ ಷಡ್ಯಂತ್ರ ರೂಪಿಸುತ್ತಿದ್ದಾರೆ.

ಸಿಬಿಐ ತನಿಖೆಯನ್ನು ರಾಜ್ಯ ಸರ್ಕಾರ ಲೋಕಾಯಕ್ತಕ್ಕೆ ಹಸ್ತಾಂತರ ಮಾಡಿದೆ, ಕರ್ನಾಟಕ ಸರ್ಕಾರ ಸಿಬಿಐ ಪ್ರಕರಣವನ್ನು ಹಿಂಪಡೆದಿರುವುದನ್ನು ಹೈಕೋರ್ಟ್ ಒಪ್ಪಿದ್ದರೂ, ಸಿಬಿಐ ಯಾಕೆ ನೋಟಿಸ್ ನೀಡುತ್ತಿದೆ ಎಂಬುದು ಗೊತ್ತಿಲ್ಲ.

ಅವರ ಬಳಿ ನನ್ನ ಎಲ್ಲಾ ದಾಖಲೆಗಳು ಇವೆ, ಲೋಕಾಯುಕ್ತಕ್ಕೆ ಪ್ರಕರಣ ಹಸ್ತಾಂತರವಾಗಿರುವ ಹಿನ್ನೆಲೆಯಲ್ಲಿ ಈ ಎಲ್ಲಾ ದಾಖಲೆಗಳನ್ನು ಸಿಬಿಐ ಲೋಕಾಯುಕ್ತಕ್ಕೆ ನೀಡಬೇಕಾಗಿದೆ.

ನನ್ನ ಸಂಸ್ಥೆ, ಹೆಂಡತಿ, ಮಕ್ಕಳು, ಕುಟುಂಬ ಸದಸ್ಯರಿಗೆ ಕಿರುಕುಳ

ನನ್ನ ಸಂಸ್ಥೆ, ನನ್ನ ಹೆಂಡತಿ, ಮಕ್ಕಳು, ಕುಟುಂಬ ಸದಸ್ಯರು ಸೇರಿದಂತೆ ಹಲವರಿಂದ ಮಾಹಿತಿ ಕೇಳುತ್ತಿದ್ದಾರೆ.

ಮೊದಲು ಈ ರೀತಿ ಮಾಡಿ ನಂತರ ಸಿಬಿಐ ನನಗೆ ನೋಟಿಸ್ ನೀಡುತ್ತಾರೆ. ಬಿಜೆಪಿಯವರು ನನ್ನನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಮೊದಲೇ ಹೇಳಿಕೊಳ್ಳುತ್ತಿದ್ದರು, ಇದೀಗ ಅದು ಸಾಭೀತಾಗುವ ಸಮಯ ಬಂದಿದೆ.

ಅವರ ಆಸೆಗಳನ್ನು ಈಡೇರಿಸಿಕೊಳ್ಳಲಿ ನಾನು ಸಿದ್ಧನಿದ್ದೇನೆ. ಅಹಮದ್ ಪಟೇಲ್ ಇಂದಿಲ್ಲ, ಆದರೂ ನನಗೆ ರಾಜಕೀಯ ಕಿರುಕುಳ ಕೊಡುವುದನ್ನು ಮುಂದುವರೆಸಿದ್ದಾರೆ.

ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎಂಬುದು ಗೊತ್ತು, ಕಾನೂನು ಇದೆ, ನನ್ನ ಕೊನೆಯ ಉಸಿರು ಇರುವವರೆಗೂ ಹೋರಾಟ ಮಾಡುತ್ತೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
cbidk shivakumarinvestment in a channelkeral based company
2 FacebookTwitterPinterestEmail
KM Shivaraju

previous post
ಸರ್ಕಾರಿ ಹೈಟೆಕ್ ಮದ್ಯ ಮಾರಾಟ ಮಳಿಗೆ
next post
ಮದ್ಯದ ಮಹಿಮೆ; ಒಂದೇ ದಿನ ₹18.85 ಕೋಟಿ ಮಾರಾಟ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ