Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವರಿಷ್ಠರ ನಿರ್ಧಾರಕ್ಕೆ ಸಿದ್ದರಾಮಯ್ಯ ಬೆಂಬಲ

by admin January 11, 2024
written by admin January 11, 2024 0 comments 2 minutes read
2FacebookTwitterPinterestEmail
132


ಬಿಜೆಪಿ ಪಕ್ಷದ ಕಾರ್ಯಕ್ರಮ ಮಾಡುತ್ತಿರುವುದು ಸರಿಯಲ್ಲ

ಬೆಂಗಳೂರು: ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದಿರುವ ಕಾಂಗ್ರೆಸ್ ನಿರ್ಧಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಸಮರ್ಥಿಸಿಕೊಂಡಿದ್ದಾರೆ.

ಈ ಸಂಬಂಧ ಹೇಳಿಕೆ ನೀಡಿರುವ ಅವರು, ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಹಿರಿಯ ನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯಲ್ಲಿನ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ತೀರ್ಮಾನ ಸರಿಯಾಗಿದೆ, ಇದನ್ನು ಬೆಂಬಲಿಸುತ್ತೇನೆ ಎಂದಿದ್ದಾರೆ.

ಅಯೋಧ್ಯೆ ರಾಮನಿಗೆ ಸಂಘ ಪರಿವಾರದ ಅಗೌರವ

ಜಾತಿ, ಧರ್ಮ, ಪಕ್ಷ, ಪಂಥವನ್ನು ಮೀರಿ ಸರ್ವರನ್ನೂ ಒಳಗೊಂಡು ಭಕ್ತಿ ಮತ್ತು ಗೌರವದಿಂದ ನಡೆಸಬೇಕಾದ ಒಂದು ಧಾರ್ಮಿಕ ಕಾರ್ಯಕ್ರಮವನ್ನು ಒಂದು ಪಕ್ಷದ ಕಾರ್ಯಕ್ರಮವನ್ನಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಸಂಘ ಪರಿವಾರದ ನಾಯಕರು ಅಯೋಧ್ಯೆ ರಾಮನಿಗೆ ಹಾಗೂ ದೇಶದ 140 ಕೋಟಿ ಜನತೆಗೆ ಅಗೌರವವನ್ನುಂಟು ಮಾಡಿದ್ದಾರೆ.

ಶ್ರದ್ಧಾಪೂರ್ವಕವಾಗಿ ನಡೆಯಬೇಕಿಗಿದ್ದ ಧಾರ್ಮಿಕ ಕಾರ್ಯಕ್ರಮವನ್ನು ರಾಜಕೀಯ ಪ್ರಚಾರದ ಅಭಿಯಾನವನ್ನಾಗಿ ಮಾಡಿರುವುದು ಸಮಸ್ತ ಹಿಂದೂ ಬಾಂಧವರಿಗೆ ಮಾಡಿರುವ ದ್ರೋಹ.

ಪೊಳ್ಳು ಹಿಂದೂತ್ವದ ಮುಖವಾಡ ಬಯಲು

ಹಿಂದೂ ಧರ್ಮದ ಸಂಸ್ಕೃತಿ, ಆಚಾರ-ವಿಚಾರಗಳ ಬಗ್ಗೆ ಪ್ರತಿನಿತ್ಯ ಉಪದೇಶ ನೀಡುವ ಬಿಜೆಪಿ ಮತ್ತು ಆರ್.ಎಸ್.ಎಸ್ ನಾಯಕರು ಅಪೂರ್ಣಗೊಂಡಿರುವ ರಾಮ ದೇವಸ್ಥಾನವನ್ನು ಉದ್ಘಾಟಿಸಲು ಹೊರಟಿರುವ ಪ್ರಧಾನಿ ನರೇಂದ್ರ ಮೋದಿ ನಡೆ ಬಗ್ಗೆ ಮೌನವಾಗಿರುವುದು ಇವರ ಪೊಳ್ಳು ಹಿಂದೂತ್ವದ ಮುಖವಾಡವನ್ನು ಬಯಲುಗೊಳಿಸಿದೆ ಎಂದು ಟೀಕಿಸಿದ್ದಾರೆ.

ರಾಮಜನ್ಮಭೂಮಿ ವಿವಾದ ಶುರುವಾದ ದಿನದಿಂದ ಕಾಂಗ್ರೆಸ್ ಪಕ್ಷ ತನ್ನ ನಿಲುವಿಗೆ ಬದ್ಧವಾಗಿ ಉಳಿದಿದೆ. ನ್ಯಾಯಾಲಯದ ತೀರ್ಪಿಗೆ ತಲೆಬಾಗುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ, ಮುಸ್ಲಿಂ ಬಾಂಧವರು ಸಹಾ ನ್ಯಾಯಾಲಯದ ತೀರ್ಪು ಒಪ್ಪಿಕೊಂಡು ನ್ಯಾಯಾಂಗದ ಮೇಲಿನ ತಮ್ಮ ನಿಷ್ಠೆಯನ್ನು ಸಾಬೀತುಪಡಿಸಿದ್ದಾರೆ.

ರಾಮ ಜನ್ಮಭೂಮಿ ವಿವಾದ ಧಾರ್ಮಿಕ ಶ್ರದ್ದೆಯ ಪ್ರಶ್ನೆ, ನ್ಯಾಯಾಲಯದಲ್ಲಿ ತೀರ್ಮಾನ ಮಾಡುವಂತಹದ್ದಲ್ಲ ಎಂದು ಹೇಳಿಕೊಂಡು ಬಂದಿದ್ದ ಬಿಜೆಪಿ ಮತ್ತು ಆರ್.ಎಸ್.ಎಸ್, ವಿಶ್ವ ಹಿಂದೂ ಪರಿಷತ್ ಮೊದಲಾದ ಸಂಘಟನೆಗಳು ಸುಪ್ರೀಂ ಕೋರ್ಟ್ ತೀರ್ಪು ತಮ್ಮ ಪರವಾಗಿ ಹೊರಬಿದ್ದ ಕೂಡಲೇ ಅದನ್ನು ಒಪ್ಪಿಕೊಂಡಿರುವುದು ಈ ಸಂಘಟನೆಗಳ ನಾಯಕರ ಹಿಪೋಕ್ರೆಟಿಕ್ ನಡವಳಿಕೆಗೆ ಸಾಕ್ಷಿಯಾಗಿದೆ.

ರಾಮಮಂದಿರವನ್ನು ರಾಜಕೀಯಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿರುವುದನ್ನು ವಿರೋಧಿಸಿ ನಾಲ್ವರು ಶಂಕರಾಚಾರ್ಯರು ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಹೇಳಿರುವುದು ವರದಿಯಾಗಿದೆ.

ಹಿಂದೂಗಳನ್ನು ಒಡೆಯುವ ಕಾರ್ಯಕ್ರಮ

ಸಮಸ್ತ ಹಿಂದೂಗಳನ್ನು ಒಗ್ಗೂಡಿಸುವ ಕಾರ್ಯಕ್ರಮವಾಗಬೇಕಾಗಿದ್ದ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮ ಬಿಜೆಪಿಯ ರಾಜಕೀಯದಿಂದಾಗಿ ಹಿಂದೂಗಳನ್ನು ಒಡೆಯುವ ಕಾರ್ಯಕ್ರಮವಾಗಿರುವುದು ದುರಂತ.

ಹತ್ತು ವರ್ಷಗಳ ಆಡಳಿತ ಪೂರ್ಣಗೊಳಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ಸಾಧನೆ ಮೇಲೆ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲದೆ, ಲೋಕಸಭಾ ಚುನಾವಣೆ ಕಾಲದಲ್ಲಿ ಅವಸರದಿಂದ ಅಪೂರ್ಣ ಸ್ಥಿತಿಯಲ್ಲಿರುವ ರಾಮಮಂದಿರ ಉದ್ಘಾಟಿಸಿ ಹಿಂದೂತ್ವದ ಅಲೆ ಎಬ್ಬಿಸಿ ತಮ್ಮ ವೈಫಲ್ಯ ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ ಎಂದು ಟೀಕಿಸಿದ್ದಾರೆ.

ಬಿಜೆಪಿ ಮತ್ತು ಸಂಘ ಪರಿವಾರದ ರಾಮನ ಹೆಸರಿನ ರಾಜಕೀಯವನ್ನು ದೇಶದ ಜನತೆ ಈ ಬಾರಿ ಗಂಭೀರವಾಗಿ ಗಮನಿಸುತ್ತಿದ್ದು ಈ ಜಾಲಕ್ಕೆ ಖಂಡಿತ ಬಲಿಯಾಗುವುದಿಲ್ಲ ಎಂಬ ವಿಶ್ವಾಸವಿದೆ.

ಧರ್ಮದ ಹೆಸರಲ್ಲಿ ಅಂಧಶ್ರದ್ಧೆ

ನಾವು ಹಿಂದೂ ಧರ್ಮದ ವಿರೋಧಿಗಳಲ್ಲ, ಧರ್ಮದ ಹೆಸರಲ್ಲಿ ನಡೆಸಲಾಗುವ ಅಸ್ಪೃಶ್ಯತೆ, ಜಾತೀಯತೆ, ಅಂಧಶ್ರದ್ಧೆ, ಕಂದಾಚಾರಗಳನ್ನು ವಿರೋಧಿಸುತ್ತೇವೆ. ಧರ್ಮವನ್ನು ರಾಜಕಾರಣಕ್ಕೆ ಬಳಸುವುದರ ಬಗ್ಗೆ ನಮ್ಮ ಸಂಪೂರ್ಣ ವಿರೋಧ ಇದೆ.

ಮಹಾತ್ಮ ಗಾಂಧೀಜಿ, ಸ್ವಾಮಿ ವಿವೇಕಾನಂದ, ಕನಕದಾಸ, ನಾರಾಯಣ ಗುರು, ಕುವೆಂಪು ಸೇರಿದಂತೆ ದೇಶದ ಅನೇಕ ಮಹನೀಯರು ಆಚರಿಸುತ್ತಾ ಬಂದಿರುವ ಹಿಂದೂ ಧರ್ಮದ ಬಗ್ಗೆ ಯಾವುದೇ ತಕರಾರಿಲ್ಲ. ಆದರೆ ಧರ್ಮವನ್ನು ರಾಜಕೀಯ ದುರುದ್ದೇಶಕ್ಕೆ ಬಳಸಿಕೊಳ್ಳುತ್ತಿರುವುದಕ್ಕೆ ವಿರೋಧವಿದೆ.

ನಮ್ಮ ಊರಿನಲ್ಲಿ ರಾಮ ದೇವಸ್ಥಾನವನ್ನು ನಿರ್ಮಾಣ ಮಾಡಿ ಶ್ರದ್ಧಾಭಕ್ತಿಯಿಂದ ಪೂಜೆ ಸಲ್ಲಿಸಿದ್ದೇವೆ, ಮಸೀದಿ-ಚರ್ಚ್‌ಗಳ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇವೆ, ಸರ್ವಧರ್ಮ ಸಮಭಾವ ಸಂವಿಧಾನದ ಆಶಯವಾಗಿದೆ, ಇದಕ್ಕೆ ಬದ್ಧರಾಗಲೇಬೇಕಿದೆ.

ಯಾವ ಧರ್ಮ ಕೂಡಾ ಇನ್ನೊಂದು ಧರ್ಮವನ್ನು ದ್ವೇಷಿಸುವುದಿಲ್ಲ, ನಿರಾಕರಿಸುವುದಿಲ್ಲ, ಸಮಾಜವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವ ಸಂವಿಧಾನದ ಆಶಯಕ್ಕೆ ಪಕ್ಷ ಬದ್ಧವಾಗಿದೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
not attending ramalalla ceremonysiddaramaiah tweetsupport to congres leaders standtrying to devide hindus
2 FacebookTwitterPinterestEmail
admin

previous post
ಚುನಾವಣಾ ರಣತಂತ್ರ: ಕೆಲವು ಸಚಿವರಿಗೆ ಸಿಂಹ ಸ್ವಪ್ನ
next post
ಕಾಂಗ್ರೆಸ್ ತಿರಸ್ಕಾರ ದುರ್ದೈವದ ಸಂಗತಿ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ