Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, June 13, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ವರ್ಗಾವಣೆಗೆ ಜಾತಿ ಬಳಕೆ ಅತ್ಯಂತ ಕೆಟ್ಟದ್ದು

by admin January 16, 2024
written by admin January 16, 2024 1 comment 1 minutes read
3FacebookTwitterPinterestEmail
141

ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ

ಬೆಂಗಳೂರು:ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಲ್ಲಿ ತಿಳಿಸಿದ್ದಾರೆ.

ಇಂತಹ ಕೃತ್ಯಗಳಿಂದ ಜನರ ಸೇವೆ ಮಾಡಲು ಸಾಧ್ಯವೆ ಎಂದಿರುವ ಮುಖ್ಯಮಂತ್ರಿ, ಮುಂದಾದರೂ ಇದನ್ನು ನಿಲ್ಲಿಸಿ ಎಂದು ಕಿವಿಮಾತು ಹೇಳಿದ್ದಾರೆ.

ವೈದ್ಯಕೀಯ ವೆಚ್ಚ ಒಂದು ಸಾವಿರದಿಂದ 1,500ಕ್ಕೆ

ಹಿರಿಯ ಅಧಿಕಾರಿಗಳ ವಾರ್ಷಿಕ ಸಭೆಯಲ್ಲಿ ಮಾತನಾಡಿದ ಅವರು, ನಿಮ್ಮ ಸಂಕಷ್ಟಗಳಿಗೆ ನಾವಿದ್ದೇವೆ, ಅದರಂತೆ ನೀವು ಜನರ ಸೇವೆ ಮಾಡಿ, ಕರ್ನಾಟಕ ನಾಮಕರಣಗೊಂಡು, ಏಕೀಕರಣದ 50 ವರ್ಷದ ನೆನಪಿಗಾಗಿ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿಯ ಪದಕ ನೀಡುವುದಾಗಿ ಘೋಷಣೆ ಮಾಡಿದ ಮುಖ್ಯಮಂತ್ರಿ ಅವರು, ವೈದ್ಯಕೀಯ ವೆಚ್ಚವನ್ನು ಒಂದು ಸಾವಿರದಿಂದ 1,500ಕ್ಕೆ ಹೆಚ್ಚಳ ಮಾಡುವುದಾಗಿ ತಿಳಿಸಿದರು.

ರಾಜ್ಯದಲ್ಲಿ ಭವ್ಯವಾದ ಸುಸಜ್ಜಿತ ಸುವರ್ಣ ಪೊಲೀಸ್ ಭವನ ನಿರ್ಮಾಣ ಮಾಡಲು ಬಜೆಟ್‌ನಲ್ಲಿ ಹಣ ನಿಗದಿಪಡಿಸುವುದಾಗಿ ತಿಳಿಸಿದರು.

ಸಿಇಎನ್ ಠಾಣಾಧಿಕಾರಿ ಹುದ್ದೆ ಎಸಿಪಿ-ಡಿಸಿಪಿಗೆ ಉನ್ನತೀಕರಣ

ರಾಜ್ಯವನ್ನು ಡ್ರಗ್ಸ್ ಮುಕ್ತಗೊಳಿಸುವಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳುವಲ್ಲಿ ಸಿಇಎನ್ ಠಾಣಾಧಿಕಾರಿಗಳ ಹುದ್ದೆಯನ್ನು ಎಸಿಪಿ ಮತ್ತು ಡಿಸಿಪಿ ಮಟ್ಟಕ್ಕೆ ಉನ್ನತೀಕರಣ ಮಾಡಲಾಗುವುದು.

ಬೆಂಗಳೂರು ನಗರ ಒಂದರಲ್ಲೇ 8 ಅಡಿಷನಲ್ ಡಿಸಿಪಿ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಲಾಗುವುದು ಎಂದರು.

ನಮ್ಮದು ಜಾತ್ಯತೀತ ರಾಷ್ಟ್ರ, ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು, ಆಧುನಿಕ ತಂತ್ರಜ್ಞಾನದ ಬಳಕೆಯಿಂದ ಅಪರಾಧ ಪ್ರಕರಣಗಳಿಗೆ ಕಡಿವಾಣ ಸಾಧ್ಯವಿದೆ.

ಕಾನೂನು ವ್ಯವಸ್ಥೆ ಚೆನ್ನಾಗಿದ್ದರೆ ಅಭಿವೃದ್ಧಿ ಸಾಧ್ಯ

ಕಾನೂನು ವ್ಯವಸ್ಥೆ ಚೆನ್ನಾಗಿದ್ದರೆ ರಾಜ್ಯದ ಅಭಿವೃದ್ಧಿ ಸಾಧ್ಯ. ಜನರ ತಲಾ ಆದಾಯ ಮತ್ತು ಜಿಡಿಪಿ ಹೆಚ್ಚಾಗುತ್ತದೆ, ಹೂಡಿಕೆದಾರರು ಬರುತ್ತಾರೆ, ಆದ್ದರಿಂದ ಕಾನೂನು ಸುವ್ಯವಸ್ಥೆಯನ್ನು ಸರಿಯಾಗಿ ಕಾಪಾಡಿ.

ಹೊಯ್ಸಳ ಸಿಬ್ಬಂದಿ, ಠಾಣಾಧಿಕಾರಿ ಕರ್ತವ್ಯದಲ್ಲಿ ವಿಫಲ

ಕಳ್ಳತನ ಹೆಚ್ಚುತ್ತಿದೆ ಎಂದರೆ ಗಸ್ತು ವ್ಯವಸ್ಥೆ, ಹೊಯ್ಸಳ ಸಿಬ್ಬಂದಿ ಮತ್ತು ಠಾಣಾಧಿಕಾರಿಗಳು ಕರ್ತವ್ಯದಲ್ಲಿ ವಿಫಲರಾಗಿದ್ದಾರೆ ಎಂದರ್ಥ.

ಇದೇ ಸ್ಥಿತಿ ಮುಂದುವರೆದರೆ ಎಸ್‌ಪಿ ಮತ್ತು ಡಿಸಿಪಿಗಳನ್ನು ಹೊಣೆ ಮಾಡುವುದಾಗಿ ಎಚ್ಚರಿಸಿದರು. ನೀವು ನೀಡಿರುವ ಅಂಕಿ-ಅಂಶಗಳು ತೃಪ್ತಿಕರವಾಗಿಲ್ಲ, ಮುಂದಿನ ವರ್ಷದ ವೇಳೆಗೆ ಕಾರ್ಯಕ್ಷಮತೆ ಉತ್ತಮವಾಗುವಂತೆ ನೋಡಿಕೊಳ್ಳಿ ಎಂದು ಕಿವಿಮಾತು ಹೇಳಿದರು.

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಶಿಕ್ಷೆ ಪ್ರಮಾಣದಲ್ಲಿ ರಾಜ್ಯದ ಸಾಧನೆ ತೃಪ್ತಿಕರವಾಗಿಲ್ಲ. ಶೋಷಣೆಗೆ ಒಳಗಾದವರಿಗೆ ವ್ಯವಸ್ಥೆ ಮೇಲೆ ನಂಬಿಕೆ ಬರಬೇಕಾದರೆ ದೌರ್ಜನ್ಯ ಪ್ರಕರಣಗಳ ತನಿಖೆಯ ಗುಣಮಟ್ಟ ಹೆಚ್ಚಾಗಬೇಕು.

ನಿಮಗೆ ಸರ್ಕಾರ ಮುಕ್ತ ಅಧಿಕಾರ ಕೊಟ್ಟಿದೆ, ನಿಮ್ಮ ಕೆಲಸದಲ್ಲಿ ಮೂಗು ತೂರಿಸಬಾರದು ಎಂಬುದು ನನ್ನ ಬದ್ಧತೆ, ಆದರೆ ಅದನ್ನೇ ದುರುಪಯೋಗ ಮಾಡಿಕೊಳ್ಳಬೇಡಿ, ಜನರಿಗೆ ಅನುಕೂಲ ಮಾಡಿಕೊಡಲು ನಿಮ್ಮ ಮುಕ್ತ ಅಧಿಕಾರವನ್ನು ಬಳಕೆ ಮಾಡಿಕೊಳ್ಳಿ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
8 additional dcp postcm siddaramaiahpolice suvarna bhavana
3 FacebookTwitterPinterestEmail
admin

previous post
ಅಯೋಧ್ಯೆ ಮನೆ ಮನೆಗೆ ಪ್ರಧಾನಮಂತ್ರಿ
next post
ಆಸ್ತಿ ತೆರಿಗೆ ಕಡಿತಕ್ಕೆ ಚಿಂತನೆ

You may also like

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026

ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

June 10, 2026

ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

June 10, 2026

ವಿಧಾನ ಪರಿಷತ್ ಚುನಾವಣೆ: ಅಖಾಡಕ್ಕೆ ಡಿಕೆಶಿ-ಎಚ್‌ಡಿಕೆ

June 8, 2026

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (487)
  • ಅಂಕಣ (109)
  • ಉದ್ಯೋಗ (333)
  • ದಿನ ಭವಿಷ್ಯ (110)
  • ರಾಜಕೀಯ (1,981)
  • ರಾಜ್ಯ (2,295)
  • ರಾಷ್ಟ್ರ (2,262)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026

KMS Special

  • ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

    June 12, 2026
  • ಕಾಂಗ್ರೆಸ್‌ ಕುಚೋದ್ಯ ಹೇಳಿಕೆ: ದೇವೇಗೌಡರ ತಿರುಗೇಟು

    June 10, 2026
  • ಎಚ್.ಕೆ.ಪಾಟೀಲ್, ಮಹದೇವಪ್ಪ, ದಿನೇಶ್‌ಗೆ ಕೊಕ್

    June 10, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಜೂನ್ ಅಂತ್ಯಕ್ಕೆ ಶಿವಕುಮಾರ್ ಸಂಪುಟ ವಿಸ್ತರಣೆ

June 12, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ