Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಸಂಸತ್ತಿಗೆ ಬನ್ನಿ

by admin January 18, 2024
written by admin January 18, 2024 0 comments 2 minutes read
3FacebookTwitterPinterestEmail
414
ಕುಮಾರಸ್ವಾಮಿಗೆ ಕೇಂದ್ರ ಗೃಹಸಚಿವ ಅಮಿತ್‌ ಷಾ ಕಿವಿ ಮಾತು

ಬೆಂಗಳೂರು:ಕರ್ನಾಟಕ ಕಾಂಗ್ರೆಸ್‌ನ ಓಟಕ್ಕೆ ಕಡಿವಾಣ ಹಾಕಲು ಲೋಕಸಭಾ ಚುನಾವಣೆಯಲ್ಲಿ ಕಣಕ್ಕಿಳಿಯುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಗೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸಲಹೆ ನೀಡಿದ್ದಾರೆ.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕುಮಾರಸ್ವಾಮಿ ದೆಹಲಿಯಲ್ಲಿ ಈ ನಾಯಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಅಮಿತ್ ಷಾ, ನಾಲ್ಕು ಕ್ಷೇತ್ರಗಳನ್ನು ಹೆಸರಿಸಿ, ಇವುಗಳ ಪೈಕಿ ಒಂದರಲ್ಲಿ ಕಣಕ್ಕಿಳಿಯುವಂತೆ ಹೇಳಿದ್ದಾರೆ.

ರಾಜ್ಯದ28ಲೋಕಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬಿಜೆಪಿ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆಯನ್ನು ಮುಂದಿಟ್ಟುಕೊಂಡು ಚರ್ಚೆ ಮಾಡಿರುವ ನಾಯಕರು ಕೆಲವು ಕ್ಷೇತ್ರಗಳಲ್ಲಿ ವರ್ಚಸ್ವಿ ಮತ್ತು ಪ್ರಭಾವಿ ನಾಯಕರನ್ನು ಕಣಕ್ಕಿಳಿಸುವ ಬಗ್ಗೆಯೂ ತೀರ್ಮಾನ ಕೈಗೊಂಡಿದ್ದಾರೆ.

ಕಾಂಗ್ರೆಸ್‌ನಲ್ಲಿ ಅಲ್ಲೋಲ-ಕಲ್ಲೋಲ


28ಕ್ಷೇತ್ರಗಳ ಪೈಕಿ ಜೆಡಿಎಸ್‌ಗೆ ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳನ್ನು ನೀಡಿರುವ ಮುಖಂಡರು ಚಿಕ್ಕಬಳ್ಳಾಪುರ ಇಲ್ಲವೇ ಬೆಂಗಳೂರು ಗ್ರಾಮಾಂತರ ಕೊನೆ ಗಳಿಗೆಯಲ್ಲಿ ಈ ಪಕ್ಷಕ್ಕೆ ದಕ್ಕುವ ಸಾಧ್ಯತೆ ಇದೆ.

ಕರ್ನಾಟಕದಲ್ಲಿ ಗೆಲುವೇ ಮಾನದಂಡ ಎಂಬುದನ್ನು ಆಧಾರವಾಗಿಟ್ಟುಕೊಂಡೇ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಗ್ಗೆ ತೀರ್ಮಾನ ಕೈಗೊಂಡಿದ್ದಾರೆ. ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಂತರ ದೆಹಲಿಯಲ್ಲಿ ನಡೆಯುವ ಸಮಾರಂಭದಲ್ಲಿ ಜೆಡಿಎಸ್ ಅಧಿಕೃತವಾಗಿ ಎನ್‌ಡಿಎ ಮೈತ್ರಿಕೂಟ ಸೇರಲಿದೆ. ಅಂದಿನ ಸಮಾರಂಭದಲ್ಲೇ ಕರ್ನಾಟಕದಲ್ಲಿ ಸೀಟು ಹಂಚಿಕೆ ಹಾಗೂ ಯಾರಿಗೆ ಯಾವ ಕ್ಷೇತ್ರ ಎಂಬ ಪಟ್ಟಿಯೂ ಹೊರಬೀಳಿಲಿದೆ.

ವಿಧಾನಸೌಧ ಮೆಟ್ಟಿಲ ಮೇಲೆ ಜನತಾದರ್ಶನ

ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಿದ ನಂತರ ಇಂದು ದೆಹಲಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಬಲಪಡಿಸಿ ಎಲ್ಲಾ 28ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವುದೇ ಮುಂದಿನ ಗುರಿ. ಬಿಜೆಪಿ ಗುರಿಯೂ ಇದೇ ಆಗಿದೆ, ರಾಜ್ಯಕ್ಕೆ ಒಳ್ಳೆಯದಾಗಬೇಕು ಎಂಬ ಏಕೈಕ ಉದ್ದೇಶದಿಂದ ಎನ್‌ಡಿಎ ಮೈತ್ರಿಕೂಟವನ್ನು ಜೆಡಿಎಸ್ ಸೇರಿದೆ ಎಂದರು.

ಕ್ಷೇತ್ರ ಹಂಚಿಕೆ ಬಗ್ಗೆ ಎರಡೂ ಪಕ್ಷಗಳಲ್ಲಿ ಗೊಂದಲವಿಲ್ಲ

ರಾಜ್ಯದ ಸ್ಥಿತಿಗತಿ, ಕ್ಷೇತ್ರಾವಾರು ಪರಿಸ್ಥಿತಿ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬಳಿ ಸಮೀಕ್ಷಾ ವರದಿಗಳಿವೆ, ನಮ್ಮ ಪಕ್ಷವೂ ವರದಿ ಸಿದ್ಧ ಮಾಡಿದೆ, ಎರಡೂ ಕಡೆಯ ಮಾಹಿತಿ ಹಾಗೂ ವರದಿಗಳ ಬಗ್ಗೆ ಸುದೀರ್ಘ ಮತ್ತು ಮುಕ್ತ ಚರ್ಚೆ ಮಾಡಿದ್ದೇವೆ.
ಕ್ಷೇತ್ರಗಳ ಹಂಚಿಕೆ ಬಗ್ಗೆ ಎರಡೂ ಪಕ್ಷಗಳಲ್ಲಿ ಅತ್ಯಂತ ಸೌಹಾರ್ದ ಮನೋಭಾವನೆ ಇದೆ, ಯಾವುದೇ ಗೊಂದಲ ಇಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಬಯಸುತ್ತೇನೆ ಎಂದು ಹೇಳಿದರು.

ನೇಮಕಾತಿ ಆದೇಶ ಪತ್ರ ನೀಡಿದ ರಾಮಲಿಂಗಾರೆಡ್ಡಿ

ಜೆಡಿಎಸ್ ಚಿಕ್ಕ ಪಕ್ಷ, ಬಿಜೆಪಿ ದೊಡ್ಡ ಪಕ್ಷ ಎಂಬ ಬೇಧ-ಭಾವವಿಲ್ಲದೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅತ್ಯಂತ ಪ್ರೀತಿ, ವಿಶ್ವಾಸ ಹಾಗೂ ಸ್ನೇಹಪೂರ್ವಕವಾಗಿ ಮಾತುಕತೆ ನಡೆಸಿದರು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮೇಲೆ ಬಿಜೆಪಿ ಕೇಂದ್ರ ನಾಯಕರು ಅಪಾರ ಗೌರವ ಇಟ್ಟುಕೊಂಡಿದ್ದಾರೆ. ನಮ್ಮ ಹಾಗೂ ಪಕ್ಷದ ನಡವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ, ಅವರ ನಂಬಿಕೆ, ವಿಶ್ವಾಸಕ್ಕೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳುತ್ತೇವೆ, ಪರಸ್ಪರ ವಿಶ್ವಾಸ, ನಂಬಿಕೆ ತಳಹದಿಯ ಮೇಲೆ ಮೈತ್ರಿ ಚಿರಕಾಲ ಮುಂದುವರಿಯುತ್ತದೆ ಎಂಬ ವಿಶ್ವಾಸವಿದೆ ಎಂದರು.

ಕೇಂದ್ರ ಸಚಿವರಾಗುವುದನ್ನು ಅಲ್ಲಗಳೆದ ಕುಮಾರಸ್ವಾಮಿ

ತಾವು ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಕುಮಾರಸ್ವಾಮಿ, ಯಾವ ಕಾರಣಕ್ಕೆ ಈ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಈಗಲೂ ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ, ಯಾವ ಮೂಲಗಳಿಂದ ಇದು ಅಷ್ಟು ಪ್ರಾಮುಖ್ಯತೆ ಪಡೆಯಿತು ಎನ್ನುವುದೂ ಗೊತ್ತಿಲ್ಲ, ಎಲ್ಲಿಂದ ಹುಟ್ಟಿತು ಎನ್ನುವುದೂ ತಿಳಿದಿಲ್ಲ, ಮಾಧ್ಯಮಗಳ ಮೂಲಕವೇ ತಮಗೂ ಗೊತ್ತಾಯಿತು ಎಂದರು.

ಲೋಕಸಭಾ ಚುನಾವಣೆ ಹತ್ತಿರದಲ್ಲಿರುವಾಗ ಕೇಂದ್ರ ಮಂತ್ರಿಯಾಗಿ ಮಾಡುವುದೇನಿದೆ, ಇಷ್ಟು ಅಲ್ಪ ಅವಧಿಯಲ್ಲಿ ರಾಜ್ಯಕ್ಕೆ, ರಾಷ್ಟ್ರಕ್ಕೆ ಏನು ಸೇವೆ ಮಾಡಲು ಸಾಧ್ಯ, ಚುನಾವಣಾ ನೀತಿ ಸಂಹಿತೆ ಜಾರಿಯಾದ ಮೇಲೆ ಏನನ್ನೂ ಮಾಡಲು ಸಾಧ್ಯವಿಲ್ಲ, ಅದರಿಂದ ಉಪಯೋಗವೂ ಇಲ್ಲ. ಯಾವ ಕಾರಣಕ್ಕೆ ಆ ಸುದ್ದಿ ಹುಟ್ಟಿಕೊಂಡಿತು ಎನ್ನುವುದು ಅರ್ಥವಾಗುತ್ತಿಲ್ಲ. ಕೇಂದ್ರ ಸಚಿವನಾಗಬೇಕು ಎನ್ನುವ ಆಸಕ್ತಿಯೂ ಇಲ್ಲ. ನನಗಿರುವ ಉದ್ದೇಶ ಒಂದೇ, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಎಲ್ಲಾ ೨೮ ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂಬುದೇ ಮುಂದಿರುವ ಎಕೈಕ ಅಜೆಂಡಾ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
ex cmhd kumaraswamy arrives in ParliamentHome Minister Amit Shahkarnatakalokashabha
3 FacebookTwitterPinterestEmail
admin

previous post
ನೇಮಕಾತಿ ಆದೇಶ ಪತ್ರ ನೀಡಿದ ರಾಮಲಿಂಗಾರೆಡ್ಡಿ
next post
ಫೆ.12ರಿಂದ ವಿಧಾನಮಂಡಲ ಅಧಿವೇಶನ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ