Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಶಿಕ್ಷಣ

ಕೆಎಸ್ ಡಿಎಲ್ ನಿಂದ 21 ನೂತನ ಉತ್ಪನ್ನ ಬಿಡುಗಡೆ

by admin January 20, 2024
written by admin January 20, 2024 0 comments 2 minutes read
3FacebookTwitterPinterestEmail
165
2 ವರ್ಷದಲ್ಲಿ ₹3000 ಕೋಟಿ ವಹಿವಾಟಿನ ಗುರಿ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು (ಕೆಎಸ್ ಡಿಎಲ್) ಉತ್ಪಾದಿಸಿರುವ 21 ನೂತನ ಉತ್ಪನ್ನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜನವರಿ 20ರಂದು ಮಾರುಕಟ್ಟೆಗೆ ಬಿಡುಗಡೆ ಮಾಡಿದರು.

ಈ ಉತ್ಪನ್ನಗಳಲ್ಲಿ ಮೈಸೂರು ಸ್ಯಾಂಡಲ್ ವೇವ್ಸ್ ಶ್ರೇಣಿಯ 10 ಬಗೆಯ ಪ್ರೀಮಿಯಂ ಮೈಸೂರು ಸ್ಯಾಂಡಲ್ ಸಾಬೂನುಗಳು, 3 ಬಗೆಯ ಶವರ್ ಜೆಲ್, 6 ತರಹದ ಸೋಪ್ ಕಿಟ್, ಹ್ಯಾಂಡ್ ವಾಶ್ ಮತ್ತು ಕುಡಿಯುವ ನೀರು ಸೇರಿವೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಬಿಡುಗಡೆ ಸಮಾರಂಭದ ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, `107 ವರ್ಷಗಳ ಇತಿಹಾಸ ಹೊಂದಿರುವ ಕೆಎಸ್ ಡಿಎಲ್, ಒಂದೇ ಬಾರಿಗೆ 21 ಉತ್ಪನ್ನಗಳನ್ನು ಬಿಡುಗಡೆ ಮಾಡಿರುವುದು ಇದೇ ಮೊದಲ ಬಾರಿಯಾಗಿದೆ.

182 ಕೋಟಿ ರೂ. ಲಾಭ

ಸಂಸ್ಥೆಯು ಈಗಿನ ತಲೆಮಾರಿನ ಯುವಜನರ ನಿರೀಕ್ಷೆಗೆ ತಕ್ಕಂತೆ ಶವರ್ ಜೆಲ್ ಸೇರಿದಂತೆ ಬಗೆಬಗೆಯ ಉತ್ಪನ್ನಗಳನ್ನು ಉತ್ಪಾದಿಸಲು ಮುಂದಾಗಿರುವುದು ಶ್ಲಾಘನೀಯ ಸಂಗತಿಯಾಗಿದೆ. ಇದರ ಜೊತೆಗೆ ಗುಣಮಟ್ಟಕ್ಕೆ ಆದ್ಯತೆ ಮುಂದುವರಿಯಬೇಕು’ ಎಂದರು.

ಜನವರಿ 22ರಂದು ಧಾರ್ಮಿಕ ಮೆರವಣಿಗೆ ನಿಷೇಧ

ಹಿಂದಿನ ಸಾಲಿನಲ್ಲಿ ಸಂಸ್ಥೆಯು 132 ಕೋಟಿ ರೂ. ಲಾಭ ಮಾಡಿತ್ತು. ಎಂ ಬಿ ಪಾಟೀಲರು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಮೇಲೆ, ಕಳೆದ ಎಂಟು ತಿಂಗಳಲ್ಲಿ ಲಾಭವು 182 ಕೋಟಿ ರೂ.ಗಳಿಗೇರಿದೆ. ಮುಂಬರುವ ದಿನಗಳಲ್ಲಿ ಸಂಸ್ಥೆಯ ಉತ್ಪಾದನಾ ಚಟುವಟಿಕೆಗಳನ್ನು ಮತ್ತಷ್ಟು ವಿಸ್ತರಿಸಲು ಅವರು ಹಲವು ಮಹತ್ವಾಕಾಂಕ್ಷಿ ಉಪಕ್ರಮಗಳನ್ನು ಕೈಗೊಂಡಿರುವುದು ಸ್ತುತ್ಯಾರ್ಹ ಸಂಗತಿಯಾಗಿದೆ ಎಂದು ಅವರು ಸಚಿವರ ಬೆನ್ನುತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು.

ನಕಲಿ ಮೈಸೂರು ಸ್ಯಾಂಡಲ್ ಸೋಪು

ಹೈದರಾಬಾದಿನಲ್ಲಿ ನಕಲಿ ಮೈಸೂರು ಸ್ಯಾಂಡಲ್ ಸೋಪು ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಮಾಡಿ, ಇಬ್ಬರನ್ನು ಬಂಧಿಸಿ, ಅವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ. ಉತ್ಕೃಷ್ಟ ಗುಣಮಟ್ಟಕ್ಕೆ ಹೆಸರಾಗಿರುವ ಕೆಎಸ್ ಡಿಎಲ್ ಉತ್ಪನ್ನಗಳು ನಕಲಾಗದಂತೆ ಕಟ್ಟುನಿಟ್ಟಿನ ಕ್ರಮತೆಗೆದುಕೊಂಡಿರುವ ಸಚಿವರನ್ನು ಮುಖ್ಯಮಂತ್ರಿ ಶ್ಲಾಘಿಸಿದರು.

3000 ಕೋಟಿ ರೂ. ಗುರಿ

ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಸಚಿವ ಎಂ ಬಿ ಪಾಟೀಲ ಮಾತನಾಡಿ, `ಸಂಸ್ಥೆಯ ವಹಿವಾಟು ಸದ್ಯಕ್ಕೆ 1,400 ಕೋಟಿ ರೂ.ಗಳ ಆಚೀಚೆ ಇದೆ. ಇದನ್ನು ಎರಡು ವರ್ಷಗಳಲ್ಲಿ 3,000 ಕೋಟಿ ರೂ.ಗಳಾಗುವಂತೆ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಉತ್ಪಾದನೆಯ ಪ್ರಮಾಣವು ಇತ್ತೀಚೆಗೆ ಶೇ.25ರಷ್ಟು ಹೆಚ್ಚಾಗಿದೆ’ ಎಂದರು.

ಪಾರದರ್ಶಕ ಸಾಬೂನುಗಳು ಮತ್ತು ಸುಗಂಧಭರಿತ ಉತ್ಪನ್ನ

ಕಳೆದ ಎಂಟು ತಿಂಗಳಲ್ಲಿ ಸಂಶೋಧನೆ ನಡೆಸಿ, ದಾಖಲೆಯ ಕ್ಷಿಪ್ರ ಅವಧಿಯಲ್ಲಿ ಹೊಸ ಉತ್ಪನ್ನಗಳನ್ನು ಹೊರತರಲಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ತಾಂತ್ರಿಕ ಸಮಾಲೋಚಕ ರಜನೀಕಾಂತ್ ಅವರ ನೆರವು ನಿರ್ಣಾಯಕವಾಗಿದೆ. ಜೊತೆಗೆ, ಪಾರದರ್ಶಕ ಸಾಬೂನುಗಳು ಮತ್ತು ಸುಗಂಧಭರಿತ ಉತ್ಪನ್ನಗಳ ತಯಾರಿಕೆ ಕೂಡ ಸದ್ಯದಲ್ಲೇ ಆರಂಭವಾಗಲಿದೆ ಎಂದು ಅವರು ನುಡಿದರು.

ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಸಿ

ಸಂಸ್ಥೆಯ ಉತ್ಪನ್ನಗಳ ನಕಲನ್ನು ತಡೆಯಲು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ. ಜೊತೆಗೆ ಅಮೆರಿಕ, ಯೂರೋಪು ಮತ್ತು ದಕ್ಷಿಣ ಆಫ್ರಿಕಾಗಳಲ್ಲಿ ಕೆಎಸ್ ಡಿಎಲ್ ಉತ್ಪನ್ನಗಳಿಗೆ ಬೇಡಿಕೆ ಇದ್ದು, ಅಂತಾರಾಷ್ಟ್ರೀಯ ವಹಿವಾಟನ್ನು ಸದ್ಯದ 19 ಕೋಟಿ ರೂ.ಗಳಿಂದ 25 ಕೋಟಿ ರೂ.ಗಳಿಗೆ ಈ ವರ್ಷವೇ ಹೆಚ್ಚಿಸಿಕೊಳ್ಳುವ ಗುರಿ ಇಟ್ಟುಕೊಳ್ಳಲಾಗಿದೆ. ಜತೆಗೆ ಇಡೀ ಭಾರತದಲ್ಲಿ ಸಂಸ್ಥೆಯ ಮಾರುಕಟ್ಟೆ ಜಾಲವನ್ನು ಬೆಳೆಸಲಾಗುವುದು ಎಂದು ಅವರು ವಿವರಿಸಿದರು.

ಮೈಸೂರು ಸ್ಯಾಂಡಲ್ ವೇವ್ ಶ್ರೇಣಿಯ ಸಾಬೂನುಗಳು

ಮಾರುಕಟ್ಟೆಗೆ ಬಿಡುಗಡೆ ಮಾಡಲಾದ ಕೆಎಸ್ಡಿಎಲ್ ಹೊರತಂದಿರುವ `ಮೈಸೂರು ಸ್ಯಾಂಡಲ್ ವೇವ್’ ಶ್ರೇಣಿಯ ಪ್ರೀಮಿಯಂ ಸಾಬೂನುಗಳು ಜಾಗತಿಕ ಗುಣಮಟ್ಟದಿಂದ ಕೂಡಿವೆ.

ಶ್ರೀಗಂಧ, ಬೀಟೆ, ತೇಗಕ್ಕೆ ಜಿಯೋ ಟ್ಯಾಗ್

ಈ ಶ್ರೇಣಿಯಲ್ಲಿ ವೆಜಿಟಬಲ್ ಆಯಿಲ್ ಮತ್ತು ಅರಿಶಿನವಿರುವ ವೇವ್ ಟರ್ಮರಿಕ್, ನಿಂಬೆಯ ಪರಿಮಳದ ವೇವ್ ಲೈಮ್, ಪುದೀನಾದ ಘಮ ಸೂಸುವ ವೇವ್ ಡಿಯೋ, ಕೇಸರಿ ಇರುವ ವೇವ್ ಮಿಲ್ಕ್ ಸ್ಯಾಫ್ರನ್, ಬಾದಾಮಿ ಎಣ್ಣೆಯ ಅಂಶವಿರುವ ವೇವ್ ಆಲ್ಮಂಡ್, ಶುದ್ಧ ಬೇವಿನೆಣ್ಣೆ, ತುಳಸಿ ಮತ್ತು ಅರಿಶಿನವಿರುವ ನೀಮ್ ಸೋಪ್, ಲೋಳೇಸರ ಮತ್ತು ಬಾದಾಮಿ ತೈಲದ ಅಂಶವಿರುವ ವೇವ್ ಅಲೋ ಸೋಪ್, ಮಲ್ಲಿಗೆಯ ಸುಗಂಧವಿರುವ ಜಾಸ್ಮೀನ್ ಕ್ರೀಮ್ ಸೋಪ್, ಔದ್ ಅರೇಬಿಯನ್ ಐಷಾರಾಮಿ ಸಾಬೂನು ಮತ್ತು ಸೀಗೇಕಾಯಿ, ಜಪಾಕುಸುಮ, ಭೃಂಗರಾಜ, ನೆಲ್ಲೀಕಾಯಿ ಹಾಗೂ ಬ್ರಾಹ್ಮೀ ಇರುವ ಮೈಸೂರು ಸ್ಯಾಂಡಲ್ ಶಿಕಾಕಾಯಿ ಸಾಬೂನುಗಳಿವೆ ಎಂದು ಸಚಿವ ಎಂ ಬಿ ಪಾಟೀಲ ವಿವರಿಸಿದರು.

ರಾಮನಿಗೂ ಕರ್ನಾಟಕಕ್ಕೂ ಯುಗ-ಯುಗಾಂತರ ಸಂಬಂಧ

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಪ್ರಶಾಂತ್, ತಾಂತ್ರಿಕ ಸಲಹೆಗಾರ ರಜನೀಕಾಂತ್, ಆಡಳಿತಾಧಿಕಾರಿ ಗಂಗಪ್ಪ ಉಪಸ್ಥಿತರಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
21 new product launches3000 crorechief Minister siddaramaiahKSDLminister mb patilMysore Sandal Soapstarget 2 yearsturnover
3 FacebookTwitterPinterestEmail
admin

previous post
ಜನವರಿ 22ರಂದು ಧಾರ್ಮಿಕ ಮೆರವಣಿಗೆ ನಿಷೇಧ
next post
ಕಾಡಿನಿಂದ ಐಸ್ ಕ್ರೀಮ್ ವರೆಗೆ ಸೀತಾಫಲದ ಮಹಿಮೆ…!

You may also like

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

ಸಿದ್ದರಾಮಯ್ಯ ಮೊಮ್ಮಗನಿಗೆ ರಾಜಕೀಯ ತಾಲೀಮು

July 6, 2026

ನ್ಯಾಯಾಂಗದಲ್ಲಿ ಇನ್ನಷ್ಟು ಸುಧಾರಣೆ ಅಗತ್ಯವಿದೆ

July 4, 2026

ಗೃಹಜ್ಯೋತಿ ಸೇರಿದಂತೆ 5 ಗ್ಯಾರಂಟಿಗಳಿಗೂ ಕಡಿವಾಣ

July 1, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

May 26, 2026

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಮೇ 3ರ ಪರೀಕ್ಷೆ ರದ್ದು

May 12, 2026

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

July 20, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ