ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ಸಿಗರ ಪ್ರತಿಭಟನೆ
ಬೆಂಗಳೂರು: ಅಸ್ಸಾಂನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಪಾದಯಾತ್ರೆ ತಡೆದಿರುವುದನ್ನು ಖಂಡಿಸಿ ಪಕ್ಷದ ಕಾರ್ಯಕರ್ತರು ಹಾಗೂ ನಾಯಕರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ದೇಶದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಬೇಕು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಶಾಂತಿ ಇರಬೇಕೆಂಬ ಉದ್ದೇಶದಿಂದ ರಾಹುಲ್ ಗಾಂಧಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಶಾಂತಿ ಉದ್ದೇಶದಿಂದ ರಾಹುಲ್ ಗಾಂಧಿ ಪಾದಯಾತ್ರೆ
ಈ ಮೊದಲು ನಡೆಸಿದ ಪಾದಯಾತ್ರೆಯ ಮುಂದುವರಿದ ಭಾಗವಾಗಿ 6 ಸಾವಿರ ಕಿ.ಮೀ. ಮತ್ತೆ ಶಾಂತಿಯುತ ಪಾದಯಾತ್ರೆ ಆರಂಭಿಸಿದ್ದಾರೆ.
ಶಾಂತಿ ಸಂದೇಶ ಸಾರಲು ರಾಹುಲ್ ಗಾಂಧಿ ಪಾದಯಾತ್ರೆ ನಡೆಸುತ್ತಿದ್ದಾರೆ. ಅದರೆ ಆ ರಾಜ್ಯದ ಮುಖ್ಯಮಂತ್ರಿ ಬೇಕಂತಲೇ ಅಡ್ಡಿ ಪಡಿಸುತ್ತಿದ್ದಾರೆ ಎಂದರು.
ಬಿಗಿ ಭದ್ರತೆಯಲ್ಲಿ ಪಿಎಸ್‌ಐ ಮರುಪರೀಕ್ಷೆ
ಬಿಜೆಪಿಯವರು ಉದ್ದೇಶಪೂರ್ವಕವಾಗಿ ಪಾದಯಾತ್ರೆಯನ್ನು ತಡೆಯುವುದು, ಯಾತ್ರಿಗಳ ಮೇಲೆ ಗಲಾಟೆ ಮಾಡುತ್ತಿದ್ದಾರೆ. ಯಾತ್ರೆಯಿಂದ ಬಿಜೆಪಿಗೆ ಭಯ ಅಗುತ್ತಿರಬಹುದು ಅನ್ನಿಸುತ್ತದೆ.
ಅಸ್ಸಾಂ ಮುಖ್ಯಮಂತ್ರಿಗೆ ಏನು ನೋವಿದೆಯೋ ಗೊತ್ತಿಲ್ಲ, ಅವರು ನಮ್ಮ ಪಕ್ಷದಲ್ಲಿ ಇದ್ದವರು. ಇಂತಹ ಯಾತ್ರೆಗೆ ಅವಕಾಶ ಕೊಡಲಿಲ್ಲ ಅಂದರೆ ಹೇಗೆ, ರಾಹುಲ್ ಗಾಂಧಿಗೆ ಹೀಗೆ ಆದರೆ, ದೇಶದಲ್ಲಿನ ಜನಸಾಮಾನ್ಯ ಗತಿ ಏನು, ಅದಕ್ಕಾಗಿ ದೇಶ್ಯಾದ್ಯಂತ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.
1 comment
[…] ರಾಜಕೀಯ […]