ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1,500 ಮಕ್ಕಳು
ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವ ದಿನವನ್ನು ಅದ್ದೂರಿಯಾಗಿ ಆಚರಿಸಲು ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಮಟ್ಟದ ಸಮಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಈ ಸಂಬಂಧ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸುದ್‌ದಿಗೋಷ್ಟಿಯಲ್ಲಿ ಮಾತನಾಡಿ, ಜನವರಿ 26 ರಂದು ಬೆಳಗ್ಗೆ 9.00 ಗಂಟೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದರು.
ಕಾಂಗ್ರೆಸ್ ವರಿಷ್ಠರ ಮೇಲೆ ಸಿದ್ದರಾಮಯ್ಯ ಗರಂ
ನಂತರ ರಾಜ್ಯಪಾಲರು ತೆರೆದ ಜೀಪಿನಲ್ಲಿ ಪೆರೇಡ್ ಪರಿವೀಕ್ಷಣೆ ಮತ್ತು ಗೌರವರಕ್ಷೆ ಸ್ವೀಕರಿಸಿ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದಾರೆ.
ಪಂಥಸಂಚಲನದಲ್ಲಿ 38 ತುಕಡಿ
ಗಣರಾಜ್ಯೋತ್ಸವ ಪಂಥಸಂಚಲನದಲ್ಲಿ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳ ತಂಡಗಳ ಕವಾಯತು ಮತ್ತು ಬ್ಯಾಂಡ್‌ನ ಒಟ್ಟು 38 ತುಕಡಿಗಳಲ್ಲಿ ಸುಮಾರು 1,150 ಮಂದಿ ಭಾಗವಹಿಸಲಿದ್ದಾರೆ. ಶಾಲಾ ಮಕ್ಕಳ ಒಟ್ಟು 9 ಸಾಂಸ್ಕೃತಿಕ ಕಾರ್ಯಕ್ರಗಳಲ್ಲಿ ಸುಮಾರು 1,500 ಮಕ್ಕಳು ಭಾಗವಹಿಸಲಿದ್ದಾರೆ.
ಕರ್ನಾಟಕಕ್ಕೆ 23 ಸಾವಿರ ಕೋಟಿ ರೂ. ಬಂಡವಾಳ
ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ವೀಕ್ಷಿಸಲು ಆಗಮಿಸುವ ಅತಿಗಣ್ಯ, ಗಣ್ಯ, ಹಾಗೂ ಸಾರ್ವಜನಿಕರಿಗೆ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಮಾತನಾಡಿ, ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಬಿಗಿ ಬಂದೋಬಸ್ತ್‌ಗೆ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದರು.