ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕರೆ
ಬೆಂಗಳೂರು: ಕರ್ನಾಟಕದ ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಒಳಗೊಳ್ಳುವಿಕೆಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಕರೆ ನೀಡಿದರು.
ನಗರದ ಮಾಣಿಕ್ ಷಾ ಮೈದಾನದಲ್ಲಿ ನಡೆದ ರಾಜ್ಯಮಟ್ಟದ 75ನೇ ಗಣರಾಜ್ಯೋತ್ಸವದಲ್ಲಿ ಭಾಷಣ ಮಾಡಿದ ಅವರು, ಯುಗಯುಗಾಂತರಗಳಿಂದ ಮಾನವೀಯತೆ ನೆಲೆಸಿರುವ ರಾಷ್ಟ್ರ ನಮ್ಮ ಭಾರತ. ಇದು ವಿಭಿನ್ನ ಧರ್ಮ, ಸಮಾಜ, ಸಂಸ್ಕೃತಿ ಮತ್ತು ಭಾಷೆಗಳಿಂದ ಆಶೀರ್ವದಿಸಲ್ಪಟ್ಟಿರುವ ದೇಶವಾಗಿದೆ ಎಂದರು.
ಎಲ್ಲವೂ ಪರಸ್ಪರ ಸೌಹಾರ್ದತೆಯಿಂದ ಪರಸ್ಪರ ಸಂಬಂಧ ಹೊಂದಿದೆ. ಇಡೀ ಜಗತ್ತಿಗೆ “ವಿವಿಧತೆಯಲ್ಲಿ ಏಕತೆ” ಎಂಬ ಸಂದೇಶವನ್ನು ನೀಡುವ ಎಲ್ಲರ ನಡುವೆ ನಾವು ಶಾಂತಿ ಮತ್ತು ಸಾಮರಸ್ಯವನ್ನು ಸ್ಥಾಪಿಸಬೇಕು ಮತ್ತು ನಮ್ಮ ರಾಷ್ಟ್ರೀಯ ಏಕತೆಯ ಬಲವರ್ಧನೆ ಮತ್ತು ಐಕ್ಯಮತ್ಯಕ್ಕಾಗಿ ನಾವು ಶ್ರಮಿಸಬೇಕು ಎಂದು ಕರೆ ನೀಡಿದರು.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು
ಸಂವಿಧಾನವು ಭಾರತದ ನಾಗರೀಕರಿಗೆ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆಯ ಅವಕಾಶವನ್ನು ಒದಗಿಸುವುದರೊಂದಿಗೆ, ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವ ಜೊತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧೈಯವನ್ನು ಹೊಂದಿದೆ.
ಆ ಮೂಲಕ ನಾಗರೀಕರು ತಮ್ಮ ಏಳಿಗೆಯೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ಕಲ್ಪಿಸಿದೆ. ಸಂವಿಧಾನದ ಈ ಆಶಯಗಳನ್ನು ಸಾಕಾರಗೊಳಿಸಲು ನನ್ನ ಸರ್ಕಾರ ಶ್ರಮಿಸುತ್ತಿದೆ ಎಂದರು.
ಐದು ಗ್ಯಾರಂಟಿ ಅನುಷ್ಠಾನದ ಬದ್ಧತೆಯನ್ನು ಮೆರೆದಿದೆ
ಕರ್ನಾಟಕ ಸರ್ಕಾರವು ಐದು ಗ್ಯಾರಂಟಿಗಳಾದ ಶಕ್ತಿಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ನಾವು ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಬದ್ಧತೆಯನ್ನು ಮೆರೆದಿದೆ ಎಂದು ತಿಳಿಸಿದರು.
ಬರಗಾಲ ಘೋಷಿತ ತಾಲ್ಲೂಕುಗಳಲ್ಲಿ ಪ್ರತಿ ರೈತನಿಗೆ 2000 ರೂ. ವರೆಗಿನ ಇನ್‌ಪುಟ್ ಸಬ್ಸಿಡಿಯನ್ನು ಮಧ್ಯಂತರ ಪರಿಹಾರವಾಗಿ ಆಧಾರ್ ಲಿಂಕ್ ಮಾಡಲಾದ ರೈತರ ಬ್ಯಾಂಕ್ ಖಾತೆಗೆ ರಾಜ್ಯ ಸರ್ಕಾರದಿಂದ ನೇರವಾಗಿ ಬಿಡುಗಡೆ ಮಾಡಲಾಗುತ್ತಿದೆ. ಸುಮಾರು 30 ಲಕ್ಷ ರೈತರಿಗೆ ರೂ.580 ಕೋಟಿ ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಕುಮಾರಸ್ವಾಮಿ-ಜಾರಕಿಹೊಳಿ ಆಪರೇಷನ್ ಯಶಸ್ವಿ
ತಾಲ್ಲೂಕು ಮಟ್ಟದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳ ಮೇವು ನಿರ್ವಹಣೆಗೆ ಹಾಗೂ ಬರ ಪರಿಹಾರ ಕ್ರಮಗಳ ಮೇಲ್ವಿಚಾರಣೆಗಾಗಿ ಮಾನ್ಯ ಶಾಸಕರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಕಾರ್ಯಪಡೆಗಳನ್ನು ರಚಿಸಲಾಗಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜನವರಿ 2023 ರಿಂದ ಡಿಸೆಂಬರ್ 2023ರ ಅಂತ್ಯದವರೆಗೆ 37.03 ಲಕ್ಷ ಕುಟುಂಬಗಳ 63.13 ಲಕ್ಷ ಜನರಿಗೆ ಕೆಲಸ ಒದಗಿಸಲಾಗಿದೆ.
ಡಾ|| ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಸಾರ್ವಜನಿಕ ಸ್ಥಳಗಳಲ್ಲಿ ಹಠಾತ್ ಹೃದಯಾಘಾತದಿಂದ ಸಂಭವಿಸುವ ಮರಣಗಳನ್ನು ತಡೆಗಟ್ಟಲು ಸಾರ್ವಜನಿಕ ದಟ್ಟಣೆಯ ಸ್ಥಳ, ಬಸ್ಸು ನಿಲ್ದಾಣ, ರೈಲು ನಿಲ್ದಾಣ ಮತ್ತು ಸರ್ಕಾರಿ ಕಛೇರಿಗಳಲ್ಲಿ AED (Automated ಸಾಧನಗಳನ್ನು ರೂಪಿಸಲಾಗುತ್ತಿದೆ.
ಲೋಕಾ ಚುನಾವಣೆಗೂ ಮುನ್ನ ದೊಡ್ಡ ರಾಜಕೀಯ ಬೆಳವಣಿಗೆ
ರಾಜ್ಯಾದ್ಯಂತ 168 ಡಯಾಲಿಸಿಸ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಒಟ್ಟು 3,685 ರೋಗಿಗಳಿಗೆ 2,82,439 ಸೈಕಲ್‌ಗಳ ಡಯಾಲಿಸಿಸ್ ಸೇವೆಯನ್ನು ಉಚಿತವಾಗಿ ನೀಡಲಾಗಿದ್ದು, ಪ್ರಸ್ತುತವಿರುವ ಡಯಾಲಿಸಿಸ್ ಕೇಂದ್ರಗಳನ್ನು 219ಕ್ಕೆ ವಿಸ್ತರಿಸಲು ಕ್ರಮಕೈಗೊಳ್ಳಲಾಗುತ್ತಿದೆ. 108 ಆರೋಗ್ಯ ಕವಚ ಯೋಜನೆಯಡಿ ತುರ್ತು ಆಂಬುಲೆನ್ಸ್ ಸೇವೆಗಳಿಗೆ ಹೊಸದಾಗಿ 262 ಹೊಸ ಆಂಬುಲೆನ್ಸ್ ಗಳನ್ನು ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
ಬೆಂಗಳೂರಿನ ಮುಖ್ಯ ರಸ್ತೆಗಳ ಸುಸ್ಥಿರ ಅಭಿವೃದ್ಧಿಗಾಗಿ ಸುಮಾರು 2000 ರೂಪಾಯಿಗಳ ಯೋಜನೆಯನ್ನು ರೂಪಿಸಿ ಪ್ರಮುಖ ರಸ್ತೆಗಳ ವೈಟ್ ಟಾಪಿಂಗ್‌ಗಾಗಿ ಟೆಂಡರ್ ಕರೆಯುವ ಪ್ರಕ್ರಿಯೆಗೆ ಚಾಲನ ನೀಡಲಾಗಿರುತ್ತದೆ.
ಸುರಂಗ ರಸ್ತೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ
ಬೆಂಗಳೂರು ನಗರದ ದಟ್ಟಣೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ಹಿತದೃಷ್ಟಿಯಿಂದ ಆಯ್ದ ಸ್ಥಳಗಳಲ್ಲಿ ಸುರಂಗ ರಸ್ತೆಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ಪ್ರಾಯೋಗಿಕವಾಗಿ 2 ಕಿ.ಮೀ ವಿಸ್ತೀರ್ಣದ ಸುರಂಗ ರಸ್ತೆಯ ನಿರ್ಮಾಣಕ್ಕಾಗಿ ಅಂತರಾಷ್ಟ್ರೀಯ ಏಜೆನ್ಸಿಯ ನೆರವಿನಿಂದ ಡಿ.ಪಿ.ಆರ್ ತಯಾರಿಸುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿರುತ್ತದೆ ಎಂದು ರಾಜ್ಯಪಾಲರು ತಿಳಿಸಿದರು.
ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ಮೂಲಕ ಅಲ್ಪಸಂಖ್ಯಾತ ಸಮುದಾಯದ ಉದ್ಯಮಿಗಳು ಪಡೆಯುವ ಸಾಲಕ್ಕೆ ಶೇಕಡ 6ರ ಬಡ್ಡಿದರದಲ್ಲಿ ರೂ.10.00 ಕೋಟಿಗಳವರೆಗೆ ಸಹಾಯಧನ ನೀಡುವ ಯೋಜನೆಯನ್ನು ಜಾರಿಗೊಳಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಗಾಗಿ ಕಾವೇರಿ 2.0 ತಂತ್ರಾಂಶವನ್ನು ಅಭಿವೃದ್ಧಿಪಡಿಸಿದ್ದು ಇದು ರೂ.10483. ಕೋಟಿಗಳ ಹೆಚ್ಚುವರಿ ಆದಾಯಕ್ಕೆ ಗಮನಾರ್ಹ ಕೊಡುಗೆ ನೀಡಿದೆ.
ಪ್ರೀತಿಯ ಹೂಮಳೆಯಲ್ಲಿ ಮುಳುಗಿಸಿದರು
ಎತ್ತಿನ ಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತದ ಏತ ಕಾಮಗಾರಿಗಳು ಮತ್ತು ವಿದ್ಯುತ್ ಪೂರೈಕೆ ಕಾಮಗಾರಿಗಳು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದ್ದು, ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ ಗುರುತ್ವ ಕಾಲುವೆಯ 42.00 ಕಿ.ಮೀ.ವರೆಗೆ ಯೋಜಿಸಲಾಗಿದೆ. ಹರಿಸಿ ಚಾಲನೆಗೊಳಿಸಲು ಯೋಜಿಸಲಾಗಿದೆ.
ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ ಪರಿಹಾರಕ ಅರಣ್ಯವೃದ್ಧಿ ಭೂಮಿಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಬಗ್ಗೆ ಹಾಗೂ ಯೋಜನಾ ಕಾಮಗಾರಿಗಳನ್ನು ಮತ್ತು ಭೂಸ್ವಾಧೀನ ಪ್ರಕ್ರಿಯೆಗಳನ್ನು ಚುರುಕುಗೊಳಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.
2 comments
[…] ರಾಜ್ಯ […]
[…] ರಾಜ್ಯ […]