ಗಣರಾಜ್ಯ ದಿನವೇ ಶಾಸಕರಿಗೆ ಬಂಪರ್; ಎಲ್ಲರಿಗೂ ಸಂಪುಟ ದರ್ಜೆ ಭಾಗ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್ ವರಿಷ್ಠರು ಪಕ್ಷದ ಹಿರಿಯ ಶಾಸಕರಿಗೆ ನಿಗಮ-ಮಂಡಳಿಗಳ ಸ್ಥಾನ ಮಾನ ನೀಡಿ ಸರ್ಕಾರ ಗಟ್ಟಿ ಮಾಡಲು ಮುಂದಾಗಿದೆ.
ಶೆಟ್ಟರ್ ಬೆನ್ನಲ್ಲೇ ಪಕ್ಷದ ಕೆಲವು ಮುಖಂಡರು ಮತ್ತು ಶಾಸಕರು, ಪಕ್ಷ ತೊರೆಯಲಿದ್ದಾರೆ ಎಂಬ ಉದ್ದೇಶದಿಂದ ಪದೇ ಪದೇ ಮುಂದೂಡಲಾಗಿದ್ದ ನಿಗಮ-ಮಂಡಳಿ ನೇಮಕದ ಪಟ್ಟಿ ಹೊರಗೆಡವಿದ್ದಾರೆ.
ವಿಧಾನಸಭೆಗೆ ಎರಡು, ಮೂರಕ್ಕಿಂತ ಹೆಚ್ಚು ಬಾರಿ ಆಯ್ಕೆಗೊಂಡವರು ಮತ್ತು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡು ಶಾಸಕರಾದವರಿಗೂ ಅವಕಾಶ ಮಾಡಿಕೊಡಲಾಗಿದೆ. ಒಟ್ಟಾರೆ, 34ನಿಗಮ ಮತ್ತು ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ.
ನೇಮಕವಾಗಿರುವ ಅಧ್ಯಕ್ಷರಿಗೆ ಸಂಪುಟದರ್ಜೆಯ ಸ್ಥಾನ ನೀಡಲಾಗಿದೆ. ಅಂದರೆ, ಸಚಿವ ಸಂಪುಟದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಲು ಸರ್ಕಾರ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ನೂತನ ಅಧ್ಯಕ್ಷರ ಅವಧಿ ಎರಡು ವರ್ಷಗಳಾಗಿದೆ ಅಥವಾ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನೇಮಕಗೊಂಡಿರುವ ಶಾಸಕರ ಪಟ್ಟಿ ಈ ಕೆಳಕಂಡಂತಿದೆ.
ಎಸ್. ಆರ್. ಶ್ರೀನಿವಾಸ್ ಗೆ ಕೆಎಸ್ಆರ್ ಟಿಸಿ; ಎನ್.ಎ.ಹ್ಯಾರೀಸ್ ಗೆ ಬಿಡಿಎ
ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಅವರಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮ, ಮುದ್ದೇಬಿಹಾಳ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರಿಗೆ ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತ, ಕಾಗವಾಡ ಶಾಸಕ ಭರಮಗೌಡ ಅಲಗೌಡ ಕಾಗೆ ಅವರಿಗೆ ವಾಯುವ್ಯ ಸಾರಿಗೆ ನಿಗಮ ನಿಯಮಿತ, ಬಾಗಲಕೋಟೆ ಶಾಸಕ ಹುಲ್ಲಪ್ಪ ಯಮನಪ್ಪ ಮೇಟಿ ಅವರಿಗೆ ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕರನ್ನಾಗಿ ನೇಮಕ ಮಾಡಲಾಗಿದೆ.
ಬ್ಯಾಡಗಿ ಶಾಸಕ ಬಸವರಾಜ್ ನೀಲಪ್ಪ ಶಿವಣ್ಣನವರ್ ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ, ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ, ಮಾಗಡಿ ಶಾಸಕ ಹೆಚ್.ಸಿ.ಬಾಲಕೃಷ್ಣ ಅವರಿಗೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ, ರೋಣ ಶಾಸಕ ಜಿ.ಎಸ್.ಪಾಟೀಲ್ ಅವರಿಗೆ ಕರ್ನಾಟಕ ಖನಿಜ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಶಾಂತಿನಗರ ಶಾಸಕ ಎನ್.ಎ.ಹ್ಯಾರೀಸ್ ಅವರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಕಲೆಕ್ಷನ್
ಬೈಲಹೊಂಗಲ ಶಾಸಕ ಕೌಜಲಗಿ ಮಹಾಂತೇಶ್ ಶಿವಾನಂದ ಅವರಿಗೆ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ, ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್, ಬೀಳಗಿ ಶಾಸಕ ಜಿ.ಟಿ.ಪಾಟೀಲ್ ಅವರಿಗೆ ಹಟ್ಟಿ ಚಿನ್ನದ ಗಣಿ ನಿಯಮಿತ, ಶೋರಾಪುರ ಶಾಸಕ ರಾಜಾವೆಂಕಟ್ಟಪ್ಪ ನಾಯಕ್ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಹಾಗೂ ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ ಅವರಿಗೆ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ/ಲ್ಯಾಂಡ್ ಆರ್ಮಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಕೆ.ಎಂ.ಶಿವಲಿಂಗೇಗೌಡರಿಗೆ ಕರ್ನಾಟಕ ಗೃಹ ಮಂಡಳಿ; ಬಿ.ಶಿವಣ್ಣಗೆ ಬಿಎಂಟಿಸಿ
ಅರಸೀಕೆರೆ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಕರ್ನಾಟಕ ಗೃಹ ಮಂಡಳಿ, ಹುಬ್ಬಳ್ಳಿ-ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್ ಅವರಿಗೆ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ, ಸಾಗರ ಶಾಸಕ ಬಿ.ಕೆ.ಗೋಪಾಲಕೃಷ್ಣ ಬೇಳೂರು ಅವರಿಗೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತ, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರಿಗೆ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ನಿಯಮಿತ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರಿಗೆ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಶ್ರೀರಂಗಪಟ್ಟಣ ಶಾಸಕ ಎ.ಬಿ.ರಮೇಶ್ ಬಂಡಿಸಿದ್ದೇಗೌಡ ಅವರಿಗೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಆನೇಕಲ್ ಶಾಸಕ ಬಿ.ಶಿವಣ್ಣ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಬಾಗೇಪಲ್ಲಿ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ, ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಹೆಗ್ಗಡದೇವನಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಜಂಗಲ್ ಲಾಡ್ಜಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶಿಸಿದೆ.
ಸರ್ವಾಂಗೀಣ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡೋಣ
ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಅವರಿಗೆ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ, ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತಿಮಾ ಅವರಿಗೆ ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮ ನಿಯಮಿತ, ಹುನಗುಂದ ಶಾಸಕ ಕಾಶಪ್ಪನವರ್ ವಿಜಯಾನಂದ ಶಿವಶಂಕರಪ್ಪ ಅವರಿಗೆ ಕರ್ನಾಟಕ ಕ್ರೀಡಾ ಪ್ರಾಧಿಕಾರ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ ಅವರಿಗೆ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ ನಿಯಮಿತ ಮತ್ತು ಕೆಜಿಎಫ್ ಶಾಸಕಿ ರೂಪಕಲಾ ಎಂ. ಅವರಿಗೆ ಕರ್ನಾಟಕ ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕಾರವಾರ ಶಾಸಕ ಸತೀಶ್ ಕೃಷ್ಣ ಸೈಲ್ ಅವರಿಗೆ ಕರ್ನಾಟಕ ಮಾರ್ಕೆಟಿಂಗ್ ಕನ್ಸಲ್ವೆಂಟ್ ಅಂಡ್ ಏಜೆನ್ಸಿಸ್, ಹೊಸಕೋಟೆ ಶಾಸಕ ಶರತ್ ಕುಮಾರ್ ಬಚ್ಚೇಗೌಡ ಅವರಿಗೆ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಕಂಪ್ಲಿ ಶಾಸಕ ಜೆ.ಎಂ.ಗಣೇಶ್ ಅವರಿಗೆ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತ ಹಾಗೂ ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಅವರಿಗೆ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ರಾಯಣ್ಣ ಹೆಸರಿಡಲು ಕೇಂದ್ರಕ್ಕೆ ಶಿಫಾರಸ್ಸು
ಈ ಹೊಸ ಅಧ್ಯಕ್ಷರು ಕಾರ್ಯನಿರ್ವಹಿಸಲು ಅನುಕೂಲ ವಾಗುವಂತೆ ಸಂಬಂಧಪಟ್ಟ ಆಯಾ ಇಲಾಖೆಯು ನಿಯಮಾನುಸಾರ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಆದೇಶದಲ್ಲಿ ತಿಳಿಸಲಾಗಿದೆ.
2 comments
[…] Special Story […]
[…] Special Story […]