ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರ ಗೆಲ್ಲಲು ತಂತ್ರಗಾರಿಕೆ
ಬೆಂಗಳೂರು: ಕಿರಿಯರ ಜೊತೆ ಹಿರಿಯರನ್ನು ಕೈಜೋಡಿಸಿಕೊಂಡು ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ಬಿಜೆಪಿ ಇಂದಿಲ್ಲಿ ನಿರ್ಣಯಿಸಿದೆ.
ಕೇಂದ್ರ ಸಚಿವ ಭೂಪೇಂದ್ರ ಯಾದವ್ ಸಮ್ಮುಖದಲ್ಲಿ ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿರುವುದಲ್ಲದೆ, 28 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೊಡುಗೆ ನೀಡಲು ನಿರ್ಣಯಿಸಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಆದ ಲೋಪಗಳನ್ನು ಸರಿಪಡಿಸಿಕೊಂಡು ಎನ್ ಡಿಎ ಮೈತ್ರಿಕೂಟ ಸೇರಿರುವ ಜೆಡಿಎಸ್ ಜೊತೆ ಒಗ್ಗಟ್ಟಿನಿಂದ ಚುನಾವಣೆಗೆ ಈಗಿನಿಂದಲೇ ಶ್ರಮಿಸಲು ತೀರ್ಮಾನಿಸಲಾಗಿದೆ.
ಹಠವಿಡಿದು ಬಾಲರಾಮನ ದರ್ಶನ ಪಡೆದ ಗೌಡರು
ಕರಾವಳಿ, ಮಲೆನಾಡು, ಮುಂಬೈ ಹಾಗೂ ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನಮಗಿರುವ ಶಕ್ತಿಯನ್ನು ಮತ್ತಷ್ಟು ಬಲಪಡಿಸಿಕೊಳ್ಳಬೇಕು. ಜೆಡಿಎಸ್ ಪ್ರಾಬಲ್ಯವಿರುವ ಕಡೆಗಳಲ್ಲಿ ನಾವು ಅವರಿಗೆ ಹೊರಗಿನಿಂದ ಬಲಕೊಟ್ಟು ಈ ಬಾರಿ 28 ಕ್ಷೇತ್ರಗಳನ್ನು ಗೆಲ್ಲಲ್ಲೇಬೇಕು.
ವಿಧಾನಸಭೆ ಚುನಾವಣೆಯಲ್ಲಿ ಹಿರಿಯರನ್ನು ಕಡೆಗಣಿಸಿದ್ದು, ಮತ್ತು ನಮ್ಮಲ್ಲಿನ ಗುಂಪುಗಾರಿಕೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಕಾರಣವಾಯಿತು ಎಂದು ಅಭಿಪ್ರಾಯಿಸಿರುವ ಸಭೆ, ಈ ಬಾರಿ ನಮ್ಮ ತಪ್ಪುಗಳನ್ನು ತಿದ್ದುಕೊಂಡು ಒಗ್ಗಟ್ಟಿನ ಹೋರಾಟ ಮಾಡೋಣ ಎಂದಿದೆ.
ನರೇಂದ್ರ ಮೋದಿ ಗ್ಯಾರಂಟಿಗೆ ಜನ ಬೆಂಬಲ
ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಮಾತನಾಡಿದ ಭೂಪೇಂದ್ರ ಯಾದವ್ ಅವರು, ದೇಶದಲ್ಲಿ ಮೋದಿ ಗ್ಯಾರಂಟಿ ಎಂದರೆ, ಅದು ನೈಜ ಗ್ಯಾರಂಟಿ ಎಂಬುದನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ.
ಸುಳ್ಳು ಗ್ಯಾರಂಟಿಗಳ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂಬ ವಿಷಯವನ್ನು ಲೋಕಸಭಾ ಚುನಾವಣಾ ಪ್ರಚಾರಕ್ಕೆ ತೆರಳಿದಾಗ ಮತದಾರರಿಗೆ ಮನವರಿಕೆ ಮಾಡಿಕೊಡಿ ಎಂದು ಇಲ್ಲಿಯ ಮುಖಂಡರಿಗೆ ಕಿವಿ ಮಾತು ಹೇಳಿದರು.
ಜಗದೀಶ್ ಶೆಟ್ಟರ್ ಪಕ್ಷ ತೊರೆಯುತ್ತಿದ್ದಂತೆ ಎಚ್ಚೆತ್ತ ಕಾಂಗ್ರೆಸ್; 34 ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ
ಮಧ್ಯ ಪ್ರದೇಶ, ರಾಜಸ್ಥಾನ ಹಾಗೂ ಛತೀಸ್ಘಡ ರಾಜ್ಯಗಳ ಜನತೆ ಕಾಂಗ್ರೆಸ್ ಗ್ಯಾರಂಟಿಯನ್ನು ತಿರಸ್ಕರಿಸಿದರು. ಮುಂದಿನ ಲೋಕಸಭಾ ಚುನಾವಣೆಯಲ್ಲಿ 400 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು.
ರಾಷ್ಟ್ರದ ಏಕತೆ, ಅಭಿವೃದ್ಧಿ ಮತ್ತು ರಾಮರಾಜ್ಯ ನಿರ್ಮಾಣಕ್ಕಾಗಿ ಮೋದಿ ಅವರು, 2014ರಿಂದಲೂ ನಿರಂತರವಾಗಿ ಶ್ರಮಿಸುತ್ತಲೇ ಬಂದಿದ್ದಾರೆ. ಕಾಂಗ್ರೆಸ್ ಪಕ್ಷ ಜಾತಿಗಳನ್ನು ವಿಭಜಿಸಿ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದು, ಇದಕ್ಕೆ ಜನರು ಮಣೆ ಹಾಕದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.
ಕಳೆದ ಒಂದು ದಶಕದಿಂದ ರಾಷ್ಟ್ರದ ರಾಜಕೀಯ ಕ್ಷೇತ್ರದಲ್ಲಿ ಮಹಾನ್ ಪರಿವರ್ತನೆಯಾಗಿದೆ. ಬಡವರಿಗೆ ನ್ಯಾಯ ಕೊಡುವ ವಿಷಯಕ್ಕೆ ಆದ್ಯತೆ ಕೊಡಲಾಗಿದೆ ಎಂದರು.
ಆಂತರಿಕ ಕಲಹದಿಂದ ಕಾಂಗ್ರೆಸ್ ಸರ್ಕಾರದ ಆಡಳಿತ ಕುಸಿದಿದೆ
ಇದೇ ಸಂದರ್ಭದಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಜನರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಆಂತರಿಕ ಕಲಹದಿಂದ ಆಡಳಿತಯಂತ್ರ ಕುಸಿದಿದೆ.
ಭ್ರಷ್ಟಾಚಾರ ತಾಂಡವವಾಡುತ್ತಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಇದರ ನಡುವೆಯೂ ದುರ್ಮಾರ್ಗದಲ್ಲಿ ಮತಗಳಿಸುವ ಕುತಂತ್ರ ನಡೆಸಿದ್ದಾರೆ. ಜನರಿಗೆ ವಾಸ್ತವ ತಿಳಿಸಿ ನಾವು 28 ಕ್ಷೇತ್ರಗಳಲ್ಲಿ 28 ಅನ್ನು ಗೆಲ್ಲಲ್ಲೇಬೇಕೆಂದು ಪಣ ತೊಡೋಣ ಎಂದು ಕರೆ ನೀಡಿದರು.
ಸರ್ವಾಂಗೀಣ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡೋಣ
ಇದೇ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಲೋಕಸಭೆ ಚುನಾವಣೆವರೆಗೂ ವಿಶ್ರಾಂತಿ ಪಡೆಯದೇ ಕಾಂಗ್ರೆಸ್ ಗೆ ಪಾಠ ಕಲಿಸೋಣ ಎಂದು ಹೇಳಿದರು.
2 comments
[…] ರಾಜಕೀಯ […]
[…] ರಾಜಕೀಯ […]