Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ

by admin January 29, 2024
written by admin January 29, 2024 0 comments 1 minutes read
4FacebookTwitterPinterestEmail
410
ರಾಷ್ಟ್ರಪತಿ ಹುದ್ದೆ, ಸಂವಿಧಾನಕ್ಕೆ ಮುಖ್ಯಮಂತ್ರಿಯಿಂದ ಅಪಚಾರ ಆರೋಪ

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧನೆ ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ರಾಷ್ಟ್ರಪತಿಗಳಿಗೆ ಅಪಚಾರ ಎಸಗಿರುವ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಇಲ್ಲವೇ ಅವರನ್ನು ಆ ಸ್ಥಾನದಿಂದ ವಜಾ ಮಾಡಬೇಕು ಎಂದು ರಾಜ್ಯಪಾಲರನ್ನು ಒತ್ತಾಯ ಮಾಡಿದ್ದಾರೆ.

ಆಚಾರಗೆಟ್ಟ ಮುಖ್ಯಮಂತ್ರಿ

ರಾಷ್ಟ್ರಪತಿಗಳು, ದೇಶದ ಪ್ರಥಮ ಪ್ರಜೆ ಆಗಿರುವ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ ಕೀಳು, ವಿಕೃತ, ಹೀನ ನಾಲಗೆಯ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೂಡಲೇ ವಜಾ ಮಾಡಬೇಕು ಎಂದಿರುವ ಕುಮಾರಸ್ವಾಮಿ ಅವರು, ಸಿಎಂ ಬಳಸಿರುವ ಪದವನ್ನು ಬರೆಯಲಾರೆ ಎಂದು ಎಂದಿದ್ದಾರಲ್ಲದೆ, ಸಿದ್ದರಾಮಯ್ಯ ಆಚಾರಗೆಟ್ಟ ಮುಖ್ಯಮಂತ್ರಿ ಎಂದು ಕಟುವಾಗಿ ಟೀಕಿಸಿದ್ದಾರೆ.

ಈ ಡೋಂಗೀ ಪ್ರಜಾಪ್ರಭುತ್ವವಾದಿಯ ಅಸಲಿ ಮುಖ ಕಳಚಿಬಿದ್ದಿದೆ. ಒಂದು ಕ್ಷಣವೂ ಮುಖ್ಯಮಂತ್ರಿ ಪದವಿಯಲ್ಲಿ ಇರಲು ಅವರು ಅರ್ಹರಲ್ಲ. ಕೂಡಲೇ ತಾವೆಸಗಿರುವ ಅಪಚಾರಕ್ಕೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಅಥವಾ ರಾಜ್ಯಪಾಲರೇ ಅವರನ್ನು ಮುಖ್ಯಮಂತ್ರಿ ಕುರ್ಚಿಯಿಂದ ಕಿತ್ತೆಸೆಯಬೇಕು. ಇದು ನನ್ನ ಆಗ್ರಹ ಎಂದಿದ್ದಾರೆ ಕುಮಾರಸ್ವಾಮಿ ಅವರು.

ಶೋಷಿತರ ಜಾಗೃತಿ ಸಮಾವೇಶದಲ್ಲೇ ಅಪಮಾನ

ಆಚಾರವಿಲ್ಲದ ನಾಲಿಗೆ, ನಿನ್ನ ನೀಚಬುದ್ಧಿಯ ಬಿಡು ನಾಲಿಗೆ ಎಂದು ದಾಸರು ಹೇಳಿದ್ದಾರೆ. ಸಿದ್ದರಾಮಯ್ಯಗೆ ಆಚಾರ ಹತ್ತಿರಕ್ಕೂ ಸುಳಿಯದ ವಿಚಾರ. ಶೋಷಿತ ಬುಡಕಟ್ಟು ಸಮುದಾಯದಿಂದ ಬಂದ ದೇಶದ ಮೊತ್ತ ಮೊದಲ ರಾಷ್ಟ್ರಪತಿಗಳು, ಅದರಲ್ಲಿಯೂ ಮಹಿಳೆ. ಶೋಷಿತರ ಜಾಗೃತಿ ಸಮಾವೇಶದಲ್ಲೇ ಅವರಿಗೆ ಮುಖ್ಯಮಂತ್ರಿ ಅಪಮಾನ ಎಸಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಕೀಲರಂತೆ, ಸ್ವಯಂಘೋಷಿತ ಸಂವಿಧಾನ ತಜ್ಞರಂತೆ. ನಾಚಿಕೆಯಾಗಬೇಕು ಇವರಿಗೆ. ಸಾರ್ವಜನಿಕ ವೇದಿಕೆಯಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಮುಖ್ಯಮಂತ್ರಿಯೊಬ್ಬರು ಸಂಬೋಧಿಸುವ ರೀತಿಯೇ ಇದು. ಸಿದ್ದರಾಮಯ್ಯನವರ ನಡವಳಿಕೆ ಕರ್ನಾಟಕಕ್ಕೆ ಅಂಟಿದ ಅಳಿಸಲಾಗದ ಕಳಂಕ. ಅವರ ಈ ಕೀಳುಮಾತು ದೇಶಕ್ಕೆ, ಸಂವಿಧಾನಕ್ಕೆ ಆಗಿರುವ ಘೋರ ಅಪಚಾರ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

ಚಾಮರಾಜನಗರದಲ್ಲಿ ಇದೇ ಸಿದ್ದರಾಮಯ್ಯನವರ ಸುಪುತ್ರ ಯತೀಂದ್ರ ಭಾಷಣ ಮಾಡುತ್ತಿದ್ದಾಗ ಯಾರೋ ಒಬ್ಬರು ಏಕವಚನದಲ್ಲಿ ಪ್ರಶ್ನಿಸಿದರೆಂಬ ಕಾರಣಕ್ಕೆ ಪೊಲೀಸರು ಆತನನ್ನು ಅಟ್ಟಾಡಿಸಿಕೊಂಡು ಹೋಗಿ ಬಂಧಿಸಿ ದರದರನೇ ಎಳೆದುಕೊಂಡು ಹೋದರು. ಹಾಗಿದ್ದರೆ, ರಾಷ್ಟ್ರಪತಿಗಳನ್ನೇ ಏಕವಚನದಲ್ಲಿ ಸಂಬೋಧಿಸಿದ ಈ ಮುಖ್ಯಮಂತ್ರಿಗೇನು ಶಿಕ್ಷೆ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

ಮಾತೆದ್ದಿದರೆ ಸಂವಿಧಾನ, ಪ್ರಜಾಪ್ರಭುತ್ವ, ವಕೀಲಿಕೆ ನಮ್ಮಪ್ಪನ ಮನೆ ಆಸ್ತಿ ಎಂದು ಜಾಗಟೆ ಹೊಡೆಯುವ ಸಿದ್ದರಾಮಯ್ಯನವರು ಮಾನ, ಮರ್ಯಾದೆ, ಮಹಿಳೆಯರ ಮೇಲೆ ಗೌರವ ಏನಾದರೂ ಇಟ್ಟುಕೊಂಡಿದ್ದರೆ, ಈ ಕ್ಷಣದಲ್ಲಿಯೇ ಸಿಎಂ ಕುರ್ಚಿಯನ್ನು ಖಾಲಿ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಗುಡುಗಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
addressedChief MinisterConstitutiondemanddismissSiddaramaiahsingularlythe President
4 FacebookTwitterPinterestEmail
admin

previous post
ದಿನ ಭವಿಷ್ಯ : ಸೋಮವಾರ, 29ಜನವರಿ 2024
next post
ಅರಸರ ಫ್ಲಾಟ್ ಫಾರಂ ಮೇಲೆ ಸಿದ್ದರಾಮಯ್ಯ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ