ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಹಿಂದೂ ವಿರೋಧಿ ಎನ್ನುತ್ತಿದ್ದಾರೆ
ಬೆಂಗಳೂರು: ನಾನೂ ಒಬ್ಬ ಹಿಂದೂ, ಎಲ್ಲಾ ಧರ್ಮಗಳ ಜನರನ್ನೂ ಪ್ರೀತಿಸುತ್ತೇನೆ, ಸಂವಿಧಾನದಲ್ಲಿ ಹೇಳಿರುವಂತೆ ಜಾತ್ಯತೀತತೆ ಎಂದರೆ ಸಹಬಾಳ್ವೆ ಸಹಿಷ್ಣುತೆ, ನಮಗೆ ಅದರಲ್ಲಿ ನಂಬಿಕೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.
ಜಿಎಎಫ್ಎಕ್ಸ್ ಸಮ್ಮಿಟ್ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನುಮಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ. ಬಿಜೆಪಿಯವರು ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದ್ದಾರೆ. ಹನುಮಧ್ವಜ ಹಾರಿಸಲು ನಮ್ಮ ವಿರೋಧವಿಲ್ಲ, ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದಿದ್ದು ಅದನ್ನೇ ಹಾರಿಸಬೇಕು, ಜಿಲ್ಲಾಡಳಿತ ಅದಕ್ಕೆ ಕ್ರಮ ವಹಿಸಿದೆ ಎಂದರು.
ಚುನಾವಣೆ ದೃಷ್ಟಿಯಿಂದ ಹೀಗೆ ಮಾಡುತ್ತಿದ್ದಾರೆ
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯಕ್ಕೆ ಭೇಟಿ ನೀಡಿ ಪ್ರಚೋದನೆ ಯಾಕೆ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ, ಚುನಾವಣೆ ಹತ್ತಿರ ಬರುತ್ತಿದ್ದು, ಅದಕ್ಕಾಗಿ ಈ ರೀತಿ ಮಾಡುತ್ತಿದ್ದಾರೆ.
ಅರಸರ ಫ್ಲಾಟ್ ಫಾರಂ ಮೇಲೆ ಸಿದ್ದರಾಮಯ್ಯ
ಪಂಚಾಯತ್ನವರು ನೀಡಿದ್ದ ಅನುಮತಿಯಂತೆ ನಡೆದುಕೊಂಡಿದ್ದರೆ, ಜಿಲ್ಲಾಡಳಿತ ಮಧ್ಯಪ್ರವೇಶ ಮಾಡುತ್ತಿರಲಿಲ್ಲ.
ಅವರಿಗೆ ನನ್ನ ಬಗ್ಗೆ ಮಾತನಾಡಲು ಬೇರೆನಿದೆ, ಅದಕ್ಕೆ ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಘೋಷಣೆ ಕೂಗುತ್ತಿದ್ದಾರೆ ಎಂದರು.
1 comment
[…] ರಾಜಕೀಯ […]