Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರ

ಕೇಂದ್ರದ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರದ ನೇರ ಸಂಘರ್ಷ: ಫೆಬ್ರವರಿ 7ರಂದು ನವದೆಹಲಿಯಲ್ಲಿ ಭಾರೀ ಪ್ರತಿಭಟನೆಗೆ ಸಿದ್ಧತೆ

by admin February 2, 2024
written by admin February 2, 2024 0 comments 2 minutes read
5FacebookTwitterPinterestEmail
456

ಬಹುತೇಕ ಕರ್ನಾಟಕ ಬರಗಾಲಕ್ಕೆ ತುತ್ತಾಗಿದ್ದರೂ
ಕೇಂದ್ರ ಇದುವರೆಗೂ ಒಂದು ನಯಾಪೈಸೆ ನೀಡಿಲ್ಲ

ಬೆಂಗಳೂರು:ಕೇಂದ್ರ ಸರ್ಕಾರದ ಮಲತಾಯಿ ದೋರಣೆ ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಫೆಬ್ರವರಿ 7ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ.

ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಕ್ಕೆ ಪರಿಹಾರ ನೀಡದಿರುವುದು ಸೇರಿದಂತೆ ಕೇಂದ್ರ ಸರ್ಕಾರ ಎಲ್ಲಾ ಹಂತದಲ್ಲೂ ಕರ್ನಾಟಕವನ್ನು ಕಡೆಗಣಿಸುತ್ತಿದೆ ಎಂದು ಕೇಂದ್ರದ ಗಮನ ಸೆಳೆಯಲು ಒಂದು ದಿನದ ಧರಣಿ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಮುಖ್ಯಮಂತ್ರಿ ಜೊತೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಸಂಪುಟದ ಎಲ್ಲಾ ಸಹೋದ್ಯೋಗಿಗಳು ಹಾಗೂ ಕಾಂಗ್ರೆಸ್‌ನ ಎಲ್ಲಾ ಶಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರಾಜ್ಯದ ಸಂಕಷ್ಟ ರಾಷ್ಟ್ರದ ಗಮನಕ್ಕೆ ತರಲು ಯತ್ನ

ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯವನ್ನು ಇಡೀ ರಾಷ್ಟ್ರದ ಗಮನಕ್ಕೆ ತರಲು ಮುಖ್ಯಮಂತ್ರಿ ಅವರು ಸಜ್ಜಾಗಿದ್ದಾರೆ.

ಕಾಂಗ್ರೆಸ್‌ನ ದೆಹಲಿ ನಾಯಕರು ಇಂದು ಬೆಳಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರನ್ನು ಸಂಪರ್ಕಿಸಿ ಚರ್ಚಿಸಿದ ನಂತರ, ರಾಜ್ಯ ಪ್ರವಾದಲ್ಲಿದ್ದ ಸಿದ್ದರಾಮಯ್ಯ ಅವರು, ಧರಣಿ ಮಾಡುವ ನಿರ್ಧಾರ ಕೈಗೊಂಡಿದ್ದಲ್ಲದೆ, ವಿಷಯವನ್ನು ಎಲ್ಲ ಶಾಸಕರಿಗೂ ಮುಟ್ಟಿಸುವಂತೆ ಸೂಚಿಸಿದರು.

ಕರ್ನಾಟಕದ ಬಹುತೇಕ ಭಾಗ ಬರಗಾಲಕ್ಕೆ ತುತ್ತಾಗಿದ್ದರೂ ಕೇಂದ್ರ ಸರ್ಕಾರ ಇದುವರೆಗೂ ಒಂದು ನಯಾಪೈಸೆಯನ್ನೂ ನೀಡಿಲ್ಲ, ಕೋಟ್ಯಂತರ ರೂ. ಬೆಳೆ ನಷ್ಟವಾಗಿದ್ದು ರೈತರಿಗೂ ಪರಿಹಾರ ಕಲ್ಪಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ವಿಫಲವಾಗಿದೆ.

ಮೇಕೆದಾಟು ಅಣೆಕಟ್ಟೆಗೂ ಮಂಜೂರಾತಿ ನೀಡಿಲ್ಲ

ಕುಡಿಯುವ ನೀರು ಹಾಗೂ ಸಂಕಷ್ಟ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಅನುಕೂಲವಾಗುವಂತೆ ಕೆಆರ್‌ಎಸ್ ಜಲಾಶಯಕ್ಕೆ ಸಮಾನಾಂತರವಾಗಿ ಮೇಕೆದಾಟು ಸಮೀಪ ಅಣೆಕಟ್ಟೆ ನಿರ್ಮಿಸಲು ಇದುವರೆಗೂ ಮಂಜೂರಾತಿ ನೀಡಿಲ್ಲ.

ಹದಿನೈದನೇ ಹಣಕಾಸು ಆಯೋಗ ರಾಜ್ಯಕ್ಕೆ ನಿಗದಿ ಮಾಡಿರುವ ಅನುದಾನದಲ್ಲಿ 5,495 ಕೋಟಿ ರೂ.ಗಳನ್ನು ಇದುವರೆಗೂ ಬಿಡುಗಡೆ ಮಾಡಿಲ್ಲ. ಬೆಂಗಳೂರಿನ ವರ್ತುಲ ರಸ್ತೆಗೆ ನೀಡಬೇಕಿದ್ದ ಆರು ಸಾವಿರ ಕೋಟಿ ರೂ.ಗಳನ್ನು ನೀಡಿಲ್ಲ.

ಜನರ ಮುಂದೆ ಭರವಸೆಯ ಮಹಾಪೂರವನ್ನೇ ಹರಿಸಿರುವ ಕೇಂದ್ರ, ನಂತರ ಯಾವುದೇ ಯೋಜನೆಗಳಿಗೆ ಮಂಜೂರಾತಿ ಮತ್ತು ಆರ್ಥಿಕ ನೆರವು ನೀಡಿಲ್ಲ.

ಭದ್ರಾ ಮೇಲ್ದಂಡೆ ಯೋಜನೆಗೆ ನೀಡಬೇಕಾದ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿಲ್ಲ, ರಾಜ್ಯದಿಂದ ಸಂಗ್ರಹವಾಗುತ್ತಿರುವ ಜಿ.ಎಸ್.ಟಿ ಪಾಲಿನ ವಿಷಯದಲ್ಲೂ ಅನ್ಯಾಯವಾಗುತ್ತಿದ್ದು, ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ರಾಜ್ಯಕ್ಕೆ ಹೆಚ್ಚುವರಿಯಾಗಿ ನೀಡಿದ್ದ ಒಂದು ಸಾವಿರ ಕೋಟಿ ರೂ.ಗಳನ್ನು ಈಗ ಹಿಡಿದುಕೊಂಡಿದೆ.

ಕೇಂದ್ರದ ಯೋಜನೆಗಳಿಗೆ ಪಾಲನ್ನು ಕಡಿಮೆ ಮಾಡಲಾಗಿದೆ

ರೈತರ ಕೃಷಿ ಉತ್ಪನ್ನಗಳನ್ನು ಖರೀದಿಸಲು ನೀಡುವ ಬೆಂಬಲ ಬೆಲೆ ಯೋಜನೆಯಡಿ 1,800 ಕೋಟಿ ರೂ.ಗಳನ್ನು ಇದುವರೆಗೆ ನೀಡಿಲ್ಲ, ಇದೇ ರೀತಿ ರಾಜ್ಯದಲ್ಲಿ ಜಾರಿಯಾಗುವ ಕೇಂದ್ರದ ಯೋಜನೆಗಳಿಗೆ ನೀಡುವ ಪಾಲನ್ನು ಕಡಿಮೆ ಮಾಡಲಾಗಿದ್ದು ಶೇಕಡಾ 10 ಮತ್ತು 25ಕ್ಕೆ ಇಳಿಸಲಾಗಿದೆ.

ಕೇಂದ್ರದ ಪ್ರಾಯೋಜಿತ ಯೋಜನೆಗಳಿಗೆ ಈ ಮೊದಲು ಶೇ. 75ರಷ್ಟು ಹಣವನ್ನು ನೀಡಲಾಗುತ್ತಿತ್ತು, ಉಳಿದ ಶೇ.25ನ್ನು ರಾಜ್ಯ ಸರ್ಕಾರಗಳು ಭರಿಸುತ್ತಿದ್ದವು. ನಂತರದ ದಿನಗಳಲ್ಲಿ ಶೇ.50 ಕ್ಕೆ ನಿಂತಿತು, ಇದೀಗ ಕೇವಲ ಶೇ.10 ರಷ್ಟು ಮಾತ್ರ ಭರಿಸುತ್ತಿದೆ, ಉಳಿದದ್ದನ್ನು ರಾಜ್ಯ ಭರಿಸಬೇಕಿದೆ.

ಸಿಬಿಐ, ಐಟಿ, ಇಡಿ, ಬಿಜೆಪಿ ಪಕ್ಷದ ಅಂಗ ಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ – ಸಿದ್ದರಾಮಯ್ಯ

ಕೆಲವು ವಿಶೇಷ ಯೋಜನೆಗಳಿಗೆ ಮಾತ್ರ ಕೇಂದ್ರ ಶೇ.25 ರಷ್ಟು ಅನುದಾನವನ್ನು ನೀಡುತ್ತದೆ, ಉಳಿದಂತೆ ಎಲ್ಲಾ ಯೋಜನೆಗಳಿಗೆ ರಾಜ್ಯವೇ ಹಣ ಹೊಂದಿಸಬೇಕಿದೆ.

ಕೊರತೆ ಬಜೆಟ್ ಸರಿದೂಗಿಸಲು ಕೇರಳಕ್ಕೆ 15 ಸಾವಿರ ಕೋಟಿ ರೂ. ನೀಡಿರುವ ಕೇಂದ್ರ, ಕರ್ನಾಟಕದಲ್ಲಿ ಕೊರತೆ ಬಜೆಟ್ ಮಂಡನೆಯಾಗಿದ್ದರೂ ನೆರವು ನೀಡುವುದಿಲ್ಲ ಎಂಬುದು ಸೇರಿದಂತೆ ಹಲವು ವಿಷಯಗಳನ್ನು ರಾಷ್ಟ್ರದ ಗಮನಕ್ಕೆ ತರುವ ಮೂಲಕ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ತಂಡ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.

ಪ್ರತಿಭಟನೆ ಮೂಲಕ ಬಿಜೆಪಿಗೆ ಶಾಕ್ ನೀಡುವುದೇ ಗುರಿ

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾದ ನಂತರ ಅದರ ಅಲೆಯಲ್ಲಿ ತೇಲುತ್ತಿರುವ ಬಿಜೆಪಿಗೆ ಈ ಪ್ರತಿಭಟನೆಯ ಮೂಲಕ ಶಾಕ್ ನೀಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೆಕ್ಕಾಚಾರ.

ಭಾವನಾತ್ಮಕ ವಿಷಯಗಳನ್ನು ಹಿಡಿದುಕೊಂಡು ರಾಜಕೀಯ ಮಾಡುತ್ತಿರುವ ಕೇಂದ್ರದ ಬಿಜೆಪಿ ಸರ್ಕಾರ, ರಾಜ್ಯಕ್ಕೆ ಮಾಡಿರುವ ಅನ್ಯಾಯವನ್ನು ಎಳೆ ಎಳೆಯಾಗಿ ದೇಶಕ್ಕೆ ವಿವರಿಸುವುದು ಸಿದ್ದರಾಮಯ್ಯ ಅವರ ಯೋಚನೆ.

ನವದೆಹಲಿಯಲ್ಲಿ ಫೆಬ್ರವರಿ 7 ರಂದು ನಡೆಸಲಿರುವ ಪ್ರತಿಭಟನೆಯಲ್ಲಿ ತಾವು ಮತ್ತು ತಮ್ಮ ಸಂಪುಟದ ಸದಸ್ಯರಲ್ಲದೆ ರಾಜ್ಯ ಕಾಂಗ್ರೆಸ್ ಪಕ್ಷದ ಶಾಸಕರೂ ಭಾಗವಹಿಸುವಂತೆ ಅವರು ಸೂಚನೆ ನೀಡಿದ್ದಾರೆ.

ಕೇಂದ್ರದ ಅನ್ಯಾಯದ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರೀವಾಲ್ ಅವರ ರೀತಿಯಲ್ಲೇ ಬೀದಿಗಿಳಿದು ಹೋರಾಟಕ್ಕಿಳಿಯುವ ಮೂಲಕ ದೇಶದ ಗಮನ ಸೆಳೆಯಬಹುದು, ಆ ಮೂಲಕ ಬಿಜೆಪಿಗೆ ತಿರುಗೇಟು ನೀಡಬಹುದು ಎಂಬುದು ಸಿದ್ದರಾಮಯ್ಯ ಅವರ ಆಲೋಚನೆಯಾಗಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres govt. protest aganist centerdk shivakumarprotest in delhiSiddaramaiahto get attention of the nation
5 FacebookTwitterPinterestEmail
admin

previous post
ಭಾರತ್ ಜೋಡೋ ಯಾತ್ರೆ ಮಾಡಿದವರೇ, ಭಾರತ್ ತೋಡೋ ಎನ್ನುತ್ತಾರೆ: ಇಂತಹವರಿಂದ ಇನ್ನೇನು ನಿರೀಕ್ಷೆ ಸಾಧ್ಯ – ಹೆಚ್.ಡಿ.ಕುಮಾರಸ್ವಾಮಿ
next post
ದಿನ ಭವಿಷ್ಯ : ಶನಿವಾರ, 03 ಫೆಬ್ರವರಿ 2024

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ