Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಹಣಕಾಸಿನ ಸಂಕಷ್ಟವೇ ಪ್ರತಿಪಕ್ಷಗಳ ಅಸ್ತ್ರ

by admin February 10, 2024
written by admin February 10, 2024 0 comments 2 minutes read
4FacebookTwitterPinterestEmail
145

ಬಜೆಟ್ ಅಧಿವೇಶನ: ಆಡಳಿತ-ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿಗೆ ವೇದಿಕೆ

ಬೆಂಗಳೂರು: ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಫೆಬ್ರವರಿ 12 ರ ಸೋಮವಾರ ಆರಂಭವಾಗಲಿದ್ದು ಆಡಳಿತ-ಪ್ರತಿಪಕ್ಷಗಳ ನಡುವಿನ ಜಿದ್ದಾಜಿದ್ದಿಗೆ ವೇದಿಕೆಯಾಗುವುದು ನಿಶ್ಚಿತವಾಗಿದೆ.

ಮುಂಬರುವ ಲೋಕಸಬಾ ಚುನಾವಣೆಗೆ ಪೂರ್ವ ತಯಾರಿ ಮಾಡಿಕೊಳ್ಳುತ್ತಿರುವ ಆಡಳಿತ-ಪ್ರತಿ ಪಕ್ಷಗಳಿಗೆ ವಿಧಾನಮಂಡಲ ಅಧಿವೇಶನ ಮತ್ತಷ್ಟು ಅನುಕೂಲ ಒದಗಿಸಿಕೊಡಲಿದ್ದು,ಇದನ್ನು ದೊಡ್ಡ ಮಟ್ಟದಲ್ಲಿ ಎನ್ ಕ್ಯಾಶ್ ಮಾಡಿಕೊಳ್ಳಲು ಅವು ಯತ್ನಿಸಲಿವೆ.

ದೇಶ ಒಗ್ಗೂಡಿಸಲು  ಶ್ರೀರಾಮದೇವರ ಆಶೀರ್ವಾದವಿದೆ : ಹೆಚ್.ಡಿ.ದೇವೇಗೌಡರು

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸರ್ಕಾರ ಎದುರಿಸುತ್ತಿರುವ ತೀವ್ರ ಹಣಕಾಸಿನ ಸಂಕಷ್ಟವೇ ಪ್ರತಿಪಕ್ಷಗಳ ಪಾಲಿಗೆ ಪ್ರಮುಖ ಅಸ್ತ್ರವಾಗಲಿದ್ದು,ಇದರಿಂದ ಅಭಿವೃದ್ಧಿ ಹೇಗೆ ಕುಂಠಿತವಾಗಿದೆ ಎಂದು ವಿವರಿಸಲು ಅವು ಅತ್ಯಾತುರದಿಂದ ಕಾದಿವೆ.

ರಾಜ್ಯದ ವಿಧಾನಸಭಾ ಕ್ಷೇತ್ರಗಳಿಗೆ ಸೂಕ್ತ ಪ್ರಮಾಣದ ಅನುದಾನ ದೊರೆಯದೆ ಇರುವುದು, ಕೃಷಿ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳು ಸಂಕಷ್ಟಕ್ಕೆ ಸಿಲುಕಿರುವುದು ಸೇರಿದಂತೆ ಹಲವು ವಿಷಯಗಳು ಪ್ರತಿಪಕ್ಷಗಳ ಪಾಲಿಗೆ ಪ್ರಮುಖ ಅಸ್ತ್ರವಾಗಿವೆ. ಈ ಅಸ್ತ್ರವನ್ನು ಪರಿಣಾಮಕಾರಿಯಾಗಿ ಪ್ರಯೋಗಿಸಲು ಅವು ಸಜ್ಜಾಗಿವೆ.

ಪ್ರತಿಧ್ವನಿಸಲಿದೆ ಬರ ಪರಿಹಾರದ ವಿಷಯ

ರಾಜ್ಯದಲ್ಲಿ ಬರಗಾಲದ ಛಾಯೆ ಆವರಿಸುತ್ತಿದ್ದು ದಿನದಿಂದ ದಿನಕ್ಕೆ ಜನ ಸಮಸ್ಯೆಗಳಿಗೆ ಸಿಲುಕುತ್ತಿದ್ದರೂ ಸರ್ಕಾರ ಸಮರ್ಪಕ ಪ್ರಮಾಣದ ಪರಿಹಾರ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂಬುದು ಪ್ರತಿಪಕ್ಷಗಳ ಆರೋಪ.

ಕುಡಿಯುವ ನೀರಿಗೆ ರಾಜ್ಯದ ಹಲವು ಭಾಗಗಳಲ್ಲಿ ಅದಾಗಲೇ ಕೊರತೆ ಕಾಣಿಸಿಕೊಂಡಿದ್ದು, ಜಾನುವಾರುಗಳ ಮೇವಿಗೆ ಕೊರತೆ ಎದುರಾಗುವ ಎಲ್ಲ ಸಾಧ್ಯತೆಗಳು ಸ್ಪಷ್ಟವಾಗಿವೆ.

ಆದರೆ, ಈ ವಿಷಯದಲ್ಲಿ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳು ಚೇತೋಹಾರಿಯಾಗಿಲ್ಲ. ಈಗಲೇ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಪರದಾಡುತ್ತಿದ್ದು, ಏಪ್ರಿಲ್, ಮೇ ತಿಂಗಳ ವೇಳೆಗೆ ಬಿಗಡಾಯಿಸಲಿರುವ ಬರದ ಹೊಡೆತವನ್ನು ಹೇಗೆ ಎದುರಿಸಲಿದೆ?ಎಂಬುದು ಪ್ರತಿಪಕ್ಷಗಳ ಪ್ರಶ್ನೆ.

ರಾಜ್ಯದ ವಿದ್ಯುತ್ ಬೇಡಿಕೆ 16000 ಮೆಗಾವ್ಯಾಟ್ ಗಿಂತಲೂ ಅಧಿಕ

ಇನ್ನು ವಿದ್ಯುತ್ ಪರಿಸ್ಥಿತಿಯೂ ದಿನದಿಂದ ದಿನಕ್ಕೆ ಹದಗೆಡುತ್ತಿದ್ದು ರಾಜ್ಯದ ವಿದ್ಯುತ್ ಬೇಡಿಕೆ ಪ್ರಮಾಣ 16000 ಮೆಗಾವ್ಯಾಟ್ ಗಳಿಗಿಂತಲೂ ಹೆಚ್ಚಾಗಿದೆ. ಆದರೆ ಉತ್ಪಾದನೆಯ ಪ್ರಮಾಣ ಗಣನೀಯವಾಗಿ ಕುಸಿದಿದ್ದು, ಸಧ್ಯದ ಪರಿಸ್ಥಿತಿ ನೋಡಿದರೆ ಸಿದ್ಧರಾಮಯ್ಯ ಅವರ ಸರ್ಕಾರ ಜನರಿಗೆ ಕತ್ತಲೆ ಭಾಗ್ಯ ಕರುಣಿಸುವುದು ಗ್ಯಾರಂಟಿ ಎಂಬುದು ಪ್ರತಿಪಕ್ಷಗಳ ಆರೋಪ.

ಇನ್ನು ಜನರಿಗೆ ಅಗತ್ಯವಾದ ಜೀವನಾವಶ್ಯಕ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿದ್ದು ಇದಕ್ಕೆ ಕಡಿವಾಣ ಹಾಕುವ ಮಾರ್ಗೋಪಾಯಗಳೇ ಸರ್ಕಾರಕ್ಕೆ ಕಾಣಿಸದಂತಾಗಿದೆ.ಆ ಮೂಲಕ ಜನ ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವಂತಾಗಿದೆ.

ಬಿಜೆಪಿ-ಜೆಡಿಎಸ್ ಬಲ ಪ್ರದರ್ಶನ

ಒಂದು ಕಡೆಯಿಂದ ಆವರಿಸುತ್ತಿರುವ ಬರಗಾಲ, ಮತ್ತೊಂದು ಕಡೆಯಿಂದ ಜನ ಅನಿವಾರ್ಯವಾಗಿ ದುಬಾರಿ ಜೀವನಕ್ಕೆ ಹೊಂದಿಕೊಳ್ಳಲಾಗದೆ ಪರದಾಡುತ್ತಿರುವುದು ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳಿಗೆ ಅಸ್ತ್ರವಾಗುವುದು ನಿಶ್ಚಿತ.

ಸರ್ಕಾರದ ಗ್ಯಾರಂಟಿ ಯೋಜನೆಗಳ ಜಂಗೀಕುಸ್ತಿ

ಈ ಮಧ್ಯೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸರ್ಕಾರದ ಬೊಕ್ಕಸವನ್ನು ಬರಿದು ಮಾಡುತ್ತಿರುವ ಕುರಿತೂ ಪ್ರತಿಪಕ್ಷಗಳು ಧ್ವನಿ ಎತ್ತಲಿದ್ದು, ಒಟ್ಟಿನಲ್ಲಿ ಈ ಬಾರಿಯ ವಿಧಾನಮಂಡಲ ಅಧಿವೇಶನ ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆಯಾಗುವುದು ನಿಶ್ಚಿತ ಎನ್ನಲೇಬೇಕು.

ಸರ್ಕಾರೀ ಕಛೇರಿಗಳಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ ಹೇಗೆ ಜನರ ಪಾಲಿಗೆ ಹಿಂಸೆಯಾಗಿ ಪರಿಣಮಿಸಿದೆ ಎಂಬುದನ್ನು ಹೇಳಲಿರುವ ಪ್ರತಿಪಕ್ಷಗಳು ಈ ವಿಷಯದಲ್ಲಿ ದೊಡ್ಡ ರಾದ್ಧಾಂತವೆಬ್ಬಿಸುವ ಸಾಧ್ಯತೆಗಳು ಸ್ಪಷ್ಟವಾಗಿವೆ.

ತೆಂಗು ಸೇರಿದಂತೆ ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಂಬಲ ಬೆಲೆ ಸಿಗದೆ ಇರುವುದು ಕೂಡಾ ಆಡಳಿತ ಪಕ್ಷವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳಿಗೆ ಪ್ರಮುಖ ಅಸ್ತ್ರವಾಗಿ ದಕ್ಕಿದೆ ಎನ್ನಲೇಬೇಕು.

ರೈತ ವಿರೋಧಿ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ

ಈ ಮಧ್ಯೆ ತನ್ನ ವಿರುದ್ಧ ಎರಗಿ ಬೀಳಲಿರುವ ಪ್ರತಿಪಕ್ಷಗಳ ವಿರುದ್ಧ ಆಡಳಿತ ಪಕ್ಷವೂ ತಿರುಗಿ ಬೀಳಲಿದ್ದು,ಕೇಂದ್ರ ಸರ್ಕಾರದಿಂದ ಸೂಕ್ತ ನೆರವು ದೊರೆಯದೆ ಇರುವುದು ಸೇರಿದಂತೆ ಹಲವು ವಿಷಯಗಳು ಪ್ರಮುಖವಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಳ್ಳಲು ಅನುಕೂಲವಾಗಲಿದೆ.

ರಾಜ್ಯದಿಂದ ವಿವಿಧ ತೆರಿಗೆಗಳ ಬಾಬ್ತಿನಲ್ಲಿ ಕೇಂದ್ರ ಸರ್ಕಾರ ವರ್ಷಂಪ್ರತಿ ನಾಲ್ಕು ಲಕ್ಷ ಕೋಟಿ ರೂಪಾಯಿಗಳಿಗೂ ಅಧಿಕ ಹಣವನ್ನು ಸಂಗ್ರಹಿಸುತ್ತದೆ.ಆದರೆ ಇಷ್ಟು ಹಣ ಪಡೆದರೂ ಕರ್ನಾಟಕಕ್ಕೆ ನೆಪ ಮಾತ್ರದ ಅನುದಾನ ಬಿಡುಗಡೆ ಮಾಡಿ ಕೈತೊಳೆದುಕೊಳ್ಳುತ್ತಿದೆ.

ಬರಗಾಲ ಸೇರಿದಂತೆ ಕೇಂದ್ರದಿಂದ ಸೂಕ್ತ ಅನುದಾನ ಕೊಡಿ,ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸಲು ಶಕ್ತಿ ನೀಡಿ.ಈ ವಿಷಯದಲ್ಲಿ ರಾಜ್ಯ ಬಿಜೆಪಿಯವರು ಕೇಂದ್ರದ ಮೇಲೆ ಒತ್ತಡ ಹೇರಲಿ ಎಂಬುದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮಾತು.

ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ

ಪ್ರಧಾನಿ ಮೋದಿಯ ಮುಂದೆ ರಾಜ್ಯದ ಬಿಜೆಪಿ ಸಂಸದರು ಕೋಲೆ ಬಸವನಿದ್ದಂತೆ ಎಂದು ಈಗಾಗಲೇ ತರಾಟೆಗೆ ತೆಗೆದುಕೊಂಡಿರುವ ಪ್ರಧಾನಿ ನರೇಂದ್ರಮೋದಿ, ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿರುವ ಹಣದ ಪಾಲನ್ನು ರಾಜ್ಯಕ್ಕೆ ಬಿಡುಗಡೆ ಮಾಡಲು ಯತ್ನಿಸಿ ಎಂದು ತಿರುಗೇಟು ನೀಡುವುದು ಖಚಿತ.

ರಾಜ್ಯದಲ್ಲಿ 6,407 ಕೋಟಿ ರೂ. ಹೂಡಿಕೆ: 24,846 ಜನರಿಗೆ ಉದ್ಯೋಗಾವಕಾಶ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
betweenBudget sessionconflictFinancial distressoppositionplatformruling-oppositionweapon
4 FacebookTwitterPinterestEmail
admin

previous post
ದೇಶ ಒಗ್ಗೂಡಿಸಲು  ಶ್ರೀರಾಮದೇವರ ಆಶೀರ್ವಾದವಿದೆ : ಹೆಚ್.ಡಿ.ದೇವೇಗೌಡರು
next post
ದಿನ ಭವಿಷ್ಯ : ಭಾನುವಾರ, 11 ಫೆಬ್ರವರಿ 2024

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ