ಕೇಂದ್ರ ರಾಜಕಾರಣದಿಂದ ತಾವು ದೂರ
ಬೆಂಗಳೂರು:ಲೋಕಸಭಾ ಚುನಾವಣೆಗೆ ಸ್ಪರ್ಧೆ ಇಲ್ಲ, ಸಚಿವನಾಗಿಯೇ ಮುಂದುವರೆಯುತ್ತೇನೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣಲ್ಲಿ ಏರ್ಪಡಿಸಿದ್ದ ಭಾರತ ಸಂವಿಧಾನ ಹಾಗೂ ರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆಗೂಡಿ ಸುದ್ದಿಗೋಷ್ಟಿ ನಡೆಸಿದ ಸಂದರ್ಭದಲ್ಲಿ, ಕೇಂದ್ರ ರಾಜಕಾರಣದಿಂದ ತಾವು ದೂರ ಎಂದರು.
ನನಗೇನೂ ಮಾಹಿತಿ ಇಲ್ಲ
ಚುನಾವಣಾ ಕಣಕ್ಕಿಳಿಯುವುದಿಲ್ಲ, ಪಕ್ಷದ ವರಿಷ್ಠರು ಯಾರನ್ನೇ ಅಭ್ಯರ್ಥಿಯನ್ನಾಗಿ ಮಾಡಿದರೂ ಅವರ ಗೆಲುವಿಗೆ ಶ್ರಮಿಸುತ್ತೇನೆ. ವರಿಷ್ಠರು ಈ ಬಗ್ಗೆ ನನಗೇನೂ ಮಾಹಿತಿ ನೀಡಿಲ್ಲ, ಆದರೂ ನನ್ನ ನಿರ್ಧಾರವನ್ನು ಮೊದಲೇ ತಿಳಿಸುತ್ತಿದ್ದೇನೆ ಎಂದರು.
ಮಹದೇವಪ್ಪ ಅವರ ಹೇಳಿಕೆಗೆ ಸ್ಥಳದಲ್ಲೇ ಉಪಸ್ಥಿತರಿದ್ದ ಮುಖ್ಯಮಂತ್ರಿ ಅವರು ಯಾವುದೇ ರೀತಿಯ ಪ್ರತಿಕ್ರಿಯೆ ತೋರಲಿಲ್ಲ,
ಮಹದೇವಪ್ಪ ಅವರನ್ನು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದಿಂದ ಕಣಕ್ಕಿಳಿಸಬೇಕೆಂದು ಕೆಪಿಸಿಸಿ ಆಸಕ್ತಿ ತೋರಿದೆ.
ಇವರೂ ಸೇರಿದಂತೆ ಕೆಲವು ಸಚಿವರ ಬಗ್ಗೆ ಎಐಸಿಸಿಗೆ ಮಾಹಿತಿ ನೀಡಿರುವ ಕೆಪಿಸಿಸಿ, ಹೆಚ್ಚು ಸ್ಥಾನಗಳನ್ನು ಗೆಲ್ಲುವ ದೃಷ್ಟಿಯಿಂದ ಕೆಲವು ಸಚಿವರನ್ನು ಕಣಕ್ಕಿಳಿಸಬೇಕೆಂಬ ಅಭಿಪ್ರಾಯ ನೀಡಿದೆ.