ಎನ್ ಡಿಎ ಎರಡನೇ ಅಭ್ಯರ್ಥಿ ಗೆಲುವಿಗೆ ತಂತ್ರಗಾರಿಕೆ
ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಪರಾಭವಗೊಳಿಸಿ ಎನ್ ಡಿಎ ಕೂಟದ ಎರಡನೇ ಅಭ್ಯರ್ಥಿ ಗೆಲುವಿಗೆ ತಂತ್ರಗಾರಿಕೆ ರೂಪಿಸುವ ಸಂಬಂಧ ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಚರ್ಚೆ ಮಾಡಿದ್ದಾರೆ.
ಕೇಂದ್ರ ಗೃಹ ಸಚಿವರ ತುರ್ತು ಕರೆಯ ಮೇರೆಗೆ ಇಂದು ಸಂಜೆ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ರಾಜ್ಯಸಭೆಯ ಎನ್ ಡಿಎ ಅಭ್ಯರ್ಥಿ ಕುಪೇಂದ್ರರೆಡ್ಡಿ ಅವರೊಂದಿಗೆ ದೆಹಲಿಗೆ ತೆರಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆ, ಜೆಡಿಎಸ್-ಬಿಜೆಪಿ ಮೈತ್ರಿ, ಎನ್ ಡಿಎ ಕೂಟದ ಕರ್ನಾಟಕದ ಅಭ್ಯರ್ಥಿಗಳ ಆಯ್ಕೆ, ಅಷ್ಟೇ ಅಲ್ಲದೆ, ಎಲ್ಲದಕ್ಕೂ ಮಿಗಿಲಾಗಿ ಕಾಂಗ್ರೆಸ್ ಚುನಾವಣಾ ಸಿದ್ಧತೆ ಬಗ್ಗೆ ಚರ್ಚೆ ನಡೆಸಿದ್ದಾರೆ.
ಡಾ. ಮಂಜುನಾಥ್ ವಿರುದ್ಧ ತನಿಖಾಸ್ತ್ರ?
ಚುನಾವಣಾ ಪೂರ್ವ ಸಮೀಕ್ಷಾ ವರದಿ ಆದರಿಸಿ ಲೋಕಸಭಾ ಕ್ಷೇತ್ರ ಹಂಚಿಕೆ ಹಾಗೂ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿಕೊಂಡಿದ್ದು, ಅಧಿಕೃತ ಪ್ರಕಟಣೆ ಮಾತ್ರ ಬಾಕಿ ಉಳಿಸಿಕೊಂಡಿದ್ದಾರೆ.
ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಎನ್ ಡಿಎ ಎರಡನೇ ಅಭ್ಯರ್ಥಿಯನ್ನು ರಾಜ್ಯಸಭೆಗೆ ಚುನಾಯಿತರಾಗುವಂತೆ ಮಾಡಿದರೆ, ಕಾಂಗ್ರೆಸ್ ನ ನೈತಿಕ ಶಕ್ತಿ ಕುಗ್ಗಲಿದೆ. ಜತೆಗೆ ಆ ಪಕ್ಷದ ಶಾಸಕರು ಮುಂದಿನ ರಾಜಕೀಯ ಭವಿಷ್ಯದ ಬಗ್ಗೆಯೂ ಚಿಂತನೆ ಮಾಡಲಿದ್ದಾರೆ.
ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಸೋಲನ್ನು ಬಿಜೆಪಿ ವರಿಷ್ಠರು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದಾರೆ. ರಾಜ್ಯ ಸಭಾ ಚುನಾವಣೆಯಲ್ಲಿ ಇದೇ ಫಲಿತಾಂಶ ಮರುಕಳಿಸಿದರೆ, ಎನ್ ಡಿಎ ಕೂಟದ ಮೇಲೆ ಪರಿಣಾಮ ಬೀರಲಿದೆ ಎಂಬ ಭಾವನೆ ಬಂದಿದೆ.
ಮಾಡು ಇಲ್ಲವೆ ಮಡಿ ಎಂಬಂತೆ ರಾಜ್ಯಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿ ಗೆಲುವಿಗೆ ಶತಾಯ ಗತಾಯ ಪ್ರಯತ್ನಿಸಬೇಕು ಎಂಬ ನಿರ್ಧಾರಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಉಭಯ ನಾಯಕರ ನಡುವೆ ಚರ್ಚೆ ನಡೆದಿದೆ.
ನಾಡಗೀತೆ ಸುತ್ತೋಲೆ ಫಜೀತಿಗೆ ಸಲುಕಿದ ಸರ್ಕಾರ
ಅಮಿತ್ ಷಾ ಅವರು ಕುಮಾರಸ್ವಾಮಿ ಅವರಿಂದ ರಾಜಕೀಯ ವಿದ್ಯಾಮಾನ ಸೇರಿದಂತೆ ರಾಜ್ಯಕ್ಕೆ ಸಂಬಂಧಿಸಿದ ಹಲವು ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿಯವರು ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಸದನ ಒಳಗೆ ಹಾಗೂ ಹೊರಗೆ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ. ಅದೇ ಧಾಟಿಯಲ್ಲಿ ಪ್ರತ್ಯುತ್ತರ ನೀಡದ ರಾಜ್ಯ ಬಿಜೆಪಿ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಹಾಗೂ ಜೆಡಿಎಸ್ ನ ಕೆಲವು ಶಾಸಕರನ್ನು ಸೆಳೆಯಲು ನಡೆಸುತ್ತಿರುವ ಯತ್ನ ಮತ್ತು ಅದನ್ನು ವಿಫಲಗೊಳಿಸುವ ವಿಚಾರದ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಅಸಮಾಧಾನವಿರುವ ಆಡಳಿತ ಪಕ್ಷದ ಕಾಂಗ್ರೆಸ್ ನ ಶಾಸಕರ ಪಟ್ಟಿ ಕೇಂದ್ರ ಗೃಹ ಸಚಿವರ ಬಳಿ ಇದ್ದು, ಅದರ ಬಗ್ಗೆ ಕುಮಾರಸ್ವಾಮಿ ಅವರಿಂದ ವಿವರಣೆ ಪಡೆದುಕೊಂಡಿದ್ದಾರೆ.