Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಬೇಸಾಯಕ್ಕೆ ಮಾತ್ರ ನೀರು

by admin February 23, 2024
written by admin February 23, 2024 1 comment 1 minutes read
1FacebookTwitterPinterestEmail
171

ಜಲಸಂಪನ್ಮೂಲ ಇಲಾಖೆಯಿಂದ ಹೊಸ ಯೋಜನೆ ಜಾರಿ

ಬೆಂಗಳೂರು: ಜಮೀನಿದ್ದು ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವವರಿಗೆ ಮಾತ್ರ ನೀರು ಒದಗಿಸುವ ಹೊಸ ಯೋಜನೆಯನ್ನು ಜಾರಿಗೊಳಿಸುವುದಾಗಿ ಜಲಸಂಪನ್ಮೂಲ ಖಾತೆ ಹೊಂದಿರುವ ಉಪ ಮುಖ್ಯಮಂತ್ರಿ  ಡಿ.ಕೆ. ಶಿವಕುಮಾರ್ ವಿಧಾನ ಪರಿಷತ್ತನಲ್ಲಿ ಘೋಷಿಸಿದ್ದಾರೆ.

ಪ್ರಶ್ನೋತ್ತರ ವೇಳೆಯಲ್ಲಿ ಹಲವು ಸದಸ್ಯರ ಪ್ರಸ್ತಾವಗಳಿಗೆ ಉತ್ತರಿಸಿದ ಸಚಿವರು, ಮಧ್ಯ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ಹನಿ ನೀರಾವರಿ ಯೋಜನೆಯನ್ನು ಕರ್ನಾಟಕದಲ್ಲೂ ಅನುಷ್ಟಾನಗೊಳಿಸಲಾಗುವುದು ಎಂದರು.

ನದಿ, ಕೆರೆ ಮೂಲಗಳಿಂದ ಜಮೀನುಗಳಿಗೆ ನೀರು ಹರಿಸಲಾಗುತ್ತದೆ. ಕೃಷಿಕರು ಇದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದಿರುವುದರಿಂದ ನೀರು ಪೋಲಾಗುತ್ತಿದೆ. ಇದನ್ನು ತಪ್ಪಿಸಲು ರೈತರ ಜಮೀನುಗಳಿಗೆ ನೇರವಾಗಿ ಕೊಳವೆಗಳನ್ನು ಅಳವಡಿಸಿ, ನೀರು ಪೂರೈಸಲಾಗುವುದು.

ಮುಖ್ಯಮಂತ್ರಿ ಅವರಿಗೆ ಅನಾರೋಗ್ಯ

ಇಲಾಖೆ ಕೇವಲ ಜಮೀನಿನ ಒಂದು ಭಾಗಕ್ಕೆ ಕೊಳವೆ ಅಳವಡಿಕೆ ಮಾಡಲಿದೆ. ಕೃಷಿ ಮಾಡುವ ರೈತರು ಅಲ್ಲಿಂದ ತಮ್ಮ ಹೊಲಕ್ಕೆ ಡ್ರಿಪ್ ಯೋಜನೆ ಮೂಲಕ ಅಥವಾ ಕೊಳವೆಗಳನ್ನು ವಿಸ್ತರಿಸಿಕೊಂಡು ನೀರು ಪಡೆಯಬೇಕು.

ಒಂದು ವೇಳೆ ರೈತ ತನ್ನ ಭೂಮಿಯಲ್ಲಿ ಆ ಸಾಲಿನಲ್ಲಿ ಬೆಳೆ ತೆಗೆಯದಿದ್ದರೆ ನೀರಿನ ಕೊಳವೆಯನ್ನು ಸ್ಥಗಿತಗೊಳಿಸಬೇಕು.  ಎಲ್ಲ ತೆರನಾದ ಕೃಷಿ ಚಟುವಟಿಕೆಗೆ ರೈತರು ಡ್ರಿಪ್ ವ್ಯವಸ್ಥೆ ಮಾಡಿಕೊಂಡರೆ ಬಳಕೆಯಲ್ಲಿ ಶೇ.50ರಷ್ಟು ನೀರನ್ನು ಉಳಿಸಲು ಸಾಧ್ಯ.

ನದಿ ಪಾತ್ರದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆ

ಮಧ್ಯ ಪ್ರದೇಶ ಹಾಗೂ ರಾಜಸ್ತಾನದ ಕೆಲವು ಭಾಗಗಳಲ್ಲಿ ಈ ಯೋಜನೆ ಯಶಸ್ವಿಯಾಗಿದ್ದು, ತಾವೇ ಖುದ್ದಾಗಿ ಅಲ್ಲಿ ಅಧ್ಯಯನ ನಡೆಸಿ, ಕರ್ನಾಟಕದಲ್ಲೂ ಯೋಜನೆ ಜಾರಿ ಮಾಡುವುದಾಗಿ ತಿಳಿಸಿದರು.

ಮುಂದಿನ ದಿನಗಳಲ್ಲಿ ನದಿ ಪಾತ್ರದಿಂದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಹೆಚ್ಚು ಒತ್ತು ನೀಡಲಾಗುವುದು.

ಮಳೆಗಾಲದಲ್ಲೇ ಇಂತಹ ಕಾರ್ಯಕ್ರಮ ಕೈಗೆತ್ತಿಕೊಂಡರೆ, ಹೆಚ್ಚುವರಿಯಾಗಿ ನೀರು ಸಮುದ್ರಕ್ಕೆ ಹರಿದು ಹೋಗುವುದನ್ನು ತಪ್ಪಿಸಬಹುದು ಹಾಗೂ ಅಂತರ್ಜಲ ಹೆಚ್ಚಳಕ್ಕೂ ಸಹಕಾರಿಯಾಗುತ್ತದೆ ಎಂದರು.

ಈಗಾಗಲೇ ಕೇಂದ್ರ ಮತ್ತು ರಾಜ್ಯದ ವಿವಿಧ ಯೋಜನೆಗಳ ಮೂಲಕ ಕೆರೆ ತುಂಬಿಸುವ ಕಾರ್ಯ ನಡೆದಿದೆ. ಬಜೆಟ್‌ನಲ್ಲಿ ಇಲಾಖೆಗೆ 4 ಸಾವಿರ ಕೋಟಿ ರೂ. ಕಡಿತ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಹಣಕಾಸಿನ ಸಾಧ್ಯತೆ ನೋಡಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುತ್ತೇವೆ.

ಜಲಸಂಪನ್ಮೂಲ ಇಲಾಖೆಯಲ್ಲಿ 1.25 ಲಕ್ಷ ಕೋಟಿ ರೂ.ನಷ್ಟು ಕಾಮಗಾರಿಗಳು

ನಮ್ಮ ಇಲಾಖೆಯಲ್ಲಿ ಈಗಾಗಲೇ 1.25 ಲಕ್ಷ ಕೋಟಿ ರೂ.ನಷ್ಟು ಕಾಮಗಾರಿಗಳು ನಡೆಯುತ್ತಿವೆ. ಈಗ ನಡೆಯುತ್ತಿರುವ ಕಾಮಗಾರಿಗಳ ಗುತ್ತಿಗೆದಾರರಿಗೆ ಶೇ.10 ರಿಂದ 15ರಷ್ಟು ಬಿಲ್ ಪಾವತಿ ಮಾಡುವ ಪರಿಸ್ಥಿತಿ ಇದೆ.

ಗುತ್ತಿಗೆದಾರರಿಗೆ ಹಣ ನೀಡಿದರೆ ಯೋಜನೆಗಳು ತ್ವರಿತಗತಿಯಲ್ಲಿ ಪೂರ್ಣಗೊಳ್ಳುತ್ತವೆ. ಕೇಂದ್ರದ ಅಸಹಕಾರದಿಂದ ನಾವು ಆರ್ಥಿಕ ಮುಗ್ಗಟ್ಟಿಗೆ ಸಿಲುಕಿದ್ದೇವೆ. ಮುಂದಿನ ಹಣಕಾಸು ಪರಿಸ್ಥಿತಿ ನೋಡಿಕೊಂಡು ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳುವುದಾಗಿ ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
agricultural activitiesD.K. ShivakumardcmDepartmentengageimplementationLegislative Councilnew schemeown landprovide waterWater Resources
1 FacebookTwitterPinterestEmail
admin

previous post
ಮುಖ್ಯಮಂತ್ರಿ ಅವರಿಗೆ ಅನಾರೋಗ್ಯ
next post
ಕಾಂಗ್ರೆಸ್ ಶಾಸಕರಿಗೆ ಕಣ್ಗಾವಲು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ