Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Tuesday, September 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಅಡ್ಡಮತದ ಜನಕ ಕಾಂಗ್ರೆಸ್: ಹೆಚ್‌ಡಿಕೆ ಆಕ್ರೋಶ

by admin February 27, 2024
written by admin February 27, 2024 2 comments 2 minutes read
1FacebookTwitterPinterestEmail
189

ನಮ್ಮ ಶಾಸಕರಿಗೆ ಧಮ್ಕಿ ಹಾಕಿ ಆಮಿಷ ಒಡ್ಡಿದ್ದರು

ಬೆಂಗಳೂರು:ಚುನಾವಣೆ ವ್ಯವಸ್ಥೆಯಲ್ಲಿ ಅಡ್ಡ ಮತದಾನಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಪಕ್ಷ ಎಂದು ಟೀಕಾಪ್ರಹಾರ ನಡೆಸಿದ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು; ದೇಶ ರಾಜಕಾರಣಕ್ಕೆ ಕಾಂಗ್ರೆಸ್ ಪಕ್ಷ ದೊಡ್ಡ ಕಳಂಕ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ಅಡ್ಡ ಮತದಾನ ಮಾಡಿಸಿದ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು; ಆತ್ಮಸಾಕ್ಷಿ ಮತದಿಂದ ಅಲ್ಲ, ಅಡ್ಡ ಮತದಾನದಿಂದ ಕಾಂಗ್ರೆಸ್ ಪಕ್ಷವು ರಾಜ್ಯಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ. ಇದು ಪ್ರಜಾಪ್ರಭುತ್ವ, ಸಂವಿಧಾನ ಎಂದೆಲ್ಲ ಭಜನೆ ಮಾಡುವ ಪಕ್ಷ ಮಾಡುವ ಕೆಲಸವೇ ಎಂದು ಕೇಳಿದರು.

ಆತ್ಮಸಾಕ್ಷಿ ಮತ ಎನ್ನುವ ಪದವನ್ನು ದೇಶದಲ್ಲಿ ಮೊದಲು ಹುಟ್ಟು ಹಾಕಿದ್ದೇ ಕಾಂಗ್ರೆಸ್. ಆತ್ಮಸಾಕ್ಷಿ ಮತ ಎಂದರೆ ಅಡ್ಡಮತ ಎಂದೇ ಅರ್ಥ. 1969ರಲ್ಲಿ ಅಂದಿನ ಪ್ರಧಾನಿಗಳಾದ ಇಂದಿರಾಗಾಂಧಿ ಅವರು ತಮ್ಮ ಕೈಗೊಂಬೆ ರಾಷ್ಟ್ರಪತಿ ಬೇಕೆಂದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿದ್ದ ನೀಲಂ ಸಂಜೀವರೆಡ್ಡಿ ಅವರ ವಿರುದ್ಧ ವಿ.ವಿ.ಗಿರಿ ಅವರನ್ನು ಕಣಕ್ಕೆ ಇಳಿಸಿ ಆತ್ಮಸಾಕ್ಷಿ ಮತ ಹಾಕುವಂತೆ ಕರೆ ನೀಡಿದ್ದರು. ಅಂದು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದ ನೀಲಂ ಸಂಜೀವರೆಡ್ಡಿ ಅವರು ಆತ್ಮಸಾಕ್ಷಿ ಅಲಿಯಾಸ್ ಅಡ್ಡಮತಗಳಿಂದ ಸೋತರು. ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್ ಎಂದು ಕುಮಾರಸ್ವಾಮಿ ಅವರು ಟೀಕಾಪ್ರಹಾರ ನಡೆಸಿದರು.

ಜೆಡಿಎಸ್-ಬಿಜೆಪಿ ಮೈತ್ರಿ ಮತ್ತಷ್ಟು ಬಲ

ರಾಜ್ಯಸಭೆ ಚುನಾವಣೆಯ ಮೂಲಕ ಜೆಡಿಎಸ್-ಬಿಜೆಪಿ ಮೈತ್ರಿ ಮತ್ತಷ್ಟು ಬಲವಾಗಿದೆ. ಪ್ರಜಾಪ್ರಭುತ್ವ ದ್ರೋಹಿಗಳು, ಸಂವಿಧಾನ ದ್ರೋಹಿಗಳು ಯಾರು ಎಂಬುದು ಜಗಾಜ್ಜಾಹೀರಾಗಿದೆ.

ಕಾಂಗ್ರೆಸ್ ನಿಂದ ಬಿಜೆಪಿಗೆ ಹಾರಿ ಅಲ್ಲಿ ಅಧಿಕಾರ ಅನುಭವಿಸಿದವರು ಈಗ ಅದೇ ಬಿಜೆಪಿಗೆ ಟೋಪಿ ಹಾಕಿ ಅಡ್ಡ ಮತದಾನ ಮಾಡಿ ದ್ರೋಹ ಎಸಗಿದ್ದಾರೆ. ಅವರು ಏಳೆಂಟು ತಿಂಗಳಿಂದ ಏನೇನು ಮಾಡುತ್ತಿದ್ದರು ಎಂದು ಮಾಧ್ಯಮಗಳೇ ತೋರಿಸಿವೆ. ಇದರಿಂದ ಬಿಜೆಪಿಗೇನೂ ಶಾಕ್ ಆಗಿಲ್ಲ, ನನಗೂ ಆಗಿಲ್ಲ. ಈ ಚುನಾವಣೆ ಇರಲಿ, ಲೋಕಸಭೆ ಚುನಾವಣೆಯಲ್ಲಿ ಅಸಲಿ ಆಟವಿದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಜೆಡಿಎಸ್ ಪಕ್ಷದ 19 ಶಾಸಕರು ಒಟ್ಟಾಗಿದ್ದೇವೆ. ಎಲ್ಲರೂ ಬಂದು ಮೈತ್ರಿಕೂಟದ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕಿದ್ದಾರೆ. ನಮ್ಮ ಶಾಸಕರನ್ನು ಸೆಳೆಯುವ ಕಾಂಗ್ರೆಸ್ ತಂತ್ರ ಫಲಿಸಲಿಲ್ಲ ಎಂದು ಅವರು ಹೇಳಿದರು.

ಅಷ್ಟೇ ಅಲ್ಲದೆ, ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ನಮ್ಮ ಅಭ್ಯರ್ಥಿಯನ್ನು ಹೆದರಿಸುವ, ಅವರ ವಿರುದ್ಧ ಎಫ್‌ಐಆರ್ ಹಾಕಿಸುವ ರಣಹೇಡಿ ಕೆಲಸವನ್ನೂ ಮಾಡಿದ್ದಾರೆ. ಜತೆಗೆ, ಈ ಸರಕಾರ ಬಂದಾಗಿನಿಂದ ಜೆಡಿಎಸ್ ಪಕ್ಷದ 12 ಕ್ಕೂ ಹೆಚ್ಚು ಶಾಸಕರು ತಮ್ಮ ಕಡೆ ಬಂದು ಬಿಟ್ಟಿದ್ದಾರೆ ಎಂದು ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದರು.

ಸಂವಿಧಾನ ಹೆಸರಲ್ಲಿ ದೇಶದ್ರೋಹಿಗಳಿಗೆ ವೇದಿಕೆ!
ಕಳೆದ ಏಳು ತಿಂಗಳಿಂದ ಆಮಿಷ

ನಮ್ಮ ಶಾಸಕರು ಕ್ಷೇತ್ರದ ಕೆಲಸಕ್ಕಾಗಿ ಪತ್ರ ತೆಗೆದುಕೊಂಡು ಹೋದರೆ, “ನೋಡಿ ನೀವು ಈಗ ಹದಿಮೂರನೇಯವರು. ನಮ್ಮ ಪಕ್ಷಕ್ಕೆ ಬಂದರೆ ನಿಮ್ಮ ಕೆಲಸಗಳೆಲ್ಲಾ ಆಗುತ್ತವೆ. ಆಲೋಚನೆ ಮಾಡಿ” ಎಂದು ಕಳೆದ ಏಳು ತಿಂಗಳಿಂದ ಆಮಿಷ ಒಡ್ದುತ್ತಲೇ ಇದ್ದಾರೆ ಎನ್ನುವುದು ಜಗಜ್ಜಾಹೀರು ಆಗಿದೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಮೈತ್ರಿ ಅಭ್ಯರ್ಥಿ ಡಿ.ಕುಪೇಂದ್ರ ರೆಡ್ಡಿ ಅವರಿಗೆ ಮತ ಹಾಕಿದ ಎರಡೂ ಪಕ್ಷಗಳ ಶಾಸಕರಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸಿದ ಮಾಜಿ ಮುಖ್ಯಮಂತ್ರಿಗಳು; ಕಾಂಗ್ರೆಸ್ ಪಕ್ಷದ ಧಮ್ಕಿ ರಾಜಕಾರಣವನ್ನು ನಮ್ಮ ಶಾಸಕರು ಸಡ್ಡು ಹೊಡೆದು ನಿಂತಿದ್ದಾರೆ. ಅವರು ಒಡ್ಡಿದ್ದ ಆಮಿಷಗಳನ್ನು ಕಾಲ ಕಸದಂತೆ ತಿರಸ್ಕರಿಸಿದ್ದಾರೆ ಎಂದು ಹೇಳಿದರು.

ಕಂದಕೂರ ಕುಟುಂಬ ಕಳೆದ ನಲವತ್ತು ವರ್ಷಗಳಿಂದ ಪಕ್ಷಕ್ಕೆ ನಿಷ್ಠವಾಗಿದೆ. ನಾಗನಗೌಡ ಕಂದಕೂರ ಅವರು ದೇವೆಗೌಡರ ಒಡನಾಡಿ. ಅವರಿಬ್ಬರ ಸಂಬಂಧ ಎಂಥದ್ದು ಎನ್ನುವುದು ಎಲ್ಲರಿಗೂ ಗೊತ್ತಿದೆ. ಶರಣುಗೌಡ ಕಂದಕೂರ ನನ್ನದು ತಂದೆ ಮಗನ ಬಾಂಧವ್ಯ. ಅವರ ಮನಸ್ಸು ನನಗೆ ಗೊತ್ತಿಲ್ಲವೇ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congres habitcross votinghd kumara swamy
1 FacebookTwitterPinterestEmail
admin

previous post
ಸಂವಿಧಾನ ಹೆಸರಲ್ಲಿ ದೇಶದ್ರೋಹಿಗಳಿಗೆ ವೇದಿಕೆ!
next post
7ನೇ ವೇತನ ಆಯೋಗ: ಅಂತಿಮ ವರದಿ ನಂತರ ಸೂಕ್ತ ತೀರ್ಮಾನ

You may also like

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

September 8, 2026

ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

September 7, 2026

ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

September 7, 2026

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (562)
  • ಅಂಕಣ (109)
  • ಉದ್ಯೋಗ (347)
  • ದಿನ ಭವಿಷ್ಯ (110)
  • ರಾಜಕೀಯ (2,055)
  • ರಾಜ್ಯ (2,370)
  • ರಾಷ್ಟ್ರ (2,334)
  • ವಿಶ್ಲೇಷಣೆ (202)
  • ಶಿಕ್ಷಣ (409)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026

KMS Special

  • ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್ ನೀರು ಬಿಡಿ

    September 8, 2026
  • ಕಾಂಗ್ರೆಸ್ ಮತ್ತು ಸರ್ಕಾರದ ನಡುವೆ ಅಹಿಂದ ಬಿರುಕು

    September 7, 2026
  • ಬಂಡವಾಳ ಹೂಡಿಕೆಗೆ ಭಾರತ ಅತ್ಯುತ್ತಮ ರಾಷ್ಟ್ರ

    September 7, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ತಮಿಳುನಾಡಿಗೆ 15 ದಿನ 6 ಸಾವಿರ ಕ್ಯೂಸೆಕ್...

September 8, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ