Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, May 18, 2025
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗರಾಜ್ಯ

ಉದ್ಯೋಗ ಮೇಳದಲ್ಲಿ  9,651 ಮಂದಿಗೆ ನೇರ ಉದ್ಯೋಗ

by admin February 28, 2024
written by admin February 28, 2024 0 comments 2 minutes read
Share 2FacebookTwitterPinterestEmail
313
ಕೇರಳ  ಮಾದರಿಯಲ್ಲಿ ಸಾಗರೋತ್ತರ ಕಂಪನಿ ಪ್ರಾರಂಭ

ಬೆಂಗಳೂರು: ರಾಜಧಾನಿ ಬೆಂಗಳೂರು ಅರಮನೆ ಮೈದಾನದಲ್ಲಿ ಫೆಬ್ರವರಿ 26 ಮತ್ತು 27ರಂದು ಕೌಶಲ್ಯಾಭಿವೃದ್ಧಿ ಇಲಾಖೆ ವತಿಯಿಂದ ನಡೆದ ಯುವ ಸಮೃದ್ಧಿ ಸಮ್ಮೇಳನದಲ್ಲಿ ಸುಮಾರು 9,651 ಉದ್ಯೋಗ ಆಕಾಂಕ್ಷಿಗಳಿಗೆ ಸ್ಥಳದಲ್ಲೇ ಉದ್ಯೋಗ ನೀಡುವ ಮೂಲಕ ಹೊಸ ದಾಖಲೆ ಬರೆದಿದ್ದೇವೆ ಎಂದು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದರು.

ಯುವ ಸಮೃದ್ಧಿ ಸಮ್ಮೇಳನದ ಕುರಿತಂತೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು 53,913 ಪುರುಷರು, 32,494 ಮಹಿಳೆಯರು, ಇತರೆ 42 ಸೇರಿಂದತೆ ಒಟ್ಟು ಆನ್‍ಲೈನ್ ಮೂಲಕ 86,451 ಅಭ್ಯರ್ಥಿಗಳು ಹೆಸರನ್ನು ನೋಂದಣಿ ಮಾಡಿಕೊಂಡಿದ್ದರು.  ಸಮ್ಮೇಳನಕ್ಕೆ 44527 ಅಭ್ಯರ್ಥಿಗಳು ಹಾಜರಾಗಿದ್ದರು. ಇದರಲ್ಲಿ ಶೈಕ್ಷಣಿಕ ಅರ್ಹತೆಗನುಗುಣವಾಗಿ ಒಟ್ಟು 9,651  ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ನೀಡಿದ್ದೇವೆ  ಎಂದು ಮಾಹಿತಿ ನೀಡಿದರು.

16,865 ಅರ್ಜಿಗಳು ಪರಿಶೀಲನೆ ಹಂತದಲ್ಲಿವೆ. 2,457 ಅರ್ಜಿಗಳನ್ನು ತಾಂತ್ರಿಕ ಕಾರಣಗಳಿಂದ ತಿರಸ್ಕರಿಸಲಾಗಿದೆ. 15,461 ಅಭ್ಯರ್ಥಿಗಳು ಸಂದರ್ಶನಕ್ಕೊಳಗಾಗಿದ್ದರು. ಅಭ್ಯರ್ಥಿಗಳ ಪೂರ್ಣ ವಿವರಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ. ಇವರಿಗೂ ಕೂಡ ಉದ್ಯೋಗ ನೀಡಲಾಗುತ್ತದೆ. ಒಟ್ಟಾರೆ ಎರಡು ದಿನ ನಡೆದ ಸಮ್ಮೇಳನ ನಮ್ಮ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದೆ ಎಂದರು.

ಸಮ್ಮೇಳನದಲ್ಲಿ ವೈಮಾನಿಕ  ಮತ್ತು ನಾಗರಿಕ ವಲಯದಿಂದ 26,  ಕೃಷಿ 6, ಉಡುಪು ವಲಯ 6, ಆಟೋಮೆಟಿವ್ 74, ಸೌಂದರ್ಯ ವಲಯ 3, ಆರೋಗ್ಯ ಕ್ಷೇತ್ರ 27, ಎಲೆಕ್ಟ್ರಾನಿಕ್ ವಲಯ 29, ಜವಳಿ 1, ಟೆಲಿಕಾಂ 19, ಸೇವಾ ವಲಯ 36, ಮೂಲಭೂತ ಉಪಕರಣಗಳ ವಲಯ 1 ಸೇರಿದಂತೆ ವಿವಿಧ ವಲಯಗಳಲ್ಲಿ ಉದ್ಯೋಗ ನೀಡಲಾಗಿದೆ ಎಂದು ಅವರು ತಿಳಿಸಿದರು.

ವಿಭಾಗವಾರು ಮೇಳ

ಮೊದಲ  ಹಂತದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಯಶಸ್ವಿ ಯುವ ಸಮೃದ್ಧಿ ಸಮ್ಮೇಳನ  ನಡೆದಿರುವ ಹಿನ್ನಲೆಯಲ್ಲಿ ಇನ್ನು ಮುಂದೆ ರಾಜ್ಯದ ಮೂರು ಪ್ರಮುಖ ವಿಭಾಗಗಳಲ್ಲಿ ಯುವ ಸಮೃದ್ಧಿ ಸಮ್ಮೇಳನ ನಡೆಸಲಾಗುವುದು ಎಂದು ಸಚಿವರು ಹೇಳಿದರು.

ಕಲಬುರಗಿ, ಬೆಳಗಾವಿ ಮತ್ತು ಮೈಸೂರಿನಲ್ಲಿ ಉದ್ಯೋಗ ಮೇಳವನ್ನು ನಡೆಸಲಾಗುವುದು. ಇದಕ್ಕಾಗಿ ಈಗಾಗಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದೇವೆ. ವಿಭಾಗವಾರು ಉದ್ಯೋಗ ಮೇಳ ನಡೆಸುವ ಮಾದರಿಯಂತೆ ರಾಜ್ಯದ ಎರಡು ಕಡೆ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ  ಕೇಂದ್ರ ಪ್ರಾರಂಭಿಸುವ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ಕೊಪ್ಪಳ ಹಾಗೂ ಮೈಸೂರಿನಲ್ಲಿ ಈ ಎರಡು ತರಬೇತಿ ಕೇಂದ್ರಗಳು ಪ್ರಾರಂಭವಾಗಲಿವೆ. ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಸುಮಾರು 25 ಸಾವಿರ ಯುವಕರಿಗೆ ಉದ್ಯೋಗ ನೀಡಲಾಗುತ್ತದೆ. ಈಗಾಗಲೇ ಇದಕ್ಕೆ ಇಲಾಖೆ ವತಿಯಿಂದ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪಾಟೀಲ್ ಹೇಳಿದರು.

ಸಾಗರೋತ್ತರ ಕಂಪನಿ ಪ್ರಾರಂಭ

ವಿದೇಶಿ ಕಂಪನಿಗಳಿಗೆ ಬೇಕಾದ ಮಾನವ ಸಂಪನ್ಮೂಲ ಒದಗಿಸಿಕೊಡಲು ಅನುಕೂಲವಾಗುವಂತೆ ರಾಜ್ಯ  ಸರ್ಕಾರವು ಕೇರಳ ಮಾದರಿಯಲ್ಲಿ ಸಾಗರೋತ್ತರ ಕಂಪನಿ ಪ್ರಾರಂಭಿಸಲಿದೆ ಎಂದು ಸಚಿವರು ಪ್ರಕಟಿಸಿದರು.

ಕೇರಳದಲ್ಲಿ ಈಗಾಗಲೇ ಸಾಗರೋತ್ತರ ಕಂಪನಿ ರಚನೆ ಮಾಡಲಾಗಿದೆ. ಇದೇ ಮಾದರಿಯನ್ನು ಇಟ್ಟುಕೊಂಡು ಕರ್ನಾಟಕದಲ್ಲೂ ಪ್ರಾರಂಭ ಮಾಡುತ್ತೇವೆ. ಎಂಜಿನಿಯರಿಂಗ್, ಡಿಪ್ಲಮೊ, ಐಟಿಐ ಸೇರಿದಂತೆ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ಉದ್ಯೋಗ ಆಕಾಂಕ್ಷಿಗಳಿಗೆ ಸಾಗರೋತ್ತರ ಕಂಪನಿಗಳ ಮೂಲಕ ಮಾಹಿತಿ ಕೊಡಲಾಗುವುದು. ಈಗಾಗಲೇ 49 ಕಂಪನಿಗಳು ಮುಂದೆ ಬಂದಿವೆ ಎಂದು ತಿಳಿಸಿದರು.

ಐಬಿಎಂ ಕಂಪನಿಯವರೇ 5 ಲಕ್ಷ ಉದ್ಯೋಗ ಆಕಾಂಕ್ಷಿಗಳಿಗೆ ತರಬೇತಿ ನೀಡಲು ಮುಂದೆ ಬಂದಿದ್ದಾರೆ. ಸಾಗರೋತ್ತರ ಕಂಪನಿಯು ಸಂವಹನ ಮಾಧ್ಯಮವಾಗಿ ರಾಜ್ಯದಲ್ಲಿ ಲಭ್ಯವಿರುವ ಮಾನವ ಸಂಪನ್ಮೂಲಗಳ ಬಗ್ಗೆ ಮಾಹಿತಿ ನೀಡಲಿದೆ. ಇದರಿಂದ ಉದ್ಯೋಗ ಆಕಾಂಕ್ಷಿಗಳು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಅಲೆಯುವುದು ತಪ್ಪುತ್ತದೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟರು.

Share this:

  • WhatsApp
  • Post
  • Tweet
  • Print
  • Email
9651 YOUTHSACROSS KARNATAKAbengaluruDIRECTLY RECRUITEDGOVT PLANSMEGA JOB FAIRSAMRUDDHI SAMMELANASharan Prakash Patilsuccess
Share 2 FacebookTwitterPinterestEmail
admin

previous post
ಕರ್ನಾಟಕ ವಿಧಾನಮಂಡಲ ನುಂಗಿದ ಪಾಕ್!
next post
ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿಸಿಟಿವಿ ಕಣ್ಗಾವಲು

You may also like

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ...

May 16, 2025

ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

May 15, 2025

ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

May 15, 2025

ಸಕಾರದಿಂದ 108 ಆಂಬುಲೆನ್ಸ್ ಸೇವೆ

May 14, 2025

ಸಂಭ್ರಮಾಚರಣೆ: ಸಿದ್ದರಾಮಯ್ಯ – ಡಿಕೆಶಿ ಗೊಂದಲ

May 12, 2025

ಪ್ರಧಾನಿ ಮೋದಿ ನಿರ್ಧಾರ ಎಲ್ಲರೂ ಬೆಂಬಲಿಸಬೇಕು

May 12, 2025

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ...

May 8, 2025

ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

May 6, 2025

‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

May 3, 2025

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಬಾಲಕಿಯರೇ ಮೇಲುಗೈ

May 2, 2025

Leave a Comment Cancel Reply

Save my name, email, and website in this browser for the next time I comment.

Social Networks

Facebook Twitter Instagram Linkedin Youtube Email Rss

KMS Analysis

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ಭಯೋತ್ಪಾದನೆ ನಿಗ್ರಹ: ಪ್ರಧಾನಿ ಮೋದಿಗೆ ಸಂಪೂರ್ಣ ಬೆಂಬಲ ಘೋಷಿಸಿದ ದೇವೇಗೌಡರು

    May 6, 2025
  • ಜಾತಿಗಣತಿ ವರದಿ ದತ್ತಾಂಶ ಮರುಪರಿಶೀಲನೆಗೆ ನಿರ್ಧಾರ

    April 18, 2025

Categories

  • Special Story (179)
  • ಅಂಕಣ (101)
  • ಉದ್ಯೋಗ (237)
  • ದಿನ ಭವಿಷ್ಯ (110)
  • ರಾಜಕೀಯ (1,581)
  • ರಾಜ್ಯ (1,870)
  • ರಾಷ್ಟ್ರ (1,842)
  • ವಿಶ್ಲೇಷಣೆ (183)
  • ಶಿಕ್ಷಣ (318)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ : ಹೆಚ್ ಡಿಕೆ ಟೀಕೆ

    May 16, 2025
  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಗೌರವ ಸಂಭಾವನೆ ಪರಿಷ್ಕರಣೆ

    May 15, 2025

KMS Special

  • ಮೇ 20ಕ್ಕೆ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ

    May 15, 2025
  • ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವರದಿ ಅನುಷ್ಠಾನಕ್ಕೆ ಸಿದ್ದರಾಮಯ್ಯ ಕಸರತ್ತು

    May 8, 2025
  • ‘ಗಂಗಾರತಿ’ ಮಾದರಿ ಕೆಆರ್‌ಎಸ್ ಬಳಿ ‘ಕಾವೇರಿ ಆರತಿ’

    May 3, 2025
  • Facebook
  • Twitter
  • Linkedin
  • Youtube
  • Email
  • Telegram
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಶತ್ರು ದೇಶದ ಕ್ಷೇಮಕ್ಕಾಗಿ ಕಾಂಗ್ರೆಸ್ ಮಿಡಿಯುತ್ತಿದೆ :...

May 16, 2025
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ