Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರಶಿಕ್ಷಣ

5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ

by admin March 6, 2024
written by admin March 6, 2024 0 comments 1 minutes read
1FacebookTwitterPinterestEmail
219


ಸರ್ಕಾರದ ಸುತ್ತೋಲೆ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು:ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣದ 5, 8, 9 ಹಾಗೂ 11ನೇ ತರಗತಿಗಳಿಗೆ ರಾಜ್ಯ ಸರ್ಕಾರ ನಡೆಸಲು ಉದ್ದೇಶಿದ್ದ ಪಬ್ಲಿಕ್ ಪರೀಕ್ಷೆಯನ್ನು ಕರ್ನಾಟಕ ಹೈಕೋರ್ಟ್ ಇಂದಿಲ್ಲಿ ರದ್ದುಪಡಿಸಿದೆ.

ಮಕ್ಕಳ ಕಲಿಕೆಗೆ ಅನುಕೂಲ ಎಂಬ ಉದ್ದೇಶದಿಂದ ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರ್ಕಾರ ಜಂಟಿಯಾಗಿ ಹೊರಡಿಸಿದ್ದ ಬೋರ್ಡ್ ಪರೀಕ್ಷೆ ಸುತ್ತೊಲೆಯನ್ನು ಹೈಕೋರ್ಟ್ ರದ್ದು ಮಾಡಿದೆ.

ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ.

ಸರ್ಕಾರದ ಆದೇಶ ರದ್ದು

ಕೋವಿಡ್ ನಂತರದ ದಿನಗಳಲ್ಲಿ ಮಕ್ಕಳ ಕಲಿಕೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಗೂ ಮುನ್ನ ನಾಲ್ಕು ಹಂತಗಳಲ್ಲಿ ಪಬ್ಲಿಕ್ ಪರೀಕ್ಷೆ ನಡೆಸಲು ಸರ್ಕಾರ ತೀರ್ಮಾನ ಕೈಗೊಂಡು ಆದೇಶ ಹೊರಡಿಸಿತ್ತು.

ಇದುವರೆಗೂ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗಷ್ಟೇ ಬೋರ್ಡ್ ಪರೀಕ್ಷೆಗಳು ನಡೆಯುತ್ತಿದ್ದವು.

ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಸಂಸ್ಥೆಗಳನ್ನು ನಡೆಸಲು ಹಾಗೂ ವಿದ್ಯಾರ್ಥಿಗಳನ್ನು ಆಕರ್ಷಿಸಲು ಶ್ರೇಣೀಕೃತ ತೇರ್ಗಡೆ ನೀಡುತ್ತಿದ್ದವು.

ಸರ್ಕಾರಿ ಅನುದಾನಿತ, ಸರ್ಕಾರಿ ಶಾಲೆಗಳ ಜೊತೆಗೆ ಖಾಸಗಿ ಅನುದಾನರಹಿತ ಶಾಲೆಗಳ ಮಕ್ಕಳು ಕೆಲವು ಘಟ್ಟಗಳಲ್ಲಿ ಬೋರ್ಡ್ ಪರೀಕ್ಷೆ ಬರೆಯಬೇಕೆಂದು ಸರ್ಕಾರ ತೀರ್ಮಾನ ಕೈಗೊಂಡಿತ್ತು.

ಕುಡಿಯುವ ನೀರು ಸಮಸ್ಯೆಗೆ ಆದ್ಯತೆ ಮೇಲೆ ಪರಿಹಾರ
ಕಲಿಕೆಯಲ್ಲಿ ಗಂಭೀರತೆ ಅಭಿಪ್ರಾಯ

ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದರಿಂದ ಅವರ ಕಲಿಕೆಯಲ್ಲಿ ಗಂಭೀರತೆ ಕಾಣಬಹುದೆಂಬ ಅಭಿಪ್ರಾಯ ಹೊಂದಿತ್ತು.

ರಾಜ್ಯ ಸರ್ಕಾರ ಕಳೆದ ಡಿಸೆಂಬರ್‌ನಲ್ಲಿ ಹೊರಡಿಸಿದ್ದ ಸುತ್ತೋಲೆಗಳನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಕೋರ್ಟ್ ಮೆಟ್ಟಿಲೇರಿತ್ತು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್, ಸರ್ಕಾರದ ಸುತ್ತೋಲೆ ರದ್ದುಗೊಳಿಸಿ ಆದೇಶಿಸಿದೆ.

ಪರೀಕ್ಷೆ ಸುತ್ತೋಲೆಯನ್ನು ಹೈಕೋರ್ಟ್ ರದ್ದುಗೊಳಿಸಿರುವುದರಿಂದ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದ್ದು, ತಕ್ಷಣಕ್ಕೆ ಮೇಲ್ಮನವಿ ಸಲ್ಲಿಸಿ ಪರೀಕ್ಷೆ ನಡೆಸುವ ಸಾಧ್ಯತೆ ಕಡಿಮೆ ಇರುವುದರಿಂದ ಈ ವರ್ಷದ ಮಟ್ಟಿಗೆ 5, 8, 9 ಹಾಗೂ 11ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಸಾಧ್ಯತೆ ಇಲ್ಲ, ಅಲ್ಲದೆ, 9 ನೇ ತರಗತಿವರೆಗೆ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ ಪದ್ಧತಿಯೂ ಇಲ್ಲ.

ಈಗ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಗೆ ಮಾತ್ರ ಪಬ್ಲಿಕ್ ಪರೀಕ್ಷೆ ನಡೆಸಲಾಗುತ್ತಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
no board exam to 5th-8th-9th and 11th classesonly 10th and 12th have board exam this year
1 FacebookTwitterPinterestEmail
admin

previous post
ಕುಡಿಯುವ ನೀರು ಸಮಸ್ಯೆಗೆ ಆದ್ಯತೆ ಮೇಲೆ ಪರಿಹಾರ
next post
ಮಂಡ್ಯ ಜಿಲ್ಲೆಯ ನಾಯಕರೊಂದಿಗೆ ಹೆಚ್ ಡಿಕೆ ಮಹತ್ವದ ಸಭೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ