Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮಂಡ್ಯ ಜಿಲ್ಲೆಯ ನಾಯಕರೊಂದಿಗೆ ಹೆಚ್ ಡಿಕೆ ಮಹತ್ವದ ಸಭೆ

by admin March 6, 2024
written by admin March 6, 2024 0 comments 1 minutes read
1FacebookTwitterPinterestEmail
149

ಲೋಕಸಭೆ ಚುನಾವಣೆಯ ಅಭ್ಯರ್ಥಿ ಆಯ್ಕೆಗೆ ಅಭಿಪ್ರಾಯ ಸಂಗ್ರಹ

ಬೆಂಗಳೂರು: ಲೋಕಸಭೆ ಚುನಾವಣೆಯ ಪೂರ್ವ ತಯಾರಿ ಹಾಗೂ ಅಭ್ಯರ್ಥಿ ಆಯ್ಕೆಯ ಬಗ್ಗೆ ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ನಾಯಕರ ಜತೆ ಮಹತ್ವದ ಸಮಾಲೋಚನೆ ನಡೆಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಸಭೆಯ ನಂತರ ತಮ್ಮ ನಿವಾಸದಲ್ಲಿ ಮಂಡ್ಯ ನಾಯಕರ ಸಭೆ ನಡೆಸಿದ ಕುಮಾರಸ್ವಾಮಿ ಅವರು,  ಜಿಲ್ಲೆಯ ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡುವುದಾಗಿ ಮುಖಂಡರಿಗೆ ತಿಳಿಸಿದರು.

ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ ಹಾಗೂ ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜಿಲ್ಲಾಧ್ಯಕ್ಷ ರಮೇಶ್ ಅವರು  ಸಭೆಯಲ್ಲಿ  ಭಾಗವಹಿಸಿದ್ದರು.

ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಿದ ಮಾಜಿ ಮುಖ್ಯಮಂತ್ರಿಗಳು, ಬಿಜೆಪಿ ಮೈತ್ರಿ ನಂತರದ ಜಿಲ್ಲೆಯಲ್ಲಿನ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಅವಲೋಕನ ಮಾಡಿದರು.

ಅಭ್ಯರ್ಥಿ ಆಯ್ಕೆ ಬಗ್ಗೆ ನಾಯಕರಿಂದ ಮಾಹಿತಿ ಸಂಗ್ರಹ ಮಾಡಿದರಲ್ಲದೆ, ಚುನಾವಣೆಯಲ್ಲಿ ಗೆಲುವು ಮುಖ್ಯ. ಮೈತ್ರಿ ಅಭ್ಯರ್ಥಿಯನ್ನು ನಾವು ಗೆಲ್ಲಿಸಿಕೊಳ್ಳಲೇಬೇಕು. ಹಿಂದಿನ ಘಟನೆಗಳಿಂದ ಪಾಠ ಕಲಿಯಬೇಕು. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು. ಮೈತ್ರಿ ಪಕ್ಷಕ್ಕೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ಮೈತ್ರಿ ಧರ್ಮ ಮೀರುವುದು ಬೇಡ

ನಿಮ್ಮ ಪಾಡಿಗೆ ನೀವು ಕೆಲಸ ಮಾಡಿ, ನಾನು ಯಾರ ಹೆಸರನ್ನು ಘೋಷಣೆ ಮಾಡುತ್ತೇನೆಯೋ ಅವರ ಪರವಾಗಿ ಕೆಲಸ ಮಾಡಿ. ಯಾವ ಕಾರಣಕ್ಕೂ ಮೈತ್ರಿ ಧರ್ಮ ಮೀರುವುದು ಬೇಡ. ಜಿಲ್ಲೆಯ ಬಿಜೆಪಿ ನಾಯಕರು, ರಾಜ್ಯ ಬಿಜೆಪಿ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅಭ್ಯರ್ಥಿ ಆಯ್ಕೆ ಮಾಡಲಾಗುವುದು ಎಂದು ನೇರ ಮಾತುಗಳಲ್ಲಿ ಜಿಲ್ಲಾ ನಾಯಕರಿಗೆ ಹೇಳಿದರು ಕುಮಾರಸ್ವಾಮಿ ಅವರು.

ಪಕ್ಷಕ್ಕೆ ಹಾಗೂ ಚುನಾವಣೆ ಗೆಲುವಿಗೆ ಹಾನಿ ಆಗುವಂತಹ ಯಾವುದೇ ಕೆಲಸವನ್ನು ಯಾರೂ ಮಾಡಬಾರದು. ಅಭ್ಯರ್ಥಿ ಯಾರು ಆಗುತ್ತಾರೆ ಎನ್ನುವುದು ಮುಖ್ಯವಲ್ಲ, ಗೆಲುವೇ ಮುಖ್ಯ ಎಂದು ಎಲ್ಲಾ ನಾಯಕರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.

ಅಲ್ಲದೆ, ನಾಯಕರು ಕೊಟ್ಟ ಎಲ್ಲಾ ಸಲಹೆಗಳನ್ನು ಆಲಿಸಿದ ಮಾಜಿ ಮುಖ್ಯಮಂತ್ರಿಗಳು, ಇದೇ ವೇಳೆ ಅವರಿಗೆ ಕೆಲ ಮಹತ್ವದ ಸೂಚನೆಗಳನ್ನು ಕೊಟ್ಟರು. ಈ ಕ್ಷಣದಿಂದಲೇ ಚುನಾವಣೆ ಕೆಲಸದಲ್ಲಿ ತೊಡಗಿಸಿಕೊಳ್ಳುವಂತೆ ಅವರು ನಿರ್ದೇಶನ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
candidate selectionhdkimportantleaders meetingLok Sabha ElectionMandya districtOpinion poll
1 FacebookTwitterPinterestEmail
admin

previous post
5, 8, 9 ಹಾಗೂ 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ಇಲ್ಲ
next post
ದಿನ ಭವಿಷ್ಯ : ಗುರುವಾರ, 7 ಮಾರ್ಚ್ 2024

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ