Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, September 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ರಾಮೇಶ್ವರಂ ಕೆಫೆ ಸ್ಫೋಟ ಪಾತಕಿ ಸುಳಿವು!

by KM Shivaraju March 9, 2024
written by KM Shivaraju March 9, 2024 0 comments 2 minutes read
0FacebookTwitterPinterestEmail
156

ಇದೀಗ ’ಟೆರರ್ ಆಫ್ ಬಳ್ಳಾರಿ’ ಸರದಿ

ಬೆಂಗಳೂರು:ಭಟ್ಕಳ ಭಯೋತ್ಪಾದಕ ತಂಡದ ಕತೆ ಮುಗಿಯಿತು ಎನ್ನುವಾಗಲೇ ಭಯೋತ್ಪದನಾ ಕೇಂದ್ರ ಸ್ಥಾನವಾಗಿ ಬಳ್ಳಾರಿ ಪರಿವರ್ತನೆಗೊಳ್ಳುತ್ತಿದೆ.

ನಗರದ ಐಟಿ ಕಾರಿಡಾರ್‌ನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಬೆನ್ನು ಹತ್ತಿದ ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗೂ ಸಿಸಿಬಿ ತಂಡಕ್ಕೆ ದೊರೆತಿರುವ ಸುಳಿವಿನ ಮೇರೆಗೆ ಬಳ್ಳಾರಿ ಉಗ್ರರ ತಾಣವಾಗುತ್ತಿದೆ.

10 ಕಡೆಗಳಲ್ಲಿ ಸ್ಫೋಟ ಸಂಚು

ಇಲ್ಲಿ ತರಬೇತಿ ಪಡೆದವರೇ ನಗರದಲ್ಲಿ ಬಾಂಬ್ ಸ್ಫೋಟ ಮಾಡಿದ್ದಾರೆ ಎಂದು ಗುರುತಿಸಲಾಗಿದ್ದು, ಈ ತಂಡ ರಾಜ್ಯದ ವಿವಿಧೆಡೆ 10 ಕಡೆಗಳಲ್ಲಿ ಇಂತಹ ಸ್ಫೋಟ ನಡೆಸಲು ಸಂಚು ರೂಪಿಸಿತ್ತು ಎಂಬ ಮಾಹಿತಿ ಕೆಲೆಹಾಕಿದೆ.

ಈ ಮಾಹಿತಿ ಹಿನ್ನೆಲೆಯಲ್ಲಿ ತನಿಖಾ ತಂಡ ರಾಜ್ಯ ಸರ್ಕಾರಕ್ಕೆ ಕಟ್ಟೆಚ್ಚರಿಕೆ ನೀಡಿ ಪ್ರವಾಸೀ ಕೇಂದ್ರ ಹಾಗೂ ಜನದಟ್ಟಣೆ ಸ್ಥಳಗಳಲ್ಲಿ ಮುಂಜಾಗ್ರತೆ ಕೈಗೊಳ್ಳುವಂತೆ ಸಲಹೆ ನೀಡಿದೆ.

ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಬೆನ್ನು ಹತ್ತಿದ ರಾಷ್ಟ್ರೀಯ ತನಿಖಾ ಸಂಸ್ಥೆಗೆ ಬಳ್ಳಾರಿ ಕೇಂದ್ರ ಬಿಂದುವೆಂಬ ಮಾಹಿತಿ ಲಭ್ಯವಾಗಿದೆ.

ಬಂಧನಕ್ಕೆ ಬಲೆ

ನಗರದಲ್ಲಿ ಸ್ಫೋಟ ನಡೆಸಿದ ಪಾತಕಿ ಬಳ್ಳಾರಿಯಲ್ಲಿ ಅಡಗಿದ್ದಾನೆ ಎಂಬ ಸುಳಿವು ದೊರೆತಿದ್ದು, ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.

ಕೆಫೆ ಬಾಂಬರ್ ಬೆಂಗಳೂರಿನಿಂದ ಬಸ್ಸು ಹತ್ತಿ ಬಳ್ಳಾರಿ ತಲುಪಿರುವುದು ಸ್ಪಷ್ಟವಾಗಿದೆ, ನಂತರ ಆರೋಪಿ ಅಲ್ಲಿಂದ ಬೇರೆಡೆಗೆ ಸ್ಥಳ ಬದಲಾಯಿಸಿದ ಯಾವುದೇ ಸುಳಿವು ದೊರೆತಿಲ್ಲ. ಘಟನೆ ನಡೆದ ದಿನ ರಾತ್ರಿ ರಾತ್ರಿ 9 ಗಂಟೆ ಸುಮಾರಿಗೆ ಬಸ್ ನಿಲ್ದಾಣದ ಬಳಿ ಶಂಕಿತ ಕಾಣಿಸಿಕೊಂಡಿದ್ದ, ಬಳಿಕ ಎಲ್ಲಿಯೂ ಆರೋಪಿಯ ಚಲನವಲನದ ಕುರುಹು ದಾಖಲಾಗಿಲ್ಲದ ಹಿನ್ನೆಲೆಯಲ್ಲಿ ಆತ ಬಳ್ಳಾರಿಯಲ್ಲೇ ಅಡಗಿರಬಹುದೆಂದು ಶಂಕಿಸಲಾಗಿದೆ.

ಈ ಘಟನೆಯ ನಂತರ ಐಎಸ್ ಬಳ್ಳಾರಿ ಗ್ಯಾಂಗ್ ಸಕ್ರಿಯವಾಗಿರುವ ಬಗ್ಗೆ ಎನ್‌ಐಎ ತಂಡಕ್ಕೆ ಖಚಿತ ಮಾಹಿತಿ ಲಭ್ಯವಾಗಿದೆ.

ಸದ್ಯ ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಬಳ್ಳಾರಿ ಮೂಲದ ಮಿನಾಜ್ ಅಲಿಯಾಸ್ ಸುಲೈಮಾನ್ ಎಂಬುವನನ್ನು ಎನ್‌ಐಎ ತಂಡ ವಿಚಾರಣೆಗಾಗಿ ವಶಕ್ಕೆ ಪಡೆದಿದೆ.

ರಾಜ್ಯಾದ್ಯಂತ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಮಿನಾಜ್ ಅಲಿಯಾಸ್ ಸುಲೈಮಾನ್‌ನನ್ನು ಎನ್‌ಐಎ ತಂಡ ಡಿಸೆಂಬರ್‌ನಲ್ಲಿ ಬಂಧಿಸಿತ್ತು. ವಿಚಾರಣೆ ವೇಳೆ ಈತ ನೀಡಿದ ಮಾಹಿತಿ ಆಧರಿಸಿ ತನಿಖೆ ನಡೆಸಿದ ಎನ್‌ಐಎ ತಂಡಕ್ಕೆ ಐಎಸ್ ಬಳ್ಳಾರಿ ಗ್ಯಾಂಗ್ ಬಗ್ಗೆ ಮಾಹಿತಿ ಲಭಿಸಿತ್ತು.

ಎರಡು-ಮೂರು ದಿನದಲ್ಲಿ ಬಿಜೆಪಿ ಅಭ್ಯರ್ಥಿ ಪಟ್ಟಿ
ವಿದ್ಯಾವಂತ ಮುಸ್ಲಿಂ ಯುವಕರ ಸೇರ್ಪಡೆ

ಬಂಧಿತ ಮೀನಾಜ್ ನಿಷೇಧಿತ ಪಿಎಫ್‌ಐ ಸಂಘಟನೆಯ ಕಾರ್ಯಕರ್ತ, ಈತ ಬಳ್ಳಾರಿ ಮೂಲದ ಮತ್ತೊಬ್ಬ ಶಂಕಿತ ಉಗ್ರ ಸೈಯದ್ ಸಮೀರ್ ಎಂಬಾತನೊಂದಿಗೆ ಸೇರಿಕೊಂಡು ಐಎಸ್ ಬಳ್ಳಾರಿ ಘಟಕ ಸ್ಥಾಪನೆ ಮಾಡಿದ್ದ, ಹಲವಾರು ಮಂದಿ ವಿದ್ಯಾವಂತ ಮುಸ್ಲಿಂ ಯುವಕರನ್ನು ಸದಸ್ಯರನ್ನಾಗಿ ಸೇರ್ಪಡೆ ಮಾಡಿಕೊಂಡಿದ್ದ.

ಘಟಕಕ್ಕಾಗಿ ಪ್ರತ್ಯೇಕ ಮೊಬೈಲ್ ಆಪ್ ಸಿದ್ಧಪಡಿಸಿದ್ದ ಸಮೀರ್ ಮತ್ತು ಮೀನಾಜ್ ಆನ್‌ಲೈನ್ ಮೂಲಕ ವಿದ್ಯಾವಂತ ಮುಸ್ಲಿಂ ಯುವಕರನ್ನು ಪರಿಚಯ ಮಾಡಿಕೊಂಡು, ಅವರಿಗೆ ದೇಶದಲ್ಲಿ ಮುಸ್ಲಿಂ ಧರ್ಮದ ಮೇಲೆ ದೌರ್ಜನ್ಯವಾಗುತ್ತಿದೆ ಇದನ್ನು ತಡೆಗಟ್ಟಲು ಪ್ರಾಣ ತ್ಯಾಗಕ್ಕೂ ಸಿದ್ಧರಾಗಿರಬೇಕು ಎಂದು ಪ್ರಚೋದನಕಾರಿ ಅಂಶವಿರುವ ಪುಸ್ತಕಗಳು, ವಿಡಿಯೋ ಮತ್ತು ಕರಪತ್ರಗಳನ್ನು ರವಾನಿಸುತ್ತಿದ್ದರು.

ಇವರಿಂದ ಪ್ರೇರೇಪಣೆಗೊಂಡ ಅನೇಕರು ಐಎಸ್ ಬಳ್ಳಾರಿ ಘಟಕ ಸೇರಿದ್ದರು, ಈ ರೀತಿ ಸೇರಿದ ಹಲವರಿಗೆ ಬಾಂಬ್ ತಯಾರಿ ಹಾಗೂ ಸ್ಫೋಟಿಸುವ ತರಬೇತಿ ಮತ್ತು ಮಾಹಿತಿ ನೀಡುತ್ತಿದ್ದರು. ಬಳ್ಳಾರಿಯಲ್ಲೇ ಈ ಕುರಿತಂತೆ ತರಬೇತಿ ಸಹ ನೀಡಲಾಗುತ್ತಿತ್ತು ಎಂಬ ಮಾಹಿತಿ ಎನ್‌ಐಎ ತಂಡಕ್ಕೆ ಲಭ್ಯವಾಗಿದೆ.

ತರಬೇತಿ ಪಡೆದವರಿಗಾಗಿ ಹುಡುಕಾಟ

ಈ ಘಟಕದಿಂದ ತರಬೇತಿ ಪಡೆದ ವ್ಯಕ್ತಿಯೊಬ್ಬ ಬೆಂಗಳೂರಿನ ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆಸಿರಬಹುದು ಎಂಬ ಮಾಹಿತಿ ಆಧರಿಸಿ ತನಿಖೆ ನಡೆಸಿದ್ದಾರೆ, ಅಲ್ಲದೆ, ಬಳ್ಳಾರಿ ಘಟಕದೊಂದಿಗೆ ಸಂಪರ್ಕ ಹೊಂದಿ ಸ್ಫೋಟಕ ತಯಾರಿ ತರಬೇತಿ ಪಡೆದವರಿಗಾಗಿ ಹುಡುಕಾಟ ನಡೆದಿದೆ.

ಗಣಿ ಉದ್ಯಮಿಗಳಿಂದ ಬದಲಾದ ಬಳ್ಳಾರಿಯನ್ನು ’ರಿಪಬ್ಲಿಕ್ ಆಫ್ ಬಳ್ಳಾರಿ ಎಂದು ವ್ಯಾಖ್ಯಾನ ಮಾಡಲಾಗುತ್ತಿತ್ತು. ಇದೀಗ ರಿಪಬ್ಲಿಕ್ ಆಫ್ ಬಳ್ಳಾರಿ ಬದಲಿಗೆ ’ಟೆರರ್ ಆಫ್ ಬಳ್ಳಾರಿ’ ಎಂದಾಗಿದೆ.

ಭಯೋತ್ಪಾದನೆ ಚಟುವಟಿಕೆಗಳಿಗೆ ಭಟ್ಕಳ ಗ್ಯಾಂಗ್ ದೇಶದಲ್ಲಿ ಮಾತ್ರವಲ್ಲ ಅಂತರಾಷ್ಟ್ರೀಯ ಮಟ್ಟದಲ್ಲೂ ಕುಖ್ಯಾತಿ ಪಡೆದಿತ್ತು. ಯಾಸಿನ್ ಭಟ್ಕಳ್ ಸೋದರರು ಮುಸ್ಲಿಂ ಸಮುದಾಯದ ವಿದ್ಯಾವಂತ ಯುವಕರನ್ನು ಜಿಹಾದಿ ಚಟುವಟಿಕೆಗಳಿಗೆ ಪ್ರೇರೇಪಿಸಿ ಭಯೋತ್ಪಾದನಾ ಕೃತ್ಯದಲ್ಲಿ ತೊಡಗುವಂತೆ ಮಾಡುತ್ತಿದ್ದರು.

ಭಟ್ಕಳ್ ಸೋದರದಿಂದ ಪ್ರೇರೇಪಿತರಾದ ಹಲವಾರು ಮುಸ್ಲಿಂ ಯುವಕರು ದೇಶದ ಅನೇಕ ಕಡೆ ದುಷ್ಕೃತ್ಯ ನಡೆಸುವ ಮೂಲಕ ಸಮಾಜಕ್ಕೆ ಕಂಟಕ ಪ್ರಾಯರಾಗಿದ್ದರು. ಈ ತಂಡದ ಬಹುತೇಕ ಎಲ್ಲಾ ಸದಸ್ಯರನ್ನು ಸೆರೆಹಿಡಿದು ಕತ್ತಲೆ ಕೋಣೆಗೆ ತಳ್ಳುವಲ್ಲಿ ದೇಶದ ತನಿಖಾ ತಂಡಗಳು ಯಶಸ್ವಿಯಾಗಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
NIA got clue of the blast culpritrameshwaram cafe blast conectionterror of ballari
0 FacebookTwitterPinterestEmail
KM Shivaraju

previous post
ಎರಡು-ಮೂರು ದಿನದಲ್ಲಿ ಬಿಜೆಪಿ ಅಭ್ಯರ್ಥಿ ಪಟ್ಟಿ
next post
ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕೆ!

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ