Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಮಂಜುನಾಥ್ ಸ್ಪರ್ಧೆ : ಕುಮಾರಸ್ವಾಮಿ

by KM Shivaraju March 11, 2024
written by KM Shivaraju March 11, 2024 0 comments 2 minutes read
0FacebookTwitterPinterestEmail
203

ರಾಮನಗರ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಅಧಿಕೃತ ಘೋಷಣೆ

ಬೆಂಗಳೂರು:ಹೃದ್ರೋಗ ತಜ್ಞ ಡಾ. ಸಿ.ಎನ್.ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ಅಧಿಕೃತ ಘೋಷಣೆ ಮಾಡಿದ್ದಾರೆ.

ಬೆಂಗಳೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪ್ರಮುಖ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಕಿರಾತಕರನ್ನು ಮಣಿಸಲು ಡಾ.ಮಂಜುನಾಥ್ ಸ್ಪರ್ಧೆ ಅನಿವಾರ್ಯ ಎಂದಿದ್ದಾರೆ.

ಡಾಕ್ಟರ್ ಹೆಸರನ್ನೇ ಮುಂದಿಟ್ಟಿದ್ದಾರೆ

ಬಿಜೆಪಿ ವರಿಷ್ಠರು ಡಾ.ಮಂಜುನಾಥ್ ಅವರನ್ನೇ ಕಣಕ್ಕಿಳಿಸಬೇಕೆಂದು ನನಗೆ ಸಲಹೆ ಮಾಡಿದ್ದಾರೆ, ನಾನು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸಿಬೇಕೆಂದುಕೊಂಡಿದ್ದೆ, ಆದರೆ ಅವರೂ ಕೂಡ ಡಾಕ್ಟರ್ ಹೆಸರನ್ನೇ ಮುಂದಿಟ್ಟಿದ್ದಾರೆ.

ಹಿಂದಿನ ಚುನಾವಣೆಗಳಲ್ಲಿ ಆದ ಕಹಿಯನ್ನು ಮರೆತು ಚುನಾವಣಾ ಕೆಲಸ ಮಾಡೋಣ, ಹಿಂದೆ ಆಗಿರುವ ತಪ್ಪುಗಳನ್ನು ಸರಿ ಮಾಡಿಕೊಂಡು ಮುಂದೆ ಹೋಗೋಣ. ನಿಷ್ಠಾವಂತ ಕಾರ್ಯಕರ್ತರು ನೀವಿದ್ದೀರಿ.

ರಾಮನಗರ ಕ್ಷೇತ್ರದ ಜನರು ಯಾವತ್ತೂ ಜಾತಿ ಮೇಲೆ ಚುನಾವಣೆ ಮಾಡಿದವರಲ್ಲ, ನಾನೆಂದೂ ಗುತ್ತಿಗೆದಾರರಿಂದ ಹಣ ಕೇಳಿದವನಲ್ಲ, ಚುನಾವಣೆ ಅದ ಮೇಲೆ ನಾನು ಊರುಗಳಲ್ಲಿ ಜಗಳ ತಂದಿಡಲಿಲ್ಲ, ನಿಮ್ಮಲ್ಲಿ ಒಬ್ಬನಾಗಿ ಪಕ್ಷಕ್ಕೆ ದುಡಿಮೆ ಮಾಡಿದ್ದೇನೆ.

ಇವತ್ತು ಕಾಂಗ್ರೆಸ್‌ನವರು ಯಾವ ರೀತಿ ನಡೆದುಕೊಳ್ಕುತ್ತಿದ್ದಾರೆ, ನಾನು ಯಾವ ರೀತಿ ನಡೆದುಕೊಂಡಿದ್ದೇನೆ.

ಎಲ್ಲರೂ ಡಾ.ಮಂಜುನಾಥ್ ಅವರನ್ನೇ ಬಯಸಿದ್ದಾರೆ

ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ಬಿಜೆಪಿ ನಾಯಕರು ಎಲ್ಲರೂ ಡಾ.ಮಂಜುನಾಥ್ ಅವರನ್ನೇ ಒಮ್ಮತದ ಅಭ್ಯರ್ಥಿ ಮಾಡಬೇಕು ಎಂದು ಬಯಸಿದ್ದಾರೆ.

ಮಿತ್ರ ಪಕ್ಷದ ವರಿಷ್ಠರು, ರಾಜ್ಯದ ಬಿಜೆಪಿ ನಾಯಕರ ಭಾವನೆಗಳನ್ನು ನಾವು ಗೌರವಿಸಬೇಕಿದೆ, ಭಾನುವಾರ ನಾನು ನಮ್ಮ ತಂದೆಯವರ ಜತೆ ಎರಡು ಗಂಟೆ ಕಾಲ ಚರ್ಚೆ ಮಾಡಿದೆ, ಡಾ.ಮಂಜುನಾಥ್ ಅವರ ಸ್ಪರ್ಧೆ ವಿಚಾರವನ್ನು ಮನವರಿಕೆ ಮಾಡಿಕೊಟ್ಟಿದ್ದೇನೆ.

ನನ್ನ ತಂಗಿ ಮನೆಯಲ್ಲಿ ಕಣ್ಣೀರು ಹಾಕ್ತಾ ಇದ್ದಾಳೆ, ನಮ್ಮನ್ನು ಯಾಕೆ ರಾಜಕೀಯಕ್ಕೆ ಎಳೆಯುತ್ತೀರಿ, ನೆಮ್ಮದಿಯಿಂದ ಇದ್ದೇವೆ, ನಮಗೆ ರಾಜಕೀಯ ಬೇಡ ಅಂತ ಅಳ್ತಾ ಕೂತಿದ್ದಾಳೆ.

ನನ್ನ ನೋವು ನನಗೇ ಗೊತ್ತು

ಇದು ನಮ್ಮ ಮನೆಯ ಪರಿಸ್ಥಿತಿ. ನನ್ನ ನೋವು ನನಗೇ ಗೊತ್ತು. ಆದರೆ, ಆ ಕಿರಾತಕರನ್ನು ಮಣಿಸಲೇಬೇಕು. ಇದು ನನ್ನ ಗುರಿ. ಈ ಚುನಾವಣೆಯನ್ನು ಸವಾಲಾಗಿ ಸ್ವೀಕಾರ ಮಾಡಿ ಎಂದು ನಿಮಗೆ (ಕಾರ್ಯಕರ್ತರಿಗೆ) ಮನವಿ ಮಾಡುತ್ತೇನೆ.

ರಾಮನಗರ ಜನರು ನಿಖಿಲ್‌ರನ್ನು ಸೋಲಿಸಿದ್ದಾರೆ ಎಂದು ನಾನು ದೋಷ ಕೊಡಲ್ಲ, ನಮ್ಮದೇ ತಪ್ಪುಗಳಿಂದ ನಿಖಿಲ್ ಸೋತಿದ್ದಾರೆ, ಆ ತಪ್ಪುಗಳನ್ನು ಸರಿ ಮಾಡೋಣ.

ದೇವೇಗೌಡರು ಕಣ್ಣೀರು ಹಾಕೋದು ಅವರ ಕುಟುಂಬಕ್ಕೆ ಎಂದು ಡಿ.ಕೆ.ಶಿವಕುಮಾರ್ ಹೇಳುತ್ತಾರೆ, ಅವರಿಗೆ ಆತ್ಮಸಾಕ್ಷಿ ಅನ್ನೋದು ಇದೆಯಾ, ಅವರು ಏನೆಲ್ಲಾ ಮಾಡಿದ್ದಾರೆ, ಏನೆಲ್ಲಾ ಕೆಡುಕು ಮಾಡಿದ್ದಾರೆ ಎನ್ನುವುದು ಈ ರಾಜ್ಯಕ್ಕೆ ಗೊತ್ತಿದೆ. ನಾವು ಹಾಗೆ ಮಾಡಿದ್ದೇವೆಯಾ, ಖಂಡಿತಾ ಇಲ್ಲ ಎಂದರು.

ಕುಮಾರಸ್ವಾಮಿ ಮಂಡ್ಯದಿಂದ ಕಣಕ್ಕೆ!
ಮೋದಿ ಅವರು, ದೇವೇಗೌಡರಿಗೆ ಗೌರವ ಕೊಡುತ್ತಾರೆ

ಇಡೀ ವಿಶ್ವವೇ ಮೋದಿ ಅವರನ್ನು ಗೌರವಿಸುತ್ತದೆ, ಅಂತಹ ಮೋದಿ ಅವರು, ದೇವೇಗೌಡರು ಬಂದರೆ ಎಷ್ಟು ಗೌರವ ಕೊಡುತ್ತಾರೆ, ತಂದೆಯಂತೆ ಆದರಿಸುತ್ತಾರೆ. ಇದನ್ನು ಆ ವ್ಯಕ್ತಿ ಅರ್ಥ ಮಾಡ್ಕೊಳ್ಳಬೇಕು.

ಕೆಲವರು ಗೌಡರ ಮನೆಯಲ್ಲಿ ಅಳಿಯನನ್ನೇ ಹರಕೆಯ ಕುರಿ ಮಾಡಲು ಹೊರಟಿದ್ದಾರೆ ಎಂದು ಹೇಳಿದ ಆ ವ್ಯಕ್ತಿಗೆ ಸತ್ಯ ಗೊತ್ತಿಲ್ಲ. ಡಾ. ಮಂಜುನಾಥ್ ಅವರು ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ, ಲಕ್ಷಾಂತರ ಬಡ ಜನರ ಹೃದಯ ಕಾಪಾಡಿದ್ದಾರೆ, ದೇಶದಲ್ಲಿಯೇ ಅವರ ಸೇವೆಯನ್ನು ಕೊಂಡಾಡುತ್ತಾರೆ, ಅಂತಹ ವ್ಯಕ್ತಿ ದೆಹಲಿಗೆ ಹೋದರೆ ಇಡೀ ದೇಶಕ್ಕೆ ಸೇವೆ ಮಾಡಬಹುದು. ಅವರನ್ನು ಹರಕೆಯ ಕುರಿ ಮಾಡುತ್ತಿಲ್ಲ. ನಾವು, ಎಲ್ಲರೂ ಅವರ ನಿಸ್ವಾರ್ಥ ಸೇವೆಯನ್ನು ಗುರುತಿಸಿದ್ದಾರೆ.

ಚುನಾವಣೆ ಹೇಗೆ ನಡೆಸಬೇಕು, ಏನೆಲ್ಲಾ ಮಾಡಬೇಕು ಎಂಬುದಾಗಿ ಮುಖಂಡರಿಗೆ ಸಲಹೆ ಸೂಚನೆ ಕೊಟ್ಟ ಕುಮಾರಸ್ವಾಮಿ, ದುಡಕಬೇಡಿ, ನಿಷ್ಠೆಯಿಂದ ಕೆಲಸ ಮಾಡಿ, ಎಲ್ಲವನ್ನೂ ಮರೆತು ಹೊಸ ಅಧ್ಯಾಯ ಆರಂಭ ಮಾಡೋಣ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
dr. c.n.manjunath to bengaluru rural loka sabha constituencyhd kumara swamy anounced today in a meetingwe will take it as a challenge
0 FacebookTwitterPinterestEmail
KM Shivaraju

previous post
ಸಂವಿಧಾನ ಬದಲಿಸಿದರೆ ದೇಶದಲ್ಲಿ ರಕ್ತಪಾತ!
next post
ದಿನ ಭವಿಷ್ಯ : ಮಂಗಳವಾರ, 12 ಮಾರ್ಚ್ 2024

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ