Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ಉದ್ಯೋಗದಿನ ಭವಿಷ್ಯರಾಜ್ಯಶಿಕ್ಷಣ

ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತಕ್ಕೆ ಜಲಮಂಡಳಿ ನಿರ್ಧಾರ

by admin March 12, 2024
written by admin March 12, 2024 0 comments 2 minutes read
0FacebookTwitterPinterestEmail
416

ಬೆಂಗಳೂರಿನ ನೀರಿನ ಸಮಸ್ಯೆ ನಿವಾರಣೆ ಸವಾಲಾಗಿದೆ

ಬೆಂಗಳೂರು: ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್ಎಸ್ ಬಿ) ವತಿಯಿಂದ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ ಪ್ರಮುಖ ಗ್ರಾಹಕರುಗಳೊಂದಿಗೆ ಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಸಭೆ ನಡೆಸಿದರು.

ಸಭೆಯಲ್ಲಿ ಮಾತನಾಡಿದ ಅಧ್ಯಕ್ಷ ಮನೋಹರ್ ಅವರು, ಬೆಂಗಳೂರಿಗೆ ನೀರಿನ ಸಮಸ್ಯೆ ಎದುರಾಗಿದೆ. ಬೆಂಗಳೂರಿನಲ್ಲಿ 1.40ಕೋಟಿ ಜನಸಂಖ್ಯೆ ಇದ್ದು,ಈ ಸಂದರ್ಭದಲ್ಲಿ ನೀರು ಒದಗಿಸುವುದು ಸವಾಲಾಗಿದೆ. ಮಂಡಳಿ ಬೆಂಗಳೂರಿಗರಿಗೆ ಅಗತ್ಯ ನೀರು ಒದಗಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.

ಬೆಂಗಳೂರು ನೀರಿನ ಸಮಸ್ಯೆ ಹಿನ್ನೆಲೆ ದೊಡ್ಡಗಾತ್ರದ ಪ್ರಮುಖ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ನೀರನ್ನು ಕಡಿತಗೊಳಿಸಲು  ನಿರ್ಧರಿಸಲಾಗಿದ್ದು, ಮಾ.15ರಿಂದ ಹಂತಹಂತವಾಗಿ ಮಂಡಳಿಯಿಂದ ಪೂರೈಸಲಾಗುತ್ತಿರುವ ಕಾವೇರಿ ನೀರನ್ನು ಕಡಿತಗೊಳಿಸಲಾಗುವುದು ಎಂದು ಹೇಳಿದರು.

ಮಾರ್ಚ್ 15ರಿಂದ ಏ.1ರವರೆಗೆ ಶೇ.10ರಷ್ಟು ಹಾಗೂ ಏ.1ರಿಂದ ಏ.15ರವರೆಗೆ ಶೇ.10ರಷ್ಟು ಸೇರಿದಂತೆ ಶೇ.20ರಷ್ಟು  ಮಂಡಳಿಯಿಂದ ಪೂರೈಸಲಾಗುತ್ತಿರುವ ಕಾವೇರಿ ನೀರು ಕಡಿತಗೊಳಿಸಲಾಗುವುದು.

ಆಸ್ಪತ್ರೆಗಳಿಗೆ ಪೂರೈಸುವ ನೀರಿನಲ್ಲಿ ಕಡಿತವಿಲ್ಲ

ಬೆಂಗಳೂರು ನಗರದಲ್ಲಿ ಒಟ್ಟು 38 ದೊಡ್ಡ ಗಾತ್ರದ ನೀರಿನ ಸಂಪರ್ಕ ಪಡೆದ‌ ಪ್ರಮುಖ ಗ್ರಾಹಕರಿದ್ದು, ಅದರಲ್ಲಿ ನಿಮ್ಹಾನ್ಸ್, ಏರ್ ಫೋರ್ಸ್ ಕಮಾಂಡಿಂಗ್ ಆಸ್ಪತ್ರೆ, ವಿಕ್ಟೋರಿಯಾ ಆಸ್ಪತ್ರೆಗಳಿಗೆ  ಪೂರೈಸಲಾಗುತ್ತಿರುವ ನೀರಿನಲ್ಲಿ ಯಾವುದೇ ರೀತಿಯಲ್ಲಿ ಕಡಿತಗೊಳಿಸದೇ ಉಳಿದ 35 ದೊಡ್ಡ ಗಾತ್ರದ ನೀರಿನ ಸಂಪರ್ಕ ಪಡೆದ ಪ್ರಮುಖ ಗ್ರಾಹಕರಿಗೆ ಕಾವೇರಿ ನೀರು ಕಡಿತಗೊಳಿಸಲಾಗುವುದು ಎಂದು ಅವರು ವಿವರಿಸಿದರು.

ಬೆಂಗಳೂರಿನಲ್ಲಿ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವವರು  1.40ಕೋಟಿ ಜನರ ಹಿತದೃಷ್ಟಿಯಿಂದ ಮಂಡಳಿ ಕೈಗೊಂಡಿರುವ ಈ ನಿರ್ಧಾರಕ್ಕೆ ಕೈಜೋಡಿಸಬೇಕು ಎಂದರು.

ಯಡಿಯೂರಪ್ಪ ಹೆಗಲಿಗೆ ಲೊಕಸಭೆ ಚುನಾವಣೆ ಹೊಣೆ

ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವವರಿಗೆ ಮಂಡಳಿ ವತಿಯಿಂದ ಇದುವರೆಗೆ ಶೇ.95ರಿಂದ ಶೇ.100ರಷ್ಟು ಪೂರೈಸಲಾಗುತ್ತಿದ್ದು, ಇದರಲ್ಲಿ ಇನ್ಮುಂದೆ ಶೇ.20ರಷ್ಟು ನೀರು ಪೂರೈಕೆ ಕಡಿತಗೊಳಿಸಲಾಗುವುದು.

ಈಜುಕೋಳ ಸ್ಥಗಿತಕ್ಕೆ ನಿರ್ದೇಶನ

ರೈಲ್ವೆ, ಎಚ್ಎಎಲ್, ಏರ್ ಪೋರ್ಸ್, ಡಿಫೆನ್ಸ್, ಸಿ.ಆರ್.ಪಿ.ಎಫ್,ಬಯೋಕಾನ್, ನಿಮ್ಹಾನ್ಸ್, ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದಿರುವ ಅನೇಕ ಸಂಸ್ಥೆಗಳು ತಮ್ಮ ಕ್ಯಾಂಪಸ್ ನಲ್ಲಿ ನೀರಿನ ಪ್ರಾಮುಖ್ಯತೆ, ನೀರಿನ ಉಳಿತಾಯ ಕುರಿತು ಅರಿವು ಮೂಡಿಸಬೇಕು ಎಂದು ಸೂಚನೆ ನೀಡಿದ ಅವರು ತಮ್ಮ ಕ್ಯಾಂಪಸ್ ನಲ್ಲಿ ಈಜುಕೋಳಗಳಿದ್ದರೇ ಕೂಡಲೇ ಸ್ಥಗಿತಗೊಳಿಸಿ.ಎಂದು ನಿರ್ದೇಶಿಸಿದರು.

ನೀರಿನ ಸಮಸ್ಯೆ ಹಿನ್ನೆಲೆ ಬೆಂಗಳೂರು ನಗರದಲ್ಲಿರುವ ಎಲ್ಲ ಈಜುಕೋಳ ಕಾರ್ಯನಿರ್ವಹಣೆ  ಸ್ಥಗಿತಗೊಳಿಸುವ ನಿಟ್ಟಿನಲ್ಲಿ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಒಂದು ವೇಳೆ ಉಲ್ಲಂಘಿಸಿದರೆ ಐದು ಸಾವಿರ ರೂ.ವರೆಗೆ ದಂಡ ವಿಧಿಸಲಾಗುವುದು ಎಂದರು.

ಸರ್ಕಾರಿ ನೌಕರರಿಗೆ ಶೇ.3.75 ತುಟ್ಟಿಭತ್ಯೆ ಕೊಡುಗೆ

ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದ ಪ್ರಮುಖ ಗ್ರಾಹಕರ ನೀರಿನ ಪೂರೈಕೆಯಲ್ಲಿ ಶೇ.20ರಷ್ಟು ಕಡಿತಗೊಳಿಸಿದ ನೀರನ್ನು ಜನನೀಬಿಡ ಪ್ರದೇಶಗಳಿಗೆ, ಸ್ಲಂಗಳು ಹಾಗೂ ಬಡವರು ವಾಸಿಸುತ್ತಿರುವ ಪ್ರದೇಶಗಳಿಗೆ ಮತ್ತು ಅತ್ಯಂತ ಅವಶ್ಯವಿರುವ ಪ್ರದೇಶಗಳಿಗೆ ಪೂರೈಸುವಂತೆ ಎಂಜನಿಯರ್ ಗಳಿಗೆ ನಿರ್ದೇಶನ ನೀಡಿದರು.

ಕಾವೇರಿ-5ನೇ ಹಂತದ ಯೋಜನೆ ಮೇ 15ರೊಳಗೆ ಅನುಷ್ಠಾನ

ಕಾವೇರಿ-5ನೇ ಹಂತದ ಯೋಜನೆ ಮೇ 15ರೊಳಗೆ ಅನುಷ್ಠಾನಗೊಳ್ಳಲಿದ್ದು,ಅಲ್ಲಿಯವರೆಗೆ ಕೈಜೋಡಿಸಿ.  ಸಂಸ್ಕರಿಸಿದ ನೀರನ್ನು ಇತರೇ ಉದ್ದೇಶಗಳಿಗೆ ಬಳಸುವಂತೆ ತಿಳಿಸಿದ ಅವರು ಅಗತ್ಯವಿದ್ದಲ್ಲಿ ಒದಗಿಸಲಾಗುವುದು ಎಂದರು.

ಕೊಳವೆಬಾವಿ ಕೊರೆಯುವುದಕ್ಕೆ ಕೆಲವರು ಅನುಮತಿ ಕೋರಿರುವುದನ್ನು ಆಲಿಸಿದ ಅಧ್ಯಕ್ಷರು ಅರ್ಜಿ ಸಲ್ಲಿಸಿ ನಂತರ ತಾಂತ್ರಿಕ ವರದಿಯನ್ನು ತಕ್ಷಣ ಪಡೆದು ಅನುಮತಿ ನೀಡಲು ಕ್ರಮವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ದೊಡ್ಡಗಾತ್ರದ ನೀರಿನ ಸಂಪರ್ಕ ಪಡೆದ ಪ್ರಮುಖ ಸಂಸ್ಥೆಗಳ ಪ್ರತಿನಿಧಿಗಳು, ಮಂಡಳಿಯ ಮುಖ್ಯ  ಎಂಜನಿಯರ್ ಗಳು ಹಾಗೂ ಎಂಜನಿಯರ್ ಗಳು ಮತ್ತು ಅಧಿಕಾರಿಗಳು ಇದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
20%  major consumersBwssbChairman's meetingdecisionlarge scalereducewater connectionswater supply
0 FacebookTwitterPinterestEmail
admin

previous post
ಯಡಿಯೂರಪ್ಪ ಹೆಗಲಿಗೆ ಲೋಕಸಭಾ ಚುನಾವಣೆ ಹೊಣೆ
next post
 ಜಿಲ್ಲಾಸ್ಪತ್ರೆಗಳಲ್ಲಿ ಮೆದುಳು ಆರೋಗ್ಯ ಸೇವೆಗೆ ಚಾಲನೆ

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ