ಡಾ. ಮಂಜುನಾಥ್, ಯದುವೀರ್, ಬೊಮ್ಮಾಯಿಗೆ ಟಿಕೆಟ್: ಸದಾನಂದಗೌಡ, ಪ್ರತಾಪಸಿಂಹ, ಕಟೀಲ್ ಸೇರಿದಂತೆ 9 ಸಂಸದರಿಗೆ ಕೊಕ್
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಪ್ರತಾಪಸಿಂಹ ಸೇರಿದಂತೆ 9 ಮಂದಿ ಸಂಸದರಿಗೆ ಲೋಕಸಭಾ ಚುನಾವಣೆ ಸ್ಪರ್ಧೆಗೆ ಟಿಕೆಟ್ ನಿರಾಕರಿಸಿರುವ ಬಿಜೆಪಿಯು ಹಳೆಯ ಮುಖಗಳ ಜೊತೆಗೆ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಅವಕಾಶ ಕಲ್ಪಿಸಿದೆ.
ಪ್ರಕಟಿಸಿರುವ 20 ಕ್ಷೇತ್ರಗಳ ಅಭ್ಯರ್ಥಿಗಳ ಪೈಕೆ 9 ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಅವಕಾಶ ನೀಡಿದ್ದು, ಒಂದು ಕ್ಷೇತ್ರದಲ್ಲಿ ಮಾತ್ರ ಅಭ್ಯರ್ಥಿ ಬದಲಾಯಿಸಿದೆ.
ಸರ್ಕಾರಕ್ಕೆ ರೈತರು, ಕೃಷಿ ಕಾರ್ಮಿಕರು, ನೇಕಾರರು ಕಾಣಿಸುತ್ತಿಲ್ಲ
ರಾಜಮನೆತನದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರಕ್ಕೆ, ಡಾ. ಸಿ.ಎನ್. ಮಂಜುನಾಥ್ ಅವರಿಗೆ ಬೆಂಗಳೂರು ಗ್ರಾಮಾಂತರ, ಮಾಜಿ ಶಾಸಕ ಎಸ್.ಬಾಲರಾಜ್ ಅವರನ್ನು ಚಾಮರಾಜನಗರದಿಂದ ಬಿಜೆಪಿ ಕಣಕ್ಕಿಳಿಸಿದೆ.
ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಅವರಿಗೆ ಈ ಬಾರಿ ಉಡುಪಿ – ಚಿಕ್ಕಮಗಳೂರು ಬದಲಾಗಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗಿದೆ.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಧಾರವಾಡದಿಂದ ಕಣಕ್ಕಿಳಿಸಿದರೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಹಾವೇರಿಯಿಂದ ಸ್ಪರ್ಧೆಗಿಳಿಸಿದೆ.
ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ತುಮಕೂರು ಟಿಕೆಟ್
ವಿಧಾನ ಪರಿಷತ್ತಿನ ಪ್ರತಿಪಕ್ಷದ ನಾಯಕ ಕೋಟಾ ಶ್ರೀನಿವಾಸಪೂಜಾರಿ ಅವರಿಗೆ ಉಡುಪಿ-ಚಿಕ್ಕಮಗಳೂರು, ಪಕ್ಷದ ಕೆಲವರ ವಿರೋಧಕ್ಕೂ ಮಣಿಯದೇ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ತುಮಕೂರು ಟಿಕೆಟ್ ನೀಡಲಾಗಿದೆ. ದಾವಣಗೆರೆಯಿಂದ ಸಂಸದ ಜಿ.ಎಂ.ಸಿದ್ದೇಶ್ವರ್ ಬದಲು ಅವರ ಪತ್ನಿ ಗಾಯಿತ್ರಿ ಸಿದ್ದೇಶ್ವರ ಅವರಿಗೆ ಅವಕಾಶ ಕಲ್ಪಿಸಿದೆ.
ಉಳಿದಂತೆ ಮಾಜಿ ಮುಖ್ಯಮಂತ್ರ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಶಿವಮೊಗ್ಗ, ಚಿಕ್ಕೋಡಿಯಿಂದ ಅಣ್ಣಾ ಸಾಹೇಬ್ ಶಂಕರ್ ಜೊಲ್ಲೆ, ಬಾಗಲಕೋಟೆಯಿಂದ ಪಿ.ಸಿ.ಗದ್ದಿಗೌಡರ್, ಬಿಜಾಪುರದಿಂದ ರಮೇಶ್ ಜಿಗಜಿಣಗಿ, ಗುಲ್ಬರ್ಗಾದಿಂದ ಡಾ.ಉಮೇಶ್ ಜಿ.ಜಾದವ್, ಬೀದರ್ ನಿಂದ ಕೇಂದ್ರ ಸಚಿವ ಭಗವಂತ್ ಖೂಬಾ, ಬೆಂಗಳೂರು ಸೆಂಟ್ರಲ್ ನಿಂದ ಪಿ.ಸಿ.ಮೋಹನ್, ಬೆಂಗಳೂರು ದಕ್ಷಿಣದಿಂದ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿ ಮರು ಸ್ಪರ್ಧೆಗೆ ಅವಕಾಶ ನೀಡಲಾಗಿದೆ.
ಪರೀಕ್ಷೆ ನಂತರವೇ ದೇವಸ್ಥಾನ ಪ್ರಸಾದ ವಿತರಣೆ
ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ನಳಿನ್ ಕುಮಾರ್ ಕಟೀಲ್ ಗೆ ಟಿಕೆಟ್ ನಿರಾಕರಿಸಿದ್ದು, ಅವರು ಪ್ರತಿನಿಧಿಸುತ್ತಿದ್ದ ದಕ್ಷಿಣ ಕನ್ನಡ ಕ್ಷೇತ್ರಕ್ಕೆ ಮಾಜಿ ಯೋಧ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರಿಗೆ ನೀಡಲಾಗಿದೆ. ಇನ್ನೂ ಕೊಪ್ಪಳದಿಂದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ತಪ್ಪಿಸಿ, ಡಾ. ಬಸವರಾಜ್ ಕ್ಯಾವಟೂರು ಅವರಿಗೆ ಟಿಕೆಟ್ ನೀಡಲಾಗಿದೆ.
5 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟು
ಬಳ್ಳಾರಿಯಿಂದ ದೇವೆಂದ್ರಪ್ಪ ಅವರ ಬದಲಿಗೆ ಮಾಜಿ ಸಚಿವ ಬಿ.ಶ್ರೀರಾಮುಲು ಅವರಿಗೆ ಅವಕಾಶ ನೀಡಿದೆ.
ಕರ್ನಾಟಕದ 28 ಕ್ಷೇತ್ರಗಳಲ್ಲಿ ಎನ್ ಡಿಎ ಮೈತ್ರಿಕೂಟದ ಜೆಡಿಎಸ್ ಗೆ ಹಾಸನ, ಮಂಡ್ಯ, ಕೋಲಾರ ಬಿಟ್ಟುಕೊಟ್ಟಿದ್ದು, ಉಳಿದ 5 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕಗ್ಗಂಟ್ಟಾಗಿದೆ. ರಾಜ್ಯದ ನಾಯಕರೊಂದಿಗೆ ಕೆಂದ್ರದ ಬಿಜೆಪಿ ನಾಯಕರು ಮತ್ತೊಂದು ಸುತ್ತಿನ ಮಾತುಕತೆ ನಡೆಸಿ ಉಳಿದ ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಲಿದೆ.
ಮೈಸೂರು, ಚಾಮರಾಜನಗರ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಉತ್ತರ, ಚಿಕ್ಕಮಗಳೂರು-ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಹಾವೇರಿ ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಟಿಕೆಟ್ ನೀಡಲಾಗಿದೆ.
ಹೃದಯ ತಜ್ಞ ಡಾ. ಮಂಜುನಾಥ್, ಡಾ. ಬಸವರಾಜ್ ಅವರು ಅಧಿಕೃತ ಬಿಜೆಪಿ ಸದಸ್ಯರಲ್ಲ. ಆದರೂ ಅವರಿಗೂ ಪಕ್ಷ ಸೇರುವ ಮುನ್ನವೇ ಟಿಕೆಟ್ ಘೋಷಣೆ ಮಾಡಲಾಗಿದೆ.