Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyಅಂಕಣರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಬಿಜೆಪಿ ಅತೃಪ್ತರಿಗೆ ಕಾಂಗ್ರೆಸ್ ಟಿಕೆಟ್!

by KM Shivaraju March 19, 2024
written by KM Shivaraju March 19, 2024 0 comments 1 minutes read
0FacebookTwitterPinterestEmail
271

ಬೆಂಗಳೂರು:ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವಿನ ಭಿನ್ನಾಭಿಪ್ರಾಯದ ನಡುವೆಯೇ ರಾಜ್ಯ ಕಾಂಗ್ರೆಸ್ ಅಭ್ಯರ್ಥಿಗಳ ಉಳಿದ ಪಟ್ಟಿ ನಾಳೆ ಪ್ರಕಟಗೊಳ್ಳಲಿದೆ.

ಬಿಜೆಪಿಯಲ್ಲಿ ಟಿಕೆಟ್ ಸಿಗದೆ ಅತೃಪ್ತಗೊಂಡಿರುವ ನಾಯಕರುಗಳನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಟಿಕೆಟ್ ನೀಡುವ ಬಗ್ಗೆ ಉಭಯ ನಾಯಕರಲ್ಲಿ ಭಿನ್ನಾಭಿಪ್ರಾಯ ತಲೆದೋರಿದೆ.

ಸಿಎಂ-ಡಿಸಿಎಂ ವಾದ-ಪ್ರತಿವಾದ

ಯಾರನ್ನಾದರೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳೋಣ ಅವರಿಗೆ ಟಿಕೆಟ್ ನೀಡುವುದು ಬೇಡ, ಅಧಿಕಾರದ ಹಿಂದೆ ಬಿದ್ದವರಿಗೆ ಮಣೆ ಹಾಕಿದರೆ ನಮಗೆ ಲಾಭವಿಲ್ಲ ಎಂದು ಮುಖ್ಯಮಂತ್ರಿ ಅವರು ವರಿಷ್ಠರ ಮುಂದೆ ಸ್ಪಷ್ಟಪಡಿಸಿದ್ದಾರೆ.

ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಹೇಗೆ ಲಾಭವಾಯಿತೋ ಅದೇ ರೀತಿ ಬಿಜೆಪಿಯಿಂದ ಅತೃಪ್ತರಾಗಿರುವ ಸದಾನಂದಗೌಡರನ್ನು ಪಕ್ಷಕ್ಕೆ ಸೇರಿಕೊಂಡು ಚುನಾವಣೆಯಲ್ಲಿ ಸ್ಪರ್ಧೆಗಿಳಿಸಿದರೆ, ಬಿಜೆಪಿಯ ಒಕ್ಕಲಿಗ ಮತಗಳನ್ನು ಕಸಿಯಲು ನಮಗೆ ಇದು ಸದವಕಾಶ ಎಂದು ಶಿವಕುಮಾರ್ ವಾದ ಮಂಡಿಸಿದ್ದಾರೆ.

ಸದಾನಂದಗೌಡರನ್ನು ಮೈಸೂರು-ಕೊಡಗು ಕ್ಷೇತ್ರದಿಂದ ಕಣಕ್ಕಿಳಿಸಿದರೆ ಮೂಲ ಕೊಡವ ಮತ್ತು ಕೊಡವಗೌಡ ಮತಗಳಿಂದ ಕ್ಷೇತ್ರವನ್ನು ನಾವು ಮತ್ತೆ ನಮ್ಮದಾಗಿಸಿಕೊಳ್ಳಬಹುದು ಎಂಬ ವಾದ ಶಿವಕುಮಾರ್ ಅವರದು.

ಇದೇ ರೀತಿ ತುಮಕೂರು, ಕೊಪ್ಪಳ, ಹಾವೇರಿ ಸೇರಿದಂತೆ ಐದು ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರಲ್ಲಿ ಅಸಮಾಧಾನವಿದೆ. ಈಗಾಗಲೇ ಹಾವೇರಿ, ತುಮಕೂರು ಅಭ್ಯರ್ಥಿಗಳ ಆಯ್ಕೆ ಆಗಿದ್ದರೂ ಅಭ್ಯರ್ಥಿಗಳ ಬದಲಾವಣೆ ಮಾತು ಈ ನಾಯಕರ ಗುಂಪಿನಿಂದ ಬಂದಿದೆ.

ಅಭ್ಯರ್ಥಿಗಳ ಪಟ್ಟಿ ನಾಳೆ

ಇದರ ನಡುವೆ ಉಳಿದಿರುವ 21 ಕ್ಷೇತ್ರಗಳ ಪೈಕಿ ಕಗ್ಗಂಟಾಗಿರುವ ಒಂದೆರಡು ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ನಾಳೆ ಹೊರಬೀಳಲಿದೆ.

ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ವರಿಷ್ಠರೊಂದಿಗೆ ಚರ್ಚಿಸಲು ಮತ್ತು ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ.

ಪಕ್ಷದ ಸಂಸದೀಯ ಮಂಡಳಿ ಸಭೆಗೂ ಮುನ್ನ ಉಭಯ ನಾಯಕರು ಪಕ್ಷದ ಮುಖಂಡರೊಂದಿಗೆ ಪ್ರತೇಕವಾಗಿ ಚರ್ಚೆ ಮಾಡಿದ್ದಾರೆ.

ಅಭ್ಯರ್ಥಿಗಳ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆ
ಗೆಲ್ಲುವ ಅಭ್ಯರ್ಥಿಗಳ ಆಯ್ಕೆ

ರಾಜ್ಯ ಚುನಾವಣಾ ಸಮಿತಿ ನೀಡಿರುವ ವರದಿ ಹಾಗೂ ಚುನಾವಣಾ ಸಮೀಕ್ಷೆ ವರದಿಗಳನ್ನು ಆಧಾರವಾಗಿ ಇಟ್ಟುಕೊಂಡು ಗೆಲ್ಲುವ ಅಭ್ಯರ್ಥಿಗಳ ಆಯ್ಕೆ ನಡೆದಿದೆ.

ಕರ್ನಾಟಕದವರೇ ಆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ರಾಜ್ಯ ರಾಜಕೀಯದ ಉದ್ದ, ಆಳ, ಅಗಲದ ಅರಿವಿರುವುದರಿಂದ, ಅವರು ತಮ್ಮ ಪಕ್ಷದ ಮುಖಂಡರನ್ನು ನಿಭಾಯಿಸಿ ರಾಜ್ಯದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಯ್ಕೆ ಮಾಡಲಿದ್ದಾರೆ.

ಎಐಸಿಸಿ ಅಧ್ಯಕ್ಷರಿಗೆ ಪ್ರತಿಷ್ಠೆ ವಿಷಯ

ಎಲ್ಲದಕ್ಕೂ ಮಿಗಿಲಾಗಿ ಕರ್ನಾಟಕದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸುವುದು ಎಐಸಿಸಿ ಅಧ್ಯಕ್ಷರೂ ಆಗಿರುವ ಖರ್ಗೆ ಅವರಿಗೆ ಪ್ರತಿಷ್ಠೆಯಾಗಿದೆ.

ಇದರ ನಡುವೆ ಬಿಜೆಪಿಯಲ್ಲಿ ಟಿಕೆಟ್ ಸಿಗದ 10 ಕ್ಕೂ ಹೆಚ್ಚು ಮುಖಂಡರು ಹಾಗೂ ಹಾಲಿ ಸಂಸದರು ಕಾಂಗ್ರೆಸ್ ಟಿಕೆಟ್ ಪಡೆಯಬೇಕೆಂದು ತೆರೆಮರೆಯಲ್ಲಿ ಭಾರೀ ಲಾಬಿ ನಡೆಸಿದ್ದಾರೆ.

ಸಿದ್ದರಾಮಯ್ಯ, ಶಿವಕುಮಾರ್ ಅವರ ಹೆಚ್ಚು ವಿಶ್ವಾಸ ಯಾರಿಗಿದೆಯೋ ಅಂತಹವರ ಮೂಲಕ ಟಿಕೆಟ್ ಪಡೆಯುವ ಪ್ರಯತ್ನ ಮಾಡಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
candidates 2nd list very sooncm-dcm argue before party high commandcongres ticket to bjp dissidents
0 FacebookTwitterPinterestEmail
KM Shivaraju

previous post
ಅಭ್ಯರ್ಥಿಗಳ ಎರಡನೇ ಪಟ್ಟಿ ಸದ್ಯದಲ್ಲೇ ಬಿಡುಗಡೆ
next post
ಡಿ.ಕೆ.ಶಿವಕುಮಾರ್ ಅನುಕಂಪ ನಮಗೆ ಬೇಕಿಲ್ಲ: ಹೆಚ್ ಡಿಕೆ

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ