ಬಾಕಿ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಶುಕ್ರವಾರ
ಬೆಂಗಳೂರು:ಕರ್ನಾಟಕ ಲೋಕಸಭೆಗೆ ಉಳಿದಿರುವ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಮಾರ್ಚ್ 22 ರಂದು ಶುಕ್ರವಾರ ಬಿಡುಗಡೆ ಮಾಡಲಿದೆ.
ಅಭ್ಯರ್ಥಿಗಳ ಆಯ್ಕೆ ರಾಜ್ಯ ಜೆಡಿಎಸ್ ಜೊತೆಗಿನ ನಂಟನ್ನು ಮತ್ತಷ್ಟು ಗಟ್ಟಿಗೊಳಿಸಲು ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಯಲ್ಲಿ ಮೊಕ್ಕಾಂ ಹೂಡಿದ್ದಾರೆ.
ಐದು ಸ್ಥಾನಗಳಿಗಷ್ಟೇ ಅಭ್ಯರ್ಥಿ ಬಾಕಿ
ರಾಜ್ಯದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಬಿಜೆಪಿ, ಜೆಡಿಎಸ್‌ಗೆ ಮೂರು ಸ್ಥಾನಗಳನ್ನು ನೀಡಿದರೆ, ಉಳಿದ ಐದು ಸ್ಥಾನಗಳಿಗಷ್ಟೇ ಅಭ್ಯರ್ಥಿಗಳನ್ನು ಪ್ರಕಟಿಸಬೇಕಿದೆ.
ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ವರಿಷ್ಠರೊಂದಿಗೆ ಚರ್ಚೆ ನಡೆಸುವ ಸಂಬಂಧ ದೆಹಲಿಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಬಾಕಿ ಇರುವ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಶುಕ್ರವಾರ ಹೊರಬೀಳಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರೊಂದಿಗೆ ಚರ್ಚಿಸಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗುವುದು.
ಪಟ್ಟಿ ನಂತರ ರಾಜ್ಯಾದ್ಯಂತ ಪ್ರವಾಸ
ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ನಮ್ಮಲ್ಲಿ ಗೊಂದಲವಿಲ್ಲ, ಪಟ್ಟಿ ಹೊರ ಬಂದ ನಂತರ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲಾಗುವುದು.
ಆಡಳಿತಾರೂಢ ಕಾಂಗ್ರೆಸ್‌ಗೆ ಕರ್ನಾಟಕದಲ್ಲಿ ಸಮರ್ಥ ಅಭ್ಯರ್ಥಿಗಳು ದೊರೆಯದೆ, ನಮ್ಮಲ್ಲಿರುವ ಕೆಲವು ಅಸಮಾಧಾನಿತರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಅಂತಹವರು ಪಕ್ಷ ಬಿಟ್ಟು ಹೋದರೆ ಏನು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು. ಜೆಡಿಎಸ್ ಮೈತ್ರಿ ಮತ್ತಷ್ಟು ಗಟ್ಟಿಯಾಗಿದೆ ಎಂದು ಈಗಾಗಲೇ ಕುಮಾರಸ್ವಾಮಿ ಅವರೇ ಹೇಳಿಕೆ ನೀಡಿದ್ದಾರೆ, ಮುಂದೆ ಜಂಟಿಯಾಗಿ ಹೋರಾಟ ನಡೆಸುತ್ತೇವೆ ಎಂದರು.
1 comment
[…] ರಾಜಕೀಯ […]