ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ನಡೆದ ಹೃದಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಆರೋಗ್ಯದಿಂದ ಇದ್ದಾರೆ.
ಹಂಗೇರಿಯಿಂದ ಬಂದಿದ್ದ ತಜ್ಞ ವೈದ್ಯರುಗಳು ಹೃದಯ ತಜ್ಞ ಡಾಸಿ.ಎನ್.ಮಂಜುನಾಥ್ ಅವರ ಮಾರ್ಗದರ್ಶನದಲ್ಲಿ ಸತತ ನಾಲ್ಕು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿದರು.
ಕುಮಾರಸ್ವಾಮಿ ಅವರಿಗೆ ಇದು ಮೂರನೇ ಹೃದಯ ಶಸ್ತ್ರ ಚಿಕಿತ್ಸೆಯಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.
ತಜ್ಞ ವೈದ್ಯರ ತಂಡ ಮೇಲ್ವಿಚಾರಣೆ
ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿದ್ದು, ತೀವ್ರ ನಿಗಾ ಘಟಕದಿಂದ ನಾಡಿದ್ದು, ಶನಿವಾರ ವಾರ್ಡ್‌ಗೆ ಸ್ಥಳಾಂತರ ಮಾಡಲಾಗುತ್ತದೆ.
ಆಸ್ಪತ್ರೆಯಲ್ಲಿ ಕುಮಾರಸ್ವಾಮಿ ಅವರ ಕುಟುಂಬ ವರ್ಗದವರೂ ಇದ್ದಾರೆ.
ಮಾರ್ಚ್ 24ರಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ಅಂದೇ ಬೆಂಗಳೂರಿಗೆ ಕುಮಾರಸ್ವಾಮಿ ಹಿಂತಿರುಗಲಿದ್ದಾರೆ.
ಮಂಡ್ಯದಿಂದಲೇ ಲೋಕಸಭೆಗೆ
ಕುಮಾರಸ್ವಾಮಿ ಅವರ ಯಶಸ್ವಿ ಶಸ್ತ್ರ ಚಿಕಿತ್ಸೆ ನಂತರ ಆವರ ಆರೋಗ್ಯ ಸುಧಾರಿಸುತ್ತಿದ್ದಂತೆ, ಇತ್ತ ಮಾಜಿ ಸಂಸದ ಸಿ.ಎಸ್.ಪುಟ್ಟರಾಜು ಅವರು ಹೇಳಿಕೆಯೊಂದನ್ನು ನೀಡಿ, ಕುಮಾರಸ್ವಾಮಿ ಮಂಡ್ಯದಿಂದಲೇ ಲೋಕಸಭೆಗೆ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಕುಮಾರಣ್ಣನೇ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ, ಇದರಲ್ಲಿ ಯಾವುದೇ ಅನುಮಾನ ಬೇಡ, ಅವರನ್ನು ಭಾರೀ ಅಂತರದಿಂದ ಗೆಲ್ಲಿಸಿ ಲೋಕಸಭೆಗೆ ಕಳುಹಿಸಿಕೊಡುತ್ತೇವೆ ಎಂದಿದ್ದಾರೆ.
2 comments
[…] ರಾಜಕೀಯ […]
[…] ರಾಜಕೀಯ […]