Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸುವ ಇಂಗಿತ

by admin March 24, 2024
written by admin March 24, 2024 0 comments 2 minutes read
1FacebookTwitterPinterestEmail
190

ಚೆನ್ನೈ ಆಸ್ಪತ್ರೆಯಿಂದ ಮನಗೆ ಮರಳಿದ ಕುಮಾರಸ್ವಾಮಿ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕಿಳಿಯುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವ್ಯಕ್ತಪಡಿಸಿದ್ದಾರೆ.

ಚೆನ್ನೈನಲ್ಲಿ ಮೂರನೇ ಬಾರಿಗೆ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿ ಮನೆಗೆ ಮರಳಿದ ಅವರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಸಂಖ್ಯಾತ ಕಾರ್ಯಕರ್ತರು, ಅಭಿಮಾನಿಗಳು ಆಗಮಿಸಿದ್ದರು.

ಮಂಡ್ಯ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ನೀವೇ ಆಗಬೇಕು ಎಂದು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಒತ್ತಾಯ ಮಾಡಿದ ಸಕ್ಕರೆನಾಡಿನ  ಜೆಡಿಎಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಮುಖಂಡರು ಜೆ.ಪಿ.ನಗರದಲ್ಲಿರುವ ಮಾಜಿ ಮುಖ್ಯಮಂತ್ರಿಗಳ ನಿವಾಸದ ಎದುರಿನ ರಸ್ತೆಯಲ್ಲಿಯೇ ಕೂತು ಘೋಷಣೆ ಕೂಗಿದ ಘಟನೆ ನಡೆಯಿತು.

ಮಂಡ್ಯ ಜಿಲ್ಲೆಯ ಕಾರ್ಯಕರ್ತರು, ಮುಖಂಡರು ಕುಮಾರಸ್ವಾಮಿ ಅವರೇ ಮಂಡ್ಯ ಕ್ಷೇತ್ರದ ಅಭ್ಯರ್ಥಿಯಾಗಬೇಕು ಎಂದು ಪಟ್ಟು ಹಿಡಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯಿಂದ ಆಗಮಿಸಿದ ಜೆಡಿಎಸ್ ಕಾರ್ಯಕರ್ತರ, ಮುಖಂಡರ ಒತ್ತಡಕ್ಕೆ ಮಣಿದ ಕುಮಾರಸ್ವಾಮಿ ಅವರು, ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ. ನಾಳೆ ಸಂಜೆ ಚನ್ನಪಟ್ಟಣ ಮುಖಂಡರ, ಕಾರ್ಯಕರ್ತರ ಸಭೆಯನ್ನು ನಡೆಸಿದ ನಂತರ ತಮ್ಮ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.

ಯುವ ಜೆಡಿಎಸ್ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕಾರ್ಯಕರ್ತರನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು. ತಂದೆಯವರು ಹೃದಯ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಈಗಷ್ಟೇ ಮನೆಗೆ ಬಂದಿದ್ದಾರೆ. ಅವರಿಗೆ ಒಂದು ದಿನ ಕಾಲಾವಕಾಶ ಕೊಡಿ ಎಂದು ಮನವಿ ಮಾಡಿಕೊಂಡರು.

ನಿಖಿಲ್ ಅವರ ಮಾತಿನ ನಡುವೆಯೇ ಕುಮಾರಸ್ವಾಮಿ ಅವರೇ ನಮ್ಮ ಅಭ್ಯರ್ಥಿ ಎಂದು ಘೋಷಣೆಗಳನ್ನು ಕೂಗತೊಡಗಿದ ಕಾರ್ಯಕರ್ತರನ್ನು ಕೊನೆಗೆ ಕುಮಾರಸ್ವಾಮಿ ಅವರೇ ಸಮಾಧಾನಪಡಿಸಬೇಕಾಯಿತು.

ಬೊಜ್ಜು, ಕೊಬ್ಬು ನಿಯಂತ್ರಣಕ್ಕೆ ರುದ್ರಮುದ್ರೆ ರಾಮಬಾಣ

ಹೆಚ್ಚು ಆಯಾಸ ಮಾಡಿಕೊಳ್ಳಬಾರದು, ಹೆಚ್ಚು ಮಾತನಾಡಲೂಬಾರದು ಎಂದು ವೈದ್ಯರು ನೀಡಿರುವ ಸಲಹೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಮಂಡ್ಯದಲ್ಲಿ ನಮಗೆ  ವಿಶೇಷ ಪ್ರೀತಿ ವಿಶ್ವಾಸ ಸಿಕ್ಕಿದೆ. ಅದು ನನ್ನ ಭಾಗ್ಯ. ನಾನು ಈ ಭೂಮಿಯಲ್ಲಿ ಇರುವವರೆಗೂ ಈ ಪ್ರೀತಿಯನ್ನು  ಮರೆಯಲು ಸಾಧ್ಯವಿಲ್ಲ. ನನಗೆ ಈವರೆಗೆ ಮೂರು ಬಾರಿ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ನನ್ನ ಆರೋಗ್ಯವನ್ನು ನೋಡಿಕೊಂಡು ಪಕ್ಷದ ಕೆಲಸ, ಜನರ ಸೇವೆ ಮಾಡಬೇಕಿದೆ ಎಂದು ಕುಮಾರಸ್ವಾಮಿ ಹೇಳಿದರು.

ನಮ್ಮ ಪಕ್ಷದಲ್ಲಿ ದೊಡ್ಡ ನಾಯಕರು ಯಾರು ಇಲ್ಲ. ನಮ್ಮ ಪಕ್ಷದಲ್ಲಿ ಬೆಳೆದವರು ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿ ಹೋಗಿದ್ದಾರೆ. ನಿಮ್ಮ ಆಸೆಗೆ ನಿರಾಸೆ ಮಾಡಲ್ಲ ಎಂದು ಮಂಡ್ಯದ ಸಭೆಯಲ್ಲೇ ಹೇಳಿದ್ದೇನೆ ಎಂದು ನುಡಿದರು.

ನಾನು ಹುಟ್ಟಿದ್ದು ಹಾಸನ ಜಿಲ್ಲೆಯಲ್ಲಿ. ನನಗೆ ರಾಜಕೀಯ ಜನ್ಮ ಕೊಟ್ಟಿದ್ದು ರಾಮನಗರ ಜಿಲ್ಲೆ, ಜೀವಕ್ಕೆ ಜೀವವಾಗಿ ನನ್ನನ್ನು ಪೊರೆದು ಸಲಹುತ್ತಿರುವ ಜಿಲ್ಲೆ ಮಂಡ್ಯ. ಈ ನೆಲವನ್ನು, ಈ ಜನರ ಪ್ರೀತಿ ವಿಶ್ವಾಸವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ನಾಳೆ (ಸೋಮವಾರ) ಚನ್ನಪಟ್ಟಣ ಕ್ಷೇತ್ರದ  ಮುಖಂಡರನ್ನು ಕರೆಸಿ ಮಾತನಾಡುತ್ತೇನೆ. ನಾಳೆಯ ದಿನ ಯಾವುದೇ ಕಾರಣಕ್ಕೂ ನಿಮಗೆ ನಿರಾಶೆ ಮಾಡಲ್ಲ ಎಂದು ಮಂಡ್ಯ ಜಿಲ್ಲೆಯ ಕಾರ್ಯಕರ್ತರಿಗೆ ಕುಮಾರಸ್ವಾಮಿ ಅವರು ಭರವಸೆ ನೀಡಿದರು.

ಇದಕ್ಕೂ ಮೊದಲು ಮಂಡ್ಯ ಕಾರ್ಯಕರ್ತರ ಜತೆ ಮಾತನಾಡಿದ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಂಡ್ಯ ಕಾರ್ಯಕರ್ತರಾದ ತಾವೆಲ್ಲರೂ ಬಂದು ಒತ್ತಾಯ ಮಾಡುತ್ತಿದ್ದೀರಿ. ನಾಳೆ ಚನ್ನಪಟ್ಟಣ ಕಾರ್ಯಕರ್ತರ ಸಭೆ ಕರೆಯಲಾಗಿದೆ. ಮಂಡ್ಯದಲ್ಲಿ ತಂದೆಯವರೇ ಚುನಾವಣೆಗೆ ನಿಲ್ಲಲಿ ಎಂದು ಒತ್ತಡ ಇದೆ. ನಮ್ಮ ಕುಟುಂಬದಿಂದ ಚುನಾವಣೆ ಸ್ಪರ್ಧೆ ಬೇಡ ಅಂದುಕೊಂಡಿದ್ದೆವು.

ಕೇಂದ್ರದ ವಿರುದ್ಧ ತೊಡೆ ತಟ್ಟಿದ ಸಿದ್ದರಾಮಯ್ಯ

ಆದರೆ ಮಂಡ್ಯದ ಪರಿಸ್ಥಿತಿಯೇ ಬೇರೆ ಇದೆ. ಹೀಗಾಗಿ ಕುಮಾರಣ್ಣ ಅವರ ಮೇಲೆ ನೀವೆಲ್ಲಾ ಒತ್ತಡ ಹಾಕುತ್ತಿದ್ದೀರಿ. ತಂದೆಯವರು ಒಂದು ದಿನದ ಸಮಯಾವಕಾಶ ಕೇಳಿದ್ದಾರೆ. ನಾಳೆ (ಸೋಮವಾರ) ಸಂಜೆಯೊಳಗೆ ಅಭ್ಯರ್ಥಿ ಯಾರೆಂದು ಅಂತಿಮ ಆಗಬಹುದು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು.

2019ರ ಲೊಕಸಭೆ ಚುನಾವಣೆಯಲ್ಲಿ ನನಗೆ ಕೆಲವರ ಕುತಂತ್ರದಿಂದ ಸೋಲಾಯಿತು. ಚಿತಾವಣೆಯಿಂದಲೇ ನಾನು ಸೋತೆ. ಹಾಗಾಗಿ ಜಿಲ್ಲೆಯ ಜನರು, ಕಾರ್ಯಕರ್ತರು ನಾನು  ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಒತ್ತಾಯ ಮಾಡುತ್ತಿದ್ದಾರೆ. ಕಳೆದ ಬಾರಿ ಸೊತಿದ್ದೀರಿ, ಈ ಬಾರಿ ಗೆಲ್ಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ನಾಳೆ ಸಂಜೆಯೊಳಗೆ ತಂದೆಯವರ ನಿರ್ಧಾರ ಗೊತ್ತಾಗಲಿದೆ ಎಂದು ಅವರು ನುಡಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯ ಹಿರಿಯ ನಾಯಕರು, ಮಾಜಿ ಸಚಿವರಾದ ಡಿ.ಸಿ.ತಮ್ಮಣ್ಣ, ಶಾಸಕರಾದ ಹೆಚ್.ಟಿ.ಮಂಜುನಾಥ್, ಮಾಜಿ ಶಾಸಕರಾದ ಡಾ.ಕೆ.ಅನ್ನದಾನಿ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಡಿ.ರಮೇಶ್, ಜಿಲ್ಲಾ ಯುವ ಜನತಾದಳ ಅಧ್ಯಕ್ಷ ರವಿಕುಮಾರ್, ಹಿರಿಯ ಮುಖಂಡ ರಾಮಚಂದ್ರ ಸೇರಿದಂತೆ ಸಾವಿರಾರು ಕಾರ್ಯಕರ್ತರು ಮಾಜಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ನೆರೆದಿದ್ದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
competeconstituencyhdkIntendkumaraswamylokasabhamandyarecovered
1 FacebookTwitterPinterestEmail
admin

previous post
ದಿನ ಭವಿಷ್ಯ : ಭಾನುವಾರ, 24 ಮಾರ್ಚ್ 2024
next post
ಮೇಕೆದಾಟು ಜಲಾಶಯ ಕಟ್ಟುತ್ತೇವೆ : ಗುಡುಗಿದ ಹೆಚ್.ಡಿ.ದೇವೇಗೌಡರು

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ