Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಮೊಳಗಿದ ಚುನಾವಣಾ ರಣಕಹಳೆ!

by KM Shivaraju March 27, 2024
written by KM Shivaraju March 27, 2024 0 comments 2 minutes read
0FacebookTwitterPinterestEmail
403

ನಾಮಪತ್ರ ಸಲ್ಲಿಕೆಗೆ ನಾಳೆ ಅಧಿಸೂಚನೆ

ಬೆಂಗಳೂರು:ಮೈಸೂರು-ಕೊಡಗು, ಮಂಡ್ಯ ಸೇರಿದಂತೆ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆಯಿಂದ (ಮಾರ್ಚ್ 28) ನಾಮಪತ್ರ ಸಲ್ಲಿಕೆ ಆರಂಭಗೊಳ್ಳಲಿದೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 14 ಕ್ಷೇತ್ರಗಳ ವ್ಯಾಪ್ತಿಯ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿಗಳು ಚುನಾವಣಾ ಪ್ರಕ್ರಿಯೆ ಆರಂಭಕ್ಕೆ ಅಧಿಸೂಚನೆ ಹೊರಡಿಸಲಿದ್ದಾರೆ.

ಆಕಾಂಕ್ಷಿಗಳು ಸ್ಪರ್ಧಾ ಕಣಕ್ಕೆ

ಅಧಿಸೂಚನೆ ಹೊರಬೀಳುತ್ತಿದ್ದಂತೆ ಸ್ಪರ್ಧಾ ಕಣಕ್ಕಿಳಿಯುವ ಆಕಾಂಕ್ಷಿಗಳು ಆಯೋಗದ ನಿಯಮಾನುಸಾರ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ.

ಮೈಸೂರು-ಕೊಡಗು, ಮಂಡ್ಯ ಅಲ್ಲದೆ, ಚಾಮರಾಜನಗರ, ಹಾಸನ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಳ್ಳಲಿದೆ.

ಏಪ್ರಿಲ್ 4 ಕೊನೆಯ ದಿನ

ಏಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿರುತ್ತದೆ, ಏಪ್ರಿಲ್ 5 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏಪ್ರಿಲ್ 8 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಏಪ್ರಿಲ್ 26 ರಂದು ಎಲ್ಲಾ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಮತದಾನ ನಡೆದ 38 ದಿನಗಳ ನಂತರ ಅಂದರೆ, ಜೂನ್ 4 ರಂದು ಮತ ಎಣಿಕೆ ನಡೆದು ಅಂದೇ ಫಲಿತಾಂಶ ಪ್ರಕಟಗೊಳ್ಳಲಿದೆ.

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶದಿಂದ ರಾಜ್ಯವನ್ನು ಉತ್ತರ ಮತ್ತು ದಕ್ಷಿಣ ಕರ್ನಾಟಕವಾಗಿ ವಿಭಜಿಸಿರುವ ಆಯೋಗ ತಲಾ 14 ಕ್ಷೇತ್ರಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಸುತ್ತಿದೆ.

ಚಾಮರಾಜನಗರ, ಕೋಲಾರ, ಚಿತ್ರದುರ್ಗ ಮೂರು ಮೀಸಲು ಕ್ಷೇತ್ರಗಳಾಗಿದ್ದು, ಉಳಿದವು ಸಾಮಾನ್ಯ ಕ್ಷೇತ್ರಗಳಾಗಿವೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ರಾಜವಂಶಸ್ತ ಯದುವೀರ್ ಶ್ರೀಕೃಷ್ಣದತ್ತ ಒಡೆಯರ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ವಿದ್ಯುತ್ ಕಡಿತವೂ ಇಲ್ಲ, ಲೋಡ್ ಶೆಡ್ಡಿಂಗೂ ಇಲ್ಲ
ಪ್ರತಿಷ್ಠೆಯ ಕ್ಷೇತ್ರಗಳು

ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಕಾಂಗ್ರೆಸ್‌ನಿಂದಲೂ, ಎನ್‌ಡಿಎ ಅಭ್ಯರ್ಥಿಯಾಗಿ ಹೃದಯ ತಜ್ಞ ಡಾ.ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದರಿಂದ ಇವು ಪ್ರತಿಷ್ಠೆಯ ಕ್ಷೇತ್ರಗಳಾಗಿವೆ.

ಈ 14 ಕ್ಷೇತ್ರಗಳ ಪೈಕಿ ಕಳೆದ ಚುನಾವಣೆಯಲ್ಲಿ ಬಿಜೆಪಿ 11 ಕ್ಷೇತ್ರಗಳಲ್ಲಿ ಜಯ ಸಾಧಿಸಿದ್ದರೆ, ಉಳಿದ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ತಲಾ ಒಂದು ಕ್ಷೇತ್ರದಲ್ಲೂ, ಪಕ್ಷೇತರರು ಒಂದು ಕ್ಷೇತ್ರದಲ್ಲಿ ಜಯ ಗಳಿಸಿದ್ದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡು ಕಣಕ್ಕಿಳಿದಿದ್ದವು, ಆದರೆ ಪ್ರಸಕ್ತ ಚುನಾವಣೆಯಲ್ಲಿ ಜೆಡಿಎಸ್, ಎನ್‌ಡಿಎ ಮೈತ್ರಿ ಕೂಟದ ಪಾಲುದಾರನಾಗಿದ್ದು, ಈ ಬಾರಿ ಬಿಜೆಪಿ ಜೊತೆ ಚುನಾವಣಾ ಹೊಂದಾಣಿಕೆ ಮಾಡಿಕೊಂಡು ರಾಜ್ಯದಲ್ಲಿನ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ಎದುರಿಸುತ್ತಿವೆ.

ಮೊದಲ ಹಂತದ ಎಲ್ಲಾ 14 ಕ್ಷೇತ್ರಗಳಲ್ಲೂ ಕಾಗ್ರೆಸ್ ಸ್ಪರ್ಧಿಸಲಿದ್ದು, ಬಿಜೆಪಿ 11 ರಲ್ಲೂ, ಜೆಡಿಎಸ್ ಮೂರು ಕ್ಷೇತ್ರದಲ್ಲಿ ಕಣಕ್ಕಿಳಿದು ಹೋರಾಟ ನಡೆಸುತ್ತಿವೆ.

ಐದು ಕ್ಷೇತ್ರಗಳಿಗೆ ಇನ್ನೂ ಅಭ್ಯರ್ಥಿಗಳಿಲ್ಲ

ಕಾಂಗ್ರೆಸ್ ಇನ್ನು ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಿಲ್ಲ, ಬಿಜೆಪಿ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿ ಪ್ರಕಟಿಸಿಲ್ಲ. ಆದರೆ, ನಾಳೆಯಿಂದಲೇ ಈ ಎಲ್ಲಾ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದೆ.

ಈ ಚುನಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎನ್‌ಡಿಎ ಮಿತ್ರ ಪಕ್ಷಗಳು ಬಹಳ ಪ್ರತಿಷ್ಠೆಯಾಗಿ ತೆಗದುಕೊಂಡಿವೆ.

ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗಳಿಸುವ ಮೂಲಕ ದೆಹಲಿಯಲ್ಲಿ ಕಾಂಗ್ರೆಸ್‌ಗೆ ಬಲ ತರಬೇಕೆಂದು ಸಿದ್ದರಾಮಯ್ಯ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ.

ಇನ್ನು ನರೇಂದ್ರ ಮೋದಿ ಅವರನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡಲು ರಾಜ್ಯದಿಂದ 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಜಯಗಳಿಸಿ ದೆಹಲಿಗೆ ಉಡುಗೊರೆಯಾಗಿ ಕೊಡಲು ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ವಿರುದ್ಧ ಸೆಣಸಾಟಕ್ಕೆ ಇಳಿದಿವೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
april 4 last date to nominationnomination starts to14 constituencynotification tommorow
0 FacebookTwitterPinterestEmail
KM Shivaraju

previous post
ವಿದ್ಯುತ್ ಕಡಿತವೂ ಇಲ್ಲ, ಲೋಡ್ ಶೆಡ್ಡಿಂಗೂ ಇಲ್ಲ
next post
ದಿನ ಭವಿಷ್ಯ : ಗುರುವಾರ, 28ಮಾರ್ಚ್ 2024

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ