Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕೇಂದ್ರ ಸರ್ಕಾರದ ತೆರಿಗೆ ಭಯೋತ್ಪಾದನೆ

by admin March 30, 2024
written by admin March 30, 2024 0 comments 2 minutes read
2FacebookTwitterPinterestEmail
259

ಎನ್‌ಡಿಎಗೆ ಸೋಲು ಖಚಿತ:ಸಿದ್ದರಾಮಯ್ಯ

ಬೆಂಗಳೂರು:ಇಡಿ, ಐಟಿ, ಸಿಬಿಐ ಸಂಸ್ಥೆಗಳ ಮೂಲಕ “ತೆರಿಗೆ ಭಯೋತ್ಪಾದನೆ” ನಡೆಸಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮಣಿಸಬಹುದೆಂಬ ಭ್ರಮೆಯಲ್ಲಿ ಬಿಜೆಪಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಮೇಲೆ ವರಮಾನ ತೆರಿಗೆ ಪಾವತಿ ಮಾಡಿಲ್ಲವೆಂಬ ಆರೋಪ ಹೊರಿಸಿ 1,823 ಕೋಟಿ ರೂ. ಪಾವತಿಸುವಂತೆ ಆದಾಯ ತೆರಿಗೆ (ಐಟಿ) ಇಲಾಖೆ ನೋಟಿಸ್ ನೀಡಿದೆ, 2017-18ರಲ್ಲಿ ಬಿಜೆಪಿ ಹೆಸರೇ ನಮೂದಿಸದ 92 ದಾನಿಗಳಿಂದ ಮತ್ತು ವಿಳಾಸವೇ ನೀಡದ 1,297 ದಾನಿಗಳಿಂದ 42 ಕೋಟಿ ರೂ.ಗಿಂತ ಹೆಚ್ಚು ದೇಣಿಗೆ ಪಡೆದಿರುವುದನ್ನು ಕಾಂಗ್ರೆಸ್ ನಾಯಕರು ಬಯಲಿಗೆಳೆದಿದೆ ಎಂದಿದ್ದಾರೆ.

ಕಾಂಗ್ರೆಸ್‌ಗೆ ಅನ್ವಯಿಸಿದ ಮಾನದಂಡವನ್ನೇ ಬಿಜೆಪಿಗೂ ಅಳವಡಿಸಿದರೆ ಕಳೆದ ಏಳು ವರ್ಷಗಳ ತೆರಿಗೆ ಉಲ್ಲಂಘನೆಗಳಿಗೆ ಆ ಪಕ್ಷ 4,263 ಕೋಟಿ ರೂ. ಪಾವತಿಸಬೇಕಾಗುತ್ತದೆ.

ಐಟಿ ಜಾಣ ಕುರುಡು

ಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಎಂಸಿ, ಸಿಪಿಐ ಸೇರಿದಂತೆ ವಿವಿಧ ವಿರೋಧ ಪಕ್ಷಗಳ ಮೇಲೂ ತೆರಿಗೆ ಭಯೋತ್ಪಾದನೆ ಅಸ್ತ್ರ ಪ್ರಯೋಗ ಮಾಡಿರುವ ಐಟಿ, ಬಿಜೆಪಿಯ ತೆರಿಗೆ ಉಲ್ಲಂಘನೆ ಬಗ್ಗೆ ಜಾಣ ಕುರುಡು ಪ್ರದರ್ಶಿಸುತ್ತಿದೆ, ದೇಶದ ಜನತೆ ಇದನ್ನು ತಿಳಿಯದಷ್ಟು ದಡ್ಡರಲ್ಲ.

ಕಾಂಗ್ರೆಸ್ ಪಕ್ಷದ ಕೆಲವು ನಾಯಕರ ಡೈರಿಗಳೆಂದು ಹೇಳಲಾದ ದಾಖಲೆ ಪತ್ರಗಳನ್ನು ಮುಂದಿಟ್ಟುಕೊಂಡು ತೆರಿಗೆ ಉಲ್ಲಂಘನೆ ಆರೋಪ ಮಾಡುತ್ತಿರುವ ಐಟಿ ಇಲಾಖೆಗೆ, ಕರ್ನಾಟಕದಲ್ಲಿ ಬಯಲಾಗಿದ್ದ ಯಡಿಯೂರಪ್ಪ ಡೈರಿಗಳಾಗಲಿ, ನರೇಂದ್ರ ಮೋದಿ ಅವರೂ ಫಲಾನುಭವಿ ಎಂದು ಆರೋಪಿಸಲಾಗಿರುವ ’ಬಿರ್ಲಾ-ಸಹಾರಾ’ ಡೈರಿಯಾಗಲಿ ಏಕೆ ಕಣ್ಣಿಗೆ ಬಿದ್ದಿಲ್ಲ ಎಂದು ಪ್ರಶ್ನಿಸಿದ್ದಾರೆ.

ಚುನಾವಣಾ ಬಾಂಡ್‌ಗಳ ಮೂಲಕ ಸಾವಿರಾರು ಕೋಟಿ ರೂ.ಗಳನ್ನು ಆಡಳಿತಾರೂಡ ಬಿಜೆಪಿ ಸುಲಿಗೆ ಮಾಡಿರುವುದು ಜಗಜ್ಜಾಹೀರಾಗಿದೆ, ಈ ಹಗರಣದಿಂದ ಜನರ ಗಮನ ಬೇರೆಡೆ ಸೆಳೆಯುವ ಹಾಗೂ ವಿರೋಧ ಪಕ್ಷಗಳನ್ನೂ ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ದುರುದ್ದೇಶದಿಂದ ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರ ವರಮಾನ ತೆರಿಗೆ ವಂಚನೆಯ ಸುಳ್ಳು ಆರೋಪ ಮಾಡುತ್ತಿದೆ.

ಬ್ಯಾಂಕ್ ವಂಚಕರ ಸಾಲ ಮನ್ನಾ

ಕಳೆದ ಐದು ವರ್ಷಗಳಲ್ಲಿ ವಿಜಯ್ ಮಲ್ಯ, ನೀರವ್ ಮೋದಿಯಂತಹ ಬ್ಯಾಂಕ್ ವಂಚಕರ 10.09 ಲಕ್ಷ ಕೋಟಿ ರೂ. ಬ್ಯಾಂಕ್ ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರ ಇವರಿಂದ ಪಡೆದಿರುವ ಕಮಿಷನ್ ಹಣ ಎಷ್ಟು ಎಂಬುದನ್ನು ದೇಶದ ಜನತೆಗೆ ತಿಳಿಸಬೇಕು.

ಕಾಂಗ್ರೆಸ್ ಶಕ್ತಿ ಹಣದ ಬಲ ಅಲ್ಲ, ಜನ ಬಲ, ಬಿಜೆಪಿಯಲ್ಲಿ ಹಣ ಬಲ ಇದ್ದರೆ, ನಮ್ಮಲ್ಲಿ ಜನ ಬಲ ಇದೆ, ತೆರಿಗೆ ವಂಚಕರು, ಬ್ಯಾಂಕ್‌ಗಳನ್ನು ಮುಳುಗಿಸಿದವರು, ಗಣಿ ಲೂಟಿಕೋರರು, ಕಾಳಸಂತೆಕೋರರು, ಕಳ್ಳ-ಖದೀಮರೇ ಬಿಜೆಪಿಯ ಬಲ ಎಂದು ಆರೋಪಿಸಿದ್ದಾರೆ.

ಬಿಜೆಪಿ, ಭ್ರಷ್ಟರ ಹಣ ನುಂಗಿ ಪ್ರಾಮಾಣಿಕತೆಯ ಸರ್ಟಿಫಿಕೇಟ್ ನೀಡುವ ವಾಷಿಂಗ್ ಮೆಶಿನ್ ಆಗಿದೆ, ಭ್ರಷ್ಟರು ತನಿಖೆಯಿಂದ ತಪ್ಪಿಸಿಕೊಳ್ಳಲು ಹಾಗೂ ಶಿಕ್ಷೆಯಿಂದ ಪಾರಾಗಲು ಬಿಜೆಪಿ ಸೇರಿಕೊಂಡರೆ ಸಾಕು, ಪಾಪಗಳೆಲ್ಲವೂ ತನ್ನಿಂದ ತಾನೇ ಶುದ್ಧವಾಗುತ್ತದೆ.

ಬಿಜೆಪಿಯಲ್ಲಿದ್ದುಕೊಂಡು ಎಷ್ಟು ಬೇಕಾದರೂ ಭ್ರಷ್ಟಾಚಾರ ಮಾಡಬಹುದು, ಜನರ ಹಣ ಲೂಟಿ ಮಾಡಬಹುದು, ಅವರ ಮೇಲೆ ಯಾವ ಕೇಸೂ ದಾಖಲಾಗುವುದಿಲ್ಲ, ಯಾವ ತನಿಖಾ ಸಂಸ್ಥೆಯೂ ಹುಡುಕಿಕೊಂಡು ಬರುವುದಿಲ್ಲ.

ಮೋದಿ, ದೇವೇಗೌಡ, ಷಾ, ಯೋಗಿ ಚುನಾವಣಾ ಪ್ರಚಾರ
ಲೂಟಿ ಹಣದಿಂದ ಬಿಜೆಪಿ ಅಧಿಕಾರಕ್ಕೆ

ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಮತ್ತು ಅಧಿಕಾರ ಉಳಿಸಿಕೊಂಡಿರುವುದೇ ಲೂಟಿ ಹಣದಿಂದ, ಕರ್ನಾಟಕದಲ್ಲಿ ನಡೆಸುತ್ತಾ ಬರುತ್ತಿರುವ ಆಪರೇಷನ್ ಕಮಲವೇ ಇದಕ್ಕೆ ಉತ್ತಮ ಉದಾಹರಣೆ ಎಂದಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400 ಸ್ಥಾನಗಳಿಗೂ ಹೆಚ್ಚು ಗೆಲ್ಲುತ್ತೇವೆ ಎಂದು ಎದೆ ತಟ್ಟಿಕೊಳ್ಳುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು, ವಿರೋಧ ಪಕ್ಷಗಳನ್ನು ಹಣಿಯಲು ಅಕ್ರಮ ಕೃತ್ಯಗಳಿಗೆ ಇಳಿದಿರುವುದನ್ನು ನೋಡಿದರೆ ಅವರ ಸೋಲು ಗೋಡೆ ಮೇಲಿನ ಬರಹದಂತೆ ಸ್ಪಷ್ಟವಾಗಿ ಕಾಣಸತೊಡಗಿದೆ ಎಂದರ್ಥ.

ದೇಶದ ಜಾಗೃತ ಮತದಾರರ ಮುಂದೆ ಬಿಜೆಪಿ ಮತ್ತು ಅದರ ನಾಯಕರೆಲ್ಲರೂ ಬೆತ್ತಲೆಯಾಗಲಿದ್ದಾರೆ ಎಂದಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
misusing IT-ED-CBInda defeat definitenda govt. looting momeytax terrorism
2 FacebookTwitterPinterestEmail
admin

previous post
ದಿನ ಭವಿಷ್ಯ : ಶನಿವಾರ, 30 ಮಾರ್ಚ್ 2024
next post
ಪ್ರಧಾನಿ ಮೋದಿ ನೇತೃತ್ವದಲ್ಲಿ ರಾಜ್ಯ ಬಿಜೆಪಿ ಪ್ರಚಾರ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ