Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Sunday, September 6, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ರಣೋತ್ಸಾಹದೊಂದಿಗೆ ನಾಮಪತ್ರ ಸಲ್ಲಿಕೆ

by admin April 4, 2024
written by admin April 4, 2024 0 comments 2 minutes read
3FacebookTwitterPinterestEmail
487


ಚುನಾವಣಾ ಪ್ರಚಾರ-ಅಬ್ಬರ ಆರಂಭ

ಬೆಂಗಳೂರು:ಲೋಕಸಭಾ ಚುನಾವಣೆಯ ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಇಂದು ಮುಕ್ತಾಯವಾಗಿದ್ದು ರಾಜಕೀಯ ಪಕ್ಷಗಳ ಪ್ರಚಾರ ಮತ್ತು ಅಬ್ಬರ ಪ್ರಾರಂಭವಾಗಿದೆ.

ನಾಮಪತ್ರ ಸಲ್ಲಿಕೆಗೆ ಕಡೆಯ ದಿನದಂದು 14 ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದರೆ, ಬಿಜೆಪಿಯ 11, ಜೆಡಿಎಸ್‌ನ ಮೂವರು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.

ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಉಮೇದುವಾರಿಕೆ

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (ಮಂಡ್ಯ), ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ್ (ಚಿತ್ರದುರ್ಗ), ಮಾಜಿ ಸಚಿವ ಡಾ.ಕೆ.ಸುಧಾಕರ್ (ಚಿಕ್ಕಬಳ್ಳಾಪುರ) ಸೇರಿದಂತೆ ಇಂದು ನೂರಕ್ಕೂ ಹೆಚ್ಚು ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.

ಮೊದಲ ಹಂತದಲ್ಲಿ ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ, ಹಾಸನ, ತುಮಕೂರು, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಲು ಇಂದು ಕಡೆಯ ದಿನವಾಗಿತ್ತು.

ಡಿ.ಕೆ. ಸುರೇಶ್ (ಕಾಂಗ್ರೆಸ್), ಪ್ರಜ್ವಲ್ ರೇವಣ್ಣ(ಜೆಡಿಎಸ್) ಸೇರಿದಂತೆ ಹಲವು ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದರೂ ಇಂದು ಮತ್ತೊಂದು ಜೊತೆ ನಾಮಪತ್ರ ಪ್ರತಿ ಸಲ್ಲಿಸಿದರು.

ದೇವಾಲಯಗಳಲ್ಲಿ ಪೂಜೆ

ಬಹುತೇಕ ಎಲ್ಲಾ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುವ ಮುನ್ನ, ಸ್ಥಳೀಯ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿ, ತಮ್ಮ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದು ಉಮೇದುವಾರಿಕೆ ಸಲ್ಲಿಸಿದರು.

ಇನ್ನೂ ಕೆಲವು ಮುಖಂಡರು ಉಮೇದುವಾರಿಕೆ ಸಲ್ಲಿಸಿದ ನಂತರ ಬೃಹತ್ ಸಮಾವೇಶಗಳನ್ನು ನಡೆಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಕುಮಾರಸ್ವಾಮಿ ಅವರು, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸುವ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜವಂಶಸ್ತ ಯದುವೀರ್ ಹಾಗೂ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಉಪಸ್ಥಿತರಿದ್ದರು.

ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ

ನಂತರ ನಡೆದ ಬಹಿರಂಗ ಸಭೆಯಲ್ಲೂ ಯದುವೀರ್ ಅವರನ್ನು ಹೊರತುಪಡಿಸಿ ಉಳಿದ ನಾಯಕರು, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಬೆಂಗಳೂರು ಗ್ರಾಮಾಂತರದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ತಮ್ಮ ಬೆಂಬಲಿಗರ ಜೊತೆಗೂಡಿ ಮತ್ತೊಂದು ಜೊತೆ ನಾಮಪತ್ರ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿಯಾಗಿ ಹೃದಯ ತಜ್ಞ ಡಾ.ಮಂಜುನಾಥ್, ತಮ್ಮ ಪಕ್ಷದ ಮುಖಂಡರು ಮತ್ತು ಶಾಸಕರ ಜೊತೆಗೂಡಿ ಉಮೇದುವಾರಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರ ಪತ್ನಿ ಜೊತೆಗಿದ್ದರು.

ಚಿತ್ರದುರ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ನಾಮಪತ್ರ ಸಲ್ಲಿಸುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಟಿ.ಬಿ.ಜಯಚಂದ್ರ ಸೇರಿದಂತೆ ಹಲವು ಮುಖಂಡರಿದ್ದರು.

ತದನಂತರ ಸಿದ್ದರಾಮಯ್ಯ ಕಾಂಗ್ರೆಸ್ ಏರ್ಪಡಿಸಿದ್ದ ಬೃಹತ್ ಸಮಾವೇಶದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಘಟಾನುಘಟಿಗಳ ಉಪಸ್ಥಿತಿ

ಇದೇ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ್ ನಾಮಪತ್ರ ಸಲ್ಲಿಸುವ ವೇಳೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕ ಜನಾರ್ದನ ರೆಡ್ಡಿ, ಮಾಜಿ ಸಚಿವ ಜೆ.ಸಿ.ಮಾಧುಸ್ವಾಮಿ ಸೇರಿದಂತೆ ಪಕ್ಷದ ಹಲವು ಮುಖಂಡರು ಉಪಸ್ಥಿತರಿದ್ದರು.

ಹಾಸನ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಸಂಸದ ಪ್ರಜ್ವಲ್ ರೇವಣ್ಣ, ಎರಡನೇ ಬಾರಿಗೆ ಉಮೇದುವಾರಿಕೆ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಚಿವ ಎಚ್.ಕೆ.ಕುಮಾರಸ್ವಾಮಿ ಮತ್ತಿತರರಿದ್ದರು.

ಇನ್ನು ಮಂಗಳೂರು ಕ್ಷೇತ್ರದಿಂದ ನಿವೃತ್ತ ಯೋಧ ಬ್ರಿಜೇಶ್ ಚೌಟ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದು, ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಹಾಲಿ ಸಂಸದ ನಳಿನ್‌ಕುಮಾರ್ ಕಟೀಲ್ ಹಾಗೂ ಇತರ ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿ ಸೂರ್ಯ ಬಿಜೆಪಿಯಿಂದ ಮರು ಆಯ್ಕೆ ಬಯಸಿ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್, ವಿಧಾನಸಭೆಯಲ್ಲಿನ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಜಗ್ಗೇಶ್ ಜೊತೆಯಲ್ಲಿದ್ದರು.

2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
ಏಪ್ರಿಲ್ 26 ರಂದು ಮತದಾನ

ರಾಜ್ಯದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯುವ 14 ಕ್ಷೇತ್ರಗಳ ನಾಮಪತ್ರಗಳ ಪರಿಶೀಲನೆ ಶುಕ್ರವಾರ ನಡೆಯಲಿದ್ದು, ನಾಮಪತ್ರ ಹಿಂತೆಗೆದುಕೊಳ್ಳಲು ಏಪ್ರಿಲ್ 8 ಕಡೆಯ ದಿನವಾಗಿದೆ, ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಇದರ ಮಧ್ಯೆ ರಾಜ್ಯದ ಉಳಿದ 14 ಕ್ಷೇತ್ರಗಳ ಚುನಾವಣೆಗೆ ಏಪ್ರಿಲ್ 12ರಂದು ಅಧಿಸೂಚನೆ ಹೊರಬೀಳಲಿದ್ದು, ಮೇ 7 ರಂದು ಮತದಾನ ನಡೆಯಲಿದೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bengaluru rural - dk suresh and dr.manjunathbengaluru south - tejasvi suryamandya - hd kumara swamynomination to 14 constituency
3 FacebookTwitterPinterestEmail
admin

previous post
2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
next post
ದಿನ ಭವಿಷ್ಯ : ಶುಕ್ರವಾರ, 05 ಏಪ್ರಿಲ್ 2024

You may also like

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026

ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

September 4, 2026

ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

September 4, 2026

ಸೆ.21ರಿಂದ ವಿಧಾನಮಂಡಲದ ವಿಶೇಷ ಅಧಿವೇಶನ

September 3, 2026

ಸಚಿವ ಜಮೀರ್ ಅಹಮದ್ ತಲೆದಂಡ ಸನ್ನಿಹಿತ !

September 2, 2026

ಶಿವಕುಮಾರ್ ಸರ್ಕಾರ ಕಿತ್ತೊಗೆಯುಲು ಬಿಜೆಪಿ ಶಪಥ

September 1, 2026

‘ಇವರಲ್ಲಿ ಯಾರಿಗೆ ಕೊಕ್ , ನೀವೇ ನಿರ್ಧರಿಸಿ ಡಿಕೆಶಿ’

August 31, 2026

ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ಪಾದಯಾತ್ರೆ

August 29, 2026

ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

August 28, 2026

ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

August 27, 2026

Social Networks

Facebook Twitter Instagram Linkedin Youtube Email Rss

KMS Analysis

  • ನಾಗೇಂದ್ರ, ಜಮೀರ್ , ಜನಾರ್ಧನರೆಡ್ಡಿ ವಿರುದ್ಧ ತನಿಖೆಗೆ ರಾಜ್ಯಪಾಲರ ಪತ್ರ

    August 28, 2026
  • ಮಂತ್ರಿಮಂಡಲ ಪುನಾರಚನೆಗೆ ಕಾಂಗ್ರೆಸ್ ವರಿಷ್ಠರಿಂದ ಅನುಮತಿ

    August 27, 2026
  • ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ಸಚಿವ ಚೌಹಾಣ್

    August 19, 2026
  • ಸಂಪುಟ ವಿಸ್ತರಣೆ ವಿಳಂಬ :ವಿಧಾನಮಂಡಲದ ಮುಂಗಾರು ಅಧಿವೇಶನ ಮುಂದೂಡಿಕೆ

    July 24, 2026
  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026

Categories

  • Special Story (559)
  • ಅಂಕಣ (109)
  • ಉದ್ಯೋಗ (346)
  • ದಿನ ಭವಿಷ್ಯ (110)
  • ರಾಜಕೀಯ (2,052)
  • ರಾಜ್ಯ (2,367)
  • ರಾಷ್ಟ್ರ (2,332)
  • ವಿಶ್ಲೇಷಣೆ (202)
  • ಶಿಕ್ಷಣ (408)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026

KMS Special

  • ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

    September 5, 2026
  • ಪ್ರಾಸಿಕ್ಯೂಷನ್ ಪಟ್ಟಿಯಲ್ಲಿ ಪ್ರತಿಪಕ್ಷದವರ ಹೆಸರು ಇದೆ

    September 4, 2026
  • ಕೃಷಿ ಸಾಲ ಮನ್ನಾ ಒತ್ತಾಯಿಸಿ ಪ್ರಧಾನಿ ಬಳಿಗೆ ನಿಯೋಗ

    September 4, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5 ಉದ್ಯೋಗ ಮೀಸಲು

September 5, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ