Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಬರ ಪರಿಹಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡ ನಿರ್ಮಲಾ ಸೀತಾರಾಮನ್

by admin April 7, 2024
written by admin April 7, 2024 0 comments 1 minutes read
ಬೆಂಗಳೂರು:"ಕೆಆರ್ಎಸ್ ಒಳಹರಿವು ಶೂನ್ಯಕ್ಕೆ ತಲುಪಿದೆ. ನಮ್ಮ ಹತ್ತಿರ ತಮಿಳುನಾಡಿಗೆ ಹರಿಸಲು ನೀರಿಲ್ಲ, ನೀರು ಬಿಡುವ ಶಕ್ತಿಯೂ ನಮ್ಮಲ್ಲಿಲ್ಲ" ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಗಿರಿನಗರದ ವೀರಭದ್ರನಗರದಲ್ಲಿ ಸಂಭವಿಸಿದ ಅಗ್ನಿ ಅನಾಹುತದಿಂದ ಬಸ್ ಗಳು ಸುಟ್ಟುಹೋದ ಸ್ಥಳಕ್ಕೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಡಿಸಿಎಂ ಸುದ್ದಿಗಾರರೊಂದಿಗೆ ಮಾತನಾಡಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತು ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸ್ಸಿನ ಕುರಿತು ಮಾನಾಡಿದ ಅವರು, "ಕೆಆರ್ಎಸ್ ಅಣೆಕಟ್ಟೆಗೆ ಕಾವೇರಿ ನೀರಿನ ಒಳಹರಿವು ಶೂನ್ಯಕ್ಕೆ ತಲುಪಿದೆ. ಕೆಆರ್ಎಸ್, ಕಬಿನಿಯಿಂದ ನೈಸರ್ಗಿಕವಾಗಿ 815 ಕ್ಯೂಸೆಕ್ ನೀರು ಹರಿದು ಹೋಗುತ್ತಿದ್ದು, ರಾಜ್ಯದ ಕಾವೇರಿ ಕೊಳ್ಳದಲ್ಲಿ 51 ಟಿಎಂಸಿ ನೀರು ಮಾತ್ರ ಲಭ್ಯವಿದೆ ಎಂಬ ಮಾಹಿತಿ ನೀಡಿದರು. ಕುಡಿಯುವ ನೀರನ್ನು ಉಳಿಸಿಕೊಳ್ಳಬೇಕು. ದೇವರ ಮೊರೆ ಹೋಗೋಣ, ಮಳೆ ಬೀಳಲಿ, ನೀರು ಕೆಳಗಡೆಗೆ ಹರಿಯಲಿ. ಈಗ ನಮ್ಮ ಬಳಿಯಂತೂ ನೀರಿಲ್ಲ. ಕಾವೇರಿ ನೀರಿನ ವಿಚಾರವಾಗಿ 89 ನೇ ಸಭೆ ನಡೆಸಿದ ಕಾವೇರಿ ನೀರು ನಿಯಂತ್ರಣ ಸಮಿತಿಯು ನ.1 ರಿಂದ ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಲು ಶಿಫಾರಸ್ಸು ಮಾಡಿದೆ" ಎಂದರು. ಬಸ್ ಅಗ್ನಿ ದುರಂತ ಬಗ್ಗೆ ವರದಿಗೆ ಸೂಚನೆ ಬಸ್ ಅಗ್ನಿ ದುರಂತದ ಬಗ್ಗೆ ಮಾತನಾಡಿ, "ವೆಲ್ಡಿಂಗ್ ಮಾಡುವ ವೇಳೆ ಕಿಡಿ ಹಾರಿ ಒಂದು ಬಸ್ಗೆ ಬೆಂಕಿ ಬಿದ್ದು, ಅದು ಹರಡಿಕೊಂಡಿದೆ. ಇಷ್ಟು ದೊಡ್ಡ ಅನಾಹುತ ನಡೆದರೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲದಿರುವುದು ಒಳ್ಳೆಯ ಸುದ್ದಿ. ಅಗ್ನಿಶಾಮಕ ದಳದವರು ಅತ್ಯಂತ ಶೀಘ್ರವಾಗಿ ಬೆಂಕಿ ನಂದಿಸಿದ್ದಾರೆ. ಪೊಲೀಸ್ ಮತ್ತು ಅಗ್ನಿಶಾಮಕದಳದ ಉನ್ನತ ಅಧಿಕಾರಿಗಳಿಗೆ ಈ ವಿಚಾರವಾಗಿ ಪ್ರತ್ಯೇಕ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ" ಎಂದು ತಿಳಿಸಿದರು. "ದುರಂತ ನಡೆದ ಸ್ಥಳ ಖಾಸಗಿಯವರಿಗೆ ಸೇರಿದ್ದು, ಇವರು ಸಹ ಸಣ್ಣ ಪ್ರಮಾಣದ ಅಗ್ನಿ ನಿಯಂತ್ರಣ ವ್ಯವಸ್ಥೆ ಇಟ್ಟುಕೊಂಡಿದ್ದಾರೆ. ಆದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಲು ಸೂಚನೆ ನೀಡಿದ್ದೇನೆ. ಇಂತಹ ಸೂಕ್ಷ್ಮ ಕೆಲಸಗಳು ನಡೆಯುವ ಜಾಗಗಳಲ್ಲಿ ಕಟ್ಟೆಚ್ಚರ ಅಗತ್ಯ ಎಂದು ಕಟ್ಟುನಿಟ್ಟಾಗಿ ಸೂಚಿಸಿದ್ದೇನೆ" ಎಂದರು. ಹೊರಗೆ ಹೋಗಲು ಒಂದೇ ಕಡೆ ಜಾಗ ಇದ್ದ ಕಾರಣ ಮತ್ತು ಮುಂಜಾಗ್ರತಾ ಕ್ರಮಗಳು ಇಲ್ಲದ ಕಾರಣ ಅನಾಹುತ ಸಂಭವಿಸಿತೆ ಎಂದು ಕೇಳಿದಾಗ "ತಾಂತ್ರಿಕ ಅಂಶ, ದೋಷಗಳನ್ನು ನಾನು ಈಗಲೇ ಹೇಳಲು ಆಗುವುದಿಲ್ಲ, ವರದಿ ಬರಲಿ ಆನಂತರ ಹೇಳುತ್ತೇನೆ" ಎಂದು ತಿಳಿಸಿದರು. ಸರ್ಕಾರ ಬಂದ ನಂತರ ಈಗಾಗಲೇ ಮೂರು ದೊಡ್ಡ ಬೆಂಕಿ ಅವಘಡಗಳು ನಡೆದಿವೆ, ಸರ್ಕಾರ ಕ್ರಮ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲವೇ ಎಂದು ಕೇಳಿದಾಗ "ಪಟಾಕಿ ದುರಂತ ನಡೆದ ನಂತರ ಕಠಿಣ ಕ್ರಮ ತೆಗೆದುಕೊಂಡಿದ್ದೇವೆ. ಇಂತಹ ಸೂಕ್ಷ್ಮ ವಲಯಗಳಲ್ಲಿ ಸುರಕ್ಷತಾ ಕ್ರಮಗಳನ್ನು ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದೇನೆ" ಎಂದು ಹೇಳಿದರು. ಮಾಲೀಕನ ಮೇಲೆ ಎಫ್ಐಆರ್ ದಾಖಲಾಗುತ್ತದೆಯೇ ಎಂದು ಕೇಳಿದಾಗ "ಎಷ್ಟು ಹಾನಿಯಾಗಿದೆ ಎಂದು ಇನ್ನೂ ಗೊತ್ತಿಲ್ಲ, ಮೊದಲು ವರದಿ ಬರಲಿ, ಆನಂತರ ಕ್ರಮ ತೆಗೆದುಕೊಳ್ಳೋಣ" ಎಂದರು.
0FacebookTwitterPinterestEmail
161

ಮನವಿ ಸಲ್ಲಿಸಿ 4 ತಿಂಗಳಾಗಿದೆ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು:“ಬರ ಪರಿಹಾರ ವಿಚಾರದಲ್ಲಿ ಇಷ್ಟು ದಿನ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈಗ ರಾಜ್ಯಕ್ಕೆ ಆಗಿರುವ ಅನ್ಯಾಯ ಒಪ್ಪಿಕೊಂಡಿದ್ದು, ಅವರಿಗೆ ಧನ್ಯವಾದಗಳು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಅಪಾರ್ಟ್ಮೆಂಟ್ ನಿವಾಸಿಗಳ ಭೇಟಿ ಬಳಿಕ ಮಾಧ್ಯಮಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯಿಸಿದರು.

ಬರ ಪರಿಹಾರ ವಿಳಂಬಕ್ಕೆ ಚುನಾವಣಾ ಆಯೋಗ ಕಾರಣ ಎಂಬ ಸಚಿವರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಪ್ರತಿಕ್ರಿಯಿಸಿದ್ದು ಹೀಗೆ; “ಬರ ಪರಿಹಾರಕ್ಕೂ ಚುನಾವಣೆಗೂ ಏನು ಸಂಬಂಧ? ಈ ಹೇಳಿಕೆ ಮೂಲಕ ರಾಜ್ಯಕ್ಕೆ ಬರ ಪರಿಹಾರ ಬರುವುದು ವಿಳಂಬವಾಗಿದ್ದು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ಒಪ್ಪಿಕೊಂಡಿದ್ದಾರೆ. ಇಷ್ಟು ದಿನಗಳ ಕಾಲ ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದರು.

ನಾವು ಬರ ಪರಿಹಾರ ನೀಡುವಂತೆ ಮನವಿ ನೀಡಿ ಎಷ್ಟು ತಿಂಗಳುಗಳಾಗಿವೆ? ನಾವು ಬರ ಪರಿಹಾರ ಮನವಿ ಕೊಟ್ಟ ಬಳಿಕ ನಾಲ್ಕು ತಿಂಗಳವರೆಗೂ ಯಾವುದೇ ಚುನಾವಣೆ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿರ್ಬಂಧ ಇರಲಿಲ್ಲ. ಈಗ ಚುನಾವಣಾ ಆಯೋಗದ ನೆಪ ಹೇಳುತ್ತಿದ್ದಾರೆ.

ಕೇಂದ್ರ ಸರ್ಕಾರದ ನಿಲುವು ಜನರಿಗೂ ಅರಿವಾಗಿದೆ. ಈ ಮೂಲಕ ಸಂಸದ ಡಿ.ಕೆ. ಸುರೇಶ್ ಅವರ ನಮ್ಮ ತೆರಿಗೆ ನಮ್ಮ ಹಕ್ಕು, ನಮ್ಮ ಪಾಲಿನ ಹೋರಾಟ ಒಪ್ಪಿಕೊಂಡಿದ್ದಾರೆ. ಅವರಿಗೆ ಧನ್ಯವಾದಗಳು” ಎಂದರು.

ಅಧಿಕಾರ ಇದ್ದಾಗ ಕುಮಾರಸ್ವಾಮಿ ಯಾಕೆ ಮಾಡಲಿಲ್ಲ?

ಮೇಕೆದಾಟು ಯೋಜನೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾತನಾಡಿ, “ಇಲ್ಲಿನ ಜನರ ಕಷ್ಟಕ್ಕೆ ಪರಿಹಾರ ನೀಡಿ ಧೈರ್ಯ ತುಂಬುವವರು ನಾವು. ಬೇರೆ ಅಭ್ಯರ್ಥಿಗಳು ನಮ್ಮಂತೆ ಜನರಿಗೆ ಅಭಯ ನೀಡುವುದಿಲ್ಲ. ಕುಮಾರಸ್ವಾಮಿ ಅವರು ಈಗ ಮೇಕೆದಾಟು, ಮಹದಾಯಿ ಯೋಜನೆ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ.

ಅಧಿಕಾರ ಇದ್ದಾಗ ಈ ವಿಚಾರದಲ್ಲಿ ಏನೂ ಮಾಡದವರು ಈಗ ಏನು ಮಾಡುತ್ತಾರೆ. ನಾನು ಮೇಕೆದಾಟು ಪಾದಯಾತ್ರೆ ಮಾಡುವಾಗ ಅವರು ಕೊಟ್ಟಿರುವ ಹೇಳಿಕೆ ನೋಡಿ. ನಮ್ಮ ಪಾದಯಾತ್ರೆ ಸಂದರ್ಭದಲ್ಲಿ ಕಬಾಬ್ ತಿನ್ನೋಕೆ ಪಾದಯಾತ್ರೆ ಮಾಡುತ್ತಿದ್ದಾರೆ ಎಂದಿದ್ದ ಕುಮಾರಸ್ವಾಮಿ ಅವರು ಈಗ ಪಾದಯಾತ್ರೆ ಬಗ್ಗೆ ಮಾತಾಡುತ್ತಿದ್ದಾರೆ. ಮಂಡ್ಯಕ್ಕೆ ಬಂದ ನಂತರ ಅವರಿಗೆ ಬಿಸಿ ತಟ್ಟಿರುವಂತೆ ಕಾಣುತ್ತಿದೆ.

ಕುರುಡುಮಲೆಯಿಂದ ಕಾಂಗ್ರೆಸ್ ಪ್ರಚಾರಕ್ಕೆ ಚಾಲನೆ

ನಾವು ಹೋರಾಟ ಮಾಡಿದ್ದು ರಾಜ್ಯದ ಜನತೆಗಾಗಿ. ರಾಜಕಾರಣದಲ್ಲಿ ಅದು ನಮ್ಮ ಬದ್ಧತೆ. ಅದನ್ನು ಅವರಿಂದ ಸಹಿಸಲು ಆಗಲಿಲ್ಲ. ಅವರು ಏನಾದರೂ ಮಾಡಿಕೊಳ್ಳಲಿ. ಕಾವೇರಿ ಜಲಾನಯನ ಪ್ರದೇಶದ ಜನರಿಗೆ, ಬೆಂಗಳೂರು ಜನರಿಗೆ ಕುಡಿಯುವ ನೀರು ಪೂರೈಸಲು ನಾನು ನೀರಾವರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ.

ನಾನು ಕೊಟ್ಟ ಮಾತಿನಂತೆ ನಡೆಯುತ್ತೇನೆ ಎಂದು ಜನರಿಗೆ ನಂಬಿಕೆ ಇದೆ. ಅವರ ನಂಬಿಕೆಗೆ ತಕ್ಕಂತೆ ನಡೆಯುತ್ತೇನೆ. ಇದು ಮತದಾರರಿಗೆ ಮನವರಿಕೆಯಾಗಿದೆ” ಎಂದು ತಿಳಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
4 monthsD.K. Shivakumardcmdrought reliefInjusticekumaraswamyMahadayi YojanamekedatuNirmala Sitharamansubmittedunion minister
0 FacebookTwitterPinterestEmail
admin

previous post
ನೆನಪಿ ಶಕ್ತಿ ವೃದ್ಧಿಗೆ ಶಾಂಭವಿ ಮುದ್ರೆ
next post
ಜನರು ಕೊಟ್ಟ ಪೆನ್ನು-ಪೇಪರ್ ಹಿಡಿದುಕೊಳ್ಳುವ ನಿಮ್ಮ ಶಕ್ತಿ ಕೇವಲ ಹತ್ತೇ ತಿಂಗಳಿಗೆ ನಿಸ್ತೇಜವಾಯಿತಾ?

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ