Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಗಳು 10 ದಿನ ಎನ್‌ಐಎ ಕಸ್ಟಡಿಗೆ

by admin April 13, 2024
written by admin April 13, 2024 0 comments 2 minutes read
0FacebookTwitterPinterestEmail
146

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಘಟನೆಯ ಪ್ರಮುಖ ಆರೋಪಿಗಳಾದ ಅಬ್ದುಲ್ ಮತೀನ್ ತಾಹ ಮತ್ತು ಮುಜಾವೀರ್ ಹುಸೇನ್ ಶಾಜೀಬ್ ಅವರುಗಳನ್ನು 10 ದಿನಗಳ ಎನ್‌ಐಎ ಕಸ್ಟಡಿಗೆ ಇಂದು ಒಪ್ಪಿಸಲಾಗಿದೆ.

ಆರೋಪಿಗಳ ವೈದ್ಯಕೀಯ ಪರೀಕ್ಷೆ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದಾಗ ಎನ್‌ಐಎ ಕಸ್ಟಡಿಗೆ ನೀಡಿ ಆದೇಶ ಮಾಡಿದರು.

ಮಂಗಳೂರು ಗೋಡೆ ಬರಹ ಪ್ರಕರಣದಲ್ಲಿಯೂ ಮತೀನ್ ಮತ್ತು ಮುಸಾವೀರ್ ಹೆಸರನ್ನು ಎರಡು ಮತ್ತು ಮೂರನೇ ಆರೋಪಿಗಳನ್ನಾಗಿ ಉಲ್ಲೇಖಿಸಲಾಗಿದೆ. ಮುಸಾವೀರ್ ಹಾಗೂ ಅಬ್ದುಲ್ ತಾಹ ಇಬ್ಬರೂ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನವರು.

ಬಾಂಬ್ ಸ್ಫೋಟ ಸಂಚು ಬಹಿರಂಗ

ದಕ್ಷಿಣ ಭಾರತದ ಇನ್ನೂ ಹಲವೆಡೆ ಬಾಂಬ್ ಸ್ಫೋಟಿಸುವ ಯೋಜನೆಯನ್ನು ಶಂಕಿತ ಭಯೋತ್ಪಾದಕರು ರೂಪಿಸಿದ್ದರು ಎಂಬುದು ವಿಚಾರಣೆಯಿಂದ ತಿಳಿದುಬಂದಿದೆ.

ರಾಮೇಶ್ವರಂ ಕೆಫೆ ಸ್ಫೋಟಕ್ಕೆ ಬಳಸಿದ ಬಾಂಬ್ ಅನ್ನು ಅಬ್ದುಲ್ ಮತೀನ್ ತಾಹ ಸಿದ್ಧಪಡಿಸಿದ್ದ, ಎಂಜಿನಿಯರಿಂಗ್ ಪದವೀಧರನಾಗಿದ್ದ ಈತ ಬಾಂಬ್ ತಯಾರಿಕೆ ಮಾಹಿತಿ ಹೊಂದಿದ್ದ. ಇತರರಿಗೂ ತರಬೇತಿ ನೀಡುತ್ತಿದ್ದ. ತಾಹ ಸಿದ್ಧಪಡಿಸಿದ ಬಾಂಬ್ ಅನ್ನು ಮುಸಾವೀರ್, ರಾಮೇಶ್ವರಂ ಕೆಫೆಯಲ್ಲಿ ಇಟ್ಟಿದ್ದ ಎಂದು ವಿಚಾರಣೆಯಿಂದ ತಿಳಿದುಬಂದಿದೆ.

ಸ್ಫೋಟ ನಡೆಸಿದ ಆರೋಪಿಗಳಿಬ್ಬರೂ ನಕಲಿ ಹೆಸರುಗಳಿಂದ ತಲೆ ಮರೆಸಿಕೊಂಡಿದ್ದರು. ಒಂದೊಂದು ಕಡೆ ಒಂದೊಂದು ನಕಲಿ ಹೆಸರನ್ನು ಬಳಸುತ್ತಿದ್ದರು.

ನಕಲಿ ಅಧಾರ್ ಕಾರ್ಡ್‌ಗಳ ಬಳಕೆ

ಗುರುತು ಮರೆಮಾಚಲು ನಕಲಿ ಅಧಾರ್ ಕಾರ್ಡ್‌ಗಳನ್ನು ಬಳಕೆ ಮಾಡುತ್ತಿದ್ದರು, ನಕಲಿ ಕಾರ್ಡ್‌ಗಳ ಬಳಕೆಯೇ ಆರೋಪಿಗಳ ಬಂಧನಕ್ಕೆ ಪ್ರಮುಖ ಕಾರಣಗಳಲ್ಲಿ ಒಂದಾಗಿದ್ದು, ಪಶ್ಚಿಮ ಬಂಗಾಳದಲ್ಲಿ ನಕಲಿ ಆಧಾರ್ ಕಾರ್ಡ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ.

ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ವಾಸಿಸುತ್ತಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರು ಹೆಚ್ಚಾಗಿ ನಕಲಿ ಆಧಾರ್ ಕಾರ್ಡ್‌ಗಳನ್ನೇ ಬಳಸುತ್ತಿದ್ದು, ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಆರೋಪಿಗಳೂ ಇದೇ ಪ್ರದೇಶದಲ್ಲಿ ಅಡಗಿರಬಹುದೆಂಬ ಶಂಕೆ ಇತ್ತು.

ಆರೋಪಿ ಮುಸಾವೀರ್ ಹುಸೇನ್ ಶಾಜೀಬ್ ಮಧ್ಯಮವರ್ಗದ ಕುಟುಂಬಕ್ಕೆ ಸೇರಿದವನಾಗಿದ್ದು, ತೀರ್ಥಹಳ್ಳಿಯಲ್ಲಿ ಈತನ ತಾಯಿ ವಾಸವಾಗಿದ್ದು, ಮನೆ ಬಾಡಿಗೆಯೇ ಕುಟುಂಬದ ಆದಾಯದ ಮೂಲವಾಗಿದ್ದು, ಈತ ಸ್ಥಳೀಯರೊಂದಿಗೆ ಹೆಚ್ಚು ಬೆರೆಯುತ್ತಿರಲಿಲ್ಲ, ತನ್ನ ಸಮುದಾಯದವರು ಇರುವ ಒಂದೆರಡು ಪ್ರದೇಶಗಳಲ್ಲಿ ಮಾತ್ರ ತಿರುಗಾಡುತ್ತಿದ್ದ ಎಂದು ತಿಳಿದುಬಂದಿದೆ.

ಇನ್ನೊಬ್ಬ ಆರೋಪಿ ಅಬ್ದುಲ್ ಮತೀನ್ ತಾಹನ ತಂದೆ ವರ್ಷದ ಹಿಂದೆ ಮೃತಪಟ್ಟಿದ್ದು, ತಾಹ ತೀರ್ಥಹಳ್ಳಿಯಲ್ಲಿ ಪ್ರೌಢಶಾಲೆ ವ್ಯಾಸಂಗ ಮುಗಿಸಿ, ಬೆಂಗಳೂರಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದ.

ಈತ ಬೆಂಗಳೂರಿನಲ್ಲೇ ಉಗ್ರರ ಸಂಪರ್ಕಕ್ಕೆ ಬಂದಿದ್ದು, ಐಇಡಿ ಬಾಂಬ್ ತಯಾರಿಕೆಯಲ್ಲಿ ನಿಪುಣನಾಗಿದ್ದ. ಮಂಗಳೂರು ಕುಕ್ಕರ್ ಬ್ಲಾಸ್ಟ್, ಶಿವಮೊಗ್ಗ ಟ್ರಯಲ್ ಬ್ಲಾಸ್ಟ್‌ಗಳ ಮಾಸ್ಟರ್‌ಮೈಂಡ್ ಆಗಿದ್ದ ತಾಹ, ಕಳೆದ ನಾಲ್ಕು ವರ್ಷಗಳಿಂದ ನಾಪತ್ತೆಯಾಗಿದ್ದ. ಈತನ ಪತ್ತೆಗೆ ಮೂರು ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ರಾಮೇಶ್ವರಂ ಕೆಫೆ ಸ್ಫೋಟ ನಂತರ ಈ ಮೊತ್ತವನ್ನು ಹತ್ತು ಲಕ್ಷ ರೂ.ಗಳಿಗೆ ಏರಿಸಲಾಗಿತ್ತು.

ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು, ಒಂದೇ ಕಡೆ ಇರದೆ ಲಾಡ್ಜ್‌ಗಳನ್ನು ಬದಲಿಸುತ್ತಿದ್ದರು. ಪ್ರತಿ ಎರಡು ಮೂರು ದಿನಗಳಿಗೊಮ್ಮೆ ವಾಸ್ತವ್ಯ ಬದಲಿಸುತ್ತಿದ್ದರು.

ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ದೊರೆಯದು!
ಮುಖ್ಯಮಂತ್ರಿ ಶ್ಲಾಘನೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಎನ್‌ಐಎ ಮತ್ತು ಕರ್ನಾಟಕ ಪೊಲೀಸರು ಬಂಧಿಸಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳ ವಿಚಾರಣೆಯಿಂದ ಹೆಚ್ಚಿನ ವಿವರಗಳು ಲಭ್ಯವಾಗಲಿವೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
planned to do more blastsproduced before judgerameshwaram cafe blasttwo accused to 10 day nia custody
0 FacebookTwitterPinterestEmail
admin

previous post
ದಿನ ಭವಿಷ್ಯ : ಶನಿವಾರ, 13 ಏಪ್ರಿಲ್ 2024
next post
ಬಿಜೆಪಿ ನೇತೃತ್ವದ ಎನ್‌ಡಿಎಗೆ ಬಹುಮತ ದೊರೆಯದು!

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ