Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ತಾಯಂದಿರ ಕ್ಷಮೆ ಯಾಚಿಸಿದ ಕುಮಾರಸ್ವಾಮಿ

by admin April 15, 2024
written by admin April 15, 2024 0 comments 2 minutes read
0FacebookTwitterPinterestEmail
420


ಹೆಣ್ಣು ಮಕ್ಕಳನ್ನು ಅವಮಾನಿಸುವ ಮಾತು ಆಡಿಲ್ಲ

ಬೆಂಗಳೂರು:ಹೆಣ್ಣು ಮಕ್ಕಳನ್ನು ಅವಮಾನಿಸುವ ಯಾವುದೇ ಮಾತುಗಳನ್ನು ಆಡಿಲ್ಲ, ನನ್ನ ಮಾತಿನಿಂದ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ.

ಮಹಿಳೆಯರ ಬದುಕು ಸರಿಪಡಿಸಬೇಕು ಎಂಬುದಾಗಿ ಹೇಳಿದ್ದನ್ನು ಕಾಂಗ್ರೆಸ್ ಮುಖಂಡರು ತಿರುಚಿ ತಮಗೆ ಬೇಕಾದಂತೆ ಬಳಿಕೆ ಮಾಡಿಕೊಂಡಿದ್ದಾರೆ.

ಗ್ಯಾರಂಟಿಗಳಿಂದ ಕಾಂಗ್ರೆಸ್ ದಾರಿ ತಪ್ಪಿಸುತ್ತಿದೆ ಎಂದಿದ್ದೇನೆಯೇ ಹೊರತು, ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂದು ನಾನು ಹೇಳಿಲ್ಲ, ನನ್ನ ಹೇಳಿಕೆಯನ್ನು ಕಾಂಗ್ರೆಸ್‌ನ ಮಹಾನ್ ನಾಯಕರುಗಳು ತಿರುಚಿದ್ದಾರೆ.

ಎರಡು ಸಾವಿರಕ್ಕೆ ಮರುಳಾಗಬೇಡಿ

ನಾನು ಏನು ಅಂತಹ ಹೇಳಿಕೆ ಕೊಟ್ಟಿದ್ದೇನೆ, ಎರಡು ಸಾವಿರಕ್ಕೆ ಮರುಳಾಗಬೇಡಿ, ದಾರಿ ತಪ್ಪಬೇಡಿ ಎಂದಿದ್ದೇನೆ. ನನ್ನ ಕಾರ್ಯಕ್ರಮ ಮಹಿಳೆಯರಿಗೆ ಆರ್ಥಿಕ ಶಕ್ತಿ ತುಂಬುವುದಾಗಿದೆ, ನಾನು ಮಹಿಳೆಯರ ಬಗ್ಗೆ ಅಶ್ಲೀಲವಾದ ಪದವನ್ನು ಎಲ್ಲಿ ಬಳಕೆ ಮಾಡಿದ್ದೇನೆ, ಇವರಿಗೆ ರಾಜಕೀಯ ಮಾಡಲು ನನ್ನ ಬಗ್ಗೆ ಯಾವ ವಿಚಾರವೂ ಇಲ್ಲ, ಅದಕ್ಕೆ ಇದನ್ನು ಬಳಕೆ ಮಾಡುತ್ತಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಪ್ರತಿಷ್ಠೆ ಇಲ್ಲ, ನನ್ನ ಹೇಳಿಕೆಯಿಂದ ಯಾರಿಗೇ ನೋವಾಗಿದ್ದರೂ ವಿಷಾದಿಸುತ್ತೇನೆ, ನನ್ನ ಮಾತುಗಳಿಂದ ರಾಜ್ಯದ ತಾಯಂದಿರಿಗೆ ನೋವಾಗಿದ್ದರೆ, ನಾನು ಮತ್ತೊಮ್ಮೆ ವಿಷಾದಿಸುತ್ತೇನೆ ಎಂದರು.

ಎಲ್ಲವನ್ನೂ ರಾಜ್ಯದ ಜನರ ವಿವೇಚನೆಗೆ ಬಿಡುತ್ತೇನೆ, ನಾನು ಹೇಳಿರುವ ಅರ್ಥ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ತೆರಿಗೆ ಲೂಟಿ ಆಗುತ್ತಿದೆ, ಸಾಲದ ಹೊರೆ ನಿಮ್ಮ ಮೇಲೆ ಹಾಕುತ್ತಿದ್ದಾರೆ, ಆ ಸಾಲದಿಂದ ರಾಜ್ಯ ದಿವಾಳಿಯಾಗುತ್ತದೆ, ಅದಕ್ಕೆ ಮರುಳಾಗಬೇಡಿ, ಎಚ್ಚರವಾಗಿರಿ, ದಾರಿ ತಪ್ಪಬೇಡಿ ಎಂದು ಹೇಳಿದ್ದೇನೆ, ಇದು ತಪ್ಪಾ.

ಈಗ ಕಣ್ಣಲ್ಲಿ ನೀರು ಬಂದಿದೆಯಂತೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ, ಇಂದಿರಾ ಗಾಂಧಿ ಸತ್ತ ನಂತರ ಈಗ ಕಣ್ಣಲ್ಲಿ ನೀರು ಬಂದಿದೆಯಂತೆ, ಹೆಣ್ಣು ಮಕ್ಕಳ ಸಭೆ ನಡೆಸಿ ಗಳಗಳನೆ ಅತ್ತಿದ್ದಾರೆ.

ಅಮಾಯಕ ಹೆಣ್ಣು ಮಕ್ಕಳನ್ನು ಕಿಡ್ನ್ಯಾಪ್ ಮಾಡಿ ಹೆದರಿಸಿ, ಬೆದರಿಸಿ, ಅವರ ಆಸ್ತಿ-ಪಾಸ್ತಿಗಳನ್ನು ಲಪಟಾಯಿಸಿದಾಗ ಮಿಸ್ಟರ್ ಶಿವಕುಮಾರ್ ಅವರಿಗೆ ಅಳು ಬರಲಿಲ್ಲ.

ಈಗ ಅವರ ಪಕ್ಷದ ಕಾರ್ಯಕರ್ತರನ್ನು ಬಿಟ್ಟು ಗೋಬ್ಯಾಕ್ ಎನ್ನಿಸುತ್ತಿದ್ದಾರೆ, ಅಲ್ಲಿ ಬಂದವರಿಗೆ ತಾವು ಏಕೆ ಬಂದಿದ್ದೇವೆ ಎಂದು ತಿಳಿದೇ ಇಲ್ಲ, ತಪ್ಪು ಮಾಡದವರು ನಿಮ್ಮ ಗೋಬ್ಯಾಕ್‌ಗೆ ಹೆದರಲ್ಲ, ಮಿಸ್ಟರ್ ಶಿವಕುಮಾರ್ ಅವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಇದ್ದಾರೆ, ಅವರು ಚಿತ್ರನಟಿ ಹೇಮಾಮಾಲಿನಿ ವಿರುದ್ಧ ಏನು ಹೇಳಿದ್ದರು, ಅದನ್ನು ಕನ್ನಡದಲ್ಲಿ ಹೇಳೋಕಾಗಲ್ಲ, ಅದೆಲ್ಲಾ ಮಹಿಳೆಯರಿಗೆ ಗೌರವ ಕೊಡುವ ಹೇಳಿಕೆಗಳೇ ಎಂದು ಪ್ರಶ್ನಿಸಿದರು.

ಜೆಡಿಎಸ್ ಭದ್ರಕೋಟೆಗೆ ರಾಹುಲ್ ಗಾಂಧಿ ಲಗ್ಗೆ
ನಿಮ್ಮ ಮುಖಂಡರು ಏನು ಮಾತನಾಡಿದ್ದರು

ಚಿತ್ರ ನಟಿ ಕಂಗನಾ ರಣಾವತ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದಾಗ, ಮಿಸ್ಟರ್ ಶಿವಕುಮಾರ್, ನಿಮ್ಮ ಪಕ್ಷದ ಮುಖಂಡರು ಏನು ಮಾತನಾಡಿದ್ದರು, ನಿಮ್ಮವರೇ ಅವರಿಗೆ ರೇಟ್ ಫಿಕ್ಸ್ ಮಾಡಿದ್ದು, ಅಷ್ಟೇ ಅಲ್ಲ ರಮೇಶ್‌ಕುಮಾರ್ ವಿಧಾನಸಭೆ ಕಲಾಪದಲ್ಲಿ, ಅತ್ಯಾಚಾರ ಅನಿವಾರ್ಯವಾದರೆ ಆನಂದಿಸಿ ಎಂದಿದ್ದರು.

ಶಾಮನೂರು ಶಿವಶಂಕರಪ್ಪ ಅವರು, ಮಹಿಳೆಯರು ಅಡುಗೆ ಮನೆಯಲ್ಲಿ ಇರಬೇಕು, ಮಹಿಳೆಯರನ್ನು ಅಡುಗೆ ಮನೆಯಿಂದ ಹೊರಗೆ ತರಬಾರದು ಎಂದು ಹೇಳಿದ್ದಾರೆ, ಅದಕ್ಕೆ ನೀವೇ ಕ್ಷಮೆ ಕೋರಿದ್ದೀರಿ.

ಇಂತಹ ನೂರಾರು ನಿದರ್ಶನ ಇದೆ, ಶಿವಕುಮಾರ್, ಇದಕ್ಕೆಲ್ಲ ಉತ್ತರ ಕೊಡಪ್ಪಾ, ನಿಮ್ಮ ಸೋನಿಯಾ, ರಾಹುಲ್ ಏನು ಹೇಳುತ್ತಾರೆ ಎಂದು ಕುಟುಕಿದರು.

ಅಪಾರ್ಟ್ಮೆಂಟ್‌ಗಳಿಗೆ ಧಮ್ಕಿ

ಬೆಂಗಳೂರಿನ ಅಪಾರ್ಟ್ಮೆಂಟ್‌ಗಳಿಗೆ ಎನ್‌ಒಸಿ ಕೊಡಲು ತಮ್ಮ ಸಹೋದರನಿಗೆ ಮತ ಹಾಕಬೇಕು ಎಂದು ನೀವು ಧಮ್ಕಿ ಹಾಕುತ್ತಿದ್ದೀರಿ, ನೀನು ಅಳಬೇಡಪ್ಪಾ, ನಿನಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ, ನೀನು ಆನಂದವಾಗಿರು, ನೀನು ದುಃಖ ಪಡಬೇಡಪ್ಪಾ, ಈಗ ಬಿಸಿಲು ಹೆಚ್ಚಿದೆ, ಬೀದಿಗೆ ಹೋಗಬೇಡಿ ಎಂದು ಕಾಂಗ್ರೆಸ್ ಮಹಿಳೆಯರಿಗೆ ಮನವಿ ಮಾಡುತ್ತೇನೆ.

ಈ ವಿಷಯ ಇಟ್ಟುಕೊಂಡು ಚುನಾವಣೆಯಲ್ಲಿ ಮನಃಪರಿವರ್ತನೆ ಮಾಡಲು ಆಗುವುದಿಲ್ಲ, ಎಷ್ಟು ಕುಟುಂಬಗಳನ್ನು ನಿಮ್ಮ ಆಸ್ತಿ ದುರಾಸೆಗೆ ಏನು ಮಾಡಿಕೊಂಡು ಬಂದಿದ್ದೀರಾ, ನಿಮ್ಮ ಇಡೀ ಇತಿಹಾಸ ನನಗೆ ಗೊತ್ತಿದೆ ಎಂದು ವಾಗ್ದಾಳಿ ಮಾಡಿದರು.

ಮಹಿಳಾ ಆಯೋಗದವರು ಸುಮೋಟೊ ಕೇಸ್ ದಾಖಲಿಸಿದ್ದಾರೆ, ಅದಕ್ಕೆಲ್ಲ ಉತ್ತರ ಕೊಡುತ್ತೇನೆ ಎಂದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
congresdk shivakumarguarenty scheemshd kumara swamy
0 FacebookTwitterPinterestEmail
admin

previous post
ದಿನ ಭವಿಷ್ಯ : ಸೋಮವಾರ, 15 ಏಪ್ರಿಲ್ 2024
next post
ಜೆಡಿಎಸ್ ಭದ್ರಕೋಟೆಗೆ ರಾಹುಲ್ ಗಾಂಧಿ ಲಗ್ಗೆ

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ