Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Thursday, July 23, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

Special Storyರಾಜಕೀಯರಾಜ್ಯರಾಷ್ಟ್ರವಿಶ್ಲೇಷಣೆ

14 ಕ್ಷೇತ್ರಗಳ ಮತದಾನಕ್ಕೆ ಚುನಾವಣಾ ಆಯೋಗ ಸಜ್ಜು

by admin April 23, 2024
written by admin April 23, 2024 0 comments 2 minutes read
0FacebookTwitterPinterestEmail
611

ಕರ್ನಾಟಕದ ಮೊದಲ ಹಂತದ ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿರುವ ಹಳೇ ಮೈಸೂರು ಭಾಗದ 14 ಲೋಕಸಭಾ ಕ್ಷೇತ್ರಗಳ ಅಬ್ಬರದ ಪ್ರಚಾರಕ್ಕೆ ಬುಧವಾರ ಸಂಜೆ ತೆರೆಬೀಳಲಿದೆ. ಮತದಾನ ಮುಕ್ತಾಯವಾಗುವ ಅವಧಿಯ 48 ಗಂಟೆಗಳ ಮೊದಲು ಬಹಿರಂಗ ಪ್ರಚಾರದ ಸಮಯ ಅಂತ್ಯಗೊಳ್ಳುತ್ತಿದ್ದಂತೆ ಕ್ಷೇತ್ರದವರಲ್ಲದ ಕಾರ್ಯಕರ್ತರು, ಮುಖಂಡರು, ರಾಜಕಾರಣಿಗಳು ಕ್ಷೇತ್ರ ತೊರೆಯಬೇಕಾಗುತ್ತದೆ.

ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಮತ ಯಾಚನೆ ಮಾಡಲು ಅವಕಾಶ ಇರುತ್ತದೆ. ಆದರೆ, ಅವರು ಗುಂಪು ಕಟ್ಟಿಕೊಂಡು ಪ್ರಚಾರ ನಡೆಸುವಂತಿಲ್ಲ. ಕ್ಷೇತ್ರ ವ್ಯಾಪ್ತಿಯ ಎಲ್ಲಾ ತೆರೆನಾದ ಮದ್ಯದ ಅಂಗಡಿಗಳು ಮತ್ತು ಬಾರ್ ಅಂಡ್ ರೆಸ್ಟೋರೆಂಟ್‌ಗಳು ಶುಕ್ರವಾರ ಮಧ್ಯರಾತ್ರಿವರೆಗೆ ವಹಿವಾಟು ನಡೆಸುವಂತಿಲ್ಲ.

ಮೊದಲ ಹಂತದಲ್ಲಿ ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಚಿತ್ರದುರ್ಗ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ.

ಅಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಮತದಾರರು ಮತದಾನ ಮಾಡಲು ಭಾರತದ ಚುನಾವಣಾ ಆಯೋಗ ಅವಕಾಶ ಮಾಡಿಕೊಟ್ಟಿದೆ.  ಬಹಿರಂಗ ಪ್ರಚಾರ ಅಂತ್ಯಗೊಳ್ಳಲು ಒಂದು ದಿನ ಬಾಕಿ ಇರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ, ಕಾಂಗ್ರೆಸ್ ಅಧಿನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ನಡೆಸಿದರು.

ಸಿಇಟಿ-2024: ಪ್ರಶ್ನೆಗಳ ಬಗ್ಗೆ ಪರಿಶೀಲನೆಗೆ ತಜ್ಞರ ಸಮಿತಿ ರಚನೆ

ಮೊದಲ ಹಂತದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಎನ್‌ಡಿಎ ಮೈತ್ರಿಕೂಟದ ಬಿಜೆಪಿ 11  ಕ್ಷೇತ್ರಗಳಲ್ಲಿ ಮಿತ್ರ ಪಕ್ಷ ಜೆಡಿಎಸ್ 3 ಕ್ಷೇತ್ರಗಳಲ್ಲೂ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿಗೆ ಮೊದಲ ಹಂತದ ಕ್ಷೇತ್ರಗಳು ಪ್ರತಿಷ್ಠೆಯ ಕಣಗಳಾಗಿವೆ.

ಮುಖ್ಯಮಂತ್ರಿ ಅವರು ಪ್ರತಿನಿಧಿಸುವ ಮೈಸೂರು-ಕೊಡಗು ಹಾಗೂ ಚಾಮರಾಜನಗರ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿರುವುದರಿಂದ ಎರಡೂ ಕ್ಷೇತ್ರಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಅದರಲ್ಲೂ ಬಿಜೆಪಿ, ರಾಜವಂಶಸ್ಥ ಯದುವೀರ ಕೃಷ್ಣದತ್ತ ಒಡೆಯರ್ ಅವರನ್ನು ಮುಖ್ಯಮಂತ್ರಿ ಅವರ ತವರು ಕ್ಷೇತ್ರದಲ್ಲಿ ಕಣಕ್ಕಿಳಿಸಿ ಆ ಕ್ಷೇತ್ರವನ್ನು ಉಳಿಸಿಕೊಳ್ಳಲು ಹೋರಾಟ ನಡೆಸಿದೆ.

ಕುಮಾರಸ್ವಾಮಿ ಸ್ವತಃ ಮಂಡ್ಯ ಕ್ಷೇತ್ರದಲ್ಲಿ ಎನ್‌ಡಿಎ ಕೂಟದ ಅಭ್ಯರ್ಥಿ ಆಗಿರುವುದರಿಂದ ಅದು ಪ್ರತಿಷ್ಠಿತ ಕ್ಷೇತ್ರವಾಗಿ ಮಾರ್ಪಟ್ಟಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಬೆಂಗಳೂರು ಗ್ರಾಮಾಂತರದಲ್ಲಿ ನಾಲ್ಕನೇ ಬಾರಿಗೆ ಮರು ಆಯ್ಕೆ ಬಯಸಿ ಕಣಕ್ಕಿಳಿದಿದ್ದಾರೆ, ಅವರ ಪ್ರತಿ ಸ್ಪರ್ಧಿ ದೇವೇಗೌಡರ ಅಳಿಯ ಹೃದಯ ತಜ್ಞ ಡಾ.ಮಂಜುನಾಥ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವುದರಿಂದ ಈ ಕ್ಷೇತ್ರದ ಬಗ್ಗೆ ಜನತೆ ಕುತೂಹಲದಿಂದ ನೋಡುತ್ತಿದ್ದಾರೆ.

ಕಳೆದ 2019 ರಲ್ಲಿ ಈ 14 ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 11 ರಲ್ಲೂ, ಕಾಂಗ್ರೆಸ್, ಜೆಡಿಎಸ್ ಹಾಗೂ ಪಕ್ಷೇತರರು ತಲಾ ಒಂದು ಸ್ಥಾನದಲ್ಲಿ ಗೆಲುವು ಗಳಿಸಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್, ಬಿಜೆಪಿ ಜೊತೆ ಕೈಜೋಡಿಸಿ ಕಾಂಗ್ರೆಸ್ ವಿರುದ್ಧ ಕಣಕ್ಕಳಿದಿದೆ, ಎಲ್ಲಾ ಕ್ಷೇತ್ರಗಳನ್ನು ಎನ್‌ಡಿಎ ಒಕ್ಕೂಟ ತಮ್ಮದಾಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ಅವರು ಈ ಕ್ಷೇತ್ರಗಳಲ್ಲಿ ಎರಡು ಬಾರಿ ಚುನಾವಣಾ ಪ್ರಚಾರ ಕೈಗೊಂಡಿದ್ದರು.

ಕೊನೆಯ ಎರಡು ದಿನಗಳಲ್ಲಿ ಮತದಾರರಿಗೆ ಆಮಿಷಗಳ ಮಹಾಪೂರವೇ ಹರಿದು ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ವೀಕ್ಷಕರು ತೀವ್ರ ನಿಗಾ ಇಟ್ಟಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

ಪ್ರತಿಯೊಂದು ಕ್ಷೇತ್ರಗಳ ಗಡಿ ಭಾಗಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ತೀವ್ರ ನಿಗಾ ಇಡಲಾಗಿದ್ದು, ಸೂಕ್ತ ದಾಖಲೆಗಳಿಲ್ಲದ ಹಣ, ಬೆಲೆ ಬಾಳುವ ವಸ್ತುಗಳ ಸಾಗಾಣಿಕೆ ತಡೆಗೆ ಅಲ್ಲಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಬಿಜೆಪಿ ಕಿತ್ತೊಗೆದು ಕಾಂಗ್ರೆಸ್‌ಗೆ ಅಧಿಕಾರ ನೀಡಿ

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
14 constituencieselection commissionfirst phasekarnatakaLok Sabha electionsOpen campaignreadyVoting
0 FacebookTwitterPinterestEmail
admin

previous post
ಬಿಜೆಪಿ ಕಿತ್ತೊಗೆದು ಕಾಂಗ್ರೆಸ್‌ಗೆ ಅಧಿಕಾರ ನೀಡಿ
next post
ದಿನ ಭವಿಷ್ಯ :  ಬುಧವಾರ, 24 ಏಪ್ರಿಲ್ 2024

You may also like

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026

ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

July 21, 2026

ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

July 18, 2026

ಗ್ರೀನ್ ಸಿಗ್ನಲ್ ಬರುತ್ತಿದ್ದಂತೆ ಮಂತ್ರಿಮಂಡಲ ವಿಸ್ತರಣೆ

July 17, 2026

ಸಂಭಾವ್ಯ ಸಚಿವರ ಪಟ್ಟಿಗೆ ರಾಹುಲ್ ಗಾಂಧಿ ಒಪ್ಪಿಗೆ

July 16, 2026

ರೈತರ ಹೋರಾಟಕ್ಕೆ ಮಣಿದ ಮುಖ್ಯಮಂತ್ರಿ ಶಿವಕುಮಾರ್

July 15, 2026

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡದಿದ್ದರೆ ಸತ್ಯಾಗ್ರಹ

July 14, 2026

ಅಧಿವೇಶನಕ್ಕೆ ಮುನ್ನ ಡಿಕೆಶಿ ಮಂತ್ರಿಮಂಡಲ ವಿಸ್ತರಣೆ

July 13, 2026

ಅಕ್ಟೋಬರ್-ನವೆಂಬರ್‌ಗೆ ಪಂಚಾಯತ್ ಚುನಾವಣೆ

July 11, 2026

ಹೆಚ್ಚು ಆಸ್ತಿ ಗಳಿಕೆ: ಮಾಜಿ ಸಚಿವ ಜಮೀರ್‌ಗೆ ಸಂಕಷ್ಟ

July 11, 2026

Social Networks

Facebook Twitter Instagram Linkedin Youtube Email Rss

KMS Analysis

  • ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ

    July 9, 2026
  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026

Categories

  • Special Story (521)
  • ಅಂಕಣ (109)
  • ಉದ್ಯೋಗ (340)
  • ದಿನ ಭವಿಷ್ಯ (110)
  • ರಾಜಕೀಯ (2,015)
  • ರಾಜ್ಯ (2,329)
  • ರಾಷ್ಟ್ರ (2,294)
  • ವಿಶ್ಲೇಷಣೆ (198)
  • ಶಿಕ್ಷಣ (401)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ವರ್ಚಸ್ಸುಳ್ಳ ಪಕ್ಷನಿಷ್ಠ ಶಾಸಕರಿಗೆ ಮಂತ್ರಿ ಭಾಗ್ಯ

    July 20, 2026

KMS Special

  • ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

    July 22, 2026
  • ನಾಳೆ ಮಧ್ಯಾನ್ಹ 2-20ಕ್ಕೆ ಡಿಕೆಶಿ ಸಂಪುಟ ವಿಸ್ತರಣೆ

    July 21, 2026
  • ಬರಪೀಡಿತ ಘೋಷಣೆಗೆ ನಾಳೆ ತುರ್ತು ಸಂಪುಟ ಸಭೆ

    July 18, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಡಿಕೆಶಿ ಸಂಪುಟ ವಿಸ್ತರಣೆಗೆ ನೀಟ್ ಹೋರಾಟ ಕಂಟಕ

July 22, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ