ಜನಪ್ರತಿನಿಧಿನಗಳ ವಿಶೇಷ ನ್ಯಾಯಾಲಯದಿಂದ ಮಂಜೂರು
ಬೆಂಗಳೂರು: ಎಸ್ ಐಟಿಯಿಂದ ಬಂಧಿತರಾಗಿ ನ್ಯಾಯಾಂಗ ಬಂಧನದಲ್ಲಿದ್ದ ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೇ 13ರಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಮಹಿಳೆಯೊಬ್ಬರ ಅಪಹರಣ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನಭಟ್ ಜಾಮೀನು ನೀಡಿ ಆದೇಶಿಸಿದ್ದಾರೆ.
ಸುದೀರ್ಘವಾದ ವಾದ ಮತ್ತು ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.
ಐದು ಲಕ್ಷ ರೂ.ಬಾಂಡ್ ನೀಡುವುದರ ಜತೆಗೆ ಇಬ್ಬರು ಶ್ಯೂರಿಟಿ ನೀಡಬೇಕು. ಕೆ.ಆರ್.ನಗರ ತಾಲ್ಲೂಕು ಪ್ರವೇಶಿಸಬಾರದು. ಎಸ್ಐಟಿ ತನಿಖೆಗೆ ಸಹಕಾರ ನೀಡಬೇಕು. ಯಾವುದೇ ಕಾರಣಕ್ಕೂ ಸಾಕ್ಷ್ಯಾಧಾರಗಳನ್ನು ನಾಶಪಡಿಸುವಂತಿಲ್ಲ. ಅನುಮತಿ ಇಲ್ಲದೆ ನ್ಯಾಯಾಲಯದ ವ್ಯಾಪ್ತಿ ಬಿಟ್ಟು ಹೋಗುವಂತಿಲ್ಲ ಎಂಬ ಷರತ್ತುಗಳನ್ನು ನ್ಯಾಯಾಲಯವು ರೇವಣ್ಣ ಅವರಿಗೆ ವಿಧಿಸಿ ಜಾಮೀನು ನೀಡಿದೆ.
ಜಾಮೀನು ಸಿಕ್ಕಿರುವ ಹಿನ್ನೆಲೆಯಲ್ಲಿ ರೇವಣ್ಣ ಅವರು ಮೇ 14ರಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.