Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Monday, June 8, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಕಾಂಗ್ರೆಸ್ ಆಡಳಿತದ ಒಂದು ವರ್ಷ ಶೂನ್ಯ ಸಾಧನೆ: ಬಿಜೆಪಿ

by admin May 20, 2024
written by admin May 20, 2024 0 comments 2 minutes read
0FacebookTwitterPinterestEmail
243

ಬೆಂಗಳೂರು:ಶಾಲಾ-ಕಾಲೇಜುಗಳಿಗೆ ತೆರಳಿದ ಹೆಣ್ಣು ಮಕ್ಕಳು ಹಿಂತಿರುಗದ ಪರಿಸ್ಥಿತಿ ತಂದಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಒಂದು ವರ್ಷದ ಸಾಧನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇಂದಿಲ್ಲಿ ಕೆಂಡ ಕಾರಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಒಂದು ವರ್ಷದ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಪೂರ್ಣ ಹದಗೆಟ್ಟಿದೆ, ರೈತರು ಕೃಷಿ ಮಾಡಲಾಗದಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ, ಅಭಿವೃದ್ಧಿ ನಗಣ್ಯವಾಗಿದೆ, ಇನ್ನು ಶಿಕ್ಷಣ ಗ್ರೇಸ್ ಮಾರ್ಕ್ಸ್‌ನಲ್ಲಿ ನಡೆಯುತ್ತಿದೆ, ಇದೇ ಬೃಹತ್ ಸಾಧನೆ.

ರೈತರು ಪಹಣಿ ಪ್ರತಿ ಪಡೆಯಲು ವಿಧಿಸುತ್ತಿದ್ದ 10 ರೂ. ಶುಲ್ಕವನ್ನು 25ರಿಂದ 30 ರೂ.ಗೆ ಹಚ್ಚಿಸಲಾಗಿದೆ, ಮುದ್ರಾಂಕ ಶುಲ್ಕವನ್ನೂ ಏರಿಕೆ ಮಾಡಲಾಗಿದೆ, ರೈತರು ಕೃಷಿ ಪಂಪ್ ಸೆಟ್‌ಗಳಿಗೆ ಟ್ರ್ಯಾನ್ಸ್‌ಫಾರ್ಮರ್ ಸಂಪರ್ಕ ಪಡೆಯಲು ಇದುವರೆಗೆ ನೀಡುತ್ತಿದ್ದ 20 ಸಾವಿರ ರೂ.ಗಳನ್ನು ಎರಡೂವರೆಯಿಂದ 3 ಲಕ್ಷ ರೂ.ಗಳವರೆಗೂ ಹೆಚ್ಚಿಸಲಾಗಿದೆ, ಬರಗಾಲದಲ್ಲಿ ಹೈನುಗಾರಿಕೆಗೆ ಪ್ರೋತ್ಸಾಹ ಧನವನ್ನು ನೀಡಿಲ್ಲ ಎಂದರು.

ರೈತ ವಿರೋಧಿ

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾವೇರಿ ನದಿ ಪಾತ್ರದಲ್ಲಿ ನೀರಿಲ್ಲ ಬೆಳೆ ಬೆಳೆಯ ಬೇಡಿ ಎಂದು ಹೇಳಿದ ಸರ್ಕಾರ ನಂತರ ಬೆಳೆ ಬೆಳೆದಿಲ್ಲದ್ದರಿಂದ ಬರ ಪರಿಹಾರ ನೀಡುವುದಿಲ್ಲ ಎಂದಿತು, ಇದು ರೈತ ವಿರೋಧಿ ನಡೆಯಲ್ಲದೆ ಮತ್ತಿನ್ನೇನು ಎಂದು ಬಿಜೆಪಿ ನಾಯಕರು ಪ್ರಶ್ನಿಸಿದರು.

ಕಳೆದೊಂದು ವರ್ಷ ರಾಜ್ಯ ಸರಕಾರದ ಸಾಧನೆ ಶೂನ್ಯ, ಕಳೆದ ಒಂದು ವರ್ಷದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಿಲ್ಲ, ಗುದ್ದಲಿ ಪೂಜೆಯ ಉದಾಹರಣೆಯೂ ಇಲ್ಲ.

ಸ್ಪಷ್ಟ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದರು, ನುಡಿದಂತೆ ನಡೆಯುವ ಸರಕಾರ ಎಂದು ಕಾಂಗ್ರೆಸ್ಸಿಗರು ತಮ್ಮ ಬೆನ್ನನ್ನು ತಾವು ತಟ್ಟಿಕೊಳ್ಳುತ್ತಿದ್ದಾರೆ. ಹೊಗಳು ಭಟರು, ಜಾಹೀರಾತಿನ ಮೂಲಕ ತಮ್ಮನ್ನು ತಾವು ಹೊಗಳಿಸಿಕೊಳ್ಳುವುದು ಮತ್ತು ಅಭಿವೃದ್ಧಿ ಆಗಿದೆ ಎಂದು ಬಿಂಬಿಸುವ ಕೆಲಸವನ್ನು ಮಾಡುತ್ತಿದ್ದಾರೆ.

ಗ್ಯಾರಂಟಿಯೇ ಅಭಿವೃದ್ಧಿ

ಗ್ಯಾರಂಟಿಯೇ ಅಭಿವೃದ್ಧಿ ಎಂದು ಬಿಂಬಿಸಲಾಗುತ್ತಿದೆ, ಬರಗಾಲದ ವಿಚಾರದಲ್ಲಿ ಸರಕಾರದ ನಡವಳಿಕೆ ಅಕ್ಷಮ್ಯ ಅಪರಾಧ, ಕೇಂದ್ರ ಸರಕಾರದಿಂದ ಅನುದಾನ ಬಂದಿಲ್ಲ ಎಂದು ಹೋರಾಟ ಮಾಡಿದರು.

ರಾಜ್ಯದಲ್ಲಿ 692ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ರಾಜ್ಯ ಸರಕಾರವು ಕೃಷಿ ಸಾಲ, ಬೆಳೆ ನಷ್ಟಕ್ಕೆ ಪರಿಹಾರ ಕೊಡುವಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳದೆ ಇರುವುದು ದುರದೃಷ್ಟಕರ ಎಂದು ಬೇಸರ ವ್ಯಕ್ತಪಡಿಸಿದರು.

ಹೈನುಗಾರಿಕೆ ಪ್ರೋತ್ಸಾಹಧನವನ್ನೂ 8-10 ತಿಂಗಳಿನಿಂದ ನೀಡಿಲ್ಲ. ಗ್ಯಾರಂಟಿಗಳ ಅನುಷ್ಠಾನದ ಆತುರದಲ್ಲಿ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಮರೆತಿದ್ದಾರೆ. ರಾಜ್ಯ ಸರಕಾರ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿ ಹಾಕಿಕೊಂಡಿದೆ ಎಂದರು.

ಕರ್ನಾಟಕದ ಅಭಿವೃದ್ಧಿ ದೇಶಕ್ಕೇ ಮಾದರಿ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಒಬ್ಬರು ಕಾಂಗ್ರೆಸ್ ನಾಯಕರು ಅಸಾಧ್ಯವಾದುದನ್ನು ನಾವು ಸಾಧಿಸಿ ತೋರಿಸಿದ್ದೇವೆ ಎನ್ನುತ್ತಿದ್ದಾರೆ.

ಕೊಲೆಗಡುಕರ ಸರಕಾರ

ಕರ್ನಾಟಕ ಎಂದರೆ ಕೊಲೆಗಡುಕರ ಸರಕಾರ ಎಂದು ದೇಶದೆಲ್ಲೆಡೆ ಮಾತ್ರವಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲೂ ಮಾತು ಕೇಳಿಬರುತ್ತಿದೆ, ಕೊಲೆ ಪ್ರಕರಣ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರಕಾರ ನಿಷ್ಕ್ರಿಯವಾಗಿದೆ, ಲವ್ ಜಿಹಾದ್ ಪ್ರಕರಣದಲ್ಲಿ ಬೇಜವಾಬ್ದಾರಿ ಹೇಳಿಕೆ ಕೊಡುತ್ತಿದೆ.

ಕೊಲೆಗಡುಕರಿಗೆ ಶಕ್ತಿ ಕೊಡುವ ಕೆಲಸವನ್ನು ರಾಜ್ಯ ಸರಕಾರ ಮಾಡುತ್ತಿದೆಯೇ ಎಂಬ ಪ್ರಶ್ನೆ ಕೇಳುವಂತಾಗಿದೆ, ಮಹಿಳಾ ಸುರಕ್ಷತೆ ಬಗ್ಗೆ ಯಕ್ಷಪ್ರಶ್ನೆ ಮೂಡಿದೆ, ಅಭಿವೃದ್ಧಿ ಇಲ್ಲ, ರೈತರ ವಿಚಾರದಲ್ಲಿ ಕಾಳಜಿ ಇಲ್ಲದಂತಾಗಿದೆ, ಲವ್ ಜಿಹಾದ್ ಹೆಚ್ಚಳ, ಹಿಂದೂ ಕಾರ್ಯಕರ್ತರ ಹತ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದರೂ ಸರಕಾರ ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿದರು.

ಹುಬ್ಬಳ್ಳಿ ಕಾಲೇಜು ಕ್ಯಾಂಪಸ್ಸಿನಲ್ಲಿ ನೇಹಾ ಹತ್ಯೆ ಪ್ರಕರಣ, ಮನೆಗೆ ನುಗ್ಗಿ ಅಂಜಲಿ ಹತ್ಯೆ, ಕೊಡಗಿನಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಹತ್ಯೆ, ಕೊಡಗಿನಲ್ಲಿ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತನನ್ನು ಕಾರು ಹರಿಸಿ ಹತ್ಯೆ ಮಾಡಿದ್ದಾರೆ.

ಯಾರಿಗೂ ಅನ್ಯಾಯವಾಗದಂತೆ ಜಾತಿ ಗಣತಿ ವರದಿ ಜಾರಿ
ತಲೆ ತಗ್ಗಿಸಬೇಕಾದ ಪರಿಸ್ಥಿತಿ

ಈ ಸರಕಾರ ಬಂದ ಬಳಿಕ ಗುಲ್ಬರ್ಗದಲ್ಲಿ ನಿರಂತರವಾಗಿ ಬಿಜೆಪಿ ಕಾರ್ಯಕರ್ತರ ಮೇಲೆ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯ ಹೆಚ್ಚಾಗಿದೆ. 3-4 ತಿಂಗಳಿನಿಂದ 450ಕ್ಕೂ ಹೆಚ್ಚು ಕೊಲೆ ಪ್ರಕರಣಗಳು ನಡೆದಿವೆ. ಇದರಿಂದ ರಾಜ್ಯವೇ ದೇಶದ ಮುಂದೆ ತಲೆ ತಗ್ಗಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ನುಡಿದರು.

ಪರಿಶಿಷ್ಟ ಜಾತಿ, ಪಂಗಡದವರಿಗೆ ಮೀಸಲಿಟ್ಟ 25 ಸಾವಿರ ಕೋಟಿ ರೂ. ಮೊತ್ತವನ್ನು ಬೇರೆಡೆಗೆ ವರ್ಗಾವಣೆ ಮಾಡಿ ಅನ್ಯಾಯ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ಯೋಜನೆಯಡಿ ಬಿಜೆಪಿ ರಾಜ್ಯ ಸರಕಾರ ಹೆಚ್ಚುವರಿಯಾಗಿ ಕೊಡುತ್ತಿದ್ದ 4 ಸಾವಿರವನ್ನು ತಡೆ ಹಿಡಿದಿದ್ದಾರೆ ಎಂದರಲ್ಲದೆ, ಪ್ರಕೃತಿ ವಿಕೋಪ ನಿಧಿಯಡಿ ಎಷ್ಟು ಹಣ ನೀಡಿದ್ದೀರಿ ಎಂದು ಪ್ರಶ್ನಿಸಿದರು.

ಬರಗಾಲದ ಸಂದರ್ಭದಲ್ಲೂ 7 ತಾಸು ವಿದ್ಯುತ್ ಕೊಡದ ನಿಷ್ಕ್ರಿಯ ಸರಕಾರ, ಲೋಕಸಭಾ ಚುನಾವಣೆ ಫಲಿತಾಂಶ ಬಂದ ಬಳಿಕ ಈ ಸರಕಾರದ ಹಣೆಬರಹ ಗೊತ್ತಾಗಲಿದೆ.

ಸರಕಾರ ಅಭಿವೃದ್ಧಿ ಕಡೆ ಗಮನ ಕೊಡಬೇಕು, ಕಾನೂನು-ಸುವ್ಯವಸ್ಥೆ ಕಾಪಾಡಬೇಕು ಎಂದು ಆಗ್ರಹಿಸಿದರು.

ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದು ಹೇಳಿಕೊಳ್ಳುತ್ತಲೇ ಒಂದು ವರ್ಷ ಪೂರೈಸಿದ್ದೇ ಈ ಸರ್ಕಾರದ ಸಾಧನೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp acusses congres one year rulefailure of law and orderno developmentonly guarenty is achivement
0 FacebookTwitterPinterestEmail
admin

previous post
ಕಾಂಗ್ರೆಸ್‌ಗೂ ಪೆನ್‌ಡ್ರೈವ್‌ಗೂ ಸಂಬಂಧ ಇಲ್ಲ
next post
ಯಾರಿಗೂ ಅನ್ಯಾಯವಾಗದಂತೆ ಜಾತಿ ಗಣತಿ ವರದಿ ಜಾರಿ

You may also like

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

June 6, 2026

ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

June 5, 2026

ಅಕ್ರಮ ತಡೆಯದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ

June 4, 2026

ಡಿ.ಕೆ.ಶಿವಕುಮಾರ್ ಕರ್ನಾಟಕದ ನೂತನ ಮುಖ್ಯಮಂತ್ರಿ

June 3, 2026

ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

June 2, 2026

ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

June 1, 2026

ಸಿಎಲ್‌ಪಿ ನಾಯಕನಾಗಿ ಡಿಕೆಶಿ ಸರ್ವಾನುಮತ ಆಯ್ಕೆ

May 30, 2026

ಸಿಎಲ್‌ಪಿ ನಾಯಕನಾಗಿ ನಾಳೆ ಶಿವಕುಮಾರ್ ಆಯ್ಕೆ

May 29, 2026

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

May 28, 2026

Social Networks

Facebook Twitter Instagram Linkedin Youtube Email Rss

KMS Analysis

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ಸರ್ವಧರ್ಮ ಗುರುಗಳ ಸಮ್ಮುಖದಲ್ಲಿ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ‌ ಸ್ವೀಕಾರ

    June 2, 2026
  • ಮುಖ್ಯಮಂತ್ರಿ ನಿವಾಸವಾಗಿ ಬದಲಾಗಲಿದೆ ಕುಮಾರಕೃಪಾ ಅತಿಥಿ ಗೃಹ

    June 1, 2026
  • ಮೇ 28 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ

    May 27, 2026
  • ಅಧಿಕಾರ ತ್ಯಾಗಕ್ಕೆ ಸಿದ್ದರಾಗಲು‌ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ಸೂಚನೆ

    May 26, 2026

Categories

  • Special Story (483)
  • ಅಂಕಣ (109)
  • ಉದ್ಯೋಗ (332)
  • ದಿನ ಭವಿಷ್ಯ (110)
  • ರಾಜಕೀಯ (1,977)
  • ರಾಜ್ಯ (2,291)
  • ರಾಷ್ಟ್ರ (2,259)
  • ವಿಶ್ಲೇಷಣೆ (197)
  • ಶಿಕ್ಷಣ (396)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026

KMS Special

  • ಮನಸು ಬದಲಿಸಿದ ರಾಮಲಿಂಗಾರೆಡ್ಡಿ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ

    June 6, 2026
  • ರಾಮಲಿಂಗಾ ರೆಡ್ಡಿ ರಾಜೀನಾಮೆ ಅಂಗೀಕಾರಕ್ಕೆ ಸೂಚನೆ

    June 5, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಮನಸು ಬದಲಿಸಿದ ರಾಮಲಿಂಗಾರೆಡ್ಡಿ

June 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ