Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Friday, April 24, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಯಾರಿಗೂ ಅನ್ಯಾಯವಾಗದಂತೆ ಜಾತಿ ಗಣತಿ ವರದಿ ಜಾರಿ

by admin May 20, 2024
written by admin May 20, 2024 0 comments 2 minutes read
0FacebookTwitterPinterestEmail
239

ಬೆಂಗಳೂರು:ಯಾವ ಸಮುದಾಯಕ್ಕೂ ಸಮಸ್ಯೆ ಆಗದ ರೀತಿಯಲ್ಲಿ ಜಾತಿ ಗಣತಿ ವರದಿ ಜಾರಿಗೆ ತರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದ್ದಾರೆ.

ತಮ್ಮ ಆಡಳಿತಕ್ಕೆ ಒಂದು ವರ್ಷ ಪೂರ್ಣಗೊಂಡ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್‌ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ಜಾತಿ ಗಣತಿ ವರದಿಯನ್ನು ಸಂಪುಟದ ಮುಂದಿಟ್ಟು ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದರು.

ಗಣತಿ ವರದಿ ಜಾರಿಗೊಳಿಸುವುದರಿಂದ ಯಾವ ಜಾತಿ, ಸಮುದಾಯಕ್ಕೂ ಅನ್ಯಾಯವಾಗುವುದಿಲ್ಲ, ಒಂದು ವೇಳೆ ಆದರೆ, ಅದನ್ನು ಸರಿಪಡಿಸುವುದಾಗಿಯೂ ತಿಳಿಸಿದರು.

ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ

ಆರ್ಥಿಕವಾಗಿ, ಸಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನು ಇಂತಹ ವರದಿಗಳಿಂದಲೇ ಗುರುತಿಸಿ ಆ ಸಮುದಾಯಗಳಿಗೆ ನ್ಯಾಯ ಒದಗಿಸುವುದು ಸರ್ಕಾರದ ಕರ್ತವ್ಯ.

ವರದಿಯೇ ಬೇಡ ಎಂದರೆ ಹಿಂದುಳಿದ ವರ್ಗಗಳಿಗೆ ನ್ಯಾಯ ದೊರೆಕಿಸಿಕೊಡುವುದಾದರೂ ಹೇಗೆ ಎಂದು ಪ್ರಶ್ನಿಸಿದರು.

ನಾನು ಹಿಂದೆ ಅಧಿಕಾರದಲ್ಲಿದ್ದಾಗ, ಹಿಂದುಳಿದ ವರ್ಗಗಳ ಆಯೋಗ ರಚಿಸಿದೆ, ಅವರು ವರದಿ ಕೊಡುವ ಸಂದರ್ಭದಲ್ಲಿ ಅಧಿಕಾರ ಕಳೆದುಕೊಂಡೆ, ನಂತರ ಬಂದ ಸರ್ಕಾರಗಳು ವರದಿಯನ್ನು ಜಾರಿಗೊಳಿಸಲಿಲ್ಲ.

ಈಗ ಮತ್ತೆ ನಾನೇ ಅಧಿಕಾರದಲ್ಲಿದ್ದೇನೆ, ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದವರಿಗೆ ನ್ಯಾಯ ದೊರೆಕಿಸುವುದಾಗಿ ಹೇಳುವುದರ ಮೂಲಕ ಪರೋಕ್ಷವಾಗಿ ವರದಿ ಜಾರಿಗೊಳಿಸುವ ಬಗ್ಗೆ ತಿಳಿಸಿದರು.
ಗ್ಯಾರಂಟಿಗಳು ಮನೆ ಮನೆ ತಲುಪಿವೆ.

ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ, ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ವಿಜಯೇಂದ್ರ, ಆರ್.ಅಶೋಕ್‌ಗೆ ಆರ್ಥಿಕತೆ ಅರ್ಥ ಆಗಲ್ಲ, ಹೀಗಾಗಿ ಖಜಾನೆ ಖಾಲಿ ಆಗಿದೆ ಎಂದು ಪರಮ ಸುಳ್ಳು ಹೇಳುತ್ತಿದ್ದಾರೆ, ನಾವು ಗ್ಯಾರಂಟಿಯೇತರ ಅಭಿವೃದ್ಧಿ ಕಾರ್ಯಗಳಿಗೆ 54,374 ಕೋಟಿ ರೂ. ಖರ್ಚು ಮಾಡುವುದಾಗಿ ಬಜೆಟ್‌ನಲ್ಲಿ ಹೇಳಿದ್ದೆವು. ಆದರೆ 56,274 ಕೋಟಿ ಖರ್ಚು ಮಾಡಿದೆವು. ಅಂದರೆ ಬಜೆಟ್‌ನಲ್ಲಿ ಹೇಳಿದ್ದಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವೆ ಎಂದು ಅಂಕಿ-ಅಂಶಗಳ ಸಮೇತ ವಿವರಿಸಿದರು.

ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲೀಮರಿಗೆ ಕೊಡ್ತಾರೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತೊಂದು ಸುಳ್ಳು ಹೇಳುತ್ತಿದ್ದಾರೆ, ಇದು ಅಪ್ಪಟ ಸುಳ್ಳು.

ಜನರ ದಿಕ್ಕು ತಪ್ಪಿಸುವುದನ್ನು ಬಿಜೆಪಿ ನಿಲ್ಲಿಸಲಿ

ಚುನಾವಣೆಯಲ್ಲಿ ಜನರನ್ನು ರೊಚ್ಚಿಗೆಬ್ಬಿಸಿ, ದಿಕ್ಕು ತಪ್ಪಿಸುವುದನ್ನು ಬಿಜೆಪಿ ಮತ್ತು ಮೋದಿ ನಿಲ್ಲಿಸಬೇಕು, ಜನ ಬಿಜೆಪಿಯ ಸುಳ್ಳುಗಳ ಬಗ್ಗೆ ಎಚ್ಚೆತ್ತುಕೊಂಡಿದ್ದಾರೆ ಎಂದರು.

ಆರೋಗ್ಯ, ಶಿಕ್ಷಣ, ನೀರಾವರಿ, ಸಮಾಜ ಕಲ್ಯಾಣ, ಕೃಷಿ ಸೇರಿ ಎಲ್ಲಾ ಇಲಾಖೆಗಳಲ್ಲೂ ಅಭಿವೃದ್ಧಿ ಕೆಲಸಗಳು ಯಥೇಚ್ಛವಾಗಿ ನಡೆಯುತ್ತಿವೆ ಎಂದು ವಿವರಿಸಿದರು.

ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿ ನರಳುತ್ತಿದ್ದ ಮಧ್ಯಮ ವರ್ಗ ಮತ್ತು ಬಡವರ ಕೊಳ್ಳುವ ಶಕ್ತಿ ಹೆಚ್ಚಿಸಲು ಗ್ಯಾರಂಟಿಗಳನ್ನು ಜಾರಿ ಮಾಡಿದೆವು.

ಪ್ರಮಾಣವಚನ ಸ್ವೀಕರಿಸಿದ ದಿನದಿಂದಲೇ ಚುನಾವಣೆಯಲ್ಲಿ ಕೊಟ್ಟ ಆಶ್ವಾಸನೆ, ಗ್ಯಾರಂಟಿಗಳ ಜಾರಿಗೆ ಕ್ರಮ ತೆಗೆದುಕೊಂಡು ಐದಕ್ಕೆ ಐದೂ ಜಾರಿ ಮಾಡಿದ್ದೇವೆ.

ಕಾಂಗ್ರೆಸ್ ಆಡಳಿತದ ಒಂದು ವರ್ಷ ಶೂನ್ಯ ಸಾಧನೆ: ಬಿಜೆಪಿ
40% ಕಮಿಷನ್ ಆರೋಪ ತನಿಖೆ

ನಮ್ಮ ಕಾಲದಲ್ಲಿ ಭ್ರಷ್ಟಾಚಾರ ಸಂಪೂರ್ಣವಾಗಿ ನಿಂತಿದೆ ಎಂದು ಹೇಳೋದಿಲ್ಲ, ಆದರೆ, ಇದರ ಪ್ರಮಾಣ ಕಡಿಮೆ ಮಾಡಲು ನಿಷ್ಠುರವಾಗಿ ಕ್ರಮ ತೆಗೆದುಕೊಳ್ಳುತ್ತಿದ್ದೇವೆ, 40% ಕಮಿಷನ್ ಆರೋಪ ಕುರಿತ ತನಿಖೆ ಶುರು ಮಾಡಿದ್ದೇವೆ.

ದೇವಸ್ಥಾನಗಳ ಹಣ ಕಿತ್ತುಕೊಳ್ಳುತ್ತಿದ್ದಾರೆ ಎಂದು ಸುಳ್ಳು ಪ್ರಚಾರ ಮಾಡಿದರು, ಆದರೆ ಗ್ರಾಮೀಣ ಭಾಗದ ದೇವಸ್ಥಾನಗಳ ಅಭಿವೃದ್ಧಿಗೆ ನಾವು ಮುಂದಾಗಿದ್ದೇವೆ ಎನ್ನುವ ಸತ್ಯ ಮರೆಮಾಚಿ ಅಪಪ್ರಚಾರ ಮಾಡುತ್ತಿದ್ದಾರೆ.

ನೇಹಾ ಕೊಲೆ ಪ್ರಕರಣದ ಆರೋಪಿ ಬಂಧಿತನಾಗಿ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ ಆಗಿದೆ, ಹಿಂದಿನ ವರ್ಷಕ್ಕೆ ಹೋಲಿಸಿದರೆ ಕೊಲೆಗಳ ಪ್ರಮಾಣ ಕಡಿಮೆ ಆಗಿದೆ, ಅಂಕಿ ಅಂಶಗಳಿಗಿಂತ ಸಮಾಜದ ಸ್ವಾಸ್ಥ್ಯ ಮುಖ್ಯ, ಈ ಹಿನ್ನೆಲೆಯಲ್ಲಿ ಅಪರಾಧ ತಡೆಗಟ್ಟಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ, ಕರ್ತವ್ಯಲೋಪ ಎಸಗಿದ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಸುಪ್ರೀಂಕೋರ್ಟ್ ಮೊರೆ

ರಾಜ್ಯ ಭೀಕರ ಬರಕ್ಕೆ ತುತ್ತಾದಾಗಲೂ ರಾಜ್ಯದ ಪಾಲಿನ ಬರ ಪರಿಹಾರವನ್ನು ಕೇಂದ್ರ ಕೊಡಲಿಲ್ಲ, ನಾವು ನಮ್ಮ ಪಾಲು ಕೇಳಲು ಪದೇ ಪದೇ ಕೇಂದ್ರಕ್ಕೆ ಹೋಗಿ ಮನವಿ ಮಾಡಿದರೂ ಕೊಡಲಿಲ್ಲ, ನಾನೇ ಪ್ರಧಾನಿ ಮತ್ತು ಅಮಿತ್ ಷಾ ಅವರಿಗೆ ಮನವಿ ಕೊಟ್ಟರೂ ಪ್ರಯೋಜನ ಆಗಲಿಲ್ಲ, ಆದ್ದರಿಂದ ಸುಪ್ರೀಂಕೋರ್ಟ್ ಮೊರೆ ಹೋಗಬೇಕಾಯಿತು.

ಕೇಂದ್ರದ ಅಸಹಕಾರ ನಡುವೆಯೂ ನಾವು ರಾಜ್ಯದ ಜನತೆಯ ಕೈ ಬಿಡಲಿಲ್ಲ, ಪರಿಹಾರ ಕೊಟ್ಟೆವು ಎಂದರು.

ಬಿಜೆಪಿಯ ದೇವರಾಜೇಗೌಡ ಅವರೇ ಮೊದಲಿಗೆ ಪತ್ರಿಕಾಗೋಷ್ಠಿ ನಡೆಸಿದ್ದರು, ಅತ್ಯಾಚಾರಕ್ಕೆ ಒಳಗಾದವರು ದೂರು ಕೊಟ್ಟರು, ಆರು ತಿಂಗಳ ಮೊದಲೇ ಬಿಜೆಪಿಗೆ ವಿಷಯ ಗೊತ್ತಿತ್ತು, ಆದರೂ ಪ್ರಜ್ವಲ್‌ಗೆ ಎನ್‌ಡಿಎ ಟಿಕೆಟ್ ನೀಡಿತು, ಮೋದಿ ಬಂದು ಪ್ರಜ್ವಲ್ ಗೆಲ್ಲಿಸಲು ಭಾಷಣ ಮಾಡಿದರು ಎಂದು ಟೀಕಿಸಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
bjp is lying about reservationcast census implimentation - siddaramaiahgovt. duty to impliment - cm
0 FacebookTwitterPinterestEmail
admin

previous post
ಕಾಂಗ್ರೆಸ್ ಆಡಳಿತದ ಒಂದು ವರ್ಷ ಶೂನ್ಯ ಸಾಧನೆ: ಬಿಜೆಪಿ
next post
ರೇವಣ್ಣಗೆ ಮತ್ತೊಂದು ಪ್ರಕರಣದಲ್ಲೂ ಜಾಮೀನು

You may also like

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026

ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

April 21, 2026

ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

April 20, 2026

ಬದಲಾಗದ ಮಹಿಳಾ ವಿರೋಧಿ ಕಾಂಗ್ರೆಸ್ ಮನಸ್ಥಿತಿ

April 18, 2026

ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

April 17, 2026

ಪಕ್ಷ ವಿರೋಧಿ ಚಟುವಟಿಕೆ: ಸಚಿವ ಜಮೀರ್‌ಗೆ ಕಂಟಕ

April 16, 2026

ಪ್ರಧಾನಿ ಮೋದಿಗೆ ರಾಜ್ಯದ 18 ಬೇಡಿಕೆಗಳ ಪಟ್ಟಿ

April 15, 2026

ಶಾಸಕರ ಜೊತೆ ಪ್ರತ್ಯೇಕ ಸಭೆಗೆ ಶಿವಕುಮಾರ್ ಸಮರ್ಥನೆ

April 14, 2026

ಸಂಪುಟ ಪುನರ್ ರಚನೆಗೆ ಅವಕಾಶ ಕೊಡಬೇಡಿ

April 13, 2026

ಅಧಿಕಾರ ಹಸ್ತಾಂತರ ನಿರೀಕ್ಷೆಯಲ್ಲಿ ಡಿ.ಕೆ.ಶಿವಕುಮಾರ್

April 11, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (443)
  • ಅಂಕಣ (109)
  • ಉದ್ಯೋಗ (326)
  • ದಿನ ಭವಿಷ್ಯ (110)
  • ರಾಜಕೀಯ (1,937)
  • ರಾಜ್ಯ (2,252)
  • ರಾಷ್ಟ್ರ (2,222)
  • ವಿಶ್ಲೇಷಣೆ (189)
  • ಶಿಕ್ಷಣ (393)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026

KMS Special

  • ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

    April 23, 2026
  • ಎಸ್‌ಎಸ್‌ಎಲ್‌ಸಿ ಅಂಕ ಪದ್ಧತಿ ಮುಂದುವರೆಸಿ

    April 21, 2026
  • ದಲಿತ ಒಳಮೀಸಲಾತಿ: ಏ.24ಕ್ಕೆ ವಿಶೇಷ ಸಂಪುಟ ಸಭೆ

    April 20, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

ಎಸ್‌ಎಸ್‌ಎಲ್‌ಸಿ ತೇರ್ಗಡೆಯಲ್ಲಿ ಐತಿಹಾಸಿಕ ದಾಖಲೆ

April 23, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ