Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜಕೀಯರಾಜ್ಯರಾಷ್ಟ್ರ

ಪಾಲಿಕೆ, ಪಂಚಾಯತ್ ಚುನಾವಣೆಗೆ ಸಿದ್ಧರಾಗಿ

by admin May 21, 2024
written by admin May 21, 2024 0 comments 2 minutes read
0FacebookTwitterPinterestEmail
147

ಬೆಂಗಳೂರು:ಜಿಲ್ಲಾ, ತಾಲ್ಲೂಕು ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಶೀಘ್ರದಲ್ಲೇ ಚುನಾವಣೆ ನಡೆಸಿ ಜನರಿಗೆ ಅಧಿಕಾರ ಕೊಡುವುದಾಗಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಘೋಷಣೆ ಮಾಡಿದ್ದಾರೆ.

ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ಚುನಾವಣೆ ನಡೆಸಲಾಗುವುದು, ಪಕ್ಷದ ನಾಯಕರು, ಕಾರ್ಯಕರ್ತರು ಸಿದ್ಧರಾಗಿ ಎಂದು ಕರೆ ನೀಡಿದರು.

ತೆರವಾಗಿರುವ ಸ್ಥಳೀಯ ಸಂಸ್ಥೆಗಳಿಗೆ ಹಿಂದಿನ ಬಿಜೆಪಿ ಆಡಳಿತ ಚುನಾವಣೆ ನಡೆಸದೆ, ಜನರಿಗೆ ಇದ್ದ ಅಧಿಕಾರವನ್ನು ಕಸಿದುಕೊಂಡಿತ್ತು.

ವಿದ್ಯುತ್ ಅಭಾವ ನೀಗಿಸಿದ ಮಳೆ
ಕಾನೂನು ತೊಡಕು ನಿವಾರಿಸುತ್ತೇವೆ

ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ನಾವು ಚುನಾವಣೆ ನಡೆಸುತ್ತೇವೆ, ನೀವು ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರಾಗಲು ಈ ಚುನಾವಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅಧಿಕಾರ ಪಡೆಯುವ ಜೊತೆಗೆ ಪಕ್ಷಕ್ಕೂ ನ್ಯಾಯ ದೊರಕಿಸಿ.

ನಾನು ಇನ್ನೆಷ್ಟು ದಿನ ಪ್ರದೇಶ ಕಾಂಗ್ರೆಸ್ ಅಧ್ಯಕ್ಷನಾಗಿರುತ್ತೇನೋ ಗೊತ್ತಿಲ್ಲ, ಅಷ್ಟರೊಳಗೆ ಪಕ್ಷಕ್ಕೆ ದುಡಿದ ಕಾರ್ಯಕರ್ತರಿಗೆ ಅಧಿಕಾರ ಕೊಡಿಸುತ್ತೇನೆ.

ಪಂಡಿತ್ ಜವಾಹರ್ ಲಾಲ್ ನೆಹರು, ರಾಜಗೋಪಾಲಾಚಾರಿ, ಕೆಂಗಲ್ ಹನುಮಂತಯ್ಯ, ಬಿ.ಡಿ.ಜತ್ತಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ನಾಯಕರು ಕೆಳಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಬೆಳೆದವರು.

ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರು ಸೇರಿ 15 ಕಡೆ ಎನ್‌ಐಎ ದಾಳಿ
ಪಕ್ಷದ ಎಲ್ಲಾ ಘಟಕ ಹೊಸದಾಗಿ ರಚನೆ

ಸಂಘಟನೆ ಬಲಗೊಳಿಸಬೇಕು, ಪಕ್ಷದ ಎಲ್ಲಾ ಘಟಕಗಳನ್ನು ವಿಸರ್ಜಿಸಿ ಹೊಸದಾಗಿ ರಚಿಸುವ ಸಮಯ ಬಂದಿದೆ, ಮೊದಲು ಪಕ್ಷದ ಕೆಲಸ ಮಾಡಬೇಕು, ಕೇವಲ ಗುರುತಿನ ಚೀಟಿಗೋಸ್ಕರ ಬರುವವರು ಮನೆಯಲ್ಲಿಯೇ ಇರಿ ಎಂದರು.

ಖಾದಿ ಬಟ್ಟೆ ಹಾಕಿಕೊಂಡು, ಕಾರು ಇಟ್ಟುಕೊಂಡು ಎಂಎಲ್‌ಸಿ ಮಾಡಿ, ಅಧ್ಯಕ್ಷನನ್ನಾಗಿ ಮಾಡಿ ಎಂದರೆ ಅದು ಇಲ್ಲಿ ನಡೆಯುವುದಿಲ್ಲ, ಕೆಲಸ ಮಾಡುವವರಿಗೆ ಆದ್ಯತೆ, ನಿಮ್ಮ ಬೂತ್ ಮಟ್ಟದಲ್ಲಿ ಪಕ್ಷಕ್ಕೆ ಹೆಚ್ಚಿನ ಮತ ತಂದು ನಾಯಕತ್ವಕ್ಕೆ ಬೇಡಿಕೆ ಇಡಬೇಕು, ನಿಮ್ಮ ಬೂತ್‌ಗಳಲ್ಲಿ ಪಕ್ಷಕ್ಕೆ ಮುನ್ನಡೆ ತರಲು ಆಗದಿದ್ದರೆ ನಾವು ಬೇರೆಯವರನ್ನು ತಯಾರು ಮಾಡುತ್ತೇವೆ ಎಂದು ಎಚ್ಚರಿಸಿದರು.

ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನ ಬಿಟ್ಟು ಹೋಗುವ ಮುನ್ನ ಪಕ್ಷದ ಸಂಘಟನೆಗೆ ಭದ್ರ ಬುನಾದಿ ಹಾಕಿಕೊಡುವ ಕೆಲಸ ಮಾಡುತ್ತೇನೆ, ಈ ವಿಚಾರದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇನೆ, ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಕಾರ್ಯಯೋಜನೆ ಸಿದ್ಧಪಡಿಸುತ್ತೇವೆ, ನೀವೆಲ್ಲರೂ ಸಿದ್ಧರಾಗಬೇಕು ಎಂದರು.

ಜಿಲ್ಲಾ, ತಾಲ್ಲೂಕು ಪಂಚಾಯತ್‌ಗಳಲ್ಲದೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜೊತೆಗೆ ಇನ್ನೂ ಕೆಲವು ಪಾಲಿಕೆಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಎರಡು-ಮೂರು ವರ್ಷಗಳೇ ಆಗಿವೆ.

ಜಿಲ್ಲಾ ಉಸ್ತುವಾರಿಗಳ ಬದಲಾವಣೆ
ಜನ ನಮಗೆ ಅಧಿಕಾರ ನೀಡಿದ್ದಾರೆ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ನಮಗೆ ಅಧಿಕಾರ ನೀಡಿದ್ದಾರೆ, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲೂ ನಮ್ಮನ್ನು ಕೈಬಿಡುವುದಿಲ್ಲ ಎಂದು ನಂಬಿದ್ದೇವೆ.

ಲೋಕಸಭಾ ಚುನಾವಣಾ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಪಂಚಾಯತ್ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಸಿದ್ಧವಾಗಲಿದ್ದೇವೆ.

ನೀವು ಈಗಿನಿಂದಲೇ ಚುನಾವಣಾ ಹೋರಾಟಕ್ಕೆ ಸಿದ್ಧರಾಗಿ ಎಂದು ಕಾರ್ಯಕರ್ತರು ಹಾಗೂ ಮುಖಂಡರಿಗೆ ಶಿವಕುಮಾರ್ ಕರೆ ನೀಡಿದರು.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
get ready for panchayat and corporation elections - dk shivakumarpeople gave power to congres - kpcc presidentwe will clear the hurdles to conduct elections - dkswill reorganise all units of the party - dks
0 FacebookTwitterPinterestEmail
admin

previous post
ಜಿಲ್ಲಾ ಉಸ್ತುವಾರಿಗಳ ಬದಲಾವಣೆ
next post
ವಿದ್ಯುತ್ ಅಭಾವ ನೀಗಿಸಿದ ಮಳೆ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ