ಬೆಂಗಳೂರು:ಬಿಜೆಪಿಯ ದುರಾಡಳಿತ, ಕಿರುಕುಳಕ್ಕೆ ಬೇಸತ್ತು ಲಕ್ಷಾಂತರ ಉದ್ದಿಮೆದಾರರು, ವ್ಯಾಪಾರಿಗಳು ದೇಶ ಬಿಟ್ಟು ಹೋಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿಲ್ಲಿ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಂಡವಾಳ ಹೂಡಿಕೆದಾರರು ಆಸಕ್ತಿ ತೋರಿದ್ದು, ಚುನಾವಣೆ ಬಳಿಕ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ ಎಂದರು.
ದಾಖಲೆ ಪರಿಶೀಲಿಸಿ ಮಾತನಾಡಬೇಕು
ಬಂಡವಾಳ ಹೂಡಿಕೆ ವಿಚಾರದಲ್ಲಿ ರಾಜ್ಯದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು, ದಾಖಲೆಗಳನ್ನು ಪರಿಶೀಲಿಸಿ ಮಾತನಾಡಬೇಕು.
ಕೈಗಾರಿಕಾ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಕರ್ನಾಟಕ ಪ್ರಗತಿ, ಅಭಿವೃದ್ಧಿ ಹಾಗೂ ಶಾಂತಿಯ ನಾಡು ಎಂದು ದೇಶಕ್ಕೇ ಗೊತ್ತಿದೆ, ರಾಜ್ಯ ಹಾಗೂ ಬೆಂಗಳೂರನ್ನು ಇಡೀ ವಿಶ್ವವೇ ನೋಡುತ್ತಿದೆ ಎಂದರು.
ಪ್ರಜ್ವಲ್ ರೇವಣ್ಣ ಬಗ್ಗೆ ದೇವೇಗೌಡರ ಪತ್ರ ಅವರ ಕುಟುಂಬದ ವಿಚಾರ, ಇದರ ಬಗ್ಗೆ ಪ್ರತಿಕಿಯೆ ನೀಡುವುದಿಲ್ಲ.
ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಬೆಂಗಳೂರು ನಗರ ಪ್ರದಕ್ಷಿಣೆ ಬಗ್ಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏನು ಬೇಕಾದರೂ ಟೀಕೆ ಮಾಡಲಿ, ನಾವು ಜನರಿಗಾಗಿ ಕೆಲಸ ಮಾಡುತ್ತೇವೆ, ಜನರಿಗಾಗಿ ಇದ್ದೇವೆ, ಜನ ನಮ್ಮ ಪರವಾಗಿ ಇರುತ್ತಾರೆ ಎಂದರು.