38
ಸಚಿವರ ರಾಜೀನಾಮೆಗೆ ಒತ್ತಾಯ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ರೂ. ಅವ್ಯವಹಾರ ಆರೋಪ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ರಾಜಿನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಪರಿಶಿಷ್ಟ ಪಂಗಡ ಮೋರ್ಚಾ ಇಂದಿಲ್ಲಿ ಮುಖ್ಯಮಂತ್ರಿಗಳ ಮನೆ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ಸರ್ಕಾರ ಹಾಗೂ ಸಚಿವರ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಸುಮಾರು 187 ಕೋಟಿ ರೂ. ಅವ್ಯವಹಾರದಿಂದ ನೊಂದು ಆತ್ಮಹತ್ಯೆ ಮಾಡಿಕೊಂಡ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಡೆತ್ನೋಟ್ನಲ್ಲಿ ಸಚಿವರ ಆಪ್ತನ ಹೆಸರು ಉಲ್ಲೇಖಿಸಿದ್ದು, ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾನಿರತರು ಆಗ್ರಹಿಸಿದರು.