Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
Saturday, March 7, 2026
  • ನಮ್ಮ ಬಗ್ಗೆ
  • ಸಂಪರ್ಕಿಸಿ
  • Privacy Policy
  • Disclaimer
  • Login/Register
KMS
Banner
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ
KMS
KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

@2022 - All Right Reserved. Designed and Developed by PenciDesign

ರಾಜ್ಯರಾಷ್ಟ್ರ

ಕೊಲೆ ಕೇಸ್: ನಟ ದರ್ಶನ್, ಪವಿತ್ರಗೌಡ ಬಂಧನ

by admin June 11, 2024
written by admin June 11, 2024 0 comments 1 minutes read
0FacebookTwitterPinterestEmail
482

ಬೆಂಗಳೂರು:ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರ ಆಪ್ತೆ ಪವಿತ್ರಾ ಗೌಡ ಸೇರಿದಂತೆ ನಗರ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಕೊಲೆ ಮಾಡಿದ್ದಾರೆಂಬ ಆರೋಪದ ಮೇಲೆ ಇವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಲ್ಲಿ ಬಹುತೇಕರು ದರ್ಶನ್ ಬೌನ್ಸರ್‌ಗಳು ಹಾಗೂ ಗಿರಿನಗರ ಪಡ್ಡೆ ಹುಡುಗರಾಗಿದ್ದಾರೆ. ದರ್ಶನ್ ಸ್ನೇಹಿತ ವಿ.ವಿನಯ್, ಆತನ ಮ್ಯಾನೇಜರ್ ಆರ್.ನಾಗರಾಜು, ಎಂ.ಲಕ್ಷ್ಮಣ್, ಕಾರ್ತಿಕ್, ನಂದೀಶ್, ಎಸ್.ಪ್ರದೋಶ್, ಕೆ.ಪವನ್‌ಕುಮಾರ್, ದೀಪಕ್‌ಕುಮಾರ್, ನಿಖಿಲ್ ನಾಯಕ್, ಕೇಶವಮೂರ್ತಿ, ರಾಘವೇಂದ್ರ ಬಂಧಿತ ಇತರ ಆರೋಪಿಗಳು.

ಸುಮನಹಳ್ಳಿ ಬಳಿ ಮೃತದೇಹ

ಶನಿವಾರ ಸಂಜೆ ಸುಮನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದ್ದ ಪೊಲೀಸರು ಸಂಶಯದ ಮೇಲೆ ಕೊಲೆ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣ ದಾಖಲಾಗುತ್ತಿದ್ದಂತೆ ನಾಲ್ವರು ಬಂದು ಶರಣಾಗಿದ್ದರು, ಅವರ ವಿಚಾರಣೆ ನಡೆಸುವ ಸಂದರ್ಭದಲ್ಲಿ ನಟ ದರ್ಶನ್ ಹಾಗೂ ಪವಿತ್ರ ಗೌಡ ಅವರನ್ನು ಬಂಧಿಸಲಾಗಿದೆ.

ಔಷಧ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ, ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಮೆಸೇಜ್ ಮಾಡಿದ್ದಕ್ಕೆ ಈ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ.

ಕಾರ್‌ಶೆಡ್‌ನಲ್ಲಿ ಬಂಧಿಸಿ ಹಲ್ಲೆ

ಪವಿತ್ರ ಗೌಡ ನೀಡಿದ ದೂರಿನ ಆಧಾರದ ಮೇಲೆ ದರ್ಶನ್, ತಮ್ಮ ಹುಡುಗರ ಮೂಲಕ ರೇಣುಕಾಸ್ವಾಮಿಯನ್ನು ಕರೆಸಿಕೊಂಡು ಆರ್‌ಆರ್‌ನಗರದ ಮನೆಯ ಕಾರ್‌ಶೆಡ್‌ನಲ್ಲಿ ಬಂಧಿಸಿ ಆತನ ಮೇಲೆ ಹಲ್ಲೆ ಮಾಡಿದ್ದಾರೆ.

ಕೊಲೆಯಾದ ಸಂದರ್ಭದಲ್ಲಿ ಪವಿತ್ರಗೌಡ ಕೂಡ ಜೊತೆಯಲ್ಲಿದ್ದು ರೇಣುಕಾಸ್ವಾಮಿ ಮೇಲೆ ಹಲ್ಲೆಗೆ ಪ್ರಚೋಧನೆ ನೀಡುತ್ತಿದ್ದರಂತೆ.

ಆತನ ಮೇಲೆ ಮನಬಂದಂತೆ ದರ್ಶನ್ ಥಳಿಸಿದ ಕಾರಣ ಆತ ಸಾವಿಗೀಡಾಗಿದ್ದಾನೆ, ನಂತರ ಗಿರಿನಗರದ ಹುಡುಗರನ್ನು ಕರೆಸಿಕೊಂಡು ಆತನ ಮೃತದೇಹವನ್ನು ಕಾಮಾಕ್ಷಿಪಾಳ್ಯ ಮೋರಿಯಲ್ಲಿ ಎಸೆದಿದ್ದಾರೆ.

ಮೃತದೇಹ ಸಿಕ್ಕಾಗ, ಆತನ ಮೊಬೈಲ್ ಪರಿಶೀಲಿಸಿದಾಗ ಆರ್‌ಆರ್‌ನಗರದ ದರ್ಶನ್ ಮನೆ ಸ್ಥಳ ತೋರಿಸಿದೆ.

ಮೈಸೂರಿನಲ್ಲಿ ದರ್ಶನ್ ವಶಕ್ಕೆ

ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಂತೆ ದರ್ಶನ್ ಮೈಸೂರಿಗೆ ತೆರಳಿದ್ದಾರೆ, ನಗರ ಪೊಲೀಸರು ತಡರಾತ್ರಿ ಮೈಸೂರಿಗೆ ತೆರಳಿ ದರ್ಶನ್ ಇದ್ದ ಸ್ಥಳದಿಂದ ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರಕರಣ ಸಂಬಂಧ ಪಟ್ಟಣಗೆರೆ ನಿವಾಸಿ ವಿನಯ್ ಸೇರಿ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ, ದರ್ಶನ್ ಕೊಲೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ.

ದರ್ಶನ್ ಆಪ್ತೆ ಪವಿತ್ರ ಗೌಡ ಎಂಬುವರ ಬಗ್ಗೆ ರೇಣುಕಾಸ್ವಾಮಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಮೆಸೇಜ್ ಗಳನ್ನು ಹಾಕಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಆತನ ಮೇಲೆ ಹಲ್ಲೆ ನಡೆಸಿ, ಕೊಲೆ ಮಾಡಲಾಗಿದೆ.

ಅಧಿಕಾರಿಗಳ ವರ್ಗಾವಣೆಗೆ ಕಾರ್ಯಕ್ಷಮತೆ ಮಾನದಂಡ
ಬಲವಾದ ಮಾಹಿತಿ

ಈ ಮಧ್ಯೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲವಾದ ಮಾಹಿತಿ ಹಿನ್ನೆಲೆಯಲ್ಲೇ ಪೊಲೀಸರು ದರ್ಶನ್ ಅವರನ್ನು ಬಂಧಿಸಿದ್ದಾರೆ.

ದರ್ಶನ್ ನೇರವಾಗಿ ಭಾಗಿಯಾಗಿದ್ದಾರೆಯೇ, ಇಲ್ಲವೇ, ಯಾವ ಕಾರಣಕ್ಕೆ ಕೊಲೆಯಾಗಿದೆ, ಅವರ ಹೆಸರು ಏಕೆ ಬಂದಿದೆ ಎಂಬುದು ತನಿಖೆ ನಂತರ ಗೊತ್ತಾಗಲಿದೆ.

ಯಾರು ಎಷ್ಟೇ ದೊಡ್ಡವರಾದರೂ ಕಾನೂನಿನ ಚೌಕಟ್ಟಿಗೆ ಒಳಗಾಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Post
  • Tweet
  • Print (Opens in new window) Print
  • Email a link to a friend (Opens in new window) Email
10 more arrsetedactor darshan arrestdr.parameshwar home ministermurder caseno one above lawpavitra gowda arrestpolice enquiry
0 FacebookTwitterPinterestEmail
admin

previous post
ಹೆಚ್ ಡಿ ಕುಮಾರಸ್ವಾಮಿಗೆ ಬೃಹತ್ ಕೈಗಾರಿಕೆ ಹೊಣೆ
next post
ಅಧಿಕಾರಿಗಳ ವರ್ಗಾವಣೆಗೆ ಕಾರ್ಯಕ್ಷಮತೆ ಮಾನದಂಡ

You may also like

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

March 6, 2026

ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

March 4, 2026

ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

March 2, 2026

ಜಾತಿ ವ್ಯವಸ್ಥೆಗೆ ಸಿದ್ದರಾಮಯ್ಯ ತೀವ್ರ ಕಳವಳ

February 28, 2026

ಶಿವಕುಮಾರ್‌ಗೆ ಪಟ್ಟ ಕಟ್ಟಲು ಹೈಕಮಾಂಡ್ ನಿರ್ಧಾರ

February 27, 2026

ಅಮೆರಿಕದ ಫಿಲಡೆಲ್ಫಿಯಾದಲ್ಲಿ ’ಅಕ್ಕ’ ಬೆಳ್ಳಿ ಹಬ್ಬ

February 27, 2026

ಭ್ರಷ್ಟಾಚಾರ ಪಠ್ಯ ನಿಷೇಧ: ಸುಪ್ರೀಂಕೋರ್ಟ್

February 26, 2026

ಮುಖ್ಯಮಂತ್ರಿ ರೇಸ್‌ಗೆ ಧುಮುಕಿದ ಡಾ.ಪರಮೇಶ್ವರ್

February 25, 2026

ಡಾ.ಮಹದೇವಪ್ಪ ಅವರಿಗೆ ನಾಯಕತ್ವ ಬದಲು ಸುಳಿವು !

February 24, 2026

ಮನರೇಗಾ ಮರುಸ್ಥಾಪನೆ ಹೋರಾಟ ಬೆಂಬಲಿಸಿ

February 23, 2026

Social Networks

Facebook Twitter Instagram Linkedin Youtube Email Rss

KMS Analysis

  • ಯಡಿಯೂರೋತ್ಸವಕ್ಕೆ 114 ರ ಟಾರ್ಗೆಟ್

    March 2, 2026
  • ಬಿಹಾರ ಚುನಾವಣಾ ಫಲಿತಾಂಶ ಬಳಿಕ ಸಿದ್ದರಾಮಯ್ಯ ದೆಹಲಿಗೆ

    October 25, 2025
  • ಜಾತಿಗಣತಿ ವೇಳೆ ಒಕ್ಕಲಿಗ ಎಂದೇ ಬರೆಸಲು ಶ್ರೀಗಳ ಕರೆ

    October 6, 2025
  • ಡಿ.ಕೆ. ಸುರೇಶ್ ಗೆ ಜಾರಿ ನಿರ್ದೇಶನಾಲಯದ ನೋಟಿಸ್

    June 17, 2025
  • ಕರ್ನಾಟಕದಲ್ಲಿ ಹೊಸದಾಗಿ ಜಾತಿಗಣತಿ

    June 12, 2025

Categories

  • Special Story (404)
  • ಅಂಕಣ (108)
  • ಉದ್ಯೋಗ (315)
  • ದಿನ ಭವಿಷ್ಯ (110)
  • ರಾಜಕೀಯ (1,902)
  • ರಾಜ್ಯ (2,213)
  • ರಾಷ್ಟ್ರ (2,183)
  • ವಿಶ್ಲೇಷಣೆ (189)
  • ಶಿಕ್ಷಣ (381)
  • ಸಂದರ್ಶನ (11)

About Us

ನೈಜ ಹಾಗೂ ವಿಶ್ವಾಸಾರ್ಹತೆಯ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರವಾದ ಸುದ್ದಿ, ಅಭಿಪ್ರಾಯಗಳ ಪ್ರಕಟಣೆಯ ವೆಬ್ ತಾಣ. ಕರ್ನಾಟಕ ರಾಜ್ಯದ ಪ್ರಚಲಿತ ವಿದ್ಯಮಾನಗಳು, ರಾಜಕೀಯ, ನಾಡು, ನುಡಿ, ಜಲ ವಿಚಾರಗಳಲ್ಲದೆ, ದೈನಂದಿನ ಆಗು-ಹೋಗುಗಳು, ವಿವಿಧ ಜಿಲ್ಲೆಗಳ ಪ್ರಮುಖ ವಿಚಾರಗಳ ಭಿತ್ತರಕ್ಕೆ ಹೆಚ್ಚು ಒತ್ತು ನೀಡುವುದು. ನಮ್ಮ ಕುರಿತು ಹೆಚ್ಚಿನ ವಿವರ ಪಡೆಯಲು ಇಲ್ಲಿ ಇಲ್ಲಿಕ್ಲಿಕ್‌ ಮಾಡಿ

Facebook Twitter Linkedin Youtube Email Vimeo Rss

Politics

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026

KMS Special

  • 1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ ಬಜೆಟ್

    March 6, 2026
  • ಬರ ಎದುರಾಗಲಿದೆ: ಕರ್ನಾಟಕಕ್ಕೆ ಕೇಂದ್ರದ ಎಚ್ಚರಿಕೆ

    March 4, 2026
  • ಯುದ್ಧ ಪ್ರದೇಶದಲ್ಲಿ ಸಿಲುಕಿದ ಸಚಿವ, ಶಾಸಕರು

    March 2, 2026
  • Facebook
  • Twitter
  • Linkedin
  • Youtube
  • Email
  • Telegram

@2020 - All Right Reserved. Designed and Developed by Karnatakabest.com

KMS
  • Home
  • Special Story
  • ರಾಜ್ಯ
  • ರಾಷ್ಟ್ರ
  • ರಾಜಕೀಯ
  • ವಿಶ್ಲೇಷಣೆ
  • ಅಂಕಣ
  • ಶಿಕ್ಷಣ
  • ಉದ್ಯೋಗ
  • ಸಂದರ್ಶನ

Read alsox

1.32 ಲಕ್ಷ ಕೋಟಿ ರೂ. ಸಾಲದ ಸಿದ್ದರಾಮಯ್ಯ...

March 6, 2026
Sign In

Keep me signed in until I sign out

Forgot your password?

Password Recovery

A new password will be emailed to you.

Have received a new password? Login here

ಕೆಎಂಎಸ್‌ ಕನ್ನಡ ವಾಟ್ಸಪ್‌ ಗ್ರೂಪ್‌ಗೆ ಸೇರಿ