37
ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯದ ಆದೇಶ
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಲು ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುತ್ತಿರುವವಿಶೇಷ ನ್ಯಾಯಾಲಯ ಆದೇಶಿಸಿದೆ.
ಬಾಲಕಿಯನ್ನು ಕೊಠಡಿಗೆ ಕರೆದೊಯ್ದು, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ.
ಆರೋಪಿಯು ಬಲಾಢ್ಯರಾಗಿದ್ದು, ಮುಖ್ಯಮಂತ್ರಿಯಾಗಿದ್ದವರು. ಅಲ್ಲದೆ, ಅವರ ಒಬ್ಬ ಪುತ್ರ ಸಂಸದರು ಹಾಗೂ ಮತ್ತೊಬ್ಬ ಪುತ್ರ ಶಾಸಕರಾಗಿದ್ದಾರೆ. ಇಂಥವರಿಗೆ ಸಿಐಟಿ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗಿಲ್ಲ. ಸಮಯವನ್ನು ಕೇಳುತ್ತಿದ್ದಾರೆ. ಬಂಧಿಸಲು ನಿರ್ದೇಶನ ನೀಡುವಂತೆ ಸರ್ಕಾರಿ ವಕೀಲರು ನ್ಯಾಯಾಲಯವನ್ನು ಕೋರಿದರು.
ಈ ಕೋರಿಕೆಯನ್ನು ಮಾನ್ಯ ಮಾಡಿದ ತ್ವರಿತಗತಿಯ ವಿಶೇಷ ನ್ಯಾಯಾಲಯವು ಬಂಧನದ ವಾರೆಂಟ್ ಹೊರಡಿಸಲು ಆದೇಶಿಸಿದೆ.